ಚಿಕ್ಕಬಳ್ಳಾಪುರ: ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆಯನ್ನು ಜೂನ್ 19 ರಂದು ಚಿಕ್ಕಬಳ್ಳಾಪುರ ತಾಲ್ಲೂಕಿನ ನಂದಿ ಗಿರಿಧಾಮದಲ್ಲಿ (Nandi Hills) ಹಮ್ಮಿಕೊಳ್ಳಲಾಗಿದ್ದ ಪ್ರಯುಕ್ತ ನಂದಿಗಿರಿಧಾಮ, ಸ್ಕಂಧಗಿರಿ, ನಂದಿ ಗ್ರಾಮದ ಭೋಗನಂದೀಶ್ವರ ದೇಗುಲ ಪ್ರವೇಶಕ್ಕೆ ಸಾರ್ವಜನಿಕರಿಗೆ ನಿರ್ಬಂಧಿಸಿ ಹೊರಡಿಸಿದ್ದ ಆದೇಶವನ್ನು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ (PN Ravindra) ಹಿಂಪಡೆದಿದ್ದಾರೆ.
ನಂದಿಬೆಟ್ಟದಲ್ಲಿ ನಡೆಯಬೇಕಿದ್ದ ಸಂಪುಟ ಸಭೆ ರದ್ದಾದ ಹಿನ್ನೆಲೆಯಲ್ಲಿ ಅವರು ಈ ಕ್ರಮ ಕೈಗೊಂಡಿದ್ದಾರೆ.
ಆದೇಶ ಹಿಂಪಡೆದ ಹಿನ್ನಲೆಯಲ್ಲಿ ನಂದಿಬೆಟ್ಟಕ್ಕೆ ಎಂದಿನಂತೆ ಪ್ರವಾಸಿಗರಿಗೆ ಬರಲು ಆರಂಭಿಸಿದ್ದಾರೆ. ಆದರೆ ಬರುತ್ತಿರುವ ಪ್ರವಾಸಿಗರ ಸಂಖ್ಯೆ ಕಡಿಮೆ ಇತ್ತು.