ಎತ್ತಿನಹೊಳೆ ಯೋಜನೆ ಗುತ್ತಿಗೆದಾರರ ಸಭೆ ಮುಂದೂಡಿಕೆ: ಡಿಸಿಎಂ ಡಿ.ಕೆ.ಶಿವಕುಮಾರ್

Yettinahole project contractors' meeting postponed: DCM D.K.Shivakumar

ಬೆಂಗಳೂರು: “ಕೇಂದ್ರ ಸಚಿವ ಸೋಮಣ್ಣ ಅವರ ಮನವಿ ಮೇರೆಗೆ ಇದೇ ತಿಂಗಳು 30ರಂದು ನಡೆಯಬೇಕಿದ್ದ ಹೇಮಾವತಿ ಲಿಂಕ್ ಕೆನಾಲ್ ಸಭೆಯನ್ನು ಜುಲೈ 4-5ಕ್ಕೆ ಮುಂದೂಡಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K.Shivakumar) ತಿಳಿಸಿದರು.

ಸದಾಶಿವನಗರ ನಿವಾಸದ ಬಳಿ ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಶಿವಕುಮಾರ್ ಅವರು ಗುರುವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

“ಸೋಮಣ್ಣ ಅವರು ಸ್ಥಳೀಯ ಸಂಸದರೂ ಆಗಿರುವ ಕಾರಣ ಅವರಿಗೆ ಅನುಕೂಲವಾಗುವಂತೆ ಸಭೆ ಮುಂದೂಡಲಾಗಿದೆ. ಈ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ” ಎಂದು ತಿಳಿಸಿದರು.

ಎತ್ತಿನಹೊಳೆ ಯೋಜನೆ ಗುತ್ತಿಗೆದಾರರ ಸಭೆ ಮುಂದೂಡಿಕೆ

“ಇಂದು ತುಮಕೂರಿನಲ್ಲಿ ಯೋಜನೆ ಕಾಮಗಾರಿಯ ಗುತ್ತಿಗೆದಾರರ ಸಭೆ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ ಪರಮೇಶ್ವರ್ ಅವರ ಅನುಪಸ್ಥಿತಿ ಹಿನ್ನೆಲೆಯಲ್ಲಿ ಈ ಸಭೆಯನ್ನು ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ. ಈ ಸಭೆ ನಾಳೆ ಅಥವಾ ನಾಡಿದ್ದು ನಡೆಯಲಿದೆ” ಎಂದು ಹೇಳಿದರು.

“ಆದ್ಯತೆ ಮೇರೆಗೆ ಎತ್ತಿನಹೊಳೆ ಯೋಜನೆಯನ್ನು ನಿಗದಿತ ಸಮಯದ ಒಳಗೆ ಪೂರ್ಣಗೊಳಿಸಬೇಕು ಎಂದು ಮುಖ್ಯಮಂತ್ರಿಗಳ ನಿರ್ದೇಶನ ನೀಡಿದ್ದಾರೆ. ಹೀಗಾಗಿ ಈ ಯೋಜನೆ ಕಾಮಗಾರಿ ಪರಿಶೀಲನೆ ಮಾಡಲಾಗುತ್ತಿದೆ. ಈ ಯೋಜನೆಗೆ ಎಲ್ಲೆಲ್ಲಿ ಸಮಸ್ಯೆ ಇದೆ ಎಂದು ಪರಿಶೀಲನೆ ಮಾಡಲು ನಾನು ತುಮಕೂರಿಗೆ ಭೇಟಿ ನೀಡಿದ್ದೇನೆ” ಎಂದರು.

ನಾನು ಈಗಾಗಲೇ ದೊಡ್ಡಬಳ್ಳಾಪುರ, ಕೊರಟಗೆರೆಗೆ ಭೇಟಿ ನೀಡಿದ್ದೇನೆ. ಸಚಿವ ಸಂಪುಟ ಉಪ ಸಮಿತಿ ಅಧ್ಯಕ್ಷರಾಗಿದ್ದ ಪರಮೇಶ್ವರ್ ಅವರ ಜೊತೆ ಚರ್ಚೆ ಮಾಡಿದ್ದೇನೆ. ಈ ಭಾಗದಲ್ಲಿ ನೀರನ್ನು ಯಾವ ರೀತಿ ಸಂಗ್ರಹಿಸುವುದು ಎಂಬ ತಾಂತ್ರಿಕ ಸಾಧ್ಯತೆಗಳ ಪರಿಶೀಲನೆ ನಡೆಸುತ್ತಿದ್ದೇವೆ.

ಈಗಾಗಲೇ ಸ್ಥಳೀಯ ನಾಯಕರು, ಗ್ರಾಮಸ್ಥರ ಜೊತೆ ಚರ್ಚೆ ಮಾಡಿ ಅಭಿಪ್ರಾಯ ಸಂಗ್ರಹಿಸಿದ್ದೇನೆ. ಸಾರ್ವಜನಿಕರು ತಮ್ಮ ನೋವು ಹೇಳಿಕೊಂಡಿದ್ದಾರೆ. ಒಂದು ಕಡೆ ಅಣೆಕಟ್ಟು ನಿರ್ಮಾಣ ಮಾಡಬೇಕೆ, ಎರಡು ಕಡೆ ಮಾಡಬೇಕೆ ಅಥವಾ ಜನರ ಸಲಹೆಯಂತೆ ಕೆರೆಗಳನ್ನು ಬಳಸಿಕೊಂಡು ನೀರು ಸಂಗ್ರಹಿಸಬಹುದೇ ಎಂಬ ಸಾಧ್ಯತೆಗಳನ್ನು ಅಧ್ಯಯನ ಮಾಡಲಾಗುವುದು ಎಂದು ತಿಳಿಸಿದರು.

ಅಧ್ಯಕ್ಷನಾಗಿ ಶಾಸಕರಿಂದ ಮಾಹಿತಿ ಸಂಗ್ರಹ

ಶಾಸಕ ಬಿ.ಆರ್ ಪಾಟೀಲ್ ಅವರ ಭೇಟಿ ಬಗ್ಗೆ ಕೇಳಿದಾಗ, “ಪಕ್ಷದ ಅಧ್ಯಕ್ಷನಾಗಿ ನಾನು ವಾಸ್ತವಾಂಶ ತಿಳಿಯಬೇಕಾಗಿತ್ತು. ಹೀಗಾಗಿ ಅವರನ್ನು ಕರೆಸಿ ಮಾತನಾಡಿದೆ. ಅವರು ತಮ್ಮ ವಿಚಾರ ಹೇಳಿದ್ದಾರೆ. ನಾನು ಸಿಎಂ ಜೊತೆ ಚರ್ಚೆ ಮಾಡುತ್ತೇನೆ. ಸಚಿವ ಜಮೀರ್ ಅವರೊಂದಿಗೂ ಮಾತನಾಡುತ್ತೇವೆ. ಈ ಮಧ್ಯೆ ನಮ್ಮ ಪಕ್ಷದ ವರಿಷ್ಠರೂ ಕೂಡ ಆಗಮಿಸುತ್ತಿದ್ದು, ಎಲ್ಲರ ಜೊತೆ ಮಾತನಾಡಿ ಮಾಹಿತಿ ಪಡೆಯಲಿದ್ದಾರೆ” ಎಂದು ತಿಳಿಸಿದರು.

ಹಲವು ಶಾಸಕರು ಸರ್ಕಾರದ ವಿರುದ್ಧ ಧ್ವನಿ ಎತ್ತಿದ್ದು, ಇದು ಮುಖ್ಯಮಂತ್ರಿಗಳು ಆಡಳಿತದಲ್ಲಿ ಹಿಡಿತ ಕಳೆದುಕೊಳ್ಳುತ್ತಿದ್ದಾರೆಯೇ ಎಂದು ಕೇಳಿದಾಗ, “ಈ ವಿಚಾರವಾಗಿ ನನಗೆ ಮಾಹಿತಿ ಇಲ್ಲ. ಏನಾದರೂ ಇದ್ದರೆ ನಮ್ಮ ಪಕ್ಷದ ವರಿಷ್ಠರ ಜೊತೆ ನಾನು ಹಾಗೂ ಮುಖ್ಯಮಂತ್ರಿಗಳು ಮಾತನಾಡುತ್ತೇವೆ. ಆಡಳಿತದಲ್ಲಿ ಯಾವುದೇ ಹಿಡಿತ ಕಳೆದುಕೊಂಡಿಲ್ಲ. ಇದು ಮಾಧ್ಯಮಗಳ ಸೃಷ್ಟಿ” ಎಂದು ತಿಳಿಸಿದರು.

ಕಾಂಗ್ರೆಸ್ ಶಾಸಕರಿಗೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಅವರು ಪತ್ರ ಬರೆದಿರುವ ಬಗ್ಗೆ ಕೇಳಿದಾಗ, “ಸುರೇಶ್ ಬಾಬು ಅವರು ಮೊದಲು ತಮ್ಮ ಪಕ್ಷ ಸರಿಪಡಿಸಿಕೊಳ್ಳಲಿ. ತಮ್ಮ ಕಾವಲಿಯಲ್ಲಿರುವ ತೂತು ಮುಚ್ಚಿಕೊಳ್ಳಲಿ. ಜಿ.ಟಿ ದೇವೇಗೌಡ ಸೇರಿದಂತೆ ಬೇರೆ ಶಾಸಕರ ವಿಚಾರ ಸರಿಪಡಿಸಲಿ” ಎಂದು ತಿರುಗೇಟು ನೀಡಿದರು.

ದೇಶಕ್ಕಾಗಿ ಪ್ರಾಣ ಕೊಟ್ಟಿರುವವರು ಇಂದಿರಾ ಗಾಂಧಿ

ಇಂದಿರಾ ಗಾಂಧಿ ಅವರನ್ನು ಬಿಜೆಪಿ ಹಿಟ್ಲರ್ ಗೆ ಹೋಲಿಕೆ ಮಾಡಿದ್ದು, ಪ್ರಕರಣ ದಾಖಲಿಸಲಾಗಿದೆ ಎಂದು ಕೇಳಿದಾಗ, “ಬಿಜೆಪಿಯಲ್ಲಿ ಸಮಸ್ಯೆ ಇದೆ. ತುರ್ತುಪರಿಸ್ಥಿತಿ ನಂತರ ದೇಶದ ಜನ ಇಂದಿರಾ ಗಾಂಧಿ ಅವರ ನಾಯಕತ್ವದಲ್ಲೇ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದೆ. 1980ರಲ್ಲೂ ಇಂದಿರಾ ಅವರು ದೇಶವನ್ನು ಮುನ್ನಡೆಸಿದ್ದಾರೆ. ಆ ಸಮಯದಲ್ಲಿ ಜನತಾ ಪರಿವಾರ ಅಥವಾ ಬೇರೆಯವರು ಸರ್ಕಾರ ರಚಿಸಲು ಸಾಧ್ಯವಾಗಲಿಲ್ಲ. ಇಂದಿರಾ ಅವರು ದೇಶಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ್ದಾರೆ. ಈಗ ಪ್ರಚಾರಕ್ಕಾಗಿ ಬಿಜೆಪಿ ಈ ವಿಚಾರವನ್ನು ಚರ್ಚೆಗೆ ತರುತ್ತಿದ್ದಾರೆ” ಎಂದು ಹೇಳಿದರು.

“ತುರ್ತುಪರಿಸ್ಥಿತಿ ಬಂದು 50 ವರ್ಷ ಆಗಿದೆ. ಈಗ ಅದು ಮುಗಿದ ಅಧ್ಯಾಯ. ಆಗಿನಿಂದ ಈಗಿನವರೆಗೂ ಕಾಂಗ್ರೆಸ್ ಆಡಳಿತದಲ್ಲಿ ದೇಶ ಬಲಿಷ್ಠವಾಗಿ ನಿಂತಿದೆ. ಬಿಜೆಪಿ ಆಡಳಿತದಲ್ಲಿ ಯಾವ ಪರಿಸ್ಥಿತಿ ಇದೆ ಎಂದು ನಮ್ಮ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗೆ ನಮ್ಮ ಸಹಮತವಿದೆ. ದೇಶ ಯಾವ ಪರಿಸ್ಥಿತಿಯಲ್ಲಿದೆ ಎಂದು ಬಿಜೆಪಿಯ ಸಂಸದರನ್ನೇ ವೈಯಕ್ತಿಕವಾಗಿ ಕೇಳಿ. ಅವರೇ ಹೇಳುತ್ತಾರೆ” ಎಂದು ತಿಳಿಸಿದರು.

ರಾಜಕೀಯ

ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಸಾಹಸದಲ್ಲಿ ಆರ್. ಅಶೋಕ್ ಪುತ್ರ..!

ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಸಾಹಸದಲ್ಲಿ

ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹದ ಸ್ವರಾಜ್ ದ್ವೀಪದಲ್ಲಿ ಭಾರತದ ಸಾಹಸಯಾನದ ಸುವರ್ಣ ಅಧ್ಯಾಯವೊಂದು ಬರೆಯಲ್ಪಟ್ಟಿದೆ. ಸಮುದ್ರದ ಆಳದಲ್ಲಿ ಭಾರತದ ಅತಿ ದೊಡ್ಡ ತ್ರಿವರ್ಣ ಧ್ವಜವನ್ನು (Tricolor flag) ಯಶಸ್ವಿಯಾಗಿ ಅನಾವರಣಗೊಳಿಸುವ ಮೂಲಕ ‘ಗಿನ್ನೆಸ್

[ccc_my_favorite_select_button post_id="121685"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]