ಮಿಷನ್ ವಿದ್ಯಾಕಾಶಿ-0.2: ಪ್ರಾಥಮಿಕ, ಪ್ರೌಢಶಾಲೆಗಳ ಶೈಕ್ಷಣಿಕ ಬಲವರ್ಧನೆಗೆ ವಿದ್ಯಾಶಕ್ತಿ ಯೋಜನೆ

Mission Vidyakashi-0.2: Vidyashakti Yojana for Educational Strengthening

ಧಾರವಾಡ: ಜಿಲ್ಲೆಯನ್ನು ಮತ್ತೇ ಶಿಕ್ಷಣ ಕಾಶಿಯನ್ನಾಗಿಸಲು ಕಳೆದ ವರ್ಷದಿಂದ ಆರಂಭಿಸಿರುವ ಮಿಷನ್ ವಿದ್ಯಾಕಾಶಿ (Mission Vidyakashi) ಶೈಕ್ಷಣಿಕ ಸುಧಾರಣೆಯಲ್ಲಿ ಯಶಸ್ಸು ಕಂಡರೂ ಎಸ್.ಎಸ್.ಎಲ್.ಸಿ (SSLC) ಫಲಿತಾಂಶದ ರ್ಯಾಂಕಿಂಗ್‍ದಲ್ಲಿ ಸ್ವಲ್ಪ ಹಿನ್ನಡೆ ಆಯಿತ್ತು. ಆದರೆ ದೀರ್ಘಕಾಲದಲ್ಲಿ ಮಿಷನ್ ವಿದ್ಯಾಕಾಶಿಯ ಪರಿಣಾಮಕಾರಿ ಬದಲಾವಣೆ, ಪ್ರಯೋಜನೆ, ಸುಧಾರಣೆಗಳು ಎದ್ದು ಕಾಣುತ್ತವೆ. ಈ ಹಿನ್ನಲೆಯಲ್ಲಿ ಪ್ರಸಕ್ತ ವರ್ಷದ ಮಿಷನ್ ವಿದ್ಯಾಕಾಶಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶೈಕ್ಷಣಿಕ ಸುಧಾರಣೆ ಮತ್ತು ಬಲವರ್ಧನೆಗೆ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.

ಅವರು ಧಾರವಾಡ ಐಐಐಟಿ ಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಮತ್ತು ಶಾಲಾ ಶಿಕ್ಷಣ ಇಲಾಖೆ ಆಯೋಜಿಸಿದ್ದ ಮಿಷನ್ ವಿದ್ಯಾಕಾಶಿ ಯೋಜನೆಯಡಿ ವಿದ್ಯಾಶಕ್ತಿ ಕಾರ್ಯಕ್ರಮ ತರಬೇತಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ, ಮಾತನಾಡಿದರು.

ಧಾರವಾಡ ಐಐಐಟಿ ಸಹಯೋಗದಲ್ಲಿ ಎಲ್ಲ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಯ 6ನೇ, 7ನೇ ಮತ್ತು 8ನೇ ತರಗತಿಯ ವಿದ್ಯಾರ್ಥಿಗಳಿಗೆ ಆನ್‍ಲೈನ್ ಮೂಲಕ ಶಾಲೆಯ ಸ್ಮಾರ್ಟ ಬೋರ್ಡಗಳಿಂದ ನೇರ ಪಾಠಗಳನ್ನು ಕಲಿಸಲಾಗುತ್ತದೆ ಎಂದು ಹೇಳಿದರು.

ವಿದ್ಯಾಶಕ್ತಿ ಕಾರ್ಯಕ್ರಮದ ಮೂಲಕ ಈಗಾಗಲೇ ಸ್ಮಾರ್ಟ ಬೋರ್ಡ ಹೊಂದಿರುವ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಧಾರವಾಡ ಐಐಐಟಿ ಸಹಯೋಗದಲ್ಲಿ 6ನೇ, 7ನೇ ಮತ್ತು 8ನೇ ತರಗತಿಯ ವಿದ್ಯಾರ್ಥಿಗಳಿಗೆ ಇಂಗ್ಲೀಷ್, ಗಣಿತ ಮತ್ತು ವಿಜ್ಞಾನ ವಿಷಯಗಳಲ್ಲಿ ಆನ್‍ಲೈನ್ ತರಗತಿಗಳ ಮೂಲಕ ಉಚಿತವಾಗಿ ಮತ್ತು ನೇರವಾಗಿ ಲೈವ್ ಕ್ಲಾಸ್ ಮಾಡಲಾಗುತ್ತದೆ. ಕ್ಲಾಸ್ ನಡೆಯುವ ಸಮಯದಲ್ಲಿ ವಿದ್ಯಾರ್ಥಿಗಳ ಸಂವಹನಕ್ಕೂ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಕಳೆದ ಸಾಲಿನಲ್ಲಿ ಜಿಲ್ಲೆಯ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ನಡೆಸಿದ ಬೇಸ್‍ಲೈನ್ ಪರೀಕ್ಷೆಯಲ್ಲಿ, ವಿದ್ಯಾರ್ಥಿಗಳಿಗೆ ಇಂಗ್ಲೀಷ್, ಗಣಿತ ಮತ್ತು ವಿಜ್ಞಾನ ವಿಷಯಗಳು ಕಠಿಣವಾಗಿದ್ದು ಮತ್ತು ಈ ವಿಷಯಗಳ ಬೇಸಿಕ್ ಅಂಶಗಳು ತಿಳಿದಿರದ ಬಗ್ಗೆ ಕಂಡುಬಂದಿತ್ತು.

ಈ ಸಮಸ್ಯೆಯ ಪರಿಹಾರ ಮತ್ತು ಪ್ರಾಥಮಿಕ ಹಂತದಿಂದಲೇ ವಿದ್ಯಾರ್ಥಿಗಳಲ್ಲಿ ವಿಶೇಷವಾಗಿ ಗ್ರಾಮೀಣ ಹಾಗೂ ಸ್ಲಂ ವ್ಯಾಪ್ತಿಗೆ ಒಳಪಡುವ ಪ್ರದೇಶದ ಶಾಲೆಗಳ ಮಕ್ಕಳಲ್ಲಿ ಕಠಿಣವೆನಿಸುವ ವಿಷಯಗಳ ಕುರಿತು ಅಗತ್ಯ ಜ್ಞಾನ, ತರಬೇತಿ ಮತ್ತು ಕಲಿಕೆಯನ್ನು ರೂಢಿಗೊಳಿಸುವುದು ಮಹತ್ವದ್ದಾಗಿದೆ ಎಂದು ಅವರು ಹೇಳಿದರು.

ಮುಂದಿನ ಜುಲೈ ತಿಂಗಳಿಂದ ಸ್ಮಾರ್ಟ ಬೋರ್ಡ ಹೊಂದಿರುವ ಜಿಲ್ಲೆಯ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಐಐಐಟಿ ಧಾರವಾಡ ಅವರ ಸಹಯೋಗ ಮತ್ತು ಸಂಪನ್ಮೂಲ ವ್ಯಕ್ತಿಗಳಿಂದ ಆನ್‍ಲೈನ್ ಮೂಲಕ ಪಾಠ ಪ್ರಾರಂಭವಾಗಲಿದೆ. ಶಿಕ್ಷಕರು ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಸಕ್ರೀಯವಾಗಿ ಭಾಗವಹಿಸಬೇಕೆಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

ಶೇ. 50 ಕ್ಕಿಂತ ಕಡಿಮೆ ಫಲಿತಾಂಶದ ಶಾಲೆಗಳ ಸಮೀಕ್ಷೆ ಪೂರ್ಣ: ಮಿಷನ್ ವಿದ್ಯಾಕಾಶಿಯಡಿ ಸಾಕಷ್ಟು ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಿದ್ದಾಗಿಯೂ ಜಿಲ್ಲೆಯ 106 ಪ್ರೌಢಶಾಲೆಗಳಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶವು ಶೇ. 50 ಕ್ಕಿಂತ ಕಡಿಮೆಯಾಗಿದೆ. ಮತ್ತು ಆರು ಶಾಲೆಗಳು ಶೂನ್ಯ ಫಲಿತಾಂಶ ಪಡೆದಿವೆ.

ಈ ಕುರಿತು ಶೈಕ್ಷಣಿಕ ತಂಡಗಳಿಂದ ಆಯಾ ಶಾಲೆಗಳಿಗೆ ಭೇಟಿ ನೀಡಿ, ಫಲಿತಾಂಶ ಕಡಿಮೆಯಾಗಲು ಕಾರಣ ಮತ್ತು ಅಲ್ಲಿನ ಸೌಲಭ್ಯಗಳ ಕುರಿತು ವಿವರ ಸಂಗ್ರಹಿಸಲಾಗಿದೆ. ಅಧಿಕಾರಿಗಳು ಸಂಗ್ರಹಿಸಿದ ಮಾಹಿತಿಯನ್ನು ವಿಶ್ಲೇಷಣೆ ಮಾಡುತ್ತಿದ್ದಾರೆ. ಲೋಪ ಕಂಡು ಬಂದಲ್ಲಿ ಶಿಕ್ಷಣ ಇಲಾಖೆಯ ನಿಯಮಾನುಸಾರ ಸಂಬಂಧಿಸಿದವರ ಮೇಲೆ ಸೂಕ್ತ ಕ್ರಮಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ ಎಲ್ಲ ಸರ್ಕಾರಿ ಶಾಲೆಗಳು ಮತ್ತು ಶಿಕ್ಷಕರು ಸಕ್ರೀಯವಾಗಿ ಪಾಲ್ಗೋಂಡು, ಮಿಷನ್ ವಿದ್ಯಾಕಾಶಿಯ ಕಾರ್ಯಕ್ರಮಗಳು ಮತ್ತು ಶಾಲಾ ಶಿಕ್ಷಣ ಇಲಾಖೆಯ ಯೋಜನೆಗಳನ್ನು ಯಶಸ್ವಿಯಾಗಿ ಜರುಗಿಸಬೇಕು. ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತಿಯಿಂದ ಪ್ರತಿ ಶಾಲೆಯ, ಶಿಕ್ಷಕರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಪರಿಹರಿಸಲಾಗುವುದು. ಶಿಕ್ಷಕರು ಜಿಲ್ಲೆಯ ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.

ಶಿಕ್ಷಕರ ಸಮಸ್ಯೆಗಳ ಕುರಿತು ಚರ್ಚೆ ಮತ್ತು ಸ್ಪಂದನೆ: ನಿರಂತರವಾಗಿ ಶಾಲೆಯಲ್ಲಿ ಇದ್ದು ಮಕ್ಕಳಿಗೆ ನಿಯಮಾನುಸಾರ ಪಾಠ ಮಾಡಲು ಅನುಕೂಲವಾಗುವಂತೆ ಮತ್ತು ಆಡಳಿತಾತ್ಮಕವಾಗಿ ಆಗುತ್ತಿರುವ ಸಮಸ್ಯೆಗಳ ಪರಿಹರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವದಕ್ಕಾಗಿ ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳ, ಮುಖ್ಯ ಶಿಕ್ಷಕರ, ಮುಖ್ಯೋಪಾಧ್ಯಯರ, ಶಿಕ್ಷಕರನ್ನು ಪ್ರತಿನಿಧಿಸುವಂತೆ ಶೀಘ್ರದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಮತ್ತು ಜಿಲ್ಲಾ ಪಂಚಾಯತ ಸಿಇಓ ನೇತೃತ್ವದಲ್ಲಿ ಒಂದು ಸಭೆ ಆಯೋಜಿಸಲಾಗುತ್ತಿದೆ.

ಈ ಸಭೆಯಲ್ಲಿ ಸಮಸ್ಯೆಗಳ ಕುರಿತು ಚರ್ಚಿಸಿ, ಪರಿಹಾರಗಳಿಗಾಗಿ ಅವರಿಂದ ಸಲಹೆಗಳನ್ನು ಸಹ ಪಡೆಯಲಾಗುತ್ತದೆ. ಮತ್ತು ಸಮಸ್ಯೆಗಳ ಪರಿಹಾರಕ್ಕಾಗಿ ಜಿಲ್ಲಾ ಹಂತದಲ್ಲಿ ಕೈಗೊಳ್ಳಬಹುದಾದ ಕ್ರಮಗಳನ್ನು ತಕ್ಷಣ ಕೈಗೊಳ್ಳಲು ನಿರ್ದೇಶನ ನೀಡಲಾಗುತ್ತದೆ. ನೌಕರ ಸ್ನೇಹಿ ಆಡಳಿತದ ಭಾಗವಾಗಿ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಜಿಲ್ಲೆಯ ಶೈಕ್ಷಣಿಕ ಸಾಧನೆಗೆ ಮತ್ತೊಂದು ಅವಕಾಶ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದರು.

ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ, ಶಾಲೆಗಳಿಗೆ ಉಸ್ತುವಾರಿ ಸಚಿವರಿಂದ ಸನ್ಮಾನ ಗೌರವ: ಕಳೆದ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ. 100 ರಷ್ಟು ಸಾಧನೆ ಮಾಡಿರುವ ಸರ್ಕಾರಿ ಶಾಲೆಗಳಿಗೆ ಮತ್ತು ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ರ್ಯಾಂಕ್ ವಿಜೇತರಾದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ, ಗೌರವಿಸಲು ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ.

ಇದೇ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜಿಲ್ಲೆಯ ಎಲ್ಲ ಶಾಲೆಗಳ ಮುಖ್ಯ ಶಿಕ್ಷಕರ, ಮುಖ್ಯೋಪಾಧ್ಯಯರ ಸಭೆ ಜರುಗಿಸಿ, ಪ್ರಸಕ್ತ ಸಾಲಿನ ಶೈಕ್ಷಣಿಕ ಸಾಧನೆಗೆ ಮಾರ್ಗದರ್ಶನ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ವಿದ್ಯಾಶಕ್ತಿ ಕಾರ್ಯಕ್ರಮದ ಪ್ರಥಮ ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಜಿಲ್ಲೆಯಲ್ಲಿ ಶೈಕ್ಷಣಿಕ ಕಾರ್ಯಕ್ರಮಗಳನ್ನು ಗ್ರಾಮೀಣ ಭಾಗದಲ್ಲಿ ಹೆಚ್ಚು ಆಯೋಜಿಸಬೇಕು. ಶಿಕ್ಷಕರು ನಿಗದಿತ ಸಮಯಕ್ಕೆ ಶಾಲೆಗಳಿಗೆ ಹಾಜರಾಗಿ ವೇಳಾಪಟ್ಟಿ ಅನುಸಾರ ವರ್ಗಗಳನ್ನು ತೆಗೆದುಕೊಳ್ಳಬೇಕು. ಕಲಿಸುವಿಕೆಯ ಕುರಿತು ಯಾವುದೇ ನಿರ್ಲಕ್ಷ್ಯ, ಉದಾಸೀನತೆ ತೋರದೆ ಎಲ್ಲರೂ ಪ್ರಾಮಾಣಿಕವಾಗಿ ಈ ಶೈಕ್ಷಣಿಕ ಉತ್ಸವದಲ್ಲಿ ಭಾಗವಹಿಸಬೇಕೆಂದು ಅವರು ಹೇಳಿದರು.

ಐಐಐಟಿ ಯ ನಿರ್ದೇಶಕ ಪ್ರೋ. ಎಸ್.ಆರ್.ಮಹಾದೇವ ಪ್ರಸನ್ನ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ. ಶಿವಸುಬ್ರಮಣ್ಯ ಎಸ್. ಅವರು ವಿದ್ಯಾಶಕ್ತಿ ಕಾರ್ಯಕ್ರಮ ಕುರಿತು ಮಾತನಾಡಿದರು. ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಎಸ್. ಕೆಳದಿಮಠ, ಡಿವಾಯ್‍ಪಿಸಿ ಎಸ್.ಎಂ.ಹುಡೇದಮನಿ ಯೋಜನೆ ಕುರಿತು ಮಾತನಾಡಿದರು. ಕುಲಸಚಿವ ಡಾ. ಮೂರುಗನಾಥಂ ಪೆÇನ್ನುಸಾಮಿ ಅವರು ವಂದಿಸಿದರು. ಸಹಾಯಕ ಪ್ರಾಧ್ಯಾಪಕ ಡಾ. ರಾಜೇಶ ಎನ್.ಎಸ್. ಅವರು ಕಾರ್ಯಕ್ರಮ ನಿರೂಪಿಸಿದರು.

ಕಾರ್ಯಕ್ರಮದಲ್ಲಿ ಧಾರವಾಡ ಐಐಐಟಿ ಯ ವಿದ್ಯಾರ್ಥಿ ಕಲ್ಯಾಣ ಮತ್ತು ಆಡಳಿತ ವಿಭಾಗದ ಡೀನ್‍ರಾದ ಪ್ರೋ. ಗೋಪಿನಾಥ ಕೆ., ಸಾರ್ವಜನಿಕ ಸಂಪರ್ಕ ಅಧಿಕಾರಿ ಪ್ರೋ. ಪರ್ವತಿ, ಐಡಿಆರ್‍ಪಿ ಯ ಸಿಇಓ ಡಾ. ದೀಪಕ ಕೆ.ಟಿ. ಮತ್ತು ಸಲಹೆಗಾರ ಶಶೀಧರ ಶೆಟ್ಟರ್, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಚಾರ್ಯರಾದ ಜಯಶ್ರೀ ಕಾರೆಕರ, ಪ್ರೋಬೇಷನರಿ ಐಎಎಸ್ ಅಧಿಕಾರಿ ರೀತಿಕಾ ವರ್ಮಾ ಸೇರಿದಂತೆ ಇತರರು ಇದ್ದರು.

ವಿದ್ಯಾಶಕ್ತಿ ತರಬೇತಿ ಕಾರ್ಯಾಗಾರದಲ್ಲಿ ಜಿಲ್ಲೆಯ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಕ್ಷೇತ್ರ ಸಮನ್ವಯ ಅಧಿಕಾರಿಗಳು, ಶಾಲಾ ಮೇಲ್ವಿಚಾರಕರು, ಹಿರಿಯ ಉಪನ್ಯಾಸಕರು, ಬಿಆರ್‍ಸಿ, ಇಸಿಓ, ಬಿಆರ್‍ಪಿ, ಸಿಆರ್‍ಪಿ ಸೇರಿದಂತೆ ವಿವಿಧ ಹಂತದ ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಭಾಗವಹಿಸಿದ್ದರು.

ರಾಜಕೀಯ

ಮುನೇಗೌಡರ ಮನೆಗೆ JDS ದೊಡ್ಡಬಳ್ಳಾಪುರ ಅಧ್ಯಕ್ಷ ಹರೀಶ್ ಗೌಡ ಭೇಟಿ..!

ಮುನೇಗೌಡರ ಮನೆಗೆ JDS ದೊಡ್ಡಬಳ್ಳಾಪುರ ಅಧ್ಯಕ್ಷ ಹರೀಶ್ ಗೌಡ ಭೇಟಿ..!

ಜೆಡಿಎಸ್ (JDS) ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಹರೀಶ್ ಗೌಡ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲಾ ನಿಕಟಪೂರ್ವ ಅಧ್ಯಕ್ಷ ಬಿ.ಮುನೇಗೌಡ ಅವರ ಸ್ವ ಗೃಹಕ್ಕೆ ಭೇಟಿ ನೀಡಿದ್ದಾರೆ.

[ccc_my_favorite_select_button post_id="121727"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]