DK Suresh elected as Bamul president

ಬಮೂಲ್​ ಅಧ್ಯಕ್ಷರಾಗಿ ಡಿಕೆ ಸುರೇಶ್​ ಆಯ್ಕೆ

ಬೆಂಗಳೂರು: ಬೆಂಗಳೂರು ಸಹಕಾರ ಹಾಲು ಒಕ್ಕೂಟ (ಬಮೂಲ್)ದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಡಿಕೆ ಸುರೇಶ್ (DK Suresh) ಸಂಘದ ಅಧ್ಯಕ್ಷರಾಗಿ ಹಾಗೂ ಕುದೂರು ರಾಜಣ್ಣ (Rajanna) ಅವರು ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಬಮೂಲ್ ಆಡಳಿತ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನಿಕಟಪೂರ್ವ ಸಂಸದ ಡಿಕೆ ಸುರೇಶ್ ಅವರು ಬೆಂಗಳೂರು ಡೈರಿ ಸರ್ಕಲ್ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದರು. ಈ ಸ್ಥಾನಕ್ಕೆ ಬೇರೆ ಯಾರೂ ಉಮೇದುವಾರಿಕೆ ಸಲ್ಲಿಸದ ಕಾರಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಂತರ ಸುರೇಶ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

“ಬೆಂಗಳೂರು ಸಹಕಾರ ಹಾಲು ಒಕ್ಕೂಟ ನಿಯಮಿತ (ಬಮೂಲ್)ನಲ್ಲಿ 16 ನಿರ್ದೇಶಕರ ಪೈಕಿ 14 ಜನ ಚುನಾವಣೆ ಮೂಲಕ ಆರಿಸಲಾಗಿದ್ದು, ಇಬ್ಬರು ಸರ್ಕಾರದಿಂದ ನಾಮನಿರ್ದೇಶನಗೊಂಡಿದ್ದಾರೆ. ಬಮೂಲ್ ನ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ನನ್ನನ್ನು ಅಧ್ಯಕ್ಷನನ್ನಾಗಿ, ಮಾಗಡಿ ತಾಲೂಕಿನ ಕುದೂರು ರಾಜಣ್ಣ ಅವರನ್ನು ಉಪಾಧ್ಯಕ್ಷರನ್ನಾಗಿ ಎಲ್ಲಾ ನಿರ್ದೇಶಕರು ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ” ಎಂದು ತಿಳಿಸಿದರು.

“ನಮ್ಮ ಪಕ್ಷದ ಅಧ್ಯಕ್ಷರಾದ ಡಿಸಿಎಂ ಡಿ.ಕೆ. ಶಿವಕುಮಾರ್, ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾದ ರಾಮಲಿಂಗಾರೆಡ್ಡಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್. ಮುನಿಯಪ್ಪ, ಶಾಸಕರಾದ ಬಾಲಕೃಷ್ಣ, ಸಿ.ಪಿ. ಯೋಗೇಶ್ವರ್, ಇಕ್ಬಾಲ್ ಹುಸೇನ್, ಶಿವಣ್ಣ, ಶರತ್ ಬಚ್ಚೇಗೌಡ, ಕೃಷ್ಣಭೈರೇಗೌಡರು ಸೇರಿದಂತೆ ಬಮೂಲ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಶಾಸಕರ ಸರ್ವಸಮ್ಮತದ ತೀರ್ಮಾನದಂತೆ ನನ್ನನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದಾರೆ” ಎಂದರು.

“ಈ ಸಂದರ್ಭದಲ್ಲಿ ಎಲ್ಲರಿಗೂ ನಾನು ವೈಯಕ್ತಿಕವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಇಂದು ನಡೆದ ಚುನಾವಣೆಯಲ್ಲಿ ಸಹಕಾರ ಸಂಸ್ಥೆ ಜವಾಬ್ದಾರಿಯನ್ನು ನನಗೆ ನೀಡಿದ್ದಾರೆ. ಈ ಒಕ್ಕೂಟದ ಹಾಲು ಉತ್ಪಾದಕರು, ರೈತ ಬಾಂಧವರು ನಮ್ಮ ಮೇಲೆ ನಿರೀಕ್ಷೆ ಇಟ್ಟು ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿದ್ದಾರೆ. ಅವರಿಗೂ ಧನ್ಯವಾದ ತಿಳಿಸುತ್ತೇನೆ. ಹಾಲು ಉತ್ಪಾದಕರು, ನಿರ್ದೇಶಕರು ಬದಲಾವಣೆ ತರುವ ನಿರೀಕ್ಷೆ ಹೊಂದಿದ್ದು, ಎಲ್ಲರ ಸಹಕಾರ ಪಡೆದು ಬೆಂಗಳೂರು ಸಹಕಾರ ಹಾಲು ಒಕ್ಕೂಟ ಹಾಗೂ ರೈತರಿಗೆ ನ್ಯಾಯ ಒದಗಿಸುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ” ಎಂದು ಹೇಳಿದರು.

ರಾಜ್ಯಾದ್ಯಂತ ಪರಿಸರ ಸ್ನೇಹಿ ಹಾಲಿನ ಪ್ಯಾಕೆಟ್ ಪರಿಚಯಿಸುವ ಚಿಂತನೆ

“ಕನಕಪುರ ಹಾಲು ಒಕ್ಕೂಟದಲ್ಲಿ ಇತ್ತೀಚೆಗೆ ಪರಿಸರಸ್ನೇಹಿ ಹಾಲಿನ ಪ್ಯಾಕೆಟ್ ಪರಿಚಯಿಸಿದ್ದಿರಿ, ಅದನ್ನು ಬಮೂಲ್ ಗೂ ವಿಸ್ತರಣೆ ಮಾಡುತ್ತೀರಾ ಎಂದು ಕೇಳಿದಾಗ, “ನಾವು ಪರಿಸರ ಸ್ನೇಹಿ ಹಾಲಿನ ಪ್ಯಾಕೆಟ್ ಅನ್ನು ಪರಿಚಯಿಸಿದ್ದು, ಇದನ್ನು ಬೆಂಗಳೂರಿಗೆ ಮಾತ್ರವಲ್ಲ ಕರ್ನಾಟಕ ರಾಜ್ಯಾದ್ಯಂತ ಪರಿಚಯಿಸುವ ಚಿಂತನೆ ಇದೆ. ಪ್ರಾಯೋಗಿಕವಾಗಿ ಒಂದು ಪಂಚಾಯ್ತಿ ಮಟ್ಟದಲ್ಲಿ ಇದನ್ನು ವಿತರಣೆ ಮಾಡಿದ್ದೇವೆ. ಮುಂದಿನ ಆಡಳಿತ ಮಂಡಳಿಯಲ್ಲಿ ಇದರ ಸಾಧಕ ಬಾಧಕಗಳನ್ನು ವಿಸ್ತೃತವಾಗಿ ಚರ್ಚೆ ಮಾಡಿ ತೀರ್ಮಾನ ಮಾಡಲಾಗುವುದು. ಮಾರುಕಟ್ಟೆ ವ್ಯಾಪ್ತಿ ಹೆಚ್ಚಿಸಿ, ಹಾಲು ಉತ್ಪಾದಕರಿಗೆ ನ್ಯಾಯ ಒದಗಿಸುವ ಜವಾಬ್ದಾರಿ ನಮ್ಮ ಮೇಲಿದ್ದು, ಹಂತಹಂತವಾಗಿ ಇದನ್ನು ಮಾಡುತ್ತೇವೆ” ಎಂದು ತಿಳಿಸಿದರು.

“ಆಡಳಿತ ಮಂಡಳಿಯ ಎಲ್ಲಾ ಸದಸ್ಯರು ಸೇರಿ ಸಂಘದ ಹಾಗುಹೋಗುಗಳ ಬಗ್ಗೆ ಸರ್ಕಾರದ ಜತೆ ಚರ್ಚಿಸಿ, ಬದಲಾವಣೆ ತರಬೇಕಾಗಿದೆ. ಈ ನಿಟ್ಟಿನಲ್ಲಿ ಮಾಧ್ಯಮ ಸೇರಿದಂತೆ ಎಲ್ಲರ ಸಹಕಾರ ಕೋರುತ್ತೇನೆ” ಎಂದು ತಿಳಿಸಿದರು.

ರೈತರಿಗೆ ಯಾವ ಸಂದೇಶ ನೀಡುತ್ತೀರಿ ಎಂದು ಕೇಳಿದಾಗ, “ರೈತರ ಬದುಕು ಹಾಲಿನ ಕ್ಷೇತ್ರದಲ್ಲಿದೆ. ನೀವು ನನ್ನ ಮೇಲೆ ಹಾಗೂ ಒಕ್ಕೂಟದ ಮೇಲೆ ನಂಬಿಕೆ ಇಟ್ಟಿದ್ದು ಇದಕ್ಕೆ ನ್ಯಾಯವನ್ನು ಒದಗಿಸುವಂತೆ ಬದಲಾವಣೆ ತರುವ ಪ್ರಯತ್ನ ಮಾಡುತ್ತೇನೆ” ಎಂದು ತಿಳಿಸಿದರು.

ಡಿಕೆ ಸುರೇಶ್ ಆಯ್ಕೆ ಹಿನ್ನೆಲೆ ಬಮೂಲ್ ಕಚೇರಿ ಬಳಿ ಬೆಂಬಲಿಗರು ಸಿಹಿ ಹಂಚಿ ಸಂಭ್ರಮಿಸಿದರು.

ರಾಜಕೀಯ

2 ಕೋಟಿ ಬಾಂಗ್ಲಾ ಪ್ರಜೆಗಳು ಭಾರತಕ್ಕೆ ಬಂದಿದ್ದಾರೆ: ಆರ್‌.ಅಶೋಕ

2 ಕೋಟಿ ಬಾಂಗ್ಲಾ ಪ್ರಜೆಗಳು ಭಾರತಕ್ಕೆ ಬಂದಿದ್ದಾರೆ: ಆರ್‌.ಅಶೋಕ

2 ಕೋಟಿ ಬಾಂಗ್ಲಾ ಪ್ರಜೆಗಳು ಭಾರತಕ್ಕೆ ಬಂದಿದ್ದು, ಅಪರಾಧಿ ಚಟುವಟಿಕೆಗಳಲ್ಲಿ ತೊಡಗುತ್ತಿದ್ದಾರೆ; ಆರ್. ಅಶೋಕ (R.AShoka)

[ccc_my_favorite_select_button post_id="118528"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ (Maanja thread) ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ.

[ccc_my_favorite_select_button post_id="118471"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!