ಅಕ್ಟೋಬರ್‌ ತಿಂಗಳಲ್ಲಿ ಈ ಸರ್ಕಾರದ ಕಥೆ ಮುಗಿಯಲಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

This government's story will end in October: Opposition Leader R. Ashoka

ಬೆಂಗಳೂರು: ಕಾಲ್ತುಳಿತ ಪ್ರಕರಣದಲ್ಲಿ ಹೈಕೋರ್ಟ್‌ ಸ್ವಯಂ ಪ್ರೇರಣೆಯ ಪ್ರಕರಣ ದಾಖಲಿಸಿಕೊಂಡಿದೆ ಎಂದರೆ, ಸರ್ಕಾರದ ಮೇಲೆ ಯಾರಿಗೂ ನಂಬಿಕೆ ಇಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ (R Ashoka) ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಲ್ತುಳಿತ ಪ್ರಕರಣದಲ್ಲಿ ರಾಜ್ಯ ಸರ್ಕಾರ ತಪ್ಪು ಮಾಡಿಲ್ಲದಿದ್ದರೆ ಸರಿಯಾಗಿ ತನಿಖೆ ನಡೆಸಬೇಕಿತ್ತು. ಈಗ ಹೈಕೋರ್ಟ್‌ ಸ್ವಯಂ ಪ್ರೇರಣೆಯ ಪ್ರಕರಣ ದಾಖಲಿಸಿಕೊಂಡಿದೆ. ಇದಕ್ಕೆ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಎಂದರೆ, ಕೋರ್ಟ್‌ ಸರ್ಕಾರವನ್ನು ನಂಬುತ್ತಿಲ್ಲ ಎಂದರ್ಥ.

ಸತ್ತಿರುವ 11 ಜನರ ಕುಟುಂಬದವರನ್ನೇ ಕೇಳಿ ತನಿಖೆಗೆ ನೀಡಬಹುದಿತ್ತು. ಮೊದಲು ಜಿಲ್ಲಾಧಿಕಾರಿ, ಆ ನಂತರ ನಿವೃತ್ತ ನ್ಯಾಯಾಧೀಶರು, ಆ ಬಳಿಕ ಎಸ್‌ಐಟಿ ತನಿಖೆ ಎಂದು ಹೇಳಿದ್ದಾರೆ. ಯಾವುದರಲ್ಲೂ ಖಚಿತತೆ ಇಲ್ಲ ಎಂದರು.

ಸಿಎಂ ಸಿದ್ದರಾಮಯ್ಯ ಹಾಗೂ ಕುಟುಂಬದವರು ಕ್ರಿಕೆಟಿಗರ ಜೊತೆಗೆ ಫೋಟೋ ಶೂಟ್‌ ಮಾಡಿಕೊಂಡಿದ್ದರಿಂದಲೇ 11 ಜನರು ಮೃತರಾಗಿದ್ದಾರೆ. ಬಿಜೆಪಿ ಎಲ್ಲ ಬಗೆಯ ಹೋರಾಟಗಳನ್ನು ಮಾಡಿದೆ. ಇನ್ನು ಮುಂದೆಯೂ ಹೋರಾಟ ಮಾಡಲಾಗುವುದು.

ಸರ್ಕಾರವೇ ಜನರನ್ನು ವಿಧಾನಸೌಧಕ್ಕೆ ಆಹ್ವಾನಿಸಿದೆ. ಹಾಗೆ ಆಹ್ವಾನ ನೀಡದೇ ಹೋಗಿದ್ದರೆ ಈ ದುರಂತ ನಡೆಯುತ್ತಿರಲಿಲ್ಲ. ನಾವು ಪ್ರತಿಭಟನೆ ಮಾಡಿದಾಗ ನೂರಾರು ಪೊಲೀಸರು ಬಂದಿದ್ದರು. ಅದೇ ರೀತಿ ಎರಡು ಲಕ್ಷ ಜನರನ್ನು ನಿಯಂತ್ರಣ ಮಾಡಲು ಹೆಚ್ಚು ಪೊಲೀಸರನ್ನು ನಿಯೋಜಿಸಬೇಕಿತ್ತು ಎಂದರು.

ಇದಕ್ಕಾಗಿಯೇ ಮೂರು ದಿನದ ಅಧಿವೇಶನ ಕರೆಯಲು ಆಗ್ರಹಿಸಿದ್ದೇನೆ. ಸರ್ಕಾರದ ತಪ್ಪಿಲ್ಲ ಎಂದಾದರೆ ಯಾರ ತಪ್ಪು ಎಂದು ಸರಿಯಾಗಿ ತಿಳಿಸಲಿ. ಅಕ್ಟೋಬರ್‌ ತಿಂಗಳಲ್ಲೇ ಈ ಸರ್ಕಾರದ ಕಥೆ ಮುಗಿಯಲಿದೆ. ಎಲ್ಲ ಶಾಸಕರು ನಾವೇ ಮುಖ್ಯಮಂತ್ರಿ ಎಂದು ಹೇಳಿಕೊಳ್ಳುತ್ತಿದ್ದಾರೆ. ಇನ್ನು 2028 ಕ್ಕೆ ಇವರು ಅಧಿಕಾರಕ್ಕೆ ಬರಲು ಹೇಗೆ ಸಾಧ್ಯ? ಡಿಕೆ ಶಿವಕುಮಾರ್‌ ಬಹಳ ಚಿಂತೆಯಲ್ಲಿದ್ದಾರೆ ಎಂದರು.

ರಾಜಕೀಯ

ಮುನೇಗೌಡರ ಮನೆಗೆ JDS ದೊಡ್ಡಬಳ್ಳಾಪುರ ಅಧ್ಯಕ್ಷ ಹರೀಶ್ ಗೌಡ ಭೇಟಿ..!

ಮುನೇಗೌಡರ ಮನೆಗೆ JDS ದೊಡ್ಡಬಳ್ಳಾಪುರ ಅಧ್ಯಕ್ಷ ಹರೀಶ್ ಗೌಡ ಭೇಟಿ..!

ಜೆಡಿಎಸ್ (JDS) ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಹರೀಶ್ ಗೌಡ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲಾ ನಿಕಟಪೂರ್ವ ಅಧ್ಯಕ್ಷ ಬಿ.ಮುನೇಗೌಡ ಅವರ ಸ್ವ ಗೃಹಕ್ಕೆ ಭೇಟಿ ನೀಡಿದ್ದಾರೆ.

[ccc_my_favorite_select_button post_id="121727"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]