Mango purchasing center established in Bengaluru district.. Price fixing

ರೈತರಿಗೆ ಗುಡ್‌ನ್ಯೂಸ್: ಮಾವಿಗೆ ಬೆಂಬಲ ಬೆಲೆ ಘೋಷಣೆ

ನವದೆಹಲಿ: ಕರ್ನಾಟಕ ಮಾವಿಗೆ ಆಂದ್ರಪ್ರದೇಶ ಚಂದ್ರಬಾಬು ನಾಯ್ಡು ಸರ್ಕಾರ ನಿಷೇಧ ಹೇರಿದ ಕಾರಣ ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದ ಮಾವು (Mango) ಬೆಳಗಾರರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ.

ಹೌದು, ಮಾವು ಬೆಳಗೆ ಬೆಂಬಲ ಬೆಲೆ ಘೋಷಿಸುವಂತೆ ಕೇಂದ್ರ ಸರ್ಕಾರ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ಪತ್ರ ಬರೆದು ಮನವಿ ಮಾಡಿದ ಕೂಡಲೇ ಕರ್ನಾಟಕದ ಮಾವು ಬೆಳೆಗಾರರ ನೆರವಿಗೆ ಧಾವಿಸಿದ ಕೇಂದ್ರದ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಧನ್ಯವಾದ ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಪ್ರಧಾನಿಗಳಾದ ನರೇಂದ್ರ ಮೋದಿ ಅವರ ಸರಕಾರದ ರೈತಪರ ಬದ್ಧತೆ, ಅಚಲತೆಗೆ ನನ್ನ ಹೃದಯಪೂರ್ವಕ ಧನ್ಯವಾದಗಳು. ಬೆಲೆ ಕುಸಿತದಿಂದ ಕಂಗಾಲಾಗಿದ್ದ ರಾಜ್ಯದ ಮಾವು ಬೆಳೆಗಾರರ ಹಿತದೃಷ್ಟಿಯಿಂದ ಮನವಿ ಮಾಡಿದ ತಕ್ಷಣವೇ ಮಾರುಕಟ್ಟೆ ಮಧ್ಯಸ್ಥಿಕೆ ಬೆಲೆ ಯೋಜನೆ (Market Intervention Scheme-MIS) ಅಡಿಯಲ್ಲಿ ಬೆಂಬಲ ಬೆಲೆ ಘೋಷಿಸಿದ್ದಕ್ಕಾಗಿ ಕೇಂದ್ರದ ಕೃಷಿ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಕರ್ನಾಟಕದ ಮಾವು ಬೆಳೆಗಾರರ ಪರವಾಗಿ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.

ನರೇಂದ್ರ ಮೋದಿ ಅವರ ಆಡಳಿತದಲ್ಲಿ ರೈತರ ಉತ್ಪನ್ನಗಳಿಗೆ ಸ್ಥಿರ ಬೆಲೆಯ ಖಾತರಿ ಸದಾ ಇರುತ್ತದೆ ಎಂಬುದನ್ನು ಈ ಉಪಕ್ರಮವು ಮತ್ತೊಮ್ಮೆ ಸಾಬೀತುಪಡಿಸಿದೆ ಎಂದಿರುವ ಅವರು, ಈ ಬಗ್ಗೆ ತುರ್ತು ಕ್ರಮ ವಹಿಸಿ ರಾಜ್ಯ ಮಾವು ಬೆಳೆಗಾರರ ನೆರವಿಗೆ ಧಾವಿಸಬೇಕು ಎಂದು ಕೃಷಿ ಸಚಿವರಿಗೆ ಪತ್ರದ ಮೂಲಕ ವಿನಂತಿಸಿದ್ದರು.

ಕುಮಾರಸ್ವಾಮಿ ಅವರ ಮನವಿಗೆ ತಕ್ಷಣವೇ ಸ್ಪಂದಿಸಿದ ಕೃಷಿ ಸಚಿವರು, ಕೇಂದ್ರ ಸರ್ಕಾರದ ಮಾರುಕಟ್ಟೆ ಮಧ್ಯಸ್ಥಿಕೆ ಬೆಲೆ ಯೋಜನೆ ಅಡಿಯಲ್ಲಿ 2025-2 6ನೇ ಸಾಲಿಗೆ ಅನ್ವಯ ಆಗುವಂತೆ 2,50,000 ಮೆಟ್ರಿಕ್ ಟನ್ ಮಾವನ್ನು ಪ್ರತೀ ಕ್ವಿಂಟಾಲ್ ಗೆ ₹1616 ರಂತೆ ಮಾರುಕಟ್ಟೆ ಮಧ್ಯಸ್ಥಿಕೆ ಬೆಲೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.

ಪತ್ರ ಬರೆದಿದ್ದ ಸಚಿವರು:

ಇದಕ್ಕೂ ಮುನ್ನ ಸಚಿವ ಕುಮಾರಸ್ವಾಮಿ ಅವರು, ರಾಜ್ಯದ ಮಾವು ಬೆಳೆಗಾರರ ನೆರವಿಗೆ ಧಾವಿಸುವಂತೆ ಕೃಷಿ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಅವರಿಗೆ ಪತ್ರ ಬರೆದಿದ್ದರು.

ಕರ್ನಾಟಕದ ಗ್ರಾಮೀಣ ಭಾಗದಲ್ಲಿ ಮಾವು ಬೆಳೆಗಾರರು ಬೆಲೆ ಕುಸಿತದಿಂದ ತೀವ್ರ ಕಷ್ಟಕ್ಕೆ ಸಿಲುಕಿದ್ದಾರೆ. ಸರಿಯಾದ ಬೆಲೆ ಸಿಗದ ಕಾರಣಕ್ಕೆ ಮಾವನ್ನು ರಸ್ತೆಗೆ ಸುರಿಯುತ್ತಿದ್ದಾರೆ. ಇಂಥ ಕಷ್ಟಕಾಲದಲ್ಲಿ ತಾವು ರೈತರ ನೆರವಿಗೆ ಧಾವಿಸಬೇಕು ಎಂದು ಕುಮಾರಸ್ವಾಮಿ ಅವರು ಕೋರಿದ್ದರು.

ಮಾವು ಕರ್ನಾಟಕದ ಪ್ರಮುಖ ತೋಟಗಾರಿಕಾ ಬೆಳೆಗಳಲ್ಲಿ ಒಂದಾಗಿದೆ. ಮಾವನ್ನು ರಾಜ್ಯದಲ್ಲಿ ಸುಮಾರು 1.39 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ, ಹೆಚ್ಚಾಗಿ ಬೆಂಗಳೂರು ಗ್ರಾಮೀಣ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ರಾಮನಗರ ಜಿಲ್ಲೆಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಬೆಳೆಯಲಾಗುತ್ತದೆ. ರಬಿ ಋತುವಿನಲ್ಲಿ ಅಂದಾಜು 8ರಿಂದ 10 ಲಕ್ಷ ಟನ್ ಮಾವು ಈ ಜಿಲ್ಲೆಗಳಲ್ಲಿ ಬೆಳೆಯಲ್ಪಡುತ್ತದೆ. ದುರದೃಷ್ಟದ ಸಂಗತಿ ಎಂದರೆ, ಹವಾಮಾನ ವೈಪರೀತ್ಯದಿಂದ ರೋಗರುಜಿನ ತಗುಲಿ ಪ್ರಸಕ್ತ ವರ್ಷದಲ್ಲಿ ಮಾವಿನ ಇಳುವರಿ ಶೇ.30ರಷ್ಟು ಕಡಿಮೆಯಾಗಿದೆ ಎಂದ ಅಂಶವನ್ನು ಸಚಿವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

(ಸಾಂದರ್ಭಿಕ ಚಿತ್ರ ಬಳಸಲಾಗಿದೆ)

ರಾಜಕೀಯ

ಧರ್ಮಸ್ಥಳದ ವಿಚಾರದಲ್ಲಿ ಮಧ್ಯಂತರ ವರದಿಯಿಂದ ಗೊಂದಲಕ್ಕೆ ತೆರೆ: ಬಿ.ವೈ. ವಿಜಯೇಂದ್ರ

ಧರ್ಮಸ್ಥಳದ ವಿಚಾರದಲ್ಲಿ ಮಧ್ಯಂತರ ವರದಿಯಿಂದ ಗೊಂದಲಕ್ಕೆ ತೆರೆ: ಬಿ.ವೈ. ವಿಜಯೇಂದ್ರ

ಶ್ರೀ ಕ್ಷೇತ್ರ ಧರ್ಮಸ್ಥಳದ (Dharmasthala) ವಿಚಾರದಲ್ಲಿ ಮಧ್ಯಂತರ ವರದಿಯನ್ನೂ ಒಳಗೊಂಡಂತೆ ಗೊಂದಲಕ್ಕೆ ಗೃಹ ಸಚಿವರು ತೆರೆ ಎಳೆಯುವ ವಿಶ್ವಾಸದಲ್ಲಿ ನಾವು ಇದ್ದೇವೆ: ಬಿ.ವೈ.ವಿಜಯೇಂದ್ರ (B.Y. Vijayendra)

[ccc_my_favorite_select_button post_id="112771"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!