ಬೆಂ.ಗ್ರಾ.ಜಿಲ್ಲಾ ಮಟ್ಟದ ಮಾವು-ಹಲಸು ಪ್ರದರ್ಶನ – ಮಾರಾಟ ಮೇಳಕ್ಕೆ ಚಾಲನೆ

Exhibition - Sales Fair Launch

ಬೆಂ.ಗ್ರಾ.ಜಿಲ್ಲೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ ಸಂಯುಕ್ತಾಶ್ರಯದಲ್ಲಿ ದೇವನಹಳ್ಳಿಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ-2025″ ವನ್ನು (Exhibition – Sales Fair) ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಉದ್ಘಾಟಿಸಿದರು.

ನಂತರ ಮಾತನಾಡಿದ ಸಚಿವರು ಜಿಲ್ಲೆಯ ಮಾವು, ಹಲಸು ಹಾಗೂ ಇತರೆ ಹಣ್ಣುಗಳನ್ನು ಬೆಳೆಯುತ್ತಿರುವ ರೈತರಿಗೆ ಉತ್ತಮ ಬೆಲೆ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಹಾಗೂ ರೈತರನ್ನು ಪ್ರೋತ್ಸಾಹಿಸಲು, ಗ್ರಾಹಕರಿಗೆ ಉತ್ತಮ ಗುಣಮಟ್ಟದ ನೈಸರ್ಗಿಕವಾಗಿ ಹಣ್ಣುಗಳು ಸಿಗುವಂತೆ ಮಾಡಲು ಮೇಳ ಆಯೋಜನೆ ಮಾಡಲಾಗಿದೆ.

ವಿವಿಧ ತಳಿಯ ಮಾವು, ಹಲಸು ಹಾಗೂ ಇತರೆ ಹಣ್ಣುಗಳ ಮಾರಾಟ ಮಾಡಲಾಗುತ್ತಿದೆ. ಸರ್ಕಾರ ನಿಗದಿ ಮಾಡಿರುವ ಬೆಲೆಯಲ್ಲಿ ರಿಯಾಯಿತಿ ದರದಲ್ಲಿ ಗ್ರಾಹಕರು ಹಣ್ಣುಗಳನ್ನು ಖರೀದಿ ಮಾಡಬಹುದಾಗಿದೆ ಎಂದರು.

ಮೇಳವು ದೇವನಹಳ್ಳಿ ತಾಲ್ಲೂಕಿನ ಹೋಟೆಲ್ ನಂದಿ ಉಪಚಾರ ಮುಂಭಾಗ (ನಂದಿ ಬೆಟ್ಟಕ್ಕೆ ಹೋಗುವ ರಸ್ತೆ, ರಾಣಿ ಕ್ರಾಸ್) ಆಯೋಜಿಸಲಾಗಿದ್ದು ಜೂನ್ 13 ರಿಂದ 15 ವರೆಗೆ 2 ದಿನಗಳ ಕಾಲ ಇರಲಿದೆ. ಸಾರ್ವಜನಿಕರು ಕೂಡ ಗುಣಮಟ್ಟದ ವಿವಿಧ ತಳಿಯ ಹಣ್ಣುಗಳು ಹಾಗೂ ತಾಜಾ ಹಣ್ಣುಗಳನ್ನು ಒಂದೇ ವೇದಿಕೆಯಲ್ಲಿ ಖರೀದಿ ಮಾಡಲು ಉತ್ತಮ ಅವಕಾಶ ಇದಾಗಿದೆ.

ಸಸ್ಯ ಸಂತೆ ಕಾರ್ಯಕ್ರಮವನ್ನು ಮೇಳದಲ್ಲಿ ಏರ್ಪಡಿಸಲಾಗಿದ್ದು ಜಿಲ್ಲೆಯ ಎಲ್ಲಾ ತೋಟಗಾರಿಕೆ ಕ್ಷೇತ್ರ ಮತ್ತು ನರ್ಸರಿಗಳಿಂದ ವಿವಿಧ ಜಾತಿಯ ಹಣ್ಣಿನ ಕಸಿ/ಸಸಿ ಗಿಡಗಳನ್ನು ಅಲಂಕಾರಿಕ ಗಿಡಗಳನ್ನು ಪ್ರದರ್ಶನಕ್ಕೆ ಹಾಗೂ ಇಲಾಖೆ ನಿಗದಿಪಡಿಸಿದ ದರದಲ್ಲಿ ಮಾರಾಟ ಮಾಡುವ ವ್ಯವಸ್ಥೆಯನ್ನು ಸಹ ಕಲ್ಪಿಸಲಾಗಿದೆ.

ಬೆಂ.ಗ್ರಾ.ಜಿಲ್ಲಾ ಮಟ್ಟದ ಮಾವು-ಹಲಸು ಪ್ರದರ್ಶನ - ಮಾರಾಟ ಮೇಳಕ್ಕೆ ಚಾಲನೆ

ಮೇಳದಲ್ಲಿ ಕಂಡು ಬಂದ ವಿವಿಧ ತಳಿಯ ಮಾವು-ಹಲಸು, ಸೀಬೆ

ತೋತಾಪುರಿ, ಸೇಂದೂರ, ಬಂಗನಪಲ್ಲಿ, ಬಾದಾಮಿ, ರಸಪೂರಿ, ಮಲ್ಲಿಕಾ, ಕೇಸರ್, ದಶೇರಿ, ಕುಲ್ ಪಂದ್, ಹಿಮಾಪಸಂದ್,ಮಲಗೋವ, ಸಕ್ಕರೆಗುತ್ತಿ, ಡ್ರಾಗನ್ ಪ್ರೋಟ್ಸ್(ಕೆಂಪು), ಸೀಬೆ(ತೈವಾನ್, ಅಲಹಾಬಾದ್), ಹಲಸು(ಪ್ಯಾಕೆಟ್).

ಖುದ್ದು ಸಚಿವರು ಎಲ್ಲಾ ಮಳಿಗೆಗೆಳಿಗೆ ಭೇಟಿ ನೀಡಿ ರೈತರ ರೊಟ್ಟಿಗೆ ಸಮಾಲೋಚಿಸಿ ವಿವಿಧ ತಳಿಯ ಮಾವು, ಹಲಸು ಹಾಗೂ ಇತರೆ ಹಣ್ಣುಗಳ ಬಗ್ಗೆ ಮಾಹಿತಿ ಪಡೆದುಕೊಂಡು, ಅವುಗಳ ರುಚಿ ಸವಿದು ಹಣ್ಣುಗಳನ್ನು ಖರೀದಿಸಿದರು.

ಕಾರ್ಯಕ್ರಮದಲ್ಲಿ ಸಿಇಓ ಡಾ.ಕೆ.ಎನ್ ಅನುರಾಧ, ತೋಟಗಾರಿಕೆ ಇಲಾಖೆ ಉಪನಿರ್ದೇಶಕರಾದ ಗುಣವಂತ, ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಕಲಾವತಿ, ಬಯಪ ಅಧ್ಯಕ್ಷ ಶಾಂತಕುಮಾರ್, ಪುರಸಭೆ ಅಧ್ಯಕ್ಷ ಮುನಿಕೃಷ್ಣ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ರೈತ ಬಾಂಧವರು,ಗ್ರಾಹಕರು ಇದ್ದರು.

ರಾಜಕೀಯ

ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ; ಹೆಚ್.ಡಿ. ಕುಮಾರಸ್ವಾಮಿ

ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ; ಹೆಚ್.ಡಿ. ಕುಮಾರಸ್ವಾಮಿ

ಮುಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಎಂದು ಅಥವಾ ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ. ಅಂಬೇಡ್ಕರ್ ಅವರ ಜಯಂತಿ ದಿನ ನನ್ನ ಬಗ್ಗೆ ಘೋಷಣೆಗಳನ್ನು ಕೂಗುವುದು ಬೇಡ: ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy)

[ccc_my_favorite_select_button post_id="120957"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ರಸ್ತೆಯಲ್ಲಿ ಟ್ಯಾಂಕರ್ ಬ್ರೇಕ್ ವಿಫಲವಾಗಿದ್ದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಪಕ್ಕದಲ್ಲೇ ಸಾಗುತ್ತಿದ್ದ ಬಿಎಂಡಬ್ಲ್ಯು ಕಾರಿನ (BMW Car) ಮೇಲೆ ಮಗುಚಿ ಬಿದ್ದಿದೆ.

[ccc_my_favorite_select_button post_id="120918"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]