ಹೆಣಗಳ ಮೇಲಿನ ರಾಜಕೀಯ ಬಿಜೆಪಿ ಪಾಲಿಗೆ ಹೊಸದೇನಲ್ಲ; ಸಿಎಂ ಸಿದ್ದರಾಮಯ್ಯ ವಾಗ್ದಾಳಿ

Politics over corpses is nothing new for BJP: CM Siddaramaiah

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮ ರಾಜೀನಾಮೆ ಕೇಳುವ ಮೊದಲು ಇಂತಹದ್ದೇ ಅವಘಡಗಳು ನಡೆದಿದ್ದ ಸಂದರ್ಭದಲ್ಲಿ ರಾಜೀನಾಮೆ ನೀಡಿದ್ದ ಬಿಜೆಪಿ ನಾಯಕರ ಪಟ್ಟಿಯನ್ನು ಬಿಡುಗಡೆ ಮಾಡುವಂತೆ ರಾಜ್ಯದ ಬಿಜೆಪಿ ನಾಯಕರಿಗೆ ಮನವಿ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಹೇಳಿದ್ದಾರೆ.

ಬಿಜೆಪಿ ನಾಯಕರ ಪ್ರತಿಭಟನೆ ಬೆನ್ನಲ್ಲೇ ಮಾಧ್ಯಮ ಹೇಳಿಕೆ ನೀಡಿರುವ ಸಿಎಂ, ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿರುವುದು ಒಂದು ಅಪಘಾತ. ಒಂದು ಜವಾಬ್ದಾರಿಯುತ ಸರ್ಕಾರವಾಗಿ ಆ ಘಟನೆಯ ಹೊಣೆಯನ್ನು ನಾವು ಹೊತ್ತಿದ್ದೇವೆ.

ಬೆಂಗಳೂರು ನಗರ ಪೊಲೀಸ್ ಕಮಿಷನರ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದ್ದೇವೆ, ರಾಜ್ಯ ಗುಪ್ತಚರ ಇಲಾಖೆಯ ಮುಖ್ಯಸ್ಥರನ್ನು ವರ್ಗಾವಣೆ ಮಾಡಿದ್ದೇವೆ. ನನ್ನ ರಾಜಕೀಯ ಕಾರ್ಯದರ್ಶಿಯನ್ನು ಸೇವೆಯಿಂದ ಬಿಡುಗಡೆಗೊಳಿಸಿದ್ದೇನೆ.

ಈ ಪ್ರಕರಣದ ಸಮಗ್ರ ತನಿಖೆಗೆ ನಿವೃತ್ತ ನ್ಯಾಯಾಧೀಶರಾದ ಜಾನ್ ಮೈಕೆಲ್ ಕುನ್ಹಾ ಅವರ ನೇತೃತ್ವದಲ್ಲಿ ಏಕಸದಸ್ಯ ಆಯೋಗವನ್ನೂ ರಚಿಸಿದ್ದೇವೆ.

ಇಷ್ಟೆಲ್ಲ ಕ್ರಮಕೈಗೊಂಡ ನಂತರವೂ ರಾಜ್ಯದ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿರುವುದು ರಾಜಕೀಯ ದುರುದ್ದೇಶದಿಂದ ಹೊರತು ಜನರ ಬಗೆಗಿನ ಕಾಳಜಿಯಿಂದ ಅಲ್ಲ ಎನ್ನುವುದು ಸ್ಪಷ್ಟವಾಗಿದೆ.

ಹೆಣಗಳ ಮೇಲಿನ ರಾಜಕೀಯ ಬಿಜೆಪಿ ಪಾಲಿಗೆ ಹೊಸದೇನಲ್ಲ. ಅಪಘಾತ, ಹತ್ಯೆ, ದೌರ್ಜನ್ಯಗಳು ನಡೆದ ತಕ್ಷಣ ಸತ್ತ ಜೀವಗಳನ್ನು ಹುಡುಕಿಕೊಂಡು ಹೋಗುವ ರಣಹದ್ದುಗಳಂತೆ ಎರಗಿ ಬೀಳುವುದು ಬಿಜೆಪಿಯ ರಕ್ತದಲ್ಲಿಯೇ ಇದೆ.

ತಮ್ಮ ಊಟದೆಲೆಯ ಮೇಲೆ ಆನೆ ಸತ್ತುಬಿದ್ದಿದ್ದರೂ ಎದುರಿಗಿದ್ದವರ ಎಲೆ ಮೇಲೆ ಸತ್ತು ಬಿದ್ದ ನೊಣದ ಕಡೆ ಬೊಟ್ಟುಮಾಡುವುದು ಬಿಜೆಪಿಯ ಹಳೆಯ ಚಾಳಿ ಎನ್ನುವುದನ್ನು ರಾಜ್ಯದ ಜನತೆ ಅರ್ಥಮಾಡಿಕೊಂಡಿದ್ದಾರೆ.

ಪ್ರತಿಯೊಂದು ಅಪಘಾತದ ಹಿಂದೆ ಸಾವು-ನೋವಿಗೆ ಈಡಾದವರ ಕುಟುಂಬದ ದು:ಖ ಮತ್ತು ಸಂಕಟ ಇರುವುದನ್ನು ನಾವು ಅರ್ಥಮಾಡಿಕೊಂಡಿದ್ದೇವೆ. ಇದೇ ಕಾರಣಕ್ಕಾಗಿ ನಾವು ಇಂತಹ ಪ್ರಕರಣಗಳನ್ನು ರಾಜಕೀಯಕ್ಕೆ ಬಳಸುವುದಿಲ್ಲ.

ಹೀಗಿದ್ದರೂ ರಾಜ್ಯದ ಬಿಜೆಪಿ ನಾಯಕರು ಮತ್ತೆ ಮತ್ತೆ ಇಂತಹ ಪ್ರಕರಣಗಳನ್ನು ಕೆದಕಿ ಕೆದಕಿ ಜನರನ್ನು ಪ್ರಚೋದಿಸುತ್ತಿರುವ ಹಿನ್ನೆಲೆಯಲ್ಲಿ ಇವರ ಆತ್ಮವಂಚಕ ನಡವಳಿಕೆಯನ್ನು ಬಯಲು ಮಾಡುವ ಉದ್ದೇಶದಿಂದ ಬಿಜೆಪಿ ಆಡಳಿತದಲ್ಲಿನ ಕೆಲವು ಪ್ರಕರಣಗಳನ್ನು ರಾಜ್ಯದ ಜನತೆಯ ಗಮನಕ್ಕೆ ತರಲು ಇಷ್ಟಪಡುತ್ತೇನೆ.

2002ರಲ್ಲಿ ಗುಜರಾತ್ ರಾಜ್ಯದಲ್ಲಿ ನಡೆದ ಹತ್ಯಾಕಾಂಡದಲ್ಲಿ ಎಲ್ಲ ಧರ್ಮಗಳಿಗೆ ಸೇರಿದ್ದ ಅಂದಾಜು ಎರಡು ಸಾವಿರ ಅಮಾಯಕರು ಪ್ರಾಣ ಕಳೆದುಕೊಂಡರು. ಆ ಘಟನೆಯ ಹೊಣೆಹೊತ್ತು ರಾಜೀನಾಮೆ ನೀಡುವಂತೆ ಅವರದ್ದೇ ಪಕ್ಷದ ಪ್ರಧಾನಿ ಅಟಲಬಿಹಾರಿ ವಾಜಪೇಯಿ ಸೂಚನೆ ನೀಡಿದರೂ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿಯವರು ರಾಜೀನಾಮೆ ನೀಡಿಲ್ಲ ಮಾತ್ರವಲ್ಲ, ಇಲ್ಲಿಯ ವರೆಗೆ ಕನಿಷ್ಠ ವಿಷಾದವನ್ನೂ ಸೂಚಿಸಿಲ್ಲ. ನಮ್ಮ ರಾಜೀನಾಮೆ ಕೇಳುವವರು ಮೊದಲು ಇದಕ್ಕೆ ಉತ್ತರಿಸಿ.

ಕಳೆದ ಏಪ್ರಿಲ್ ತಿಂಗಳಲ್ಲಿ ಪಹಲ್ಗಾಮ್‌ನಲ್ಲಿ ಪಾಕ್ ಉಗ್ರಗಾಮಿಗಳು ನಡೆಸಿದ್ದ ಹತ್ಯಾಕಾಂಡದಲ್ಲಿ 26 ಭಾರತೀಯರು ಪ್ರಾಣ ಕಳೆದುಕೊಂಡರು. ಈ ಘಟನೆಯ ಹೊಣೆ ಹೊತ್ತು ಪ್ರಧಾನಿ ರಾಜೀನಾಮೆ ನೀಡಬೇಕೆಂದು ನಮ್ಮ ಪಕ್ಷ ಒತ್ತಾಯಿಸಿಲ್ಲ. ಈ ಘಟನೆಯ ಚರ್ಚೆಗೆ ಕನಿಷ್ಠ ಸಂಸತ್ ನ ವಿಶೇಷ ಅಧಿವೇಶನ ಕರೆಯಬೇಕೆಂಬ ನಮ್ಮ ಪಕ್ಷದ ಬೇಡಿಕೆಯನ್ನೂ ಪ್ರಧಾನಿಯವರು ಒಪ್ಪಿಕೊಂಡಿಲ್ಲ.

ದೇಶಕ್ಕೆಲ್ಲ ಸಿಂಧೂರ ಹಂಚಲು ಹೊರಟಿರುವ ಪ್ರಧಾನಿಯವರಿಗೆ ಇಲ್ಲಿಯ ವರೆಗೆ 26 ಅಮಾಯಕರ ಸಾವಿಗೆ ಕಾರಣರಾದ ನಾಲ್ಕು ಮಂದಿ ದುರುಳರು ಯಾರು ಎನ್ನುವುದನ್ನು ಪತ್ತೆ ಹಚ್ಚಲಾಗಿಲ್ಲ. ಇದು ಕೇಂದ್ರ ಸರ್ಕಾರದ ವೈಫಲ್ಯ ಅಲ್ಲವೇ? ಈ ವೈಫಲ್ಯದ ಹೊಣೆಯನ್ನು ಯಾರು ಹೊರಬೇಕು? ಪಂಡಿತ ಜವಾಹರಲಾಲ್ ನೆಹರೂ ಅವರಾ? ರಾಹುಲ್ ಗಾಂಧಿಯವರಾ? ಇಲ್ಲವೇ ಪ್ರಧಾನಿ ನರೇಂದ್ರ ಮೋದಿಯವರೇ?

ಕಳೆದ ಎರಡು ವರ್ಷಗಳಿಂದ ದೇಶದ ಈಶಾನ್ಯ ಭಾಗದ ಮಣಿಪುರ ಹಿಂಸೆಯ ಬೆಂಕಿಯಲ್ಲಿ ಹೊತ್ತಿ ಉರಿಯುತ್ತಿದೆ. ನೂರಾರು ಮಂದಿ ಸಾವಿಗೀಡಾಗಿದ್ದಾರೆ. ಹೀಗಿದ್ದರೂ ಆ ರಾಜ್ಯದ ಬಿಜೆಪಿ ಮುಖ್ಯಮಂತ್ರಿ ಬಿರೇನ್ ಸಿಂಗ್ 20 ತಿಂಗಳ ಕಾಲ ಕುರ್ಚಿಗೆ ಅಂಟಿಕೂತಿದ್ದರು. ಕೊನೆಗೂ ಸುಪ್ರೀಂ ಕೋರ್ಟ್ ಚಾಟಿ ಬೀಸಿದ ನಂತರ ರಾಜೀನಾಮೆ ನೀಡಿದ್ದರು. ಈಗಲೂ ಅಲ್ಲಿ ಹಿಂಸಾಚಾರ ಮುಂದುವರಿದಿದೆ. ಇದರ ಹೊಣೆಯನ್ನು ಕೇಂದ್ರ ಗೃಹಸಚಿವರು ಹೊರುವುದು ಬೇಡವೇ?

ಗುಜರಾತ್ ನ ಮೋರ್ಬಿ ಸೇತುವೆ ಕುಸಿದು ಬಿದ್ದು 140 ಮಂದಿ ಮೃತಪಟ್ಟಿದ್ದರು. ಈ ವರ್ಷದ ಜನವರಿ ತಿಂಗಳಲ್ಲಿ ಮಹಾಕುಂಭಮೇಳದದಲ್ಲಿ 30 ಯಾತ್ರಿಕರು ಪ್ರಾಣ ಕಳೆದುಕೊಂಡರು.

ಆ ರಾಜ್ಯಗಳಲ್ಲಿ ಮುಖ್ಯಮಂತ್ರಿಯಾಗಿರುವವರು ಬಿಜೆಪಿಗೆ ಸೇರಿದವರಲ್ಲವೇ? ಇವರು ರಾಜೀನಾಮೆ ನೀಡುವುದು ಬಿಡಿ, ಆ ಘಟನೆಗಳ ಬಗ್ಗೆ ಇಲ್ಲಿಯ ವರೆಗೆ ಸರಿಯಾದ ತನಿಖೆಯನ್ನೇ ಅಲ್ಲಿನ ಸರ್ಕಾರ ನಡೆಸಿಲ್ಲ. ಹೀಗಿರುವಾಗ ನಮ್ಮ ರಾಜೀನಾಮೆ ಕೇಳಲು ರಾಜ್ಯದ ಬಿಜೆಪಿ ನಾಯಕರಿಗೆ ಯಾವ ನೈತಿಕತೆ ಇದೆ?

ನಮ್ಮ ಸರ್ಕಾರ ರಾಜ್ಯದ ಏಳು ಕೋಟಿ ಜನರಿಗೆ ಉತ್ತರದಾಯಿಯಾಗಿದೆ. ಈ ಕಾರಣಕ್ಕಾಗಿ ಕಾಲ್ತುಳಿತ ಪ್ರಕರಣದಲ್ಲಿ ಕರ್ತವ್ಯಭ್ರಷ್ಟರಾಗಿದ್ದಾರೆಂದು ಮೇಲ್ನೋಟಕ್ಕೆ ಅನಿಸಿದವರ ವಿರುದ್ದ ಕ್ರಮಕೈಗೊಳ್ಳಲಾಗಿದೆ.

ಉಳಿದಂತೆ ಇದರ ಬಗ್ಗೆ ಆಮೂಲಾಗ್ರವಾದ ಮತ್ತು ನಿಷ್ಪಕ್ಷಪಾತ ತನಿಖೆಗೆ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖಾ ಆಯೋಗ ರಚಿಸಲಾಗಿದೆ. ಆಯೋಗ ನೀಡುವ ವರದಿಯನ್ನು ಆಧರಿಸಿ ತಪ್ಪಿತಸ್ಥರ ವಿರುದ್ದ ಯಾವುದೇ ಮುಲಾಜಿಲ್ಲದೆ ಕ್ರಮಕೈಗೊಳ್ಳಲಾಗುವುದು.

ರಾಜ್ಯ ಬಿಜೆಪಿ ನಾಯಕರು ಇನ್ನಾದರೂ ಪ್ರತಿಭಟನೆಯಂತಹ ಬೀದಿ ಪ್ರಹಸನವನ್ನು ಕೈಬಿಟ್ಟು ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳಲಿ.

ರಾಜಕೀಯ

ಮುನೇಗೌಡರ ಮನೆಗೆ JDS ದೊಡ್ಡಬಳ್ಳಾಪುರ ಅಧ್ಯಕ್ಷ ಹರೀಶ್ ಗೌಡ ಭೇಟಿ..!

ಮುನೇಗೌಡರ ಮನೆಗೆ JDS ದೊಡ್ಡಬಳ್ಳಾಪುರ ಅಧ್ಯಕ್ಷ ಹರೀಶ್ ಗೌಡ ಭೇಟಿ..!

ಜೆಡಿಎಸ್ (JDS) ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಹರೀಶ್ ಗೌಡ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲಾ ನಿಕಟಪೂರ್ವ ಅಧ್ಯಕ್ಷ ಬಿ.ಮುನೇಗೌಡ ಅವರ ಸ್ವ ಗೃಹಕ್ಕೆ ಭೇಟಿ ನೀಡಿದ್ದಾರೆ.

[ccc_my_favorite_select_button post_id="121727"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]