ವಿಮಾನ ದುರಂತದಲ್ಲಿ ನಾವು ರಾಜಕೀಯ ಮಾಡಲ್ಲ, ಹೆಣದ ಮೇಲೆ ರಾಜಕೀಯ ಮಾಡೋದು ಬಿಜೆಪಿ ಹಾಗೂ ಜೆಡಿಎಸ್ ಕೆಲಸ: ಡಿಸಿಎಂ ಡಿಕೆ ಶಿವಕುಮಾರ್ ತರಾಟೆ

We will not do politics in the plane crash: DCM DK Shivakumar

ಬೆಂಗಳೂರು: “ನಾವು ಅಹಮದಾಬಾದ್ ವಿಮಾನ ದುರಂತದ ಬಗ್ಗೆ ರಾಜಕೀಯ ಮಾಡೋದಿಲ್ಲ. ಹೆಣದ ಮೇಲೆ ರಾಜಕೀಯ ಮಾಡುವುದು ಏನಿದ್ದರೂ ಬಿಜೆಪಿ ಹಾಗೂ ಜೆಡಿಎಸ್ ಕೆಲಸ. ನಾವು ಅವರಂತೆ ನೀಚ ರಾಜಕೀಯ ಮಾಡುವುದಿಲ್ಲ” ಎಂದು RCB ವಿಜಯೋತ್ಸವದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣ ಕುರಿತಾದ ಮೈತ್ರಿ ಪಕ್ಷದ ವರ್ತನೆ ಕುರಿತು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ತರಾಟೆಗೆ ತೆಗೆದುಕೊಂಡಿದ್ದಾರೆ.

ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು.

ಅಹಮದಾಬಾದ್ ವಿಮಾನ ದುರಂತದ ಬಗ್ಗೆ ಕೇಳಿದಾಗ, ಅಹಮದಾಬಾದ್ ವಿಮಾನ ಅಪಘಾತದಂತಹ ದುರಂತ ದೇಶದಲ್ಲಿ ಮಾತ್ರವಲ್ಲ ಪ್ರಪಂಚದಲ್ಲಿ ಎಲ್ಲಿಯೂ ನಡೆಯಬಾರದು. ಈ ದುರಂತದಲ್ಲಿ ಅನೇಕರು ಸುಟ್ಟುಹೋಗಿದ್ದಾರೆ. ಆ ದುರಂತದ ಸ್ಥಳ ನೋಡಿದರೆ ಆಘಾತವಾಗುತ್ತದೆ.

ಈ ಘಟನೆ ಅಕಸ್ಮಾತ್ 500 ಮೀಟರ್ ಮುಂದಕ್ಕೆ ಹೋಗಿ ವಿಮಾನ ಅಪ್ಪಳಿಸಿದ್ದರೂ ಸಾವಿರಾರು ಮಂದಿಯ ಜೀವಹಾನಿಯಾಗುತ್ತಿತ್ತು. ಈಗ ವೈದ್ಯಕೀಯ ಹಾಸ್ಟೆಲ್ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಕೆಲವು ವಿದ್ಯಾರ್ಥಿಗಳಿಗೆ ಮಾನಸಿಕ ಆಘಾತವಾಗಿದೆ.

ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ನಾವು ಕೆಲವರನ್ನು ಭೇಟಿ ಮಾಡಿ ಮಾತನಾಡಿದೆವು. ಈ ಅಪಘಾತ ಕುರಿತು ಬ್ಲಾಕ್ ಬಾಕ್ಸ್ ತನಿಖೆ ವರದಿ ಬರಬೇಕಾಗಿದೆ. ಕಾಂಗ್ರೆಸ್ ಪಕ್ಷದ ವತಿಯಿಂದ ಅಲ್ಲಿ ಹೋಗಿ ಸಾಂತ್ವನ ಹೇಳಿದ್ದೇವೆ ಎಂದು ಮಾಹಿತಿ ನೀಡಿದರು.

ಈ ಘಟನೆ ನಂತರ ವಿಮಾನಯಾನ ಸಚಿವರ ಕಾರ್ಯವೈಖರಿ ಬಗ್ಗೆ ಪ್ರಶ್ನೆ ಮೂಡುತ್ತಿವೆ ಎಂದು ಕೇಳಿದಾಗ, ಬಿಜೆಪಿ ಹಾಗೂ ಜೆಡಿಎಸ್ ನವರಿಗೆ ಹೆಣದ ಮೇಲೆ ರಾಜಕೀಯ ಮಾಡುವುದೇ ಕೆಲಸ. ನಾವು ಹಳೇ ಪ್ರಕರಣ ಹಾಗೂ ಈ ಪ್ರಕರಣವನ್ನು ಮುಂದಿಟ್ಟುಕೊಂಡು ಟೀಕೆ ಮಾಡಬಹುದು. ಆದರೆ ನಾವು ಅವರ ಮಟ್ಟಕ್ಕೆ ಇಳಿಯುವುದಿಲ್ಲ.

ಈ ವಿಚಾರದಲ್ಲಿ ಅನೇಕ ತಾಂತ್ರಿಕ ಅಂಶಗಳಿವೆ. ನಾನು ಅವುಗಳ ತಜ್ಞನಲ್ಲ. ಈ ಎಲ್ಲಾ ವಿಚಾರವಾಗಿ ಚರ್ಚೆ ಆಗುತ್ತಿದೆ. ಆದರೆ ಈ ವಿಚಾರವನ್ನು ರಾಜಕೀಯಗೊಳಿಸುವ ವ್ಯಕ್ತಿ ನಾನಲ್ಲ. ಈ ಸಮಯದಲ್ಲಿ ಕೇಂದ್ರ ಸಚಿವರ ಬಗ್ಗೆ ಟೀಕೆ ಮಾಡುವುದಿಲ್ಲ. ಇದು ದೇಶದ ಗಂಭೀರ ವಿಚಾರ ಎಂದು ತಿಳಿಸಿದರು.

ರಾಜ್ಯ ಸರ್ಕಾರ ವಸೂಲಿ ಮಾಡುತ್ತಿರುವ ತೆರಿಗೆ ನೋಡಿದರೆ ನನ್ನ ಸರ್ಕಾರ ಇದ್ದಿದ್ದರೆ ಗೃಹಲಕ್ಷ್ಮಿಗೆ 5 ಸಾವಿರ ಕೊಡುತ್ತಿದ್ದೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಬಹಳ ಸಂತೋಷ. ಅವರು ಚೆನ್ನಾಗಿ ಆರೋಗ್ಯಕರವಾಗಿರಲಿ” ಎಂದು ತಿಳಿಸಿದರು.

ರಾಜಕೀಯ

ಮುನೇಗೌಡರ ಮನೆಗೆ JDS ದೊಡ್ಡಬಳ್ಳಾಪುರ ಅಧ್ಯಕ್ಷ ಹರೀಶ್ ಗೌಡ ಭೇಟಿ..!

ಮುನೇಗೌಡರ ಮನೆಗೆ JDS ದೊಡ್ಡಬಳ್ಳಾಪುರ ಅಧ್ಯಕ್ಷ ಹರೀಶ್ ಗೌಡ ಭೇಟಿ..!

ಜೆಡಿಎಸ್ (JDS) ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಹರೀಶ್ ಗೌಡ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲಾ ನಿಕಟಪೂರ್ವ ಅಧ್ಯಕ್ಷ ಬಿ.ಮುನೇಗೌಡ ಅವರ ಸ್ವ ಗೃಹಕ್ಕೆ ಭೇಟಿ ನೀಡಿದ್ದಾರೆ.

[ccc_my_favorite_select_button post_id="121727"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]