ಪುತ್ರ ವೃದ್ಧಾಶ್ರಮ ಸೇರಿಸಿದ್ದಕ್ಕೆ ನೊಂದು ವೃದ್ದ ದಂಪತಿ ಆತ್ಮಹತ್ಯೆ..!

An elderly couple committed suicide because their son was added to an old age home..!

ಬೆಂಗಳೂರು: ಹೆತ್ತ ಮಗ ವೃದ್ಧಾಶ್ರಮ ಸೇರಿಸಿದ್ದಕ್ಕೆ ನೊಂದು ವೃದ್ದ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ( Suicide) ಜೆಪಿ ನಗರದ 8ನೇ ಹಂತದ ವೃದ್ಧಾಶ್ರಮದಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.

ಕೃಷ್ಣ ಮೂರ್ತಿ (81 ವರ್ಷ) ಇವರ ಪತ್ನಿ ರಾಧ (74 ವರ್ಷ) ನೇಣು ಬಿಗಿದುಕೊಂಡು ಸಾವಿಗೆ ಶರಣಾದ ದಂಪತಿ.

ತಂದೆ, ತಾಯಿಯನ್ನು ಕಳೆದ 1 ತಿಂಗಳ ಹಿಂದೆಯಷ್ಟೇ ಮಗ ವೃದ್ಧಾಶ್ರಮಕ್ಕೆ ಸೇರಿಸಿದ್ದನು. ಮನೆಯಲ್ಲಿ ಸೊಸೆ ಮಾಡಿದ ಅಡುಗೆ ಚೆನ್ನಾಗಿರಲ್ಲ ಎನ್ನುವ ವಿಚಾರಕ್ಕೆ ಗಲಾಟೆ ನಡೆಯುತ್ತಿತ್ತು. ಹೀಗಾಗಿ ತಂದೆ, ತಾಯಿ ಇಬ್ಬರನ್ನು ಮಗ ವೃದ್ಧಾಶ್ರಮಕ್ಕೆ ಸೇರಿಸಿದ್ದನು.

ಸೋಮವಾರ ರಾತ್ರಿಯೇ ಇಬ್ಬರೂ ನೇಣಿಗೆ ಶರಣಾಗಿದ್ದಾರೆ. ಆದರೆ ಮಂಗಳವಾರ ಬೆಳಗಿನ ಜಾವ ಬಾಗಿಲು ತೆಗೆದಿರಲಿಲ್ಲ. ಇದರಿಂದ ಅನುಮಾನಗೊಂಡ ಆಶ್ರಮದವರು ಬಾಗಿಲು ತೆಗೆಸಿದಾಗ ಘಟನೆ ಬೆಳಕಿಗೆ ಬಂದಿದೆ.

ಈ ಸಂಬಂಧ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಈ ವೃದ್ಧ ದಂಪತಿ ಸೊಸೆ ಜತೆ ಹೊಂದಾಣಿಕೆ ಇರದ ಕಾರಣ ಬೇರೆ ಮನೆ ಮಾಡಿಕೊಡಲು ಮಗನಿಗೆ ಕೇಳಿದ್ದರು. ಈ ಹಿನ್ನೆಲೆಯಲ್ಲಿ 2021ರಲ್ಲಿ ಬ್ಯಾಟರಾಯನಪುರ ವೃದ್ಧಾಶ್ರಮಕ್ಕೆ ತಂದೆ ತಾಯಿಯನ್ನು ಸೇರಿಸಿದ್ದನಂತೆ.

ಬಳಿಕ 2023ರಲ್ಲಿ ವಾಪಸ್ ಮನೆಗೆ ತಂದೆ, ತಾಯಿಯನ್ನು ಕರೆದುಕೊಂಡು ಬರಲಾಗಿತ್ತು. ಆದರೆ ಮತ್ತೆ ಮನೆಯಲ್ಲಿ ಹೊಂದಾಣಿಕೆ ಆಗಲಿಲ್ಲ. ಹೀಗಾಗಿ ಕಳೆದ ತಿಂಗಳು ಮತ್ತೆ ಬನಶಂಕರಿ ವೃದ್ಧಾಶ್ರಮಕ್ಕೆ ಸೇರಿಸಲಾಗಿತ್ತು. ಆದರೆ ಸೋಮವಾರ ರಾತ್ರಿ ಇಬ್ಬರೂ ಇಬ್ಬರೂ ಊಟ ಮಾಡಿ ಮಲಗಲು ಹೋಗಿದ್ದರು.

ಬೆಳಗ್ಗೆ ವೃದ್ಧ ದಂಪತಿ ನೇಣು ಬಿಗಿದು ಸಾವಿಗೆ ಶರಣಾಗಿರುವುದು ಬೆಳಕಿಗೆ ಬಂದಿದೆ. ಘಟನೆ ಬಗ್ಗೆ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸದ್ಯ ಟಿವಿ ನೋಡುವ ವಿಚಾರಕ್ಕೆ ಇಬ್ಬರಿಗೂ ಮನಸ್ತಾಪ ಆಗಿತ್ತು ಎಂದು ವೃದ್ಧಾಶ್ರಮದವರ ಮಾಹಿತಿ ನೀಡಿದ್ದಾರೆಂದು ವರದಿಯಾಗಿದೆ.

ರಾಜಕೀಯ

ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಸಾಹಸದಲ್ಲಿ ಆರ್. ಅಶೋಕ್ ಪುತ್ರ..!

ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಸಾಹಸದಲ್ಲಿ

ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹದ ಸ್ವರಾಜ್ ದ್ವೀಪದಲ್ಲಿ ಭಾರತದ ಸಾಹಸಯಾನದ ಸುವರ್ಣ ಅಧ್ಯಾಯವೊಂದು ಬರೆಯಲ್ಪಟ್ಟಿದೆ. ಸಮುದ್ರದ ಆಳದಲ್ಲಿ ಭಾರತದ ಅತಿ ದೊಡ್ಡ ತ್ರಿವರ್ಣ ಧ್ವಜವನ್ನು (Tricolor flag) ಯಶಸ್ವಿಯಾಗಿ ಅನಾವರಣಗೊಳಿಸುವ ಮೂಲಕ ‘ಗಿನ್ನೆಸ್

[ccc_my_favorite_select_button post_id="121685"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]