ನೆಲಮಂಗಲ: ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕರು ಬಿ.ಆರ್.ಪಾಟೀಲ್ (B.R.Patila) ಗಂಭೀರವಾದ ರಾಜ್ಯದ ಪರಿಸ್ಥಿತಿ ಬಗ್ಗೆ ಬೆಳಕು ಚಲ್ಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (B.Y.Vijayendra) ಹೇಳಿದ್ದಾರೆ.
ನೆಲಮಂಗಲದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬಡವರಿಗೆ ಮನೆಗಳನ್ನು ಕೊಡಬೇಕಿತ್ತು, ಅಲ್ಲಿಯೂ ಸಹ ಭ್ರಷ್ಟಾಚಾರ ನಡೆದಿದೆ ಎಂಬ ರಾಜ್ಯದ ಜನತೆ ಮುಂದೆ ಬಿಚ್ಚಿಟ್ಟಿದ್ದಾರೆ.
ಹಿರಿಯ ನಾಯಕರಾದ ಬಿ.ಆರ್ ಪಾಟೀಲ್ ರವರನ್ನ ಆಡಳಿತ ಪಕ್ಷದ ನಾಯಕರು ಬೆದರಿಸುವ ಕೆಲಸ ಮಾಡುತ್ತಿದ್ದಾರೆ.
ಕರ್ನಾಟಕ ರಾಜ್ಯದಲ್ಲಿ ಈ ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಬಡವರಿಗೆ ರೈತರಿಗೆ ಶಾಪವಾಗಿ ಪರಿಣಮಿಸಿದೆ. ಕಾಂಗ್ರೆಸ್ ಸರ್ಕಾರ ಸಿದ್ದರಾಮಯ್ಯ ಸರ್ಕಾರದಿಂದ ಬಡವರಿಗೆ ಯಾವುದೇ ಅನುಕೂಲ ಇಲ್ಲ.
ಹಿಂದೆ ಯಡಿಯೂರಪ್ಪನವರ ಸರ್ಕಾರ ಇದ್ದಾಗ ಅನೇಕ ಬಡವರ ಪರ ಯೋಜನೆ ನೀಡಿದ್ರು ಎಲ್ಲಾ ಯೋಜನೆ ಮರೆತಿದ್ದಾರೆ. ಭ್ರಷ್ಟಾಚಾರ ಭ್ರಷ್ಟಾಚಾರ ಭ್ರಷ್ಟಾಚಾರ ಬಿಟ್ರೆ ಈ ಸರ್ಕಾರದಲ್ಲಿ ಯಾವುದೇ ಯೋಜನೆ ಇಲ್ಲ. ಎಲ್ಲೊಒಂದು ಕಡೆ ಸ್ಟೇಟ್ ಸ್ಪಾನ್ಸರ್ ಕರೆಪ್ಷನ್ ರಾಜ್ಯ ಸರ್ಕಾರವೇ ಭ್ರಷ್ಟಾಚಾರಕ್ಕೆ ಉತ್ತೇಜನ ನೀಡುತ್ತಿದೆ.
ಈ ಎಲ್ಲಾವನ್ನ ಬಿ.ಆರ್ ಪಾಟೀಲ್ ಹೇಳಿಕೆಯಿಂದ ಗೊತ್ತಾಗುತ್ತಿದೆ. ನಾವು ಕೂಡ ಬಿಜೆಪಿ ಪಕ್ಷ ಬೀದಿಗಿಳಿದು ಹೋರಾಟ ಮಾಡುತ್ತೇವೆ ಎಂದು ಹೇಳಿದರು.