ಯುದ್ಧ.. ಇಸ್ರೇಲ್‌ನಲ್ಲಿ ಸಿಲುಕಿರುವ ಕನ್ನಡಿಗರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

War.. Union Minister H.D. Kumaraswamy spoke to Kannadigas stranded in Israel

ನವದೆಹಲಿ: ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ಅವರು ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷದಿಂದಾಗಿ ಪ್ರಸ್ತುತ ಇಸ್ರೇಲ್‌ನಲ್ಲಿ ಸಿಲುಕಿರುವ ಹಲವಾರು ಕನ್ನಡಿಗರೊಂದಿಗೆ ವೀಡಿಯೋ ಕರೆ ಮಾಡಿ ಅವರ ಕ್ಷೇಮ, ಸುರಕ್ಷತೆ ಬಗ್ಗೆ ಮಾಹಿತಿ ಪಡೆದುಕೊಂಡರು.

ಬೆಂಗಳೂರಿನಿಂದ ನವದೆಹಲಿಗೆ ಭಾನುವಾರ ಸಂಜೆ ವಾಪಸ್ಸಾದ ಕೇಂದ್ರ ಸಚಿವರು, ತಮ್ಮ ಅಧಿಕೃತ ನಿವಾಸದಿಂದ ಇಸ್ರೇಲ್‌ ನಲ್ಲಿ ಸಿಲುಕಿರುವ ಕನ್ನಡಿಗರ ಜತೆ ಮಾತನಾಡಿದರು.

ಮಾತುಕತೆ ಸಮಯದಲ್ಲಿ ಸಚಿವರು, ಅವರೆಲ್ಲರ ಯೋಗಕ್ಷೇಮ ವಿಚಾರಿಸಿದರು ಮತ್ತು ಭಾರತ ಸರ್ಕಾರದಿಂದ ಸಂಪೂರ್ಣ ಬೆಂಬಲದ ಭರವಸೆ ನೀಡಿದರು.

ನಮ್ಮ ಜನರು ಸುರಕ್ಷಿತವಾಗಿ ಮತ್ತು ತ್ವರಿತವಾಗಿ ತಾಯ್ನಾಡಿಗೆ ಮರಳುವುದನ್ನು ಖಚಿತಪಡಿಸಿಕೊಳ್ಳಲು ವಿದೇಶಾಂಗ ಸಚಿವಾಲಯದೊಂದಿಗೆ ಈ ವಿಷಯವನ್ನು ತಕ್ಷಣವೇ ಚರ್ಚಿಸುವುದಾಗಿ ಸಚಿವರು ಹೇಳಿದರು.

ವಿಡಿಯೋ ಕರೆಯ ಮೂಲಕ ಮಾತನಾಡಿದ ಎಲ್ಲಾ ಕನ್ನಡಿಗರು, ತಾವು ಸುರಕ್ಷಿತರಾಗಿದ್ದೇವೆ ಮತ್ತು ಟೆಲ್ ಅವೀವ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಅಧಿಕಾರಿಗಳು ಅಗತ್ಯವಿರುವ ಎಲ್ಲಾ ಸಹಾಯವನ್ನು ನೀಡುತ್ತಿದ್ದಾರೆ ಎಂದು ಸಚಿವರಿಗೆ ತಿಳಿಸಿದರು. “ನಮ್ಮನ್ನು ಚೆನ್ನಾಗಿ ನೋಡಿಕೊಳ್ಳಲಾಗುತ್ತಿದೆ” ಎಂದು ಸಚಿವರಿಗೆ ಮಾಹಿತಿ ನೀಡಿದರಲ್ಲದೆ, ಇದಕ್ಕಾಗಿ ರಾಯಭಾರ ಕಚೇರಿಗೆ ಕೃತಜ್ಞತೆಗಳನ್ನು ಸಲ್ಲಿಸಿದರು.

ಅಲ್ಲದೆ, ಸಚಿವ ಕುಮಾರಸ್ವಾಮಿ ಅವರೂ ಭಾರತೀಯ ರಾಯಭಾರ ಕಚೇರಿಯ ಸಿಬ್ಬಂದಿಯ ಪ್ರಯತ್ನಗಳನ್ನು ಶ್ಲಾಘಿಸಿದರು ಹಾಗೂ ಇಂಥ ಕಠಿಣ ಸಮಯದಲ್ಲಿ ಅಧಿಕಾರಿಗಳ ಬದ್ಧತೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಕುರಿತು ಮಾಹಿತಿ ನೀಡಿ, ಪ್ರಸ್ತುತ ಸಂಘರ್ಷದ ವೇಳೆ ಇಸ್ರೇಲ್‌ನಲ್ಲಿ ಸಿಲುಕಿರುವ ಹಲವಾರು ಕನ್ನಡಿಗರೊಂದಿಗೆ ದೂರವಾಣಿಯಲ್ಲಿ ಮಾತನಾಡಿ ಅವರ ಕ್ಷೇಮ, ಸುರಕ್ಷತೆ ಬಗ್ಗೆ ವಿಚಾರಿಸಿದೆ. ಅವರೆಲ್ಲರೂ ತಾಯ್ನಾಡಿಗೆ ಸುರಕ್ಷಿತವಾಗಿ ಮತ್ತು ತ್ವರಿತವಾಗಿ ಮರಳುವುದಕ್ಕೆ ತುರ್ತು ಕ್ರಮ ವಹಿಸಿ, ವಿದೇಶ ಸಚಿವಾಲಯದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸುವ ಭರವಸೆ ನೀಡಿದ್ದೇನೆ.

ಭಾರತ ಸರಕಾರವು ಸಂಘರ್ಷಪೀಡಿತ ವಿದೇಶಗಳಲ್ಲಿರುವ ಭಾರತೀಯ ಪ್ರಜೆಗಳ ಸುರಕ್ಷತೆ ಬಗ್ಗೆ ಎಲ್ಲಾ ರೀತಿಯ ತುರ್ತು ಕ್ರಮಗಳನ್ನು ಕೈಗೊಂಡಿದೆ ಎಂದು ತಿಳಿಸಿದ್ದೇನೆ.

ಇಂತಹ ಕಠಿಣ ಸಂದರ್ಭದಲ್ಲಿ ನಮ್ಮ ನಾಗರಿಕರಿಗೆ ಸಕಾಲಿಕ ನೆರವು ನೀಡಿದ್ದಕ್ಕಾಗಿ ಇಸ್ರೇಲ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಅಧಿಕಾರಿಗಳ ಪ್ರಯತ್ನಗಳು ಶ್ಲಾಘನೀಯ ಎಂದು ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ರಾಜಕೀಯ

ಮುನೇಗೌಡರ ಮನೆಗೆ JDS ದೊಡ್ಡಬಳ್ಳಾಪುರ ಅಧ್ಯಕ್ಷ ಹರೀಶ್ ಗೌಡ ಭೇಟಿ..!

ಮುನೇಗೌಡರ ಮನೆಗೆ JDS ದೊಡ್ಡಬಳ್ಳಾಪುರ ಅಧ್ಯಕ್ಷ ಹರೀಶ್ ಗೌಡ ಭೇಟಿ..!

ಜೆಡಿಎಸ್ (JDS) ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಹರೀಶ್ ಗೌಡ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲಾ ನಿಕಟಪೂರ್ವ ಅಧ್ಯಕ್ಷ ಬಿ.ಮುನೇಗೌಡ ಅವರ ಸ್ವ ಗೃಹಕ್ಕೆ ಭೇಟಿ ನೀಡಿದ್ದಾರೆ.

[ccc_my_favorite_select_button post_id="121727"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]