BWSSB Guinness Record; DCM DK Shivakumar receives certificate

BWSSB ಗಿನ್ನಿಸ್ ದಾಖಲೆ; ಪ್ರಮಾಣಪತ್ರ ಸ್ವೀಕರಿಸಿದ ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: “ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯೂಎಸ್ಎಸ್ ಬಿ) ವತಿಯಿಂದ ಕಳೆದ ಮಾರ್ಚ್ 21 ರಿಂದ 28 ರವರೆಗೆ ನಡೆದ ಜಲ ಸಂರಕ್ಷಣೆ ಅಭಿಯಾನ ಸಪ್ತಾಹದಲ್ಲಿ 5,33,642 ಪ್ರತಿಜ್ಞೆ ಸ್ವೀಕರಿಸಿ, ಜಲ ಸಂರಕ್ಷಣೆಯಲ್ಲಿ ಗಿನ್ನಿಸ್ ವಿಶ್ವದಾಖಲೆ ಬರೆದ ಹಿನ್ನೆಲೆಯಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಬುಧವಾರ ಅಧಿಕೃತ ಪ್ರಮಾಣ ಪತ್ರ ಸ್ವೀಕರಿಸಿದರು.

ಬೆಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ನಡೆದ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ತೀರ್ಪುಗಾರ ಸ್ವಪನಿಲ್ ದಂಗರಿಕರ್ ಅವರು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಪ್ರಮಾಣ ಪತ್ರ ವಿತರಿಸಿದರು. ಈ ವೇಳೆ ಶಿವಕುಮಾರ್ ಅವರು ಮಾತನಾಡಿದರು.

ನಾವು ನೀರನ್ನು ಉಳಿಸಲೇಬೇಕು. ಈ ನೀರನ್ನು ಉಳಿಸುವ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಬಿಡ್ಬ್ಲೂಎಸ್ಎಸ್ ಬಿ ವತಿಯಿಂದ ಒಂದು ವಾರಗಳ ಕಾಲ ಪ್ರತಿಜ್ಞಾ ಸ್ವೀಕಾರ ಅಭಿಯಾನ ಮಾಡಿದ್ದೆವು. ಈ ಅಭಿಯಾನದಲ್ಲಿ 5,33,642 ಮಂದಿ ಪ್ರತಿಜ್ಞೆ ಸ್ವೀಕರಿಸಿದ್ದರು. ಆಮೂಲಕ ಇದು ಗಿನ್ನಿಸ್ ದಾಖಲೆ ಬರೆದಿದೆ.

ದೆಹಲಿ ಸೇರಿದಂತೆ ಬೇರೆ ನಗರಗಳಲ್ಲಿ ಕುಡಿಯುವ ನೀರಿನ ಸಂಪರ್ಕವೇ ಬೇರೆ, ದಿನಬಳಕೆ ಉದ್ದೇಶಕ್ಕೆ ಬಳಸುವ ನೀರಿನ ಸಂಪರ್ಕವೇ ಬೇರೆ ಇದೆ. ಆದರೆ ನಮ್ಮಲ್ಲಿ ಕುಡಿಯಲು, ವಾಹನ ತೊಳೆಯಲು, ಗಿಡಗಳಿಗೆ ಹಾಕಲು ಎಲ್ಲದಕ್ಕೂ ಕುಡಿಯುವ ನೀರನ್ನೇ ಬಳಸಲಾಗುತ್ತಿದೆ.

ಸುಮಾರು 35% ನಷ್ಟು ಜನ ಕುಡಿಯುವ ನೀರಿನ ಬಿಲ್ ಕಟ್ಟುತ್ತಿಲ್ಲ. ಆದರೂ ಮಂಡಳಿಯು ಕೆಲಸ ಮಾಡುತ್ತಿದೆ. ಬೆಂಗಳೂರಿನ 2 ಕೋಟಿ ನಾಗರೀಕರಿಗೆ ಕುಡಿಯುವ ನೀರು ಪೂರೈಸಲು ಯೋಜನೆ ರೂಪಿಸುತ್ತಿದ್ದೇವೆ. ರಾಮ್ ಪ್ರಸಾತ್ ಮನೋಹರ್ ಅವರ ನೇತೃತ್ವದಲ್ಲಿ ಮಂಡಳಿಯು ಹೊಸ ಆವಿಷ್ಕಾರಿ ಯೋಜನೆಗಳನ್ನು ರೂಪಿಸುತ್ತಿದೆ ಎಂದು ಮಾಹಿತಿ ನೀಡಿದರು.

ಬದುಕಿನಲ್ಲಿ ನಾವೇನಾದರೂ ಸಾಧನೆ ಮಾಡಬೇಕು. ಬೆಂಗಳೂರು ಯೋಜಿತ ನಗರವಲ್ಲ. ಇಲ್ಲಿನ ಜನಸಂಖ್ಯೆ ಬಹಳ ದೊಡ್ಡದಾಗಿ ಬೆಳೆದಿದೆ. ಹೀಗಾಗಿ ಇಲ್ಲಿ ಗ್ರೇಟರ್ ಬೆಂಗಳೂರನ್ನು ಘೋಷಣೆ ಮಾಡಿ, ಮತ್ತಷ್ಟು ಪ್ರದೇಶವನ್ನು ಮುಂದಿನ ದಿನಗಳಲ್ಲಿ ಬೆಂಗಳೂರಿನ ವ್ಯಾಪ್ತಿಗೆ ಸೇರಿಸಿಕೊಳ್ಳಲಾಗುತ್ತಿದೆ. ಇದರ ವ್ಯಾಪ್ತಿಯಲ್ಲಿ ಎಷ್ಟು ಪಾಲಿಕೆ ರಚಿಸಬೇಕು ಎಂದು ಚರ್ಚೆ ಮಾಡುತ್ತಿದ್ದೇವೆ ಎಂದರು.

ಬೆಂಗಳೂರಿನ ಒಳಗೆ 1.40 ಕೋಟಿ ಜನಸಂಖ್ಯೆ ಇದ್ದು, ನಗರದ ಹೊರಭಾಗದಲ್ಲಿ ಆನೇಕಲ್ ಹಾಗೂ ಇತರೆ ಭಾಗದಲ್ಲಿ 50 ಲಕ್ಷ ಜನಸಂಖ್ಯೆ ಇದೆ. ಬೆಂಗಳೂರಿಗೆ ಹೊಸದಾಗಿ ಸೇರಿದ 110 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸುತ್ತಿದ್ದೇವೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾದಂತೆ ಬಸ್, ರೈಲು ಸೇರಿದಂತೆ ಇತರೆ ವಸ್ತುಗಳ ಬೆಲೆ ಏರಿಕೆಯಾಗುತ್ತದೆ.

ಕಳೆದ 10 ವರ್ಷಗಳಿಂದ ನೀರಿನ ದರ ಏರಿಕೆ ಮಾಡಿರಲಿಲ್ಲ. ಇದರಿಂದ ಮಂಡಳಿಯು ವಾರ್ಷಿಕವಾಗಿ 400-500 ಕೋಟಿ ರೂ. ನಷ್ಟ ಅನುಭವಿಸುವಂತಾಗಿದೆ. ದಾಖಲೆ ಪ್ರಕಾರ ಒಂದು ಸಾವಿರ ಕೋಟಿವರೆಗೂ ನಷ್ಟವಾಗಿರುವ ಬಗ್ಗೆ ಮಾಹಿತಿ ಇದೆ ಎಂದು ಹೇಳಿದರು.

ದರ ಪರಿಷ್ಕರಣೆ ಮೂಲಕ 500 ಕೋಟಿ ನಷ್ಟ ಕಡಿಮೆ ಮಾಡುವ ಪ್ರಯತ್ನ

“ನಾನು ಇದರ ಜವಾಬ್ದಾರಿ ವಹಿಸಿಕೊಂಡ ಬಳಿಕ ನೀರಿನ ದರ ಏರಿಕೆಗೆ ಅನುಮತಿ ನೀಡಿದ್ದೇನೆ. ಟೀಕೆಗಳು ವ್ಯಕ್ತವಾಗುವುದು ಸಹಜ. ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ. ಟೀಕೆ ಮಾಡುವವರು ಮಾಡುತ್ತಿರಲಿ ಎಂದು ಮುಖ್ಯಮಂತ್ರಿಗಳ ಜತೆ ಚರ್ಚೆ ಮಾಡಿ ದಿಟ್ಟ ತೀರ್ಮಾನ ಮಾಡಿದೆ. ಈ ದರ ಪರಿಷ್ಕರಣೆಯಿಂದ ವಾರ್ಷಿಕವಾಗಿ 500 ಕೋಟಿಯಷ್ಟು ಕಡಿಮೆ ಮಾಡುವ ಪ್ರಯತ್ನ ಮಾಡಲಾಗಿದೆ.

ನಷ್ಟವನ್ನು ಸಂಪೂರ್ಣವಾಗಿ ನಿಲ್ಲಿಸಲು ಸಾಧ್ಯವಾಗದಿದ್ದರೂ ಅದನ್ನು ನಿಯಂತ್ರಿಸುವ ಪ್ರಯತ್ನ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಸಾರಿಗೆ ಇಲಾಖೆ ಮಾದರಿಯಲ್ಲಿ ದರ ಪರಿಷ್ಕರಣೆ ಮಾಡಲು ತೀರ್ಮಾನ ಮಾಡಿದ್ದೇವೆ ಎಂದು ತಿಳಿಸಿದರು.

ಮಂಡಳಿ ಸಿಬ್ಬಂದಿ ಬಹಳ ಪರಿಶ್ರಮದಿಂದ ಕೆಲಸ ಮಾಡುತ್ತಿದ್ದಾರೆ. ಕಾವೇರಿ 5ನೇ ಹಂತ ಕುಡಿಯುವ ನೀರಿನ ಯೋಜನೆ ಜಾರಿಗೆ ಸಾಕಷ್ಟು ಅಡಚಣೆಗಳು ಎದುರಾಗಿದ್ದವು. ಅದೆಲ್ಲವನ್ನು ನಿವಾರಿಸಿ ಜಾರಿ ಮಾಡಲಾಗಿದೆ. ಹೊಸ ಸಂಪರ್ಕ ನೀಡಲು ಇದ್ದ ಸಮಸ್ಯೆಗಳನ್ನು ನಿವಾರಣೆ ಮಾಡಲಾಗಿದೆ.

ಸಂಚಾರಿ ಕಾವೇರಿ ಯೋಜನೆ ಮೂಲಕ ಜನರಿಗೆ ಕಡಿಮೆ ಬೆಲೆಗೆ ಪರಿಶುದ್ಧವಾದ ನೀರನ್ನು ನೀಡಲಾಗುತ್ತಿದೆ. ಇನ್ನು ಬೆಂಗಳೂರಿನಲ್ಲಿ ಒಳಚರಂಡಿ ವಿಚಾರವೂ ಒಂದು ಸವಾಲಾಗಿದೆ. ಕೊಳಚೆ ನೀರನ್ನು ಉತ್ತಮ ಕೆರೆಗಳಿಗೆ ಬಿಡಲಾಗುತ್ತಿದೆ. ಇದನ್ನು ಸಂಸ್ಕರಿಸಿ ಮರುಬಳಕೆ ಮಾಡಲು ಯೋಜನೆ ರೂಪಿಸಲಾಗುತ್ತಿದೆ ಎಂದು ಹೇಳಿದರು.

ಕಾವೇರಿ ಆರತಿ ಪ್ರಯೋಜನದ ಬಗ್ಗೆ ರೈತ ಸಂಘದವರಿಗೆ ಮಾಹಿತಿ ಇಲ್ಲ

ಕಾವೇರಿ ಆರತಿಯನ್ನು ನಾವು ಪ್ರಾರಂಭ ಮಾಡಿದ್ದೇವೆ. ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲವಾಗುವುದಿಲ್ಲ ಎಂದು ನಾನು ನಂಬಿದ್ದೇನೆ. ಈಗ ಕೆಆರ್ ಎಸ್ ಬಳಿ ಕಾವೇರಿ ಆರತಿ ಮಾಡಲು ಮುಂದಾಗಿದ್ದೇವೆ.

ಬಿಡಬ್ಲ್ಯೂ ಎಸ್ಎಸ್ ಬಿ ಅಧ್ಯಕ್ಷರ ನೇತೃತ್ವದಲ್ಲೇ ಇದಕ್ಕೆ ಸಮಿತಿ ರಚಿಸಲಾಗಿದೆ. ಅವರು ಉತ್ತಮ ಮಾಸ್ಟರ್ ಪ್ಲಾನ್ ರೂಪಿಸಿದ್ದಾರೆ. ಇದರಿಂದ ಆ ಭಾಗದಲ್ಲಿ ಒಂದೂವರೆ ಸಾವಿರ ಜನರಿಗೆ ಉದ್ಯೋಗ ಸೃಷ್ಟಿಯಾಗುತ್ತದೆ. ಈ ವಿಚಾರವಾಗಿ ಮಂಡ್ಯ ಜಿಲ್ಲೆಯ ರೈತ ಸಂಘದವರಿಗೆ ಸರಿಯಾದ ಮಾಹಿತಿ ಇಲ್ಲ ಎಂದರು.

ಕಾವೇರಿ ಆರತಿ ಬಗ್ಗೆ ಇರುವ ಅನುಮಾನಗಳನ್ನು ಬಗೆಹರಿಸಲು ಜಿಲ್ಲಾ ಮಂತ್ರಿಗಳ ಜತೆ ಸಭೆ ಮಾಡಲಿದ್ದೇನೆ. ನಾವು ಕಾವೇರಿಯನ್ನು ತಾಯಿ ಎಂದು ಕರೆಯುತ್ತೇವೆ. ನೀರಿಗೆ ಜಾತಿ, ಭಾಷೆ, ಧರ್ಮ ಇಲ್ಲ. ನೀರು ಎಲ್ಲರಿಗೂ ಬೇಕು. ಕುಡಿಯಲು, ವ್ಯವಸಾಯಕ್ಕೆ, ಕೈಗಾರಿಕೆ ಎಲ್ಲದಕ್ಕೂ ನೀರು ಅಗತ್ಯ. ಈ ನೀರಿಗಾಗಿ ಉತ್ತಮ ಮಳೆಗಾಗಿ ಪ್ರಾರ್ಥನೆ ಮಾಡುವುದರಲ್ಲಿ ತೊಂದರೆ ಏನು? ಕಾವೇರಿ ತುಂಬಿ ಹರಿಯದಿದ್ದರೆ ಅನೇಕ ಸಮಸ್ಯೆ ಅನುಭವಿಸಬೇಕಾಗುತ್ತದೆ ಎಂದರು.

“ಪರಿಸರ ಸಂರಕ್ಷಣೆ ಕುರಿತು ನಿನ್ನೆ ಶಾಲಾ ಮಕ್ಕಳ ಕಾರ್ಯಕ್ರಮ ಮಾಡಿದ್ದೇವೆ. ಮಕ್ಕಳಿಗೆ ಗಿಡ ಕೊಟ್ಟು ಅದನ್ನು ಬೆಳೆಸಿ ಮರ ಮಾಡುವ ಜವಾಬ್ದಾರಿಯನ್ನು ನೀಡಿದ್ದೇವೆ. ಪರಿಸರ ಕಾಪಾಡಲು ಅನೇಕ ಯೋಜನೆಗಳನ್ನು ರೂಪಿಸಲಾಗಿದೆ” ಎಂದು ತಿಳಿಸಿದರು.

ರಾಜಕೀಯ

ಯಾರಾಗಲಿದ್ದಾರೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ..?

ಯಾರಾಗಲಿದ್ದಾರೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ..?

ಇತ್ತೀಚೆಗಷ್ಟೇ ಏಕಾಏಕಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ (JDS) ಅಧ್ಯಕ್ಷ ಆಯ್ಕೆ ಬೆನ್ನಲ್ಲೇ, ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಯಾರಾಗಲಿದ್ದಾರೆ ಎಂಬ ಚರ್ಚೆ ವ್ಯಾಪಕವಾಗಿ ನಡೆಯುತ್ತಿದೆ.

[ccc_my_favorite_select_button post_id="120068"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಕೇಬಲ್ ತಯಾರಿಕಾ ಘಟಕದಲ್ಲಿ ಅಗ್ನಿ ಆಕಸ್ಮಿಕ.. ಕೋಟ್ಯಾಂತರ ರೂ. ನಷ್ಟ

ದೊಡ್ಡಬಳ್ಳಾಪುರ: ಕೇಬಲ್ ತಯಾರಿಕಾ ಘಟಕದಲ್ಲಿ ಅಗ್ನಿ ಆಕಸ್ಮಿಕ.. ಕೋಟ್ಯಾಂತರ ರೂ. ನಷ್ಟ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿನ ಅಡ್ವಾನ್ಸ್ ಕೇಬಲ್ ಟೆಕ್ನಾಲಜಿ ಯೂನಿಟ್-2ರಲ್ಲಿ ಸೋಮವಾರ ಸಂಜೆ 5 ಗಂಟೆ ಸುಮಾರಿಗೆ ಬೆಂಕಿ ಅವಘಡದಿಂದಾಗಿ (Fire accident) ಉಂಟಾಗಿರುವ ಬೆಂಕಿಯ ಕೆನ್ನಾಲಿಗೆ ಆವರಿಸುತ್ತಲೇ ಇದ್ದು, ಸತತ ಐದು ಗಂಟೆಗಳಿಂದಲೂ 10

[ccc_my_favorite_select_button post_id="120091"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!