ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ (Dr. Nagalakshmi Chowdhury) ಅವರು ದೊಡ್ಡಬಳ್ಳಾಪುರ ತಾಲೂಕಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಆಸ್ಪತ್ರೆಯ ವ್ಯವಸ್ಥೆಯನ್ನು ಪರಿಶೀಲಿಸಿದರು.
ಇದೇ ಸಂದರ್ಭದಲ್ಲಿ ಆಸ್ಪತ್ರೆಯ ಕೆಲ ವಾರ್ಡ್ ಗಳನ್ನು ಭೇಟಿ ಮಾಡಿ ಸ್ವಚ್ಛತೆಯ ಬಗ್ಗೆ ಪರಿಶೀಲನೆ ನಡೆಸಿದರು. ಕೆಲ ರೋಗಿಗಳನ್ನು ಮಾತನಾಡಿಸಿ ವೈದ್ಯಕೀಯ ಸೇವೆಗಳು ಯಾವ ರೀತಿಯಾಗಿ ಬಡವರಿಗೆ ಸಿಗುತ್ತಿದೆ ಎಂದು ರೋಗಿಗಳಲ್ಲಿ ಮಾಹಿತಿ ಕೇಳಿದರು ಜೊತೆಗೆ ರೋಗಿಗಳಿಗೆ ನೀಡುತ್ತಿರುವ ಚಿಕಿತ್ಸೆ ಮತ್ತು ಅವರಿಗೆ ಔಷಧಿಗಳು ಸರಿಯಾದ ರೀತಿ ಸಕಲಾಕ್ಕೆ ಸಿಗುತ್ತಿವೇಯೇ ಎಂಬುದನ್ನು ಪರಿಶೀಲಿಸಿ ರೋಗಿಗಳಿಗೆ ಯಾವುದೇ ರೀತಿಯ ಸೌಲಭ್ಯಗಳ ಕೊರತೆಯಾಗದಂತೆ ಎಚ್ಚರಿಕೆ ವಹಿಸಲು ಸೂಚಿಸಿದರು.
ಹೆರಿಗೆಯಾದ ಮಹಿಳೆಯರ ವಾರ್ಡ್ ಪರಿಶೀಲಿಸಿ ತಾಯಿ ಮತ್ತು ಮಗುವಿಗೆ ಸರಿಯಾದ ರೀತಿಯಲ್ಲಿ ಚಿಕಿತ್ಸೆ ಸಿಗುತ್ತಿದೇಯೆ ಮತ್ತು ಸರ್ಕಾರದಿಂದ ಸಿಗುತ್ತಿರುವ ಸೌಲಭ್ಯ ಸಕಲಕ್ಕೆ ಸಿಗುತ್ತೆದೇಯೆ ಎಂಬುದರ ಬಗ್ಗೆ ಮಾಹಿತಿ ಪಡೆದರು. ಮಹಿಳೆಯರಿಗೆ ವಿಶೇಷ ಕಾಳಜಿ ವಹಿಸುವ ಮೂಲಕ ಮಹಿಳಾ ಆರೋಗ್ಯದ ಕಡೆಗೆ ಗಮನ ಹರಿಸಿ. ಬಡವರಿಗೆ ಗುಣಮಟ್ಟದ ಆರೋಗ್ಯ ದೊರೆಯುವಂತೆ ನೋಡಿಕೊಳ್ಳಿ ಎಂದು ತಿಳಿಸಿದರು.
ಗರ್ಭಿಣಿ ಮತ್ತು ತಾಯಿಂದಿರಿಗೆ ಪ್ರೋತ್ಸಾಹಧನದ ಸೌಲಭ್ಯ ಕಲ್ಪಿಸಬೇಕು. ಕೆಲವರಿಗೆ ಸರ್ಕಾರದಿಂದ ಸಿಗುತ್ತಿರುವ ಸೌಲಭ್ಯಗಳ ಬಗ್ಗೆ ಮಾಹಿತಿ ಇರುವುದಿಲ್ಲ ಅದಕ್ಕಾಗಿ ಅಂಗನವಾಡಿಯ ಸಹಾಯಕಿಯರು ಮತ್ತು ಆಶಾ ಕಾರ್ಯಕರ್ತೆರು ಗರ್ಭಿಣಿಯ ಮನೆಗೆ ತೆರಳಿದಾಗ ಸೌಲಭ್ಯಗಳ ಮಾಹಿತಿ ನೀಡಬೇಕು ಹಾಗೂ ತಾಯಿಂದಿರಿಗೆ ಆಸ್ಪತ್ರೆಯಲ್ಲಿ ತಾಯಿ ಕಾರ್ಡ್ ವಿತರಿಸುವಾಗ ಮಾಹಿತಿ ನೀಡುವಂತೆ ತಿಳಿಸಿದರು. ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಇದರ ಬಗ್ಗೆ ಅರಿವು ಮೂಡಿಸಲು ತಿಳಿಸಿದರು.
ಆಸ್ಪತ್ರೆಯಲ್ಲಿನ ರೋಗಿಗಳಿಗೆ ಬಳಸುತ್ತಿರುವ ಕುಡಿಯುವ ನೀರಿನ ವ್ಯವಸ್ಥೆ ಬಗ್ಗೆ ಪರಿಶೀಲನೆ ನಡೆಸಿ ನೀರಿನ ಗುಣಮಟ್ಟ ಪರೀಕ್ಷೆಯ ವಿವರವನ್ನು ತಿಳಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಸರ್ಕಾರಿ ಆಸ್ಪತ್ರೆಗೆ ಬರುವವರು ಬಹುತೇಕರು ಬಡವರು ಇರುತ್ತಾರೆ. ಅವರಿಗೆ ಸೌಲಭ್ಯಗಳ ಕೊರತೆಯಾಗಬಾರದು. ಬೇರಡೆ ಶಿಫಾರಸು ಮಾಡಬಾರದು. ಇಲ್ಲಿಯೇ ಸೌಲಭ್ಯಕ್ಕೆ ನೀಡಲು ಪ್ರಯತ್ನಿಸಬೇಕು ಎಂದರು.
ಈ ಸಂದರ್ಭದಲ್ಲಿ ಆಡಳಿತಾಧಿಕಾರಿ, ಡಾ.ಪಿ.ಎಸ್ ರಮೇಶ್, ಟಿ.ಎಚ್.ಒ ಡಾ.ಶಾರದಾ ನಾಗನಾಥ್ ಹಾಗೂ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ವೈದ್ಯಾಧಿಕಾರಿಗಳು, ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.