We must work hard to stop the war: Basavaraja Bommai

ಯುದ್ಧ ನಿಲ್ಲಿಸಲು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

ಬೆಂಗಳೂರು: 14 ನೇ ಹಣಕಾಸು ಆಯೋಗಕ್ಕೆ ಹೋಲಿಕೆ ಮಾಡಿದರೆ 15 ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಕೇಂದ್ರದಿಂದ 1 ಲಕ್ಷ ಕೋಟಿ ರೂ. ಗೂ ಹೆಚ್ಚು ಹಣ ಬರುತ್ತದೆ. ಗ್ಯಾರೆಂಟಿ ಯೋಜನೆಗೆ ಹಣ ಹೊಂದಿಸಲಾಗದೇ ಸಿಎಂ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ದ ರಾಜಕೀಯವಾಗಿ ಮಾತನಾಡುತ್ತಾರೆ‌ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraja Bommai) ಹೇಳಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರು, ಹೊಸದೇನು ಹೇಳಿಲ್ಲ ಈಗಾಗಲೇ ಹಲವಾರು ಬಾರಿ ಸುಳ್ಳು ಹೇಳಿದ್ದಾರೆ. ಈಗ ಅದನ್ನೇ ಮತ್ತೆ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು ಕೇಂದ್ರದ ಅನುದಾನ ಶೇ 32 ರಿಂದ ಶೇ 42 ಕ್ಕೆ ಏರಿಸಿದ್ದರು. ಅವರು ಶೇ 10% ಹೆಚ್ಚಳ ಮಾಡಿದ್ದಾರೆ. ಅದು ಸಿದ್ದರಾಮಯ್ಯ ಅವರಿಗೆ ಗೊತ್ತಿದ್ದು ಮರೆ ಮಾಚುತ್ತಾರೆ.

ಶೇ 40% ರಿಂದ 50% ಕ್ಕೆ ಹೆಚ್ಚಳ ಮಾಡಬೇಕೆನ್ನುವುದು ನಮ್ಮೆಲ್ಲರ ಬೇಡಿಕೆಯಾಗಿದೆ. 14 ನೇ ಹಣಕಾಸು ಆಯೋಗ ಸಭೆ ನಡೆಸಿದ ಸಂದರ್ಭದಲ್ಲಿ ಐದು ಜನ ಕಾಂಗ್ರೆಸ್ ಸಚಿವರಿದ್ದರು ಆಗ ರಾಜ್ಯದ ಪರವಾಗಿ ಸರಿಯಾಗಿ ವಾದ ಮಾಡದೇ ತಮ್ಮ ತಪ್ಪು ಮುಚ್ಚಿಕೊಳ್ಳಲು ಈ ರೀತಿ ಮಾತನಾಡುತ್ತಿದ್ದಾರೆ. ರಾಜ್ಯಕ್ಕೆ ಕಾಂಗ್ರೆಸ್ ನಿಂದಲೇ ಅನ್ಯಾಯವಾಗಿದೆ ಎಂದು ಆರೋಪಿಸಿದರು.

14 ನೇ ಹಣಕಾಸು ಆಯೋಗಕ್ಕೆ ಹೋಲಿಕೆ ಮಾಡಿದರೆ 15 ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಕೇಂದ್ರದಿಂದ 1 ಲಕ್ಷ ಕೋಟಿ ರೂ. ಹೆಚ್ಚಿಗೆ ಬರುತ್ತದೆ. ಈಗಾಗಲೇ 14 ನೇ ಹಣಕಾಸು ಆಯೋಗದಲ್ಲಿ ಬಂದಷ್ಟು ಹಣ ರಾಜ್ಯಕ್ಕೆ ಬಂದಿದೆ. ಇನ್ನು ಎರಡು ವರ್ಷ ಬರುತ್ತದೆ.

ಗ್ಯಾರೆಂಟಿ ಯೋಜನೆಗೆ ಹಣ ಹೊಂದಿಸಲಾಗದೇ ಸಿಎಂ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ದ ರಾಜಕೀಯವಾಗಿ ಮಾತನಾಡುತ್ತಾರೆ‌.

ರಾಜ್ಯದ ರೈಲ್ವೆ ಯೋಜನೆಗೆ ಯುಪಿಎ ಅವಧಿಯಲ್ಲಿ 700 ಕೋಟಿ ರೂ. ಬಂದಿತ್ತು. ಈ ವರ್ಷ ಕೇಂದ್ರ ಸರ್ಕಾರ 7700 ಕೋಟಿ ರೂ. ಕೊಟ್ಟಿದೆ ಅದಕ್ಕೆ ಮ್ಯಾಚಿಂಗ್ ಗ್ರ್ಯಾಂಟ್ ಕೊಡಲು ರಾಜ್ಯಸರ್ಕಾರಕ್ಕೆ ಆಗುತ್ತಿಲ್ಲ. ಆರೋಗ್ಯ, ಗ್ರಾಮಿಣಾಭಿವೃದ್ದಿ, ರಸ್ತೆ ಸೇರಿದಂತೆ ಹಲವಾರು ಯೋಜನೆಗಳಿಗೂ ಕೇಂದ್ರ ಸರ್ಕಾರ ಅನುದಾನ ನೀಡುತ್ತಿದೆ‌. ಅದನ್ನು ರಾಜ್ಯ ಸರ್ಕಾರ ಹೇಳುವುದಿಲ್ಲ ಎಂದು ಹೇಳಿದರು.

ಜಾತಿ ಸಮೀಕ್ಷೆ ಅಧಿಕಾರವಿಲ್ಲ

ಜಾತಿ ಸಮೀಕ್ಷೆ ಮಾಡುವ ಅಧಿಕಾರ ಕೇಂದ್ರ ಸರ್ಕಾರಕ್ಕಿದೆ. ಮುಖ್ಯಮಂತ್ರಿಗಳು ಸುಮ್ಮನೆ ಹಿಂದುಳಿದ ವರ್ಗದ ಜನರ ಕಣ್ಣಿಗೆ ಮಣ್ಣೆರಚುತ್ತಿದ್ದಾರೆ. ಹತ್ತು ವರ್ಷದಿಂದ ಇವರೇ ಸಿಎಂ ಇದ್ದರು, ಆಗ ಯಾಕೆ ಮಾಡಲಿಲ್ಲ. ಜಾತಿ ಸಮೀಕ್ಷೆ ವಿಚಾರದಲ್ಲಿ ಸಿಎಂ ಬಹಳ ಸಂಕಷ್ಟಕ್ಕೆ ಸಿಲುಕಿದ್ದರು. ಹೈಕಮಾಂಡ್ ಅದರಿಂದ ಇವರನ್ನು ರಕ್ಷಿಸಿದೆ. ಆದರೆ, ಕೇಂದ್ರ ಸರ್ಕಾರವೇ ಮಾಡುವ ಜಾತಿ ಸಮೀಕ್ಷೆ ಅಂತಿಮ ಎಂದು ಹೇಳಿದರು.

ಯುದ್ದ ನಿಲ್ಲಿಸಲು ಶ್ರಮಿಸಬೇಕು

ಇರಾನ್ ಮೇಲೆ ಇಸ್ರೇಲ್ ದಾಳಿ ನಡೆಸಿರುವುದು ಆಘಾತಕಾರಿ ವಿಚಾರ, ಈ ಬಗ್ಗೆ ಅಮೆರಿಕಾ ಕೂಡ ತುರ್ತು ಸಭೆ ನಡೆಸಿದೆ. ಒಂದೆಡೆ ರಷ್ಯಾ ಉಕ್ರೇನ್ ಯುದ್ದ, ಇದು ವಿಶ್ವದ ಮೇಲೆ ಬಹಳಷ್ಟು ಪರಿಣಾಮ ಬೀರುತ್ತದೆ. ವಿಶ್ವದ ಎಲ್ಲ ನಾಯಕರು ಯುದ್ದ ನಿಲ್ಲಿಸುವ ನಿಟ್ಟಿನಲ್ಲಿ ಪ್ರಯತ್ಮ ನಡೆಸಬೇಕು ಎಂದು ಹೇಳಿದರು.

ರಾಜಕೀಯ

ಆಯ್ತ್ ಆಯ್ತೂ.. ಏನು ಮಾಡಬೇಕೋ ಮಾಡುತ್ತೇವೆ; ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಪ್ರತಿಕ್ರಿಯೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಉತ್ತರ

ಆಯ್ತ್ ಆಯ್ತೂ.. ಏನು ಮಾಡಬೇಕೋ ಮಾಡುತ್ತೇವೆ; ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಪ್ರತಿಕ್ರಿಯೆಗೆ

"ಯಾರೇ ಆದರೂ ಕಾನೂನು ಕೈಗೆತ್ತಿಕೊಳ್ಳಲು ಆಗುವುದಿಲ್ಲ" ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಕಸದ ವಿಚಾರವಾಗಿ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.

[ccc_my_favorite_select_button post_id="119538"]
20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

ಫ್ರಾನ್ಸ್ ಮೂಲದ ಏರ್ ಬಸ್ ಮತ್ತು ಭಾರತದ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಜತೆಗೂಡಿ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣೆ ಘಟಕದಲ್ಲಿ ಮುಂದಿನ 20 ವರ್ಷಗಳಲ್ಲಿ ಎಚ್125 ದರ್ಜೆಯ

[ccc_my_favorite_select_button post_id="119504"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಮರಕ್ಕೆ ಕಾರು ಡಿಕ್ಕಿ: ಸಬ್‌ಇನ್ಸ್‌ಪೆಕ್ಟರ್ ಸಾವು

ಮರಕ್ಕೆ ಕಾರು ಡಿಕ್ಕಿ: ಸಬ್‌ಇನ್ಸ್‌ಪೆಕ್ಟರ್ ಸಾವು

ಆರೋಪಿಯನ್ನು ಹಿಡಿಯಲು ಹೋದ ಪೊಲೀಸರು ಪ್ರಯಾಣಿಸುತ್ತಿದ್ದ ಕಾರೊಂದು ರಸ್ತೆಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ (Accident) ಸಬ್‌ಇನ್ಸ್‌ಪೆಕ್ಟರ್ ಸಾವನ್ನಪ್ಪಿ, ಇನ್ಸ್‌ಪೆಕ್ಟರ್ ಸೇರಿ ಐವರು ಪೊಲೀಸರು ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಮಹಾರಾಜಗಂಜ್ ಗೋರಖ್‌ಪುರ ಮುಖ್ಯ ರಸ್ತೆಯಲ್ಲಿ ಇಂದು ಬೆಳಿಗ್ಗೆ ನಡೆದಿದೆ.

[ccc_my_favorite_select_button post_id="119478"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಖಾಸಗಿ ಕಾರ್ಖಾನೆಯ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ (Accident), ದ್ವಿಚಕ್ರ ವಾಹನ ಸವಾರ ಸಾವನಪ್ಪಿರುವ ಘಟನೆ ತಾಲೂಕಿನ ಗೊಲ್ಲಹಳ್ಳಿ ಕ್ರಾಸ್ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಇಂದು ಸಂಜೆ

[ccc_my_favorite_select_button post_id="119492"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!