ರಾಜ್ಯದ ಎಲ್ಲಾ ಶಾಲೆಗಳಲ್ಲಿ ಪರಿಸರ,‌ ಹವಾಮಾನ ಕ್ಲಬ್ ಸ್ಥಾಪನೆಗೆ ಆದೇಶ: ಡಿಕೆ ಶಿವಕುಮಾರ್

DK Shivakumar orders establishment of environment and climate clubs in all schools in the state

ಬೆಂಗಳೂರು: “ರಾಜ್ಯದ ಪ್ರತಿಯೊಂದು ಶಾಲೆಗಳಲ್ಲಿಯೂ ಪರಿಸರ,‌ ಹವಾಮಾನ ವೈಪರೀತ್ಯ ಜಾಗೃತಿ ಕ್ಲಬ್ ಗಳನ್ನು ಕಡ್ಡಾಯವಾಗಿ ರಚನೆ ಮಾಡಬೇಕು ಎಂದು ಆದೇಶ ನೀಡಲಾಗಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ಹೇಳಿದರು.

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವಿಶ್ವ ಪರಿಸರ ದಿನದ ಅಂಗವಾಗಿ ಮಂಗಳವಾರ ಹಮ್ಮಿಕೊಂಡಿದ್ದ ಮ್ಯಾರಥಾನ್ ಗೆ ವಿಧಾನಸೌಧದ ಎದುರು ಚಾಲನೆ ನೀಡಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ವಿಧಾನಸಧದ ಮೆಟ್ಟಿಲುಗಳ ಮೇಲೆ ನಡೆದ ಸಮಾರಂಭದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

“ಕನಿಷ್ಠ 25 ವಿದ್ಯಾರ್ಥಿಗಳನ್ನು ಒಳಗೊಂಡಂತೆ ಈ ಜಾಗೃತಿ ಕ್ಲಬ್ ಗಳನ್ನು ರಚನೆ ಮಾಡಬೇಕು. ಪ್ರಕೃತಿ ಉಳಿಸುವ ದೊಡ್ಡ ಹೋರಾಟದ ಹಾಗೂ ಜಾಗೃತಿ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಬೇಕು ಎಂದು ಈ ಆದೇಶ ಮಾಡಲಾಗಿದೆ. ಒಂದೊಂದು ಶಾಲೆ ಮರ ಬೆಳೆಸಲು ಆಯಾಯ ಪ್ರದೇಶಗಳನ್ನು ದತ್ತು ಪಡೆಯಬೇಕು” ಎಂದು ತಿಳಿಸಿದರು.

“ಹಸಿರು ಮತ್ತು ಸ್ವಚ್ಚತೆ ಇದೇ ನಮ್ಮ ಸರ್ಕಾರದ ಧ್ಯೇಯ. ಇದರ ಬಗ್ಗೆ ಮುಂದಿನ ಪೀಳಿಗೆಗೆ ಅರಿವು ಮೂಡಿಸುವುದು ಸರ್ಕಾರದ ಕರ್ತವ್ಯ. ಕರ್ನಾಟಕದ‌ ದೊಡ್ಡ ಆಸ್ತಿಯೇ ನಮ್ಮ ಪ್ರಕೃತಿ. ಪ್ಲಾಸ್ಟಿಕ್ ಅನ್ನು ನಿರ್ಮೂಲನೆ ಮಾಡುವುದು ನಮ್ಮ ಉದ್ದೇಶ, ಜವಾಬ್ದಾರಿಯಾಗಬೇಕು” ಎಂದರು.

“ಪ್ರತಿಯೊಬ್ಬ ವಿದ್ಯಾರ್ಥಿ ಒಂದೊಂದು ಸಸಿಯನ್ನು ದತ್ತು ಪಡೆಯಬೇಕು ಎಂದು ತಿಳಿಸಲಾಗಿದೆ. ಈಗಾಗಲೇ 50 ಸಾವಿರಕ್ಕೂ ಹೆಚ್ಚು ಮಕ್ಕಳು ಈ ಪ್ರಕ್ರಿಯೆಯಲ್ಲಿ ಇದ್ದಾರೆ.‌ ಎರಡು ದಿನದ ಹಿಂದೆ ದೆಹಲಿ,‌ ಅಹಮದಾಬಾದ್‌ ನಲ್ಲಿ‌ ಇದ್ದೆ ಅಲ್ಲಿನ ಉಷ್ಣಾಂಶ ಹತ್ತಿರತ್ತಿರ ‌49 ಡಿಗ್ರಿಯಿತ್ತು.‌ ಬೆಂಗಳೂರಲ್ಲಿ 22- 23 ಇದೆ. ಈ ವಾತಾವರಣ ನಮ್ಮ ಕರ್ನಾಟಕದ,‌ ಬೆಂಗಳೂರಿನ ಆಸ್ತಿ” ಎಂದು ತಿಳಿಸಿದರು.

“ಮನುಷ್ಯ ಹಾಗೂ ಅವನ ಜೀವನ ಪದ್ಧತಿ ಪ್ರಕೃತಿಯ ಜೊತೆ ಬೆಸೆದುಕೊಂಡಿದೆ. ನಾವೆಲ್ಲರೂ ಪರಿಸರದ ಒಂದು ಭಾಗವಷ್ಟೇ. ಶುದ್ದ ಗಾಳಿ, ನೀರು, ಪರಿಸರ ನಿರ್ಮಾಣ ನಮ್ಮೆಲ್ಲರ ಅತಿದೊಡ್ಡ ಜವಾಬ್ದಾರಿ. ಪರಿಸರ ಉಳಿಸುವ ಅರಿವು ಯುವ ಜನಾಂಗಕ್ಕೆ ಬರಬೇಕು. ಪರಿಸರ ನಮ್ಮ‌ ಮನೆ ಅದನ್ನು ನಾಶ‌ ಮಾಡದೇ ಇರುವಂತೆ ನಾವೆಲ್ಲರೂ ಹೆಜ್ಜೆ ಹಾಕಬೇಕಿದೆ ” ಎಂದರು.

“ಸುಮಾರು 5 ಸಾವಿರಕ್ಕೂ ಹೆಚ್ಚು ಸ್ಕೌಟ್ ಮತ್ತು ಗೈಡ್ಸ್ ಮಕ್ಕಳು ವಿಧಾನಸೌಧದ ಸುತ್ತಲೂ ನಡಿಗೆ ಮಾಡಿ ಜನರಲ್ಲಿ ಪರಿಸರ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲಿದ್ದಾರೆ. ನಾನು ಸಹ ಶಾಲಾ ದಿನಗಳಲ್ಲಿ ಇದರ ಭಾಗವಾಗಿದ್ದವನು. ಈ ಸಂಘಟನೆ ಬೆಳೆಸುವುದು ನಮ್ಮ ಬದ್ಧತೆ. ಪರಿಸರ ದಿನಾಚರಣೆ ಮಾಡುವುದು ನಮಗಾಗಿ ಅಲ್ಲ ಮುಂದಿನ ಪೀಳಿಗೆಗಾಗಿ” ಎಂದರು.

“ವಿದ್ಯಾರ್ಥಿಗಳು ಹಾಗೂ ಯುವ ಸಮುದಾಯಕ್ಕೆ ಪರಿಸರ ಪ್ರಜ್ಞೆ ಬೆಳೆಯಲಿ ಎಂದು ಸರ್ಕಾರ ಹಲವಾರು ಜಾಗೃತಿ ಕಾರ್ಯಕ್ರಮವನ್ನು ಸಚಿವರಾದ ಈಶ್ವರ ಖಂಡ್ರೆ, ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾದ ನರೇಂದ್ರಸ್ವಾಮಿ ಅವರ ನೇತೃತ್ವದಲ್ಲಿ ಹಮ್ಮಿಕೊಂಡಿದೆ” ಎಂದು ತಿಳಿಸಿದರು.

“ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಶಿಸ್ತಿಗೆ ಹೆಸರಾದವರು. ನೀವುಗಳು ರಜೆ ಸಮಯದಲ್ಲಿ ವಿಧಾನಸೌಧವನ್ನು ವೀಕ್ಷಣೆ ಮಾಡಬೇಕು. ಇಡೀ ಪ್ರಪಂಚದಲ್ಲಿ ಎಲ್ಲಿಯೂ ಇಲ್ಲದ ಕೌತುಕ ಇಲ್ಲಿದೆ. ನ್ಯಾಯಾಂಗ,‌ ಕಾರ್ಯಾಂಗ,‌ ಶಾಸಕಾಂಗ ಒಂದೇ‌ ಕಡೆ‌‌ ಸಮಾಗಮವಾಗಿವೆ. ದೇಶದ ಭವಿಷ್ಯವನ್ನು ಚರ್ಚೆ‌ ಮಾಡುವ ಸ್ಥಳ ಇದಾಗಿದೆ” ಎಂದರು.

“ಹಸಿರು ಉಳಿಸಿ, ಮರ‌ ಬೆಳೆಸಿ.‌ ಕಸ ತ್ಯಜಿಸಿ ಮರ ಬೆಳೆಸಿ‌‌” ಎಂದು ವಿದ್ಯಾರ್ಥಿಗಳೊಟ್ಟಿಗೆ ಡಿಸಿಎಂ ಘೋಷಣೆ ಕೂಗಿದರು.”

ರಾಜಕೀಯ

ಮುನೇಗೌಡರ ಮನೆಗೆ JDS ದೊಡ್ಡಬಳ್ಳಾಪುರ ಅಧ್ಯಕ್ಷ ಹರೀಶ್ ಗೌಡ ಭೇಟಿ..!

ಮುನೇಗೌಡರ ಮನೆಗೆ JDS ದೊಡ್ಡಬಳ್ಳಾಪುರ ಅಧ್ಯಕ್ಷ ಹರೀಶ್ ಗೌಡ ಭೇಟಿ..!

ಜೆಡಿಎಸ್ (JDS) ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಹರೀಶ್ ಗೌಡ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲಾ ನಿಕಟಪೂರ್ವ ಅಧ್ಯಕ್ಷ ಬಿ.ಮುನೇಗೌಡ ಅವರ ಸ್ವ ಗೃಹಕ್ಕೆ ಭೇಟಿ ನೀಡಿದ್ದಾರೆ.

[ccc_my_favorite_select_button post_id="121727"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]