daily story cobra

ಹರಿತಲೇಖನಿ ದಿನಕ್ಕೊಂದು ಕಥೆ: ಹಾವಿನ ಕೋಪ

Harithalekhani: ಒಬ್ಬ ಮರದ ಕೆಲಸದವನು ರಾತ್ರಿ ತನ್ನ ಕೆಲಸವನ್ನು ಮುಗಿಸಿ ಎಂದಿನಂತೆ ತನ್ನ ಅಂಗಡಿಯನ್ನು ಮುಚ್ಚಿ ಮನೆಗೆ ಹೊರಡುತ್ತಾನೆ. ಅದೇ ಹೊತ್ತಿನಲ್ಲಿ ಒಂದು ದೊಡ್ಡ ಹಾವೊಂದು (Snake) ಅಂಗಡಿಗೆ ನುಗ್ಗುತ್ತದೆ…!

ಅಂಗಡಿಗೆ ನುಗ್ಗಿದ ಹಾವು ಅಲ್ಲಿ ತನಗೆ ಏನಾದರೂ ಆಹಾರ ಸಿಗಬಹುದೆಂದು ಅತ್ತ ಇತ್ತ ತಿರುಗುತ್ತದೆ. ಹಾಗೆ ತಿರುಗುತ್ತಿರುವಾಗ, ಅಲ್ಲಿರುವ ಎರಡು ಬದಿಯಲ್ಲಿಯೂ ಹರಿತವಾಗಿರುವ ಒಂದು ಗರಗಸಕ್ಕೆ ತಾಗಿ ಅದಕ್ಕೆ ಸಣ್ಣದಾದ ಗಾಯವಾಗಿಬಿಡುತ್ತದೆ..!

ಗಾಯವಾಗಿದ್ದೇ ತಡ ಹಾವಿಗೆ ಸಿಟ್ಟು ಬಂದು ಆ ಗರಗಸಕ್ಕೆ ಕಚ್ಚುತ್ತದೆ. ಆಗ ಅದರ ಬಾಯಿಗೆ ಕೂಡ ಗಾಯವಾಗುತ್ತದೆ. ಇದರಿಂದ ಹಾವಿನ ಸಿಟ್ಟು ಮತ್ತಷ್ಟು ಹೆಚ್ಚಾಗುತ್ತದೆ. ಕೂಡಲೇ ಅದು ಆ ಗರಗಸಕ್ಕೆ ಗಟ್ಟಿಯಾಗಿ ಸುತ್ತಿಕೊಂಡು ತನ್ನ ಹಿಡಿತವನ್ನು ಬಲಪಡಿಸುತ್ತದೆ…!

ಮರುದಿನ ಬೆಳಿಗ್ಗೆ ಮರದ ಕೆಲಸದವನು ತನ್ನ ಅಂಗಡಿಯನ್ನು ತೆರೆದಾಗ ಅವನಿಗೆ ಗರಗಸದಲ್ಲಿ ಸುತ್ತಿಕೊಂಡು ಸತ್ತಿದ್ದ ಹಾವು ಕಾಣುತ್ತದೆ. ಆದರೆ ಹಾವು ಬೇರೆಯವರ ಆಕ್ರಮಣದಿಂದ ಸಾಯಲಿಲ್ಲ, ಬದಲಿಗೆ ತನ್ನದೇ ಆದ ಸಿಟ್ಟು ಮತ್ತು ಹಠದಿಂದ ಸತ್ತಿರುತ್ತದೆ.

ನಮಗೆ ಕೂಡ ಸಿಟ್ಟು ಬಂದಾಗ ನಾವು ಸಹಿತ ಆ ಹಾವಿನ ಹಾಗೆ, ಸಿಟ್ಟು ಮತ್ತು ಹಗೆಯಿಂದ ಎದುರಾಳಿಗೆ ನಷ್ಟ ಮಾಡಲು ಪ್ರಯತ್ನ ಪಡುತ್ತೇವೆ. ಆದರೆ ಸ್ವಲ್ಪ ಸಮಯದ ನಂತರ ಅದರಿಂದಾಗಿ ನಮಗೆ ಹೆಚ್ಚು ಹಾನಿಯಾದದ್ದು ಗಮನಕ್ಕೆ ಬರುತ್ತದೆ.

ನಾವು ಸಂತೋಷದಿಂದ ಜೀವಿಸಲು ಕೆಲವೊಂದು ವಸ್ತು, ಜನರು, ಘಟನೆ ಹಾಗು ವಿಷಯಗಳನ್ನು ಕಡೆಗಣಿಸಬೇಕಾಗುತ್ತದೆ.
ನಾವು ಪ್ರತಿಕ್ರಿಯೆ ತೋರಿಸುವ ಅಗತ್ಯತೆ ಇದ್ದಲ್ಲಿ ಮಾತ್ರ ಪ್ರತಿಕ್ರಿಯೆ ತೋರಿಸಬೇಕೆ ವಿನಹ ಎಲ್ಲದಕ್ಕೂ ಪ್ರತಿಕ್ರಿಯೆ ತೋರಿಸಲು ಹೋದಲ್ಲಿ ಅನವಶ್ಯಕವಾಗಿ ನಾವು ಹಾನಿಗೊಳಬೇಕಾಗುವ ಪ್ರಸಂಗವೂ ಬರಬಹುದು.

ಕೃಪೆ: ಸಾಮಾಜಿಕತಾಣ. (ಲೇಖಕರ ಮಾಹಿತಿ ಅಲಭ್ಯ)

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ.. ಬಣ ಬಡಿದಾಟದ ವಿರುದ್ಧ ಆಕ್ರೋಶ..

ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ.. ಬಣ ಬಡಿದಾಟದ ವಿರುದ್ಧ ಆಕ್ರೋಶ..

ಜೆಡಿಎಸ್ (JDS) ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ನಿಷ್ಟಾವಂತ ಕಾರ್ಯಕರ್ತರಿದ್ದರೆ ಚುನಾವಣೆಗಳನ್ನು ಗೆಲ್ಲುವುದು ಕಷ್ಟಸಾಧ್ಯವಲ್ಲ. ಈ ದಿಸೆಯಲ್ಲಿ ಮುಂಬರುವ ಚುನಾವಣೆಗಳಲ್ಲಿ ಗೆಲುವು ಸಾಧಿಸಲು ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪಕ್ಷ ಸಂಘಟನೆಯನ್ನು ಸಮರ್ಪಕವಾಗಿ ಮಾಡಬೇಕು. ಕಾರ್ಯಕರ್ತರೊಡಗೂಡಿ ಪಕ್ಷ ಸಂಘಟನೆಗೆ

[ccc_my_favorite_select_button post_id="118326"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಅಸೆಂಬ್ಲಿ ಚುನಾವಣೆ 2028; 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ NDA ಗೆಲ್ಲುತ್ತೆ ಎಂದ ನಿಖಿಲ್ ಕುಮಾರಸ್ವಾಮಿ

ಅಸೆಂಬ್ಲಿ ಚುನಾವಣೆ 2028; 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ NDA ಗೆಲ್ಲುತ್ತೆ ಎಂದ ನಿಖಿಲ್

ಮುಂದಿನ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಎನ್ಡಿಎ (NDA) ಮೈತ್ರಿಕೂಟವು 150 ಕ್ಷೇತ್ರಗಳಲ್ಲಿ ಜಯ ಸಾಧಿಸಲಿದೆ. ಆ ನಿಟ್ಟಿನಲ್ಲಿ ಎರಡೂ ಪಕ್ಷಗಳು ಸೇರಿ ಕೆಲಸ ಮಾಡುತ್ತಿದ್ದೇವೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದರು.

[ccc_my_favorite_select_button post_id="118301"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಗೆ ಗಂಭೀರ ಗಾಯ

ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ (Accident) ಸಂಭವಿಸಿ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ **** ಹಾಗೂ *** ನಡುವೆ ಸಂಭವಿಸಿದೆ.

[ccc_my_favorite_select_button post_id="118304"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!