ದೊಡ್ಡಬಳ್ಳಾಪುರ: ಶ್ರೀ ಕೆಂಪೇಗೌಡ ಜಯಂತ್ಯುತ್ಸವ ಆಚರಣಾ ಸಮಿತಿ ವತಿಯಿಂದ ಜೂನ್ 27ರಂದು ನಗರದ ಒಕ್ಕಲಿಗರ ಸಮುದಾಯ ಭವನದಲ್ಲಿ ನಾಡಪ್ರಭು ಕೆಂಪೇಗೌಡರ (Nadaprabhu Kempegowda) ಜಯಂತಿ ಕಾರ್ಯಕ್ರಮ ಅದ್ಧೂರಿಯಾಗಿ ಆಚರಿಸಲಾಗುತ್ತಿದ್ದು, ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ.
ನಗರದ ಒಕ್ಕಲಿಗರ ಭವನದಲ್ಲಿ ಶ್ರೀ ಕೆಂಪೇಗೌಡ ಜಯಂತ್ಯುತ್ಸವ ಆಚರಣಾ ಸಮಿತಿಯ ವತಿಯಿಂದ ಸುದ್ಧಿಗೋಷ್ಠಿ ನಡೆಸಲಾಗಿದೆ.
ಈ ವೇಳೆ ಮಾತನಾಡಿದ ಮುಖಂಡರು, ನಾಡಪ್ರಭು ಕೆಂಪೇಗೌಡರು ನಾಡಿಗೆ ನೀಡಿರುವ ಕೊಡುಗೆ ಅಪಾರವಾಗಿದ್ದು, ಅವರ ಜಯಂತಿ ಆಚರಿಸುವ ಮೂಲಕ ಅವರ ಸಾಧನೆಗಳನ್ನು ಸ್ಮರಿಸುವ ಕಾರ್‍ಯ ಮಾಡಲಾಗುತ್ತಿದೆ ಎಂದಿದ್ದಾರೆ.
ಅದ್ಧೂರಿ ಮೆರವಣಿಗೆ
ಜೂನ್ 27ರಂದು ಬೆಳಿಗ್ಗೆ 9-30ಗಂಟೆಗೆ ನಗರದ ಶ್ರೀ ನೆಲದಾಂಜನೇಯಸ್ವಾಮಿ ದೇವಸ್ಥಾನದ ಮುಂಭಾಗದಿಂದ ಕೆಂಪೇಗೌಡರ ಪ್ರತಿಮೆಯ ಭವ್ಯ ಮೆರವಣಿಗೆ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಲಿದೆ.
ಮೆರವಣಿಗೆಯಲ್ಲಿ ಹೆಸರಾಂತ ವಿವಿಧ ಕಲಾತಂಡಗಳು ಭಾಗವಹಿಸಲಿವೆ. ಬೆಳಿಗ್ಗೆ 11 ಗಂಟೆಗೆ ತಾಲೂಕು ಕಚೇರಿಯಲ್ಲಿ ರ್‍ಟ್ರಾಯ ಹಬ್ಬಗಳ ಆಚರಣಾ ಸಮಿತಿ ವತಿಂದ ನಡೆಯಲಿರುವ ಕೆಂಪೇಗೌಡರ ಜಯಂತಿ ಕಾರ್‍ಯಕ್ರಮದಲ್ಲಿ ಭಾಗವಹಿಸಿ, ನಂತರ ಬೆಳಿಗ್ಗೆ 11.30 ಗಂಟೆಗೆ ಒಕ್ಕಲಿಗರ ಸಮುದಾಯ ಭವನದಲ್ಲಿ ಶ್ರೀ ಕೆಂಪೇಗೌಡರ ಆದ್ಧೂರಿ ಜಯಂತ್ಯುತ್ಸವದ ವೇದಿಕೆ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮದಲ್ಲಿ 2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಸಮುದಾಯದ ಎಲ್ಲಾ ಮುಖಂಡರು ಪಕ್ಷಾತೀತವಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಕೆಂಪೇಗೌಡರ ಪ್ರತಿಮೆ ಸ್ಥಾಪನೆಗೆ ಒತ್ತಾಯ
ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕೆಂಪೇಗೌಡರ ಪ್ರತಿಮೆ ಸ್ಥಾಪಿಸಬೇಕೆಂಬುದು ಬಹು ಕಾಲದ ಬೇಡಿಕೆಯಾಗಿದೆ.
ಕೆಂಪೇಗೌಡರ ಪ್ರತಿಮೆ ಪ್ರತಿಷ್ಠಾಪನೆ ಮಾಡುವಂತೆ ಮನವಿ ಮಾಡುತ್ತಿದ್ದರು ಈವರೆಗೂ ಯಾವುದೇ ಬೆಳವಣಿಗೆ ಕಂಡಿಲ್ಲ, ತಾಲೂಕು ಪ್ರತಿನಿಧಿಗಳು, ತಾಲೂಕು ಆಡಳಿತ ಹಾಗೂ ಸಮುದಾಯದ ಮುಖಂಡರಲ್ಲಿ ನಗರದ ನಗರದ ಒಕ್ಕಲಿಗರ ಭವನದ ಸಮೀಪ ಕೆಂಪೇಗೌಡರ ಪ್ರತಿಮೆ ಹಾಗೂ ಉದ್ಯಾನವನ ಸ್ಥಾಪಿಸಲು ಒಕ್ಕಲಿಗರ ಸಂಘ ನೇತೃತ್ವ ವಹಿಸುವಂತೆ ಮನವಿ ಮಾಡಲಾಗಿದೆ ಎಂದರು.