Investigate the masked man: B.Y. Vijayendra demands

ವಸತಿ ಹಂಚಿಕೆಯಲ್ಲಿ ಅಲ್ಪಸಂಖ್ಯಾತರ ಮೀಸಲಾತಿ ಹೆಚ್ಚಳ: ಬಿವೈ ವಿಜಯೇಂದ್ರ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಕರ್ನಾಟಕದಲ್ಲಿ ಬಹುಮನಿ ಸುಲ್ತಾನರ ಕಾಲದ ಆಳ್ವಿಕೆಯನ್ನು ಮರು ಸ್ಥಾಪಿಸಲು ಹೊರಟಂತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಹೇಳಿದ್ದಾರೆ.

ಸಚಿವ ಸಂಪುಟ ಸಭೆಯಲ್ಲಿ ವಸತಿ ಹಂಚಿಕೆಯಲ್ಲಿ ಅಲ್ಪಸಂಖ್ಯಾತರ ಮೀಸಲಾತಿ ಹೆಚ್ಚಳದ ಕುರಿತು ಟ್ವೀಟ್ ಮಾಡಿರುವ ಅವರು, ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ಧರ್ಮದ ಹೆಸರಿನಲ್ಲಿ ಮುಸ್ಲಿಂಮರಿಗೆ ಶಿಕ್ಷಣ, ಉದ್ಯೋಗ, ರಾಜಕೀಯ ಮೀಸಲಾತಿ ಕಲ್ಪಿಸಿ ನಂತರ ಸರ್ಕಾರಿ ಗುತ್ತಿಗೆ ಕಾಮಗಾರಿಗಳ ಹಂಚಿಕೆಯಲ್ಲಿಯೂ ಮೀಸಲಾತಿ ನಿಗದಿಪಡಿಸಲಾಗಿತ್ತು, ಇದೀಗ ವಸತಿ ಸೌಲಭ್ಯ ಕಲ್ಪಿಸುವುದರಲ್ಲಿಯೂ ಮೀಸಲಾತಿ ಹೆಚ್ಚಿಸಿದೆ.

ಪ್ರಜಾಪ್ರಭುತ್ವದ ತತ್ವ-ಸರ್ವರಿಗೂ ಸಮಾನತೆ, ಸಂವಿಧಾನದ ಆಶಯ-ವರ್ಗ ತಾರತಮ್ಯಕ್ಕೆ ಅವಕಾಶ ನೀಡದಿರುವುದು, ಇವೆರಡನ್ನೂ ಗಾಳಿಗೆ ತೂರಿರುವ ಕಾಂಗ್ರೆಸ್ ಸರ್ಕಾರ  ಕರ್ನಾಟಕದಲ್ಲಿ ವಿಪರೀತ ಎನ್ನುವಂತೆ ಮುಸ್ಲಿಂ ಸಮುದಾಯವನ್ನು ಓಲೈಸಲು ಟೊಂಕ ಕಟ್ಟಿ ನಿಂತಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಕರ್ನಾಟಕದ ಆರೂವರೆ ಕೋಟಿ ಕನ್ನಡಿಗರ ಸಮಗ್ರ ಕಲ್ಯಾಣವನ್ನು ಸಂಪೂರ್ಣ ಮರೆತಿದೆ, ಚುನಾವಣೆಯಲ್ಲಿ ಗೆದ್ದು ಬರುವಾಗ ‘ನಮ್ಮದು ಜಾತ್ಯಾತೀತ ತತ್ವ ಎಂದು ಬೊಗಳೆ ಬಿಡುತ್ತಿದ್ದ ಕಾಂಗ್ರೆಸ್ಸಿಗರು “ನಮ್ಮದೇನಿದ್ದರೂ ಮುಸ್ಲಿಂ ಸಮುದಾಯದ ಉತ್ತೇಜನದ ಆಡಳಿತ” ಎನ್ನುವುದನ್ನೀಗ ಪ್ರತಿಬಿಂಬಿಸುತ್ತಿದ್ದಾರೆ.

ಬಿಜೆಪಿ ಸರ್ಕಾರ ಎಂದೂ ಇಂತಹ ತಾರತಮ್ಯಕ್ಕೆ ಅವಕಾಶ ಕೊಡಲಿಲ್ಲ, ಕರ್ನಾಟಕದಲ್ಲಿ ‘ಸರ್ವರಿಗೂ ಸಮಬಾಳು- ಸರ್ವರಿಗೂ ಸಮಪಾಲಿನ’ಆಡಳಿತ ನೀಡಿದೆ. ಕೇಂದ್ರದ ಹೆಮ್ಮೆಯ ನರೇಂದ್ರ ಮೋದಿ ಅವರ ಸರ್ಕಾರ ಇಂದಿಗೂ ಕೂಡ ವರ್ಗ ಬೇಧಕ್ಕೆ ಅವಕಾಶ ನೀಡದಂತೆ ಎಲ್ಲರನ್ನೂ ಒಳಗೊಂಡ ಯೋಜನೆಗಳನ್ನು ರೂಪಿಸಿದೆ, ಜಾರಿಗೊಳಿಸುತ್ತಿದೆ, ಆದರೆ ಕರ್ನಾಟಕದಲ್ಲಿ ಏಕೆ ಹೀಗೆ ?ಎಂದು ಜನ ಪ್ರಶ್ನಿಸುತ್ತಿದ್ದಾರೆ. ಇಂದು ಸಂಪುಟ ತೆಗೆದುಕೊಂಡಿರುವ ವಸತಿ ಯೋಜನೆಯಲ್ಲಿ ಮುಸ್ಲಿಂ ಮೀಸಲಾತಿಯ ಹೆಚ್ಚಳವನ್ನು ತೀವ್ರವಾಗಿ ಖಂಡಿಸುತ್ತೇವೆ.

ನಿರಂತರ ವೈಫಲ್ಯಗಳು, ಮೇಲಿಂದ ಮೇಲೆ ಹೊರ ಬರುತ್ತಿರುವ ಹಗರಣಗಳು, ಭ್ರಷ್ಟಾಚಾರಗಳು ಹಾಗೂ ಹೊಣೆಗೇಡಿತನದ ಆಡಳಿತದ ಪರಿಣಾಮ ಕ್ರಿಕೆಟ್ ಕಾಲ್ತುಳಿತದಲ್ಲಿ ಜನರು ಸಾವು,ನೋವು ಅನುಭವಿಸಿದ ರಾಜ್ಯ ಕಂಡ ಬಹುದೊಡ್ಡ ದುರಂತದ ಪ್ರಕರಣದಿಂದ ಜನರ ದೃಷ್ಟಿ ಬೇರೆಡೆ ಸೆಳೆಯಲು ಇಂತಹ ನಿರ್ಧಾರಗಳನ್ನು ಕಾಂಗ್ರೆಸ್ ಸರ್ಕಾರ ತೆಗೆದುಕೊಳ್ಳುತ್ತಿದೆ. ಇದನ್ನು ಸಹಿಸಿಕೊಂಡು ಕೂರುವ ಪ್ರಶ್ನೆಯೇ ಇಲ್ಲ, ಭಾರತೀಯ ಜನತಾ ಪಾರ್ಟಿಯು ಜನಾಕ್ರೋಶವನ್ನು ಬೆಂಬಲಿಸಿ ತನ್ನ ಹೋರಾಟವನ್ನು ಮುಂದುವರಿಸಲಿದೆ ಎಂದು ವಿಜಯೇಂದ್ರ ತಿಳಿಸಿದ್ದಾರೆ.

ರಾಜಕೀಯ

ನನಗೆ ಜನರ ಸೇವೆ ಮಾಡುವ ಚಪಲ, ಕೆಲವರಿಗೆ ಜನರ ದುಡ್ಡು ಲೂಟಿ ಹೊಡೆಯೋ ಚಪಲ; ಹೆಚ್.ಡಿ. ಕುಮಾರಸ್ವಾಮಿ

ನನಗೆ ಜನರ ಸೇವೆ ಮಾಡುವ ಚಪಲ, ಕೆಲವರಿಗೆ ಜನರ ದುಡ್ಡು ಲೂಟಿ ಹೊಡೆಯೋ

ಕೆಲವರಿಗೆ ಜನರನ್ನು ಲೂಟಿ ಮಾಡಿ ದುಡ್ಡು ಮಾಡುವ ಚಪಲ. ನನಗೆ ಜನರ ಜತೆ ನಿಂತು ಅವರ ಸಹಾಯಕ್ಕೆ ನಿಲ್ಲುವ ಚಪಲ. ಒಬ್ಬೊಬ್ಬರಿಗೆ ಒಂದೊಂದು ಚಪಲ ಇರುತ್ತದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="118524"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ (Maanja thread) ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ.

[ccc_my_favorite_select_button post_id="118471"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!