ಇಡಿ ನಡೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ: ಬಮೂಲ್ ಅಧ್ಯಕ್ಷ ಡಿಕೆ ಸುರೇಶ್

ED's move is a threat to the democratic system: Bamul President DK Suresh

ಬೆಂಗಳೂರು: “ಇಡಿಯವರು ವಿಚಾರಣೆಗೆ ಹಾಜರಾಗಿ ಎಂದು ತಿಳಿಸಿದ್ದಾರೆ. ನಾನು ಇದಕ್ಕೆ ಸಂಪೂರ್ಣ ಸಹಕಾರ ನೀಡುತ್ತೇನೆ. ಯಾವ ಮಾನದಂಡವಿಟ್ಟುಕೊಂಡು ನನ್ನನ್ನು ವಿಚಾರಣೆಗೆ ಕರೆದಿದ್ದಾರೆ ಎನ್ನುವುದನ್ನು ತಿಳಿದುಕೊಳ್ಳುವೆ” ಎಂದು ಬಮೂಲ್ ಅಧ್ಯಕ್ಷ, ನಿಕಟಪೂರ್ವ ಸಂಸದರಾದ ಡಿ ಕೆ ಸುರೇಶ್ (D K Suresh) ಅವರು ಹೇಳಿದರು.

ಸದಾಶಿವನಗರ ನಿವಾಸದ ಬಳಿ ಸುರೇಶ್ ಅವರು ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು.

ಇಡಿ ನೋಟಿಸ್ ರಾಜಕೀಯ ಷಡ್ಯಂತ್ರವೆಂದು ನಿಮಗೆ ಅನಿಸುತ್ತದೆಯೇ ಎಂದು ಕೇಳಿದಾಗ, “ವಿಚಾರಣೆಗೆ ಹೋದಾಗ ಇದರ ಬಗ್ಗೆ ತಿಳಿಯುತ್ತದೆ. ಅವರ ಪ್ರಶ್ನೆಗಳು ಯಾವ ಹಾದಿಯಲ್ಲಿವೆ, ವಿಚಾರಣೆಗೂ ಪ್ರಕರಣಕ್ಕೂ ಸಂಬಂಧ ಇದೆಯೋ ಇಲ್ಲವೋ ಎಂದು ತಿಳಿಯುತ್ತದೆ. ಜೊತೆಯಲ್ಲಿ ವಕೀಲರು ಇರುತ್ತಾರೆ. ನಂತರ ಯಾವುದಕ್ಕೆ ಸಂಬಂಧ‌ವಿದೆ, ಅಸಂಬದ್ಧವಾಗಿದೆ ಎನ್ನುವುದರ ಬಗ್ಗೆ ಚರ್ಚೆ ನಡೆಸುತ್ತೇವೆ” ಎಂದರು.

“ಸುಪ್ರೀಂ ಕೋರ್ಟ್ ಹಾಗೂ ಹೈಕೋರ್ಟ್ ಗಳು ಇಡಿ ಎಲ್ಲೆ ಮೀರಿ ನಡೆಯುತ್ತಿದೆ ಎಂದು ಅನೇಕ‌ ಬಾರಿ ಹೇಳಿವೆ. ಆದಾಗ್ಯೂ ಎಚ್ಚೆತ್ತುಕೊಂಡಿಲ್ಲ ಎಂದರೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ಉಂಟಾಗುತ್ತಿದೆ ಎಂದರ್ಥ. ಅವರ ವ್ಯಾಪ್ತಿಯನ್ನು ಮೀರಿ ಪ್ರಕರಣಗಳನ್ನು ದಾಖಲು ಮಾಡಿಕೊಳ್ಳುವುದು ನೋಡಿದರೆ ಸರ್ಕಾರವೊಂದರ ಕೈಗೊಂಬೆಯಾಗಿ ಕೆಲಸ ಮಾಡುತ್ತಿದೆ ಎನಿಸುತ್ತಿದೆ. ಏನು ಮಾಡುತ್ತಾರೆ ಎಂದು ನೋಡೋಣ” ಎಂದು ಮಾರ್ಮಿಕವಾಗಿ ನುಡಿದರು.

ಐಶ್ವರ್ಯ ಗೌಡ ನಿಮ್ಮ ಹೆಸರು ಹೇಳಿಕೊಂಡು ವಂಚನೆ ಮಾಡಿದ್ದಾರೆ. ನಿಮ್ಮ ಅವರ ನಡುವೆ ಹಣಕಾಸಿನ ವ್ಯವಹಾರ ನಡೆದಿದೆಯೇ ಎಂದಾಗ, “ಆ ಮಹಿಳೆ ಹಾಗೂ ನಮ್ಮ ನಡುವೆ ಯಾವುದೇ ಹಣಕಾಸು ಹಾಗೂ ಇತರೇ ವಹಿವಾಟು ನಡೆದಿಲ್ಲ. ಅವರು ಮೂರ್ನಾಲ್ಕು ಬಾರಿ ಗೃಹ ಕಚೇರಿಯಲ್ಲಿ ಭೇಟಿ ಮಾಡಿ ಕೆಲವೊಂದು ವಿಚಾರಗಳನ್ನು ಚರ್ಚೆ ಮಾಡಿದ್ದಾರೆ. ನನ್ನ ಕ್ಷೇತ್ರದಲ್ಲಿ ವಾಸ ಮಾಡುತ್ತಿದ್ದರು ಎನ್ನುವ ಕಾರಣಕ್ಕೆ ಅವರ ಆಯೋಜನೆಯ ಕಾರ್ಯಕ್ರಮಗಳಿಗೆ ಹೋಗಿದ್ದೇನೆ. ಇದರ ಹೊರತಾಗಿ ಬೇರೇನೂ ಇಲ್ಲ. ಇದರ ಬಗ್ಗೆ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ನೀಡುತ್ತೇನೆ” ಎಂದು ಸ್ಪಷ್ಟವಾಗಿ ನುಡಿದರು.

ನಟರೊಬ್ಬರು ನಿಮ್ಮ ದನಿ ಅನುಕರಣೆ ಮಾಡಿ ವಂಚನೆ ಎಸಗಿರುವ ಬಗ್ಗೆ ಕೇಳಿದಾಗ, “ಈ ಬಗ್ಗೆ ನಾನು ಮಾಧ್ಯಮಗಳ ಮೂಲಕ ತಿಳಿದುಕೊಂಡಿದ್ದೇನೆ. ಈ ಕುರಿತು ಪೊಲೀಸ್ ತನಿಖೆ ನಡೆಯುತ್ತಿದೆ. ಈ ತನಿಖೆಯ ಬೆಳವಣಿಗೆ ಏನಾಗಿದೆ ಎಂಬುದರ ಬಗ್ಗೆ ನನಗೆ ಮಾಹಿತಿಯಿಲ್ಲ” ಎಂದು ಹೇಳಿದರು.

ರಾಜಕೀಯ

ಮೋದಿ ಅವರ ನಾಯಕತ್ವಕ್ಕೆ ಶಕ್ತಿ ತುಂಬುವ ಫಲಿತಾಂಶ: ಬಿ.ವೈ.ವಿಜಯೇಂದ್ರ ವಿಶ್ಲೇಷಣೆ

ಮೋದಿ ಅವರ ನಾಯಕತ್ವಕ್ಕೆ ಶಕ್ತಿ ತುಂಬುವ ಫಲಿತಾಂಶ: ಬಿ.ವೈ.ವಿಜಯೇಂದ್ರ ವಿಶ್ಲೇಷಣೆ

ಪಶ್ಚಿಮ ಬಂಗಾಲ, ಅಸ್ಸಾಂ, ಪುದುಚೇರಿಯಲ್ಲಿ ಬಿಜೆಪಿ ಗೆಲುವು ಒಂದು ಕಡೆ ನರೇಂದ್ರ ಮೋದಿ ಅವರ ನಾಯಕತ್ವಕ್ಕೆ ದೊಡ್ಡ ಶಕ್ತಿಯನ್ನು ತುಂಬಿದಂತಾಗಿದೆ. ನಮ್ಮ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬೀನ್‍ ಅವರ ಮೊದಲ ಚುನಾವಣೆ ಇದಾಗಿದೆ. ಬಹುದೊಡ್ಡ

[ccc_my_favorite_select_button post_id="121717"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]