ಘಾಟಿ ಈಶಾ ಫೌಂಡೇಷನ್‌ಗೆ ಬಿಎಂಟಿಸಿ ಬಸ್‌: ಸಚಿವ ರಾಮಲಿಂಗಾರೆಡ್ಡಿ ಚಾಲನೆ

Minister Ramalinga Reddy flags off BMTC bus to Ghati Isha Foundation

ಬೆಂಗಳೂರು: ಪ್ರವಾಸಿಗರ ಅನುಕೂಲಕ್ಕಾಗಿ ಆರಂಭಿಸಲಾಗಿದ್ದ ದಿವ್ಯ ದರ್ಶನ ಟೂರ್ ಪ್ರಾಕೇಜ್ ಮಾದರಿಯಲ್ಲಿ ಘಾಟಿ ಈಶಾ ಫೌಂಡೇಷನ್ (Ghati Isha Foundation) ಹೆಸರಿನಡಿ ವಾರಾಂತ್ಯದ ದಿನ. ಸರಕಾರಿ ರಜೆಗಳಂದು ಆರಂಭಿಸಲಾದ ನಾನ್ ಏಸಿ ಬಸ್ ಪ್ರವಾಸಕ್ಕೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದರು.

ಬೆಂಗಳೂರಿನ ಸುತ್ತಮುತ್ತಲಿನ ಧಾರ್ಮಿಕ ಮತ್ತು ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡುವ ಪ್ರವಾಸಿ ಗರ ಅನುಕೂಲಕ್ಕಾಗಿ ಬಿಎಂಟಿಸಿ ಈ ಪ್ರವಾಸಿ ಪ್ಯಾಕೇಜ್ ಘೋಷಿಸಿದ್ದು, ಒಂದು ದಿನದ ಪ್ರವಾಸಿ ಪ್ರಾಕೇಜ್ ನಲ್ಲಿ ಬನಶಂಕರಿಯಿಂದ ನೇರವಾಗಿ ಈಶಾಗೆ ಹಾಗೂ ಸೆಂಟ್ರಲ್ ಸಿಲ್ಕ್ ಬೋರ್ಡ್‌ನಿಂದ ನೇರವಾಗಿ ಚಿಕ್ಕಬಳ್ಳಾಪುರ ಈಶಾ ಫೌಂಡೇಷನ್‌ನ ಆದಿಯೋಗಿ ಶಿವನ ದೇಗುಲಕ್ಕೆ ಕರೆದೊಯ್ಯಲಿವೆ.

ಐಎಂಟಿಸಿ ವೇಗದೂತ ಸೇವೆಗಳು ಹಾಗೂ ಘಾಟಿ ಈಶ ಫೌಂಡೇಷನ್ ಪ್ರಾಕೇಜ್ ಪ್ರವಾಸದಡಿಯಲ್ಲಿ ಪರಿಚಯಿಸಲಾಗುತ್ತಿರುವ ನೂತನ ಮಾರ್ಗದ ಲೋಕಾರ್ಪಣೆಗೆ ಚಾಲನೆ ನೀಡಿ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, ಸಾರಿಗೆ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮೃತಾವಲಂಬಿತರಿಗೆ 1.5 ಕೋಟಿ ವಿಮಾ ಪರಿಹಾರ ಮೊತ್ತದ ಚೆಕ್‌ನ್ನು ವಿತರಿಸಿದ್ದೇವೆ. ಬಿಎಂಟಿಸಿ ವಾರಾಂತ್ಯದ ದಿನಗಳಲ್ಲಿ ಪ್ರವಾಸಿಗರ ಅನುಕೂಲಕ್ಕೆ ಪ್ರವಾಸಿ ಸ್ಥಳಗಳಿಗೆ ಟೂರ್ ಪ್ಯಾಕೇಜ್ ಘೋಷಿಸಿದೆ ಎಂದರು.

ಟೂರ್ ಪ್ಯಾಕೇಜ್ ದರ, ಸಮಯ ನಿಲ್ದಾಣಗಳು

ಈಶಾ ಫೌಂಡೇಶನ್‌ಗೆ ಜೂನ್ 21ರಿಂದ ಹೆಚ್ಚುವರಿ ಬಸ್ ಸೇವೆ ಲಭ್ಯವಾಗಲಿದ್ದು, ಇದರಲ್ಲಿ ಕೆಲವು ಧಾರ್ಮಿಕ ಸ್ಥಳಗಳು ಒಳಗೊಂಡಿದೆ. ಕೆಂಪೇಗೌಡ ಮೆಜೆಸ್ಟಿಕ್ ನಿಂದ ಬಸ್ ಬೆಳಗ್ಗೆ 09ಕ್ಕೆ ಸಂಚಾರ ಆರಂಭವಾಗುತ್ತದೆ. ಅಲ್ಲಿಂದ ದೊಡ್ಡಬಳ್ಳಾಪುರದ ಶ್ರೀ ನೇದಾಲಂಜನೇಯ ಸ್ವಾಮಿ ದೇವಸ್ಥಾನ, ನಂತರ ಶ್ರೀಘಾಟಿ ಸುಬ್ರಹ್ಮಣ್ಯ ದೇವಸ್ಥಾನ, ಜ್ಞಾನತೀರ್ಥ ಲಿಂಗ (ಮುದ್ದೇನಹಳ್ಳಿ), ದಕ್ಷಿಣ ಕಾಶಿ ಪಂಚನಂದಿ ಕ್ಷೇತ್ರ ಪಾಪಾಕ್ಷಿ ಮಠ (ಸ್ಕಂದಗಿರಿ), ಅಲ್ಲಿಂದ ಕಲ್ಯಾಣಿ (ಕಾರಂಜಿ) ಮುಂದೆ ಈಶಾ ಫೌಂಡೇಶನ್ ತಲುಪಲಾಗುತ್ತದೆ. ಮರಳಿ ರಾತ್ರಿ 09 ಗಂಟೆಗೆ ಪ್ರವಾಸಿ ಬಸ್ ಮೆಜೆಸ್ಟಿಕ್ ಬಂದು ತಲುಪುತ್ತದೆ.

ಒಬ್ಬ ಪ್ರವಾಸಿಗೆ ಟಿಕೆಟ್ 600 ರುಪಾಯಿ ನಿಗದಿ ಮಾಡಲಾಗಿದೆ. ಹೆಚ್ಚಿನ ಮಾಹಿತಿ ಹಾಗೂ ಟಿಕೆಟ್ ಮುಂಗಡ ಕಾಯ್ದಿರಿಸಲು ನೀವು www.ksrtc.in ಹಾಗೂ https://bit.ly/4ebRVmr ಅಧಿಕೃತ ಜಾಲ ತಾಣಕ್ಕೆ ಭೇಟಿ ನೀಡಿ ಮಾಹಿತಿ ಪಡೆಯಬಹುದು.

ಈ ವೇಳೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ರಾಮಚಂದ್ರನ್ ಆರ್., ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷ, ನಿರ್ದೇಶಕರು (ಭ&ಜಾ) ಅಬ್ದುಲ್ ಅಹದ್, ಶಿಲ್ಪಾ.ಎಂ (ಮಾ.ತಂ), ಉಪ ಮಹಾಪ್ರಬಂಧಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

ರಾಜಕೀಯ

ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಕೈ ಹಿಡಿದಿವೆ, ಕೇರಳದಲ್ಲಿ ಅಧಿಕಾರ ನಿರೀಕ್ಷಿತ: ಡಿಸಿಎಂ ಡಿ.ಕೆ. ಶಿವಕುಮಾರ್

ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಕೈ ಹಿಡಿದಿವೆ, ಕೇರಳದಲ್ಲಿ ಅಧಿಕಾರ ನಿರೀಕ್ಷಿತ: ಡಿಸಿಎಂ ಡಿ.ಕೆ.

“ಶೃಂಗೇರಿ ಮರು ಎಣಿಕೆ ಫಲಿತಾಂಶವು ಇಡೀ ದೇಶಕ್ಕೇ ಮಾರಕ. ಬಿಜೆಪಿಯಲ್ಲಿ ಇಷ್ಟರಮಟ್ಟಿಗಿನ ಕ್ರಿಮಿನಲ್ ಗಳಿದ್ದಾರೆ ಎಂದು ನಾನು ಎಣಿಸಿರಲಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="121720"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]