IIN Platinum 2025 National Award to Visvesvaraya Jal Nigam for Yettinahole Project

ಎತ್ತಿನಹೊಳೆ ಯೋಜನೆಗಾಗಿ ವಿಶ್ವೇಶ್ವರಯ್ಯ ಜಲ ನಿಗಮಕ್ಕೆ ಐಐಎನ್ ಪ್ಲಾಟಿನಂ 2025 ರಾಷ್ಟ್ರೀಯ ಪ್ರಶಸ್ತಿ

ಬೆಂಗಳೂರು: ಅಕ್ವಡಕ್ಟ್ ಇಂಜಿನಿಯರಿಂಗ್ ತಂತ್ರಜ್ಞಾನದ ಮೂಲಕ ಆರೋಗ್ಯ, ಸುರಕ್ಷತೆ, ಪರಿಸರ ಸ್ನೇಹಿ ಮಾದರಿಯಲ್ಲಿ ಎತ್ತಿನಹೊಳೆ (Yettinahole) ಸಮಗ್ರ ಕುಡಿಯುವ ನೀರಿನ ಯೋಜನೆ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯ ಜಲಸಂಪನ್ಮೂಲ ಇಲಾಖೆ ವ್ಯಾಪ್ತಿಯ ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತಕ್ಕೆ (VJNL) 2025ನೇ ಸಾಲಿನ ಪ್ರತಿಷ್ಠಿತ ಐಐಎನ್ ಪ್ಲಾಟಿನಮ್ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ.

ಮೂಲಸೌಕರ್ಯ ಕ್ಷೇತ್ರದಲ್ಲಿ ಕೌಶಲ್ಯ ಅಭಿವೃದ್ಧಿ, ತಂತ್ರಜ್ಞಾನ ಆವಿಷ್ಕಾರಕ್ಕೆ ಆದ್ಯತೆ ನೀಡುವ ಉದ್ದೇಶದಿಂದ ರೂಪಿತವಾಗಿರುವ ಇನ್ಫ್ರಾಸ್ಟ್ರಕ್ಚರ್ ಸ್ಕಿಲ್ ಡೆವಲಪ್ಮೆಂಟ್ ಅಕಾಡಮಿ (ISDA) ಸಂಸ್ಥೆಯು ವಿಜೆಎನ್ಎಲ್ ಗೆ ಕಳೆದ ಜೂನ್ 14 ರಂದು ನವದೆಹಲಿಯಲ್ಲಿ ಈ ಪ್ರಶಸ್ತಿಯನ್ನು ನೀಡಿದೆ.

ವಿಜೆಎನ್ಎಲ್ ವ್ಯವಸ್ಥಾಪಕ ನಿರ್ದೇಶಕರಾದ ಸಣ್ಣಚಿತ್ತಯ್ಯ ಹಾಗೂ ಅಧಿಕಾರಿಗಳ ತಂಡ ಮಂಗಳವಾರ ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರನ್ನು ಪ್ರಶಸ್ತಿ ಫಲಕದೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.

ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಗುರುತ್ವಾ ಕಾಲುವೆ ಸರಪಳಿಯ 199.620 ಕಿ.ಮೀ ನಿಂದ 210.090 ಕಿ.ಮೀ ವರೆಗೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಚೇಳೂರು ಸಮೀಪ 10.47 ಕಿ.ಮೀ ಉದ್ದದ 3300 ಕ್ಯೂಸೆಕ್ ಸಾಮರ್ಥ್ಯದ ಬೃಹತ್ ಮೇಲ್ಗಾಲುವೆ ನಿರ್ಮಾಣ ಕಾಮಗಾರಿಯನ್ನು ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತದಿಂದ 2018 ರಲ್ಲಿ ಆರಂಭಿಸಿ 2023ರಲ್ಲಿ ಪೂರ್ಣಗೊಳಿಸಲಾಗಿದೆ.

ಎತ್ತಿನಹೊಳೆ ಯೋಜನೆಯಲ್ಲಿ “ಅಕ್ವಡಕ್ಟ್ (ಬೃಹತ್ ಮೇಲ್ಗಾಲುವೆ) ಇಂಜಿನಿಯರಿಂಗ್ ತಂತ್ರಜ್ಞಾನ”ದ ಮೂಲಕ 10.47 ಕಿ.ಮೀ ಉದ್ದದ ಉನ್ನತ ಗುರುತ್ವಾಕರ್ಷಣ ಕಾಲುವೆ ಹಾಗೂ 520 ವಿಶೇಷ ಸೇತುಬಂಧಗಳನ್ನು ನಿರ್ಮಿಸಲಾಗಿದೆ.

ಈ ಯೋಜನೆಯಲ್ಲಿ ಅವಳಿ ತೊಟ್ಟಿಗಳು, ಸರ್ವೀಸ್ ರಸ್ತೆಗಳ ಸಮನ್ವಯತೆಯಿಂದ ಕಾರ್ಯಾಚರಣೆ ದಕ್ಷತೆಗಾಗಿ ಹೊಸ ವಿನ್ಯಾಸವನ್ನು ರೂಪಿಸಲಾಗಿದೆ.

10.47 ಕಿ.ಮೀ ಉದ್ದದ ಬೃಹತ್ ಮೇಲ್ಗಾಲುವೆ ಕಾಮಗಾರಿಯನ್ನು ಪೂರ್ಣಗೊಳಿಸಲು 1162.69 ಕೋಟಿ ಹಾಗೂ ಭೂಸ್ವಾಧೀನಕ್ಕೆ 40.99 ಕೋಟಿ ಸೇರಿ ಒಟ್ಟು 1203.68 ಕೋಟಿ ರೂಪಾಯಿ ವೆಚ್ಚವಾಗಿದೆ.

ರಾಜಕೀಯ

ಒಳ ಮೀಸಲಾತಿ ಜಾರಿ ವೇಳೆ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸಿದಂತಿಲ್ಲ: ಬಿ.ವೈ. ವಿಜಯೇಂದ್ರ

ಒಳ ಮೀಸಲಾತಿ ಜಾರಿ ವೇಳೆ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸಿದಂತಿಲ್ಲ: ಬಿ.ವೈ. ವಿಜಯೇಂದ್ರ

ಒಳ ಮೀಸಲಾತಿ ಜಾರಿ ವಿಚಾರದಲ್ಲಿ ಮುಖ್ಯಮಂತ್ರಿಗಳು ಮಾನ್ಯ ಸುಪ್ರೀಂ ಕೋರ್ಟಿನ ಆದೇಶವನ್ನೂ ಸರಿಯಾಗಿ ಪಾಲನೆ ಮಾಡಿದಂತೆ ಕಾಣುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra)

[ccc_my_favorite_select_button post_id="112894"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!