Announcement of many state presidents including Karnataka soon: B.Y.Vijayendra

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಅತಿ ಶೀಘ್ರವೇ ಕರ್ನಾಟಕವೂ ಒಳಗೊಂಡಂತೆ ಹಲವು ರಾಜ್ಯಾಧ್ಯಕ್ಷರ ಹೆಸರು ಘೋಷಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y.Vijayendra) ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರಶ್ನೆಗೆ ಉತ್ತರ ನೀಡಿದರು. ನಮ್ಮದು ರಾಷ್ಟ್ರೀಯ ಪಕ್ಷ. ಎಲ್ಲರ ಅಭಿಪ್ರಾಯ ಪಡೆದಿದ್ದಾರೆ. ನಾನು ಕಳೆದ ಒಂದೂವರೆ ವರ್ಷದಲ್ಲಿ ಬಹಳ ಯಶಸ್ವಿಯಾಗಿ ಕೆಲಸ- ಸಂಘಟನಾ ಕಾರ್ಯ ಮಾಡಿದ್ದೇನೆ ಎಂಬ ವಿಶ್ವಾಸ ನನ್ನಲ್ಲಿದೆ. ನಮ್ಮ ಕಾರ್ಯಕರ್ತರಲ್ಲೂ ಇದೆ. ನಮ್ಮ ಮುಖಂಡರಲ್ಲೂ ಇದೆ. ಹಾಗಾಗಿ ಒಳ್ಳೆಯದಾಗಲಿದೆ; ನಿಮಗೂ ಒಳ್ಳೆಯದಾಗಲಿದೆ. ನನಗೂ ಒಳ್ಳೆಯದಾಗಲಿದೆ ಎಂದು ನಗುತ್ತ ಉತ್ತರ ಕೊಟ್ಟರು.

ರಾಜ್ಯದ ಬಿಜೆಪಿ ಅಧ್ಯಕ್ಷರ ನೇಮಕಾತಿ ವಿಚಾರದಲ್ಲಿ ಇನ್ನೂ ನೇಮಕಾತಿ ಆಗುತ್ತಿಲ್ಲ, ಗೊಂದಲಗಳಿದ್ದು ಮುಂದೂಡುತ್ತಿದ್ದಾರೆ ಎಂಬುದು ಯಾವುದೂ ಸತ್ಯವಲ್ಲ. ಈಗ ದೇಶದ 14 ರಾಜ್ಯಗಳ ಅಧ್ಯಕ್ಷರ ಆಯ್ಕೆ ಮುಗಿದಿದೆ. ಈ ವಿಚಾರದಲ್ಲಿ ಘೋಷಣೆಯೂ ಆಗಿದೆ. ಸದ್ಯವೇ, ಅತಿ ಶೀಘ್ರದಲ್ಲೇ ಇನ್ನು ಆರೇಳು ರಾಜ್ಯಗಳ ಅಧ್ಯಕ್ಷರ ಘೋಷಣೆ ಆಗಲಿದೆ ಎಂಬ ಮಾಹಿತಿ ನಮಗೆ ಬರುತ್ತಿದೆ. ಅದಾದ ಬಳಿಕ ರಾಷ್ಟ್ರೀಯ ಅಧ್ಯಕ್ಷರ ಘೋಷಣೆ ಆಗಲಿದೆ.

ಕರ್ನಾಟಕ ಒಂದೇ ಅಲ್ಲ

ಡಿ.ವಿ.ಸದಾನಂದಗೌಡರ ಹೇಳಿಕೆ ಅರ್ಧ ಸತ್ಯ. ಉತ್ತರ ಪ್ರದೇಶ ರಾಜ್ಯದ ಅಧ್ಯಕ್ಷರ ನೇಮಕಾತಿಯೂ ಆಗಿಲ್ಲ. ತೆಲಂಗಾಣ- ಕರ್ನಾಟಕ ರಾಜ್ಯಗಳ ಅಧ್ಯಕ್ಷರ ನೇಮಕಾತಿಯೂ ನಡೆದಿಲ್ಲ ಎಂದು ವಿವರಿಸಿದರು.

ಬಿಜೆಪಿ ಬೂದಿ ಮುಚ್ಚಿದ ಕೆಂಡದಂತಿದೆ ಎಂಬ ಹಿರಿಯರಾದ ಡಿ.ವಿ.ಸದಾನಂದಗೌಡರ ಹೇಳಿಕೆಯ ಬಗ್ಗೆ ಪತ್ರಕರ್ತರು ಗಮನ ಸೆಳೆದರು. ಡಿ.ವಿ.ಸದಾನಂದಗೌಡರು ಹಿರಿಯರಿದ್ದಾರೆ. ನಾಳೆ ಭೇಟಿ ಮಾಡಿ ಅವರ ಜೊತೆ ಚರ್ಚೆ ಮಾಡುತ್ತೇನೆ. ಬೂದಿ ಮುಚ್ಚಿದ ಕೆಂಡದಂತಿದೆ ಎಂಬುದನ್ನು ನಾನು ಒಪ್ಪುವುದಿಲ್ಲ ಎಂದು ತಿಳಿಸಿದರು. ಸಣ್ಣಪುಟ್ಟ ಅಭಿಪ್ರಾಯ ವ್ಯತ್ಯಾಸ ಇರುವುದು ಸಹಜ ಎಂದು ತಿಳಿಸಿದರು.

ಎಫ್‍ಐಆರ್, ಗೂಂಡಾಗಿರಿಯಂಥ ಗೊಡ್ಡು ಬೆದರಿಕೆಗೆ ಹೆದರುವ ಪ್ರಶ್ನೆ ಇಲ್ಲ

ತುರ್ತು ಪರಿಸ್ಥಿತಿ ಸಂಬಂಧ ಇಂದಿರಾ ಗಾಂಧಿಯವರನ್ನು ಕರಾಳವಾಗಿ ತೋರಿಸಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್ಸಿನವರು ಮೂರ್ಖರಿದ್ದಾರೆ. ಇಂದಿರಾ ಗಾಂಧಿಯವರು ಈ ದೇಶದ ಪ್ರಧಾನಮಂತ್ರಿ ಆಗಿದ್ದಾಗ 50 ವರ್ಷಗಳ ಹಿಂದೆ ಪ್ರಜಾಪ್ರಭುತ್ವದ ಕಗ್ಗೊಲೆ ಆಗಿತ್ತು. ಎಲ್ಲ ಹಕ್ಕುಗಳನ್ನು ಕಿತ್ತುಕೊಳ್ಳುವ ಕೆಲಸ ಆಗಿತ್ತು. ಅನೇಕರನ್ನು ಜೈಲಿಗೆ ಅಟ್ಟಿದ್ದರು. ಮಾಧ್ಯಮಗಳ ಮೇಲೂ ದಬ್ಬಾಳಿಕೆ ಮಾಡಿದ್ದರು. ಅಂಥ ಕರಾಳ ದಿನವನ್ನು ನಿನ್ನೆ ನೆನಪಿಸುವ ದಿನ. ತುರ್ತು ಪರಿಸ್ಥಿತಿಯಂಥ ಕರಾಳ ದಿನಗಳು ಮತ್ತೆ ಮರುಕಳಿಸಬಾರದು ಎಂಬ ಆಶಯ ಇದರ ಹಿಂದಿದೆ.

ಇಂದಿರಾ ಗಾಂಧಿಯವರು ಪ್ರಧಾನಮಂತ್ರಿ ಆಗಿದ್ದಾಗ ತಮ್ಮ ಕುರ್ಚಿ ಉಳಿಸಿಕೊಳ್ಳುವ ಸಲುವಾಗಿ ಯಾವ ರೀತಿ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಲಾಗಿದೆ ಎಂಬುದನ್ನು ನೆನಪು ಮಾಡಿಕೊಳ್ಳುವ ದಿನ. ಇಂದಿರಾ ಗಾಂಧಿ ಅವರ ನಡವಳಿಕೆ ಹಿಟ್ಲರ್ ನಂತೆ ಎಂದಲ್ಲದೆ ಇನ್ನೇನು ಹೇಳಲು ಸಾಧ್ಯ ಎಂದು ವಿಜಯೇಂದ್ರ ಅವರು ಕೇಳಿದರು.

ನಮ್ಮ ಸಾಮಾಜಿಕ ಜಾಲತಾಣದ ಟ್ವೀಟ್ ಮೇಲಿನ ಸಿದ್ದರಾಮಯ್ಯನವರ ಎಫ್‍ಐಆರ್, ಗೂಂಡಾಗಿರಿಯಂಥ ಗೊಡ್ಡು ಬೆದರಿಕೆಗೆ ಹೆದರುವ ಪ್ರಶ್ನೆಯೇ ಇಲ್ಲ. ಇಂಥ ನೂರು ಎಫ್‍ಐಆರ್ ದಾಖಲಿಸಲಿ. ನಾವು, ನಮ್ಮ ಕಾರ್ಯಕರ್ತರು ಅದನ್ನು ಎದುರಿಸಲು ಸಿದ್ಧ ಎಂದು ತಿಳಿಸಿದರು. ಇಂಥ ದಬ್ಬಾಳಿಕೆ, ಗೂಂಡಾಗರ್ದಿ ನಡೆಯಲು ಸಾಧ್ಯವಿಲ್ಲ ಎಂದು ನುಡಿದರು.

ನಾನು ಕೂಡ ದೆಹಲಿಗೆ ಹೋಗಿದ್ದೆ. ಪಕ್ಷದ ಕೆಲವು ಹಿರಿಯ ನಾಯಕರೂ ದೆಹಲಿಗೆ ಹೋಗಿದ್ದಾರೆ. ಕೆಲವರು ಇನ್ನೂ ವಾಪಸ್ ಬರುವುದು ಬಾಕಿ ಇದೆ ಎಂದರು. ಬಹಳ ಬೆಳವಣಿಗೆ ಆಗುತ್ತಿದೆ ಎಂಬುದು ಕಲ್ಪನೆಗಳು ಅಷ್ಟೇ ಎಂದು ತಿಳಿಸಿದರು.

ದೆಹಲಿಗೆ ನಾನು ವೈಯಕ್ತಿಕ ಕಾರಣಕ್ಕಾಗಿ ಹೋಗಿದ್ದೆ. ರಾಷ್ಟ್ರೀಯ ನಾಯಕರನ್ನಾಗಲೀ, ಯಾರನ್ನೂ ಭೇಟಿ ಮಾಡಿಲ್ಲ. ವೈಯಕ್ತಿಕ ಕೆಲಸಕ್ಕೆ ಹೋಗಿದ್ದೆ. ಅದನ್ನು ಮುಗಿಸಿಕೊಂಡು ಬಂದಿದ್ದೇನೆ ಎಂದು ನುಡಿದರು.

ಆರ್.ಅಶೋಕ್ ಅವರ ಭೇಟಿ ಕುರಿತು ಕೇಳಿದಾಗ, ‘ಅವರು ವಿಪಕ್ಷ ನಾಯಕರಿದ್ದಾರೆ. ವಿಪಕ್ಷ ನಾಯಕರು ದೆಹಲಿಗೆ ಹೋಗಬಾರದು; ನಮ್ಮ ಮುಖಂಡರನ್ನು ಭೇಟಿ ಮಾಡಬಾರದು ಎಂದರೆ..’ ಎಂದು ನಗುತ್ತ ಮರುಪ್ರಶ್ನೆ ಹಾಕಿದರು.

ಆರ್.ಅಶೋಕ್ ಅವರು ವಿಪಕ್ಷ ನಾಯಕರಾಗಿ ಬಹಳ ಸಮರ್ಥವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಅದರ ಬಗ್ಗೆ ಶಾಸಕರಿಗೂ ತೃಪ್ತಿ ಇದೆ. ಆದರೆ, ಮಾಧ್ಯಮದಲ್ಲಿ ವಿಪಕ್ಷ ನಾಯಕರ ಬದಲಾವಣೆ ಬಗ್ಗೆ ಚರ್ಚೆ ಆಗುತ್ತಿದೆ ಎಂಬ ಚರ್ಚೆ ನಡೆದಿದೆ. ಇದು ಖಂಡಿತ ಸರಿಯಲ್ಲ. ಅದರಲ್ಲಿ ಯಾವುದೇ ಸತ್ಯಾಂಶ ಇಲ್ಲ ಎಂದು ಅವರು ಇನ್ನೊಂದು ಪ್ರಶ್ನೆಗೆ ಉತ್ತರ ಕೊಟ್ಟರು.

ಹಿಂದಿನಿಂದ ಅಸಮಾಧಾನ ತೋಡಿಕೊಳ್ಳುತ್ತಿದ್ದವರು ಈಗ ಪಕ್ಷದಿಂದ ಹೊರಗಿದ್ದಾರೆ. ಪಕ್ಷವಿರೋಧಿ ಚಟುವಟಿಕೆ ಮಾಡಿದವರೂ ಪಕ್ಷದಿಂದ ಹೊರಗಿದ್ದಾರೆ. ಇನ್ನೂ ಕೆಲವರು ತಮ್ಮ ಸಣ್ಣಪುಟ್ಟ ಅಭಿಪ್ರಾಯಗಳನ್ನು ತಿಳಿಸಿದ್ದಾರೆ.

ಮೊನ್ನೆ ನಾನು, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು, ಇನ್ನೂ ಕೆಲವು ಮುಖಂಡರು ಏನೇ ಸಮಸ್ಯೆ ಇದ್ದರೂ ಅದನ್ನು ಬಗೆಹರಿಸಬೇಕೆಂದು ಯೋಚಿಸಿದ್ದು, ಈಗಾಗಲೇ ಪ್ರಲ್ಹಾದ್ ಜೋಶಿಯವರು ಜವಾಬ್ದಾರಿ ತೆಗೆದುಕೊಂಡಿದ್ದಾರೆ. ಎಲ್ಲವೂ ಸರಿಯಾಗಲಿದೆ. ಆತಂಕ ಪಡುವ ಯಾವುದೇ ವಿಚಾರ ಇಲ್ಲ ಎಂದು ಮತ್ತೊಂದು ಪ್ರಶ್ನೆಗೆ ಉತ್ತರ ನೀಡಿದರು.

ರಾಜ್ಯದ ಜನರು ಕಾಂಗ್ರೆಸ್ ಸರಕಾರದ ಬಗ್ಗೆ ಛೀ, ಥೂ ಎಂದು ಉಗಿಯುತ್ತಿದ್ದಾರೆ. ಇವತ್ತು ರಾಜ್ಯದ ಮುಖ್ಯಮಂತ್ರಿಗಳು ಬಿ.ಆರ್.ಪಾಟೀಲ್, ರಾಜು ಕಾಗೆಯವರನ್ನು ಕರೆದು ಸಮಾಧಾನ ಪಡಿಸಿದರೆ ಎಲ್ಲವೂ ಸರಿಯಾಗಿದೆ ಎಂದು ಅರ್ಥವೇ ಎಂದು ಪ್ರಶ್ನೆಯನ್ನು ಮುಂದಿಟ್ಟರು.

ಬಿ.ಆರ್.ಪಾಟೀಲ್ ಅವರು ಒಬ್ಬ ಹಿರಿಯ ಶಾಸಕರು; ಬಡವರಿಗೆ ಮನೆ ಕೊಡಲು 10 ಸಾವಿರ ಲಂಚ ಕಿತ್ತುಕೊಳ್ಳುವ ಕುರಿತಂತೆ ನೇರ ಆರೋಪ ಮಾಡಿದ್ದಾರೆ. ಸಚಿವರು ಉಡಾಫೆಯಾಗಿ ಮಾತನಾಡುವುದನ್ನು ಬಿಡಬೇಕೆಂದು ಆಗ್ರಹಿಸಿದರು.

ಇವರ ದರ್ಬಾರ್ ಬಹಳ ದಿನ ನಡೆಯದು..
ಇವರ ಯೋಗ್ಯತೆಗೆ ಅಭಿವೃದ್ಧಿ ಕೆಲಸ ಮಾಡಲು ಆಗುತ್ತಿಲ್ಲ. ಮಳೆ ಹೆಚ್ಚಾಗಿ ರೈತರು ಪರದಾಡುತ್ತಿದ್ದಾರೆ. ಜಿಲ್ಲೆಗಳು- ತಾಲ್ಲೂಕುಗಳಲ್ಲಿ ಗೊಬ್ಬರ ಸರಿಯಾಗಿ ಸಿಗುತ್ತಿಲ್ಲ. ಬಿತ್ತನೆ ಬೀಜವೂ ಸಿಗುತ್ತಿಲ್ಲ. ಇದನ್ನು ಗಮನಿಸುವುದನ್ನು ಬಿಟ್ಟು, ಇವರು ಹುಡುಗಾಟಿಕೆ- ಭ್ರಷ್ಟಾಚಾರ ಮಾಡಿಕೊಂಡು, ಅಧಿಕಾರದ ಅಮಲಿನಲ್ಲಿ ತೇಲುತ್ತಿದ್ದಾರೆ; ಇವರ ದರ್ಬಾರ್ ಬಹಳ ದಿನ ನಡೆಯಲು ಸಾಧ್ಯವಿಲ್ಲ ಎಂದು ಎಚ್ಚರಿಸಿದರು.

ರಾಜಕೀಯ

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ ಸೂಚನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ

“ಧರ್ಮಸ್ಥಳ ವಿಚಾರದಲ್ಲಿ ಸುಳ್ಳು ಆಪಾದನೆ ಮಾಡಿದ್ದರೆ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದುʼ ಎಂದು ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿಯವರೇ ಭರವಸೆ ನೀಡಿದ್ದಾರೆ”; ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="112789"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!