ಸುಪ್ರೀಂ ಕೋರ್ಟ್ ಆದೇಶ; ಮನೆ ಕಟ್ಟುವವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಮಹತ್ವದ ಸಲಹೆ

Supreme Court order; DCM DK Shivakumar's important advice to those building houses

ಬೆಂಗಳೂರು: “ಕಟ್ಟಡ ನಕ್ಷೆ ಅನುಮತಿ, ಸ್ವಾಧೀನ ಪ್ರಮಾಣ ಪತ್ರವಿಲ್ಲದೆ ನೀರು ಹಾಗೂ ವಿದ್ಯುತ್ ಸಂಪರ್ಕ ನೀಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಇತ್ತೀಚೆಗೆ ತೀರ್ಪು ನೀಡಿದೆ. ಹೀಗಾಗಿ ಜನರು ಈ ಅನುಮತಿಗಳು ಇಲ್ಲದೆ ಮನೆ ಕಟ್ಟಬೇಡಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K.Shivakumar) ಮನವಿ ಮಾಡಿದರು.

ವಿಧಾನಸೌಧದಲ್ಲಿ ಬುಧವಾರ ಮಾಧ್ಯಮಗೋಷ್ಠಿ ನಡೆಸಿದ ಶಿವಕುಮಾರ್ ಅವರು ಈ ವಿಚಾರಗಳನ್ನು ತಿಳಿಸಿದರು.

“ಇಡೀ ದೇಶಕ್ಕೆ ಈ ತೀರ್ಪು ಆನ್ವಯವಾಗಲಿದೆ. ಇದರಿಂದ ಸಾರ್ವಜನಿಕರಿಗೆ ಸಾಕಷ್ಟು ಸಮಸ್ಯೆ ಎದುರಾಗಲಿದೆ. ಇದುವರೆಗೂ 2.50 ಲಕ್ಷ ಜನ ಹಳ್ಳಿಗಳು ಹಾಗೂ ನಗರ ಪ್ರದೇಶಗಳಲ್ಲಿ ಕಟ್ಟಡ ನಕ್ಷೆ ಅನುಮತಿ ಪಡೆಯದೇ ಮನೆ ಕಟ್ಟಿಕೊಂಡು, ವಿದ್ಯುತ್ ಹಾಗೂ ನೀರಿನ ಸಂಪರ್ಕಕ್ಕೆ ಅರ್ಜಿ ಹಾಕಿದ್ದಾರೆ. ಈ ವಿಚಾರವಾಗಿ ಕಾನೂನು ಸಲಹೆಗಾರರ ಜತೆ ಈ ವಿಚಾರವಾಗಿ ಚರ್ಚಿಸಿ, ಸಾರ್ವಜನಿಕರಿಗೆ ಹೇಗೆ ನೆರವಾಗಬಹುದು ಎಂದು ಅಭಿಪ್ರಾಯ ಕೇಳಿದ್ದೇನೆ” ಎಂದು ತಿಳಿಸಿದರು.

“ಕೆಲವು ಸಾರ್ವಜನಿಕರು ಕೆಇಬಿಗೆ ಠೇವಣಿ ಪಾವತಿ ಮಾಡಿದ್ದು, ಈ ವಿಚಾರವಾಗಿ ಯಾವ ರೀತಿ ಕ್ರಮ ಕೈಗೊಳ್ಳಬಹುದು ಎಂದು ಅಧಿಕಾರಿಗಳ ಜತೆಗೂ ಚರ್ಚೆ ಮಾಡುತ್ತಿದ್ದೇವೆ. ಕಾನೂನು ತಜ್ಞರು ಈ ಸಮಸ್ಯೆ ಯಾವ ರೀತಿ ಬಗೆಹರಿಸಬಹುದು ಎಂದು ಪ್ರಯತ್ನ ಮಾಡುತ್ತೇವೆ. ಬೇರೆ ರಾಜ್ಯಗಳಲ್ಲಿ ಇದನ್ನು ಯಾವ ರೀತಿ ಬಗೆಹರಿಸಲಿದ್ದಾರೆ ಎಂದು ಮಾಹಿತಿ ಕಲೆಹಾಕುತ್ತೇವೆ. ಈ ಮಧ್ಯೆ ಕಟ್ಟಡ ನಕ್ಷೆ ಅನುಮೋದನೆ ಪಡೆಯದೇ ಯಾರೂ ಮನೆ ಕಟ್ಟಬೇಡಿ. ಸುಪ್ರೀಂ ಕೋರ್ಟ್ ನಿರ್ದೇಶನದ ಹಿನ್ನೆಲೆಯಲ್ಲಿ ಸಾರ್ವಜನಿಕರು ಮತ್ತೆ ಇಂತಹ ಸಾಹಸಕ್ಕೆ ಕೈ ಹಾಕಬೇಡಿ. ಈ ವಿಚಾರದಲ್ಲಿ ಅಕ್ರಮವಾಗಿ ಮನೆ ಕಟ್ಟಿದರೆ ಸಕ್ರಮ ಮಾಡುವುದು ಕಷ್ಟ. ನೀರು ಹಾಗೂ ವಿದ್ಯುತ್ ಸಂಪರ್ಕ ಸಿಗುವುದಿಲ್ಲ.” ಎಂದು ತಿಳಿಸಿದರು.

ಕಾನೂನು ಚೌಕಟ್ಟಿನಲ್ಲಿ ಜನರಿಗೆ ಸಹಾಯ

ಬೇರೆ ರಾಜ್ಯದಲ್ಲಿ ಇದು ಜಾರಿಯಾಗಿಲ್ಲ, ನಮ್ಮ ರಾಜ್ಯದಲ್ಲಿ ಆತುರದಲ್ಲಿ ಜಾರಿ ಯಾಕೆ ಎಂದು ಕೇಳಿದಾಗ, “ನ್ಯಾಯಾಲಯದ ಆದೇಶ ಬಂದ ನಂತರ ಕೆಆರ್ ಸಿ ಯಿಂದ ನಮ್ಮ ರಾಜ್ಯದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದು ನ್ಯಾಯಾಲಯದ ಆದೇಶ ಪಾಲಿಸುವಂತೆ ಸೂಚಿಸಲಾಗಿದೆ. ನೀವು ಆತುರದ ನಿರ್ಧಾರ ಎಂದು ಹೇಳಬಹುದು. ಆದರೆ ಅಧಿಕಾರಿಗಳು ತಮಗೆ ಮುಂದೆ ತೊಂದರೆ ಆಗಬಾರದು ಎಂದು ಮೈಗೆ ಎಣ್ಣೆ ಹಚ್ಚಿಕೊಂಡಿರುತ್ತಾರೆ. ನಮ್ಮ ಮೇಲೆ ಹಾಕುತ್ತಾರೆ. ಹೀಗಾಗಿ ಈ ಸಮಸ್ಯೆ ಬಗೆಹರಿಸಲು ನಾವು ಮುಂದಾಗಿದ್ದೇವೆ. ಕಾನೂನು ಚೌಕಟ್ಟಿನಲ್ಲೇ ನಾವು ಜನರಿಗೆ ಸಹಾಯ ಮಾಡಬೇಕು” ಎಂದು ಸ್ಪಷ್ಟನೆ ನೀಡಿದರು.

ಅಕ್ರಮವಿದ್ದರೂ ನೀರಿನ ಸಂಪರ್ಕ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು ಎಂಬ ವಿಚಾರವಾಗಿ ಕೇಳಿದಾಗ, “ಈ ಹಿಂದಿನ ಆದೇಶ ಮುಖ್ಯವೋ, ಈಗ ಹೊರಡಿಸಿರುವ ಆದೇಶ ಮುಖ್ಯವೋ? ಇದೇ ತೀರ್ಪಿನ ಮೇಲೆ ಮೇಲ್ಮನವಿ ಸಲ್ಲಿಸಿದ ಕಾರಣ ವಿಚಾರಣೆ ಮಾಡಿ ಸುಪ್ರೀಂ ಕೋರ್ಟ್ ಈ ತೀರ್ಪು ನೀಡಿದೆ. ಜೊತೆಗೆ ಇದನ್ನು ಜಾರಿಗೊಳಿಸುವಂತೆಯೂ ಆದೇಶ ನೀಡಿದೆ” ಎಂದು ತಿಳಿಸಿದೆ.

ಅಕ್ರಮ ಸಕ್ರಮ ಬಿಲ್ ತರಬಹುದಲ್ಲವೇ ಎಂದು ಕೇಳಿದಾಗ, ಈ ಬಿಲ್ ಗೆ ಈಗಾಗಲೇ ಸುಪ್ರೀಂ ಕೋರ್ಟ್ ನಲ್ಲಿ ತಡೆಹಿಡಿಯಲಾಗಿದೆ. ನಮ್ಮ ಸರ್ಕಾರ ಎ ಖಾತಾ, ಬಿ ಖಾತ ಎಲ್ಲ ಸಮಸ್ಯೆ ಬಗೆಹರಿಸಲು ಚರ್ಚೆ ಮಾಡುತ್ತಿದೆ. 110 ಹಳ್ಳಿಗಳಿಗೆ ನೀರಿನ ಸಂಪರ್ಕ ನೀಡಲು ಮುಂದಾಗಿದ್ದೆವು.

ಈ ತೀರ್ಪಿನ ನಂತರ ಬಿಡ್ಬ್ಲ್ಯೂಎಸ್ಎಸ್ ಬಿಗೆ ತೊಂದರೆಯಾಗಿದೆ. ಕಳೆದ ವರ್ಷ ಈ ತಿಂಗಳಲ್ಲಿ 39 ಸಾವಿರ ನೀರಿನ ಸಂಪರ್ಕ ನೀಡಿದ್ದೆವು. ಈ ವರ್ಷ ಕೇವಲ 300 ಸಂಪರ್ಕ ನೀಡಿದ್ದೇವೆ. ಈ ವಿಚಾರವಾಗಿ ಎಲ್ಲರ ಸಹಕಾರ ಬೇಕು ಎಂದು ತಿಳಿಸಿದರು.

ಡಿ.ಕೆ.ಶಿವಕುಮಾರ್ ಅವರು ನಮಗೆ ಮುಖ ಕೊಟ್ಟು ಮಾತನಾಡುವುದಿಲ್ಲ ಎಂದು ಶಾಸಕ ರಾಜು ಕಾಗೆ ಅವರು ಆರೋಪ ಮಾಡಿರುವ ಬಗ್ಗೆ ಕೇಳಿದಾಗ, “ನೀವು ದಿನಬೆಳಗಾದರೆ ನಮ್ಮ ಮನೆಗೆ ಬಂದಾಗ ನನ್ನ ಮುಖ ತೋರಿಸುತ್ತೀರಲ್ಲವೇ? ನಮ್ಮ ಶಾಸಕರಿಗೆ ನಮ್ಮ ಮೇಲೆ ಪ್ರೀತಿ ಜಾಸ್ತಿ” ಎಂದು ಹೇಳಿದರು.

ಶಾಸಕಾಂಗ ಸಭೆ ಕರೆಯಬೇಕು ಎಂದು ಕೇಳಿದಾಗ, “ಅಧಿವೇಶನ ಸಮೀಪಿಸಿದಾಗ ಶಾಸಕಾಂಗ ಸಭೆ ಕರೆಯೋಣ” ಎಂದು ತಿಳಿಸಿದರು.

ರಾಜಕೀಯ

ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಸಾಹಸದಲ್ಲಿ ಆರ್. ಅಶೋಕ್ ಪುತ್ರ..!

ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಸಾಹಸದಲ್ಲಿ

ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹದ ಸ್ವರಾಜ್ ದ್ವೀಪದಲ್ಲಿ ಭಾರತದ ಸಾಹಸಯಾನದ ಸುವರ್ಣ ಅಧ್ಯಾಯವೊಂದು ಬರೆಯಲ್ಪಟ್ಟಿದೆ. ಸಮುದ್ರದ ಆಳದಲ್ಲಿ ಭಾರತದ ಅತಿ ದೊಡ್ಡ ತ್ರಿವರ್ಣ ಧ್ವಜವನ್ನು (Tricolor flag) ಯಶಸ್ವಿಯಾಗಿ ಅನಾವರಣಗೊಳಿಸುವ ಮೂಲಕ ‘ಗಿನ್ನೆಸ್

[ccc_my_favorite_select_button post_id="121685"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]