SU Ramesh appointed as Doddaballapura Taluk President of Chalavadi Mahasabha

ಛಲವಾದಿ ಮಹಾಸಭಾದ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್‌ಯು ರಮೇಶ್ ನೇಮಕ

ದೊಡ್ಡಬಳ್ಳಾಪುರ: ಕರ್ನಾಟಕ ರಾಜ್ಯ ಛಲವಾದಿ ಮಹಾಸಭಾದ ದೊಡ್ಡಬಳ್ಳಾಪುರ ತಾಲ್ಲೂಕು ಅಧ್ಯಕ್ಷರಾಗಿ ಎಸ್‌ಯು ರಮೇಶ್ (SU Ramesh) ಅವರನ್ನು ನೇಮಕ ಮಾಡಲಾಗಿದೆ ಎಂದು ಹಿರಿಯ ಮುಖಂಡ ಮರಿಯಪ್ಪ ಅವರು ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ಮಹಾಸಭಾ ವತಿಯಿಂದ ನಡೆದ ಸುದ್ದಿಗೋಷ್ಠಿಯ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಛಲವಾದಿ ಮಹಾಸಭಾ ರಾಜ್ಯಾಧ್ಯಕ್ಷರಾದ ಸಿದ್ದಯ್ಯ ಅವರು ಕಸಬಾ ಹೋಬಳಿ ಸೊಣಪನಹಳ್ಳಿಯ ರಮೇಶ್ ಅವರನ್ನು ದೊಡ್ಡಬಳ್ಳಾಪುರ ತಾಲ್ಲೂಕು ಅಧ್ಯಕ್ಷರಾಗಿ ನೇಮಕ ಮಾಡಿದ್ದು, ತಾಲ್ಲೂಕು ಕಾರ್ಯಕಾರಿ ಸಮಿತಿಯನ್ನು ರಚಿಸಿಕೊಂಡು ಸಮುದಾಯದ ಪರವಾಗಿ ಕೆಲಸ ಮಾಡಲು ಆದೇಶಿಸಿದ್ದಾರೆ.

ರಮೇಶ್ ಅವರಿಗೆ ತಾಲ್ಲೂಕಿನ ಹಿರಿಯರ ಮತ್ತು ಯುವಜನರ ಬೆಂಬಲವಿದೆ. ಒಟ್ಟಾರೆ ಸಮುದಾಯದ ಕೆಲಸವನ್ನು ಅಚ್ಚುಕಟ್ಟಾಗಿ ನಿರ್ವಹಿಸಿಕೊಂಡು ಹೋಗುತ್ತಾರೆ ಎಂಬ ಭರವಸೆ ಇದೆ ಎಂದರು.

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸಮುದಾಯಕ್ಕೆ ಬಲ ತುಂಬಲು ಮಹಾಸಭಾ ರಾಜ್ಯಾಧ್ಯಕ್ಷ ಸಿದ್ದಯ್ಯ‌ ಅವರು ಪತ್ರ ಕೊಟ್ಟಿದ್ದಾರೆ. ತಾಲ್ಲೂಕಿನಲ್ಲಿ ಏನಾದರೂ ಸಾಧನೆ ಮಾಡಬೇಕು ಎಂಬುದು ನಮ್ಮ ಅಭಿಪ್ರಾಯ ಅದನ್ನು ರಮೇಶ್ ಅವರು ಸಮರ್ಥವಾಗಿ ನಿರ್ವಹಿಸ್ತಾರೆ ಎಂಬ ಆಶಯ ನಮ್ಮದು ಎಂದರು.

ಗೂಳ್ಯ ಹನುಮಣ್ಣ ಮಾತನಾಡಿ,
ಕಳೆದ ಐದು ವರ್ಷಗಳಿಂದ ತಾಲ್ಲೂಕಿನಲ್ಲಿ ನಾವು ಮಾಡಿದ ಸಮುದಾಯಪರ ಕೆಲಸ ಮತ್ತು ಹೋರಾಟಗಳನ್ನು ಗುರುತಿಸಿದ ಮಹಾಸಭಾ ರಾಜ್ಯಾಧ್ಯಕ್ಷ ಸಿದ್ದಯ್ಯ ರಮೇಶ್ ಅವರನ್ನು ಕರೆದು ಕರ್ನಾಟಕ ರಾಜ್ಯ ಛಲವಾದಿ ಮಹಾಸಭಾ ತಾಲ್ಲೂಕು ಅಧ್ಯಕ್ಷರಾಗಿ ಕೆಲಸ ಮಾಡುವಂತೆ ತಿಳಿಸಿದ್ದಾರೆ, ರಮೇಶ್ ಅವರೊಟ್ಟಿಗೆ ಸಮುದಾಯವಿದೆ, ಎಲ್ಲರನ್ನೂ ಒಗ್ಗೂಡಿಸಿ ಕೆಲಸ ಮಾಡಿಕೊಂಡು ಹೋಗುತ್ತೇವೆ ಎಂದರು.

ಕಚೇರಿಪಾಳ್ಯ ಮುನಿರಾಜು ಮಾತನಾಡಿ,
ಇತ್ತೀಚಿನ ದಿನಗಳಲ್ಲಿ ನಮ್ಮ ಸಮುದಾಯದ ಕೆಲಸಗಳಲ್ಲಿ ತೊಡಕು ಉಂಟಾಗಿತ್ತು, ಸರ್ಕಾರದಿಂದ ನಮ್ಮ ಸಮುದಾಯದಕ್ಕೆ ಸಿಗಬೇಕಾದ ಸೌಲಭ್ಯಗಳನ್ನ ತಲುಪಿಸುವಲ್ಲಿ ರಮೇಶ್ ಅವರು ಕೆಲಸ ಮಾಡಲಿ ಎಂದು ಮನವಿ‌ ಮಾಡಿದರು.

ಮಹಾಸಭಾದ ನೂತನ ರಮೇಶ್ ಅವರು ಮಾತನಾಡಿ, ನಾನು ಆರಂಭದಿಂದಲೂ ಸಮುದಾಯಕ್ಕಾಗಿ ಶ್ರಮಿಸ್ತಿದ್ದೇನೆ, ತಾಲ್ಲೂಕಿನ ಮುಖಂಡರು ಹಾಗೂ ಯುವ ಜನರ ಸಹಕಾರ ಪಡೆದು ಸಮುದಾಯದ ಪರ ಮತ್ತಷ್ಟು ಕೆಲಸ ಮಾಡುತ್ತೇನೆ ಎಂದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಅಜಯ್, ತಳಗವಾರ ಪುನೀತ್, ಛಲವಾದಿ ಸುರೇಶ್ ಹಮಾಮ್ ಸತೀಶ್, ಮುನಿರಾಜು ಆನಂದ ತಿಮ್ಮರಾಜು ಅಂಜಿನಪ್ಪ ಮುಂತಾದವರು ಇದ್ದರು.

ರಾಜಕೀಯ

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಮಿತ್ರಪಕ್ಷ ಅಧಿಕಾರದಲ್ಲಿರುವ ಆಂಧ್ರಪ್ರದೇಶದ ಹೊರತುಪಡಿಸಿ ದಕ್ಷಿಣ ಭಾರತದ ರಾಜ್ಯಗಳಿಗೆ ನಿರ್ಲಕ್ಷ್ಯ ತೋರಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

[ccc_my_favorite_select_button post_id="119088"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದಂಡುಪಾಳ್ಯ ಗ್ಯಾಂಗ್‌ನ (Dandupalya gang) ಚಿಕ್ಕ ಹನುಮಂತಪ್ಪ (ಅಲಿಯಾಸ್ ಕೆ.ಕೃಷ್ಣಪ್ಪ) ಎಂಬಾತನನ್ನು ಆಂಧ್ರಪ್ರದೇಶದ ಮದನಪಳ್ಳೆ ಗ್ರಾಮದಲ್ಲಿ ಬಂಧಿಸಲಾಗಿದೆ.

[ccc_my_favorite_select_button post_id="118778"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!