Astrology: ಗುರುವಾರ, ಜೂನ್ 19, 2025, ದೈನಂದಿನ ರಾಶಿ ಭವಿಷ್ಯ

ಮೇಷ: ಆತುರತೆಯ ನಿರ್ಣಯಗಳು ಅಪಾಯ ತರಬಹುದು. ಆತ್ಮೀಯರೊಂದಿಗೆ ಮನಸ್ತಾಪವಾಗುವ ಸಾಧ್ಯತೆ, ಎಚ್ಚರ. ಅರ್ಧಕ್ಕೆನಿಂತ ಕೆಲಸಗಳು ಮುಂದುವರೆಯುವುದು. ಸ್ವಸಾಮಥ್ಯದಿಂದ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿ.
ವೃಷಭ: ಕೈಹಾಕಿದ ಕೆಲಸಗಳು ನಿರಾತಂಕವಾಗಿ ಮುಂದುವರೆಯುವುದು. ಉತ್ತಮವಾದ ಸಮಯ ಇರುವುದರಿಂದ ಮನೆಯಲ್ಲಿ ಸಂಭ್ರಮದ ವಾತಾವರಣ ಇರುವುದು. ಹೊಸ ಯೋಜನೆಗಳಿಗೆ ಚಾಲನೆ ದೊರೆಯುವುದು.
ಮಿಥುನ: ಶುಭಫಲಗಳು ಕಂಡುಬರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸ ಯೋಗವಿದೆ. ಕೌಟುಂಬಿಕ ಸಮಸ್ಯೆಗಳು ದೂರಾಗುವುದು. ಕೊಟ್ಟಸಾಲ ಪಾವತಿ ಯಾಗುವುದು.
ಕಟಕ: ಉದ್ಯೋಗ ಪ್ರಾಪ್ತಿ, ಉದ್ಯಮದಲ್ಲಿ ಪ್ರಗತಿ ಇರುವುದು. ಹಳೆಯ ಸಾಲ ತೀರುವುದು. ಅನೇಕ ಮೂಲಗಳಿಂದ ಧನಪ್ರಾಪ್ತಿಯ ಯೋಗವಿದೆ. ಬಂಧುವರ್ಗದಲ್ಲಿಯ ಅಸಮಾಧಾನಗಳು ಪರಿಹಾರವಾಗುವುದು.
ಸಿಂಹ: ಭಾವುಕತೆಯಿಂದ ಕಾರ್ಯಸಾಧಿಸಲು ಪ್ರಯತ್ನಿಸುವಿರಿ. ಪರಾವಲಂಬಿ ವ್ಯವಹಾರದಲ್ಲಿ ಹೂಡಿಕೆ ಬೇಡ. ಸಂಶಯದ ನಡೆಯಿಂದ ಮನಸ್ತಾಪ. ಸಣ್ಣಪುಟ್ಟ ಕೆಲಸಗಳೂ ವಿಳಂಬವಾಗುವ ಸಾಧ್ಯತೆ ಇದೆ. ಅಭದ್ರತೆ ಕಾಡುವುದು.
ಕನ್ಯಾ: ಮಹತ್ವದ ಕಾರ್ಯ ಕಲಾಪಗಳಲ್ಲಿ ಭಾಗವಹಿಸುವ ಯೋಗವಿದೆ. ವಿವಿಧ ಮೂಲಗಳಿಂದ ಸಹಾಯ ದೊರೆಯುವುದು. ಸ್ವಸಾಮಥ್ಯದಿಂದ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿ. ಅನಾವಶ್ಯಕ ಖರ್ಚಿನ ಸಾಧ್ಯತೆ ಇದೆ.
ತುಲಾ: ಕ್ಷಮಾಗುಣ ಇರಲಿ, ಪರಸ್ಪರ ದೋಷಾರೋಪ ಮಾಡುವುದರಿಂದ ಕಾರ್ಯಹಾನಿಯ ಸಂಭವವಿದೆ. ವ್ಯವಹಾರದಲ್ಲಿ ಸಮತೋಲನ ಕಾಯ್ದುಕೊಳ್ಳುವಿರಿ. ದೊಡ್ಡಮೊತ್ತದ ಹಣಹೂಡಿಕೆ ಈಗ ಬೇಡ.
ವೃಶ್ಚಿಕ: ಅತಿಯಾದ ಮಾತು ಅಪಾಯಕ್ಕೆ ಕಾರಣ. ಆಲಸ್ಯದಿಂದ ಕಾರ್ಯಹಾನಿಯಾಗುವ ಸಾಧ್ಯತೆ ಇದೆ. ಆಸ್ತಿ ವ್ಯವಹಾರಗಳಲ್ಲಿ ತಜ್ಞರ ಸಹಾಯ ಪಡೆಯಿರಿ. ನೌಕರರಿಗೆ ಅಪೇಕ್ಷಿತ ಸ್ಥಾನಕ್ಕೆ ವರ್ಗಾವಣೆಯ ಆಗುವ ಯೋಗವಿದೆ.
ಧನಸ್ಸು: ಹಿರಿಯರ ಮಾರ್ಗದರ್ಶನ ದೊರೆಲಿದೆ. ಆತ್ಮೀಯರೊಂದಿಗೆ ವಾದವಿವಾದ ಮಾಡಬೇಡಿ. ಮದುವೆಯ ಮಾತುಕತೆ ಕೈಗೂಡುವ ಸಾಧ್ಯತೆ ಇದೆ. ವ್ಯವಹಾರಿಕ ಜಾಣತನದಿಂದ ಲಾಭವಾಗಲಿದೆ. ಮನೆಯಲ್ಲಿ ಸಂತಸ ಕಂಡುಬರುವುದು.
ಮಕರ: ಬಹುಜನರ ಪ್ರಶಂಸೆಗೆ ಪಾತ್ರವಾಗುವ ಆಡಳಿತಾತ್ಮಕ ನಿರ್ಧಾರ ನೀಡಲಿದ್ದೀರ. ಇದ್ದಕ್ಕಿದಂತೆ ಶುಭಕರ ಒಲವು.ಮದುವೆಯ ವಿಚಾರದಲ್ಲಿ ಕುಟುಂಬದ ಒಗ್ಗಟ್ಟು ವೃದ್ಧಿ. ಆರ್ಥಿಕಾನೂಕೂಲದಿಂದ ಸರಳ ವ್ಯವಹಾರ. ಹೆಂಗಳೆಯರದು ಮೌನವಾದ ಕೆಲಸ. ಆದರೆ ಪರಿಣಾಮ ಜಾಸ್ತಿ.
ಕುಂಭ: ಆಸೆ ಆಕಾಂಕ್ಷೆಗಳ ಈಡೇರಿಕೆಗಾಗಿ ಪ್ರಯತ್ನಿಸುವಿರಿ. ಅಪೇಕ್ಷಿತ ಧನಸಹಾಯ ದೊರೆಯುವುದು. ಸಹೋದರ ಸಹಕಾರ ತೋರುವುದರಿಂದ ನಿರಾತಂಕವಾಗಿ ಕಾರ್ಯ ಪೂರ್ಣವಾಗುವುದು. ಮನೆಯಲ್ಲಿ ಸಂತಸದ ವಾತಾವರಣ ಇರುವುದು.
ಮೀನ: ಭಾಗ್ಯವೃದ್ಧಿಯಾಗುವ ಯೋಗವಿದೆ. ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಬರುವ ಸಂಕಷ್ಟಗಳನ್ನು ಎದುರಿಸಿ ಕಾರ್ಯ ಸಾಧಿಸುವಿರಿ.
ರಾಹುಕಾಲ: 01:47 ರಿಂದ 03:13
ಗುಳಿಕಕಾಲ: 09:30 ರಿಂದ 10:56
ಯಮಗಂಡಕಾಲ: 06:39 ರಿಂದ 08:04