ಇಂದು ನಾಡಪ್ರಭು ಕೆಂಪೇಗೌಡರ 516ನೇ ಜಯಂತ್ಯೋತ್ಸವಕ್ಕೆ ಚಾಲನೆ: ಕೆಂಪೇಗೌಡ ಪ್ರಶಸ್ತಿ ಪ್ರಕಟ

Tomorrow, the Nadafrabhu Kempegowda Jyoti Rath Yatra will be held from Devanahalli.

ಬೆಂಗಳೂರು: ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ (Nadaprabhu Kempegowda) 516ನೇ ಜಯಂತಿಯನ್ನು 27ನೇ ಜೂನ್ 2025ರ (ಶುಕ್ರವಾರ) ಆಚರಿಸಲಾಗುತ್ತಿದೆ.

ರಾಜ್ಯಮಟ್ಟದ ಕಾರ್ಯಕ್ರಮವನ್ನು ಡಾ. ಬಾಬು ಜಗಜೀವನ್ ರಾಂ ಭವನ ಹಾಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಬಿಬಿಎಂಪಿ) ಮಟ್ಟದ ಕಾರ್ಯಕ್ರಮವನ್ನು ಬಿಬಿಎಂಪಿ ಕೇಂದ್ರ ಕಛೇರಿಯ ಆವರಣದಲ್ಲಿರುವ ಡಾ.ರಾಜ್ ಕುಮಾರ್ ಗಾಜಿನ ಮನೆಯಲ್ಲಿ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.

7 ಸ್ಥಳಗಳಿಂದ ಪುರ ಜ್ಯೋತಿಗಳು

ಕೆಂಪೇಗೌಡರ ಜಯಂತಿಯ ದಿನದಂದು ಬೆಳಗ್ಗೆ 7.00 ಗಂಟೆಗೆ ನಗರದ ನಾಲ್ಕು ದಿಕ್ಕುಗಳಾದ ಲಾಲ್ ಬಾಗ್, ಮೇಕ್ರಿ ವೃತ್ತ, ಕೆಂಪಾಂಬುದಿ ಕೆರೆ ಹಾಗೂ ಹಲಸೂರು ಗಡಿ ಗೋಪುರಗಳಿಂದ ಹಾಗೂ 3 ಐತಿಹಾಸಿಕ ಸ್ಥಳಗಳಾದ ಮಾಗಡಿ ತಾಲ್ಲೂಕಿನ ಕೆಂಪಾಪುರ, ದೇವನಹಳ್ಳಿ ತಾಲ್ಲೂಕಿನ ಆವತಿ ಹಾಗೂ ಕುಣಿಗಲ್ ತಾಲ್ಲೂಕಿನ ಹುತ್ರಿದುರ್ಗ ಸೇರಿದಂತೆ ಒಟ್ಟು 7 ಸ್ಥಳಗಳಿಂದ ಸಚಿವರುಗಳ ನೇತೃತ್ವದಲ್ಲಿ ಪುರ ಜ್ಯೋತಿಗಳ ಮೆರವಣಿಗೆ ಹೊರಟು, ಸುಮ್ಮನಹಳ್ಳಿ ವೃತ್ತದ ಬಳಿಯ ಹೊರವರ್ತುಲ ರಸ್ತೆ (ಮಾಗಡಿ ರಸ್ತೆ) ಯಲ್ಲಿ ಕೆಂಪೇಗೌಡ ಭವನದ ನಿರ್ಮಾಣ ಸ್ಥಳಕ್ಕೆ 7 ಪುರ ಜ್ಯೋತಿಗಳನ್ನು ಸ್ವೀಕರಿಸಲಾಗುತ್ತದೆ.

ಪ್ರತಿಮೆಗಳಿಗೆ ಪುಷ್ಪ ನಮನ

ಬೆಳಗ್ಗೆ 9.00ಕ್ಕೆ ಅಂತರಾಷ್ಟ್ರಿಯ ವಿಮಾನ ನಿಲ್ದಾಣದ ಹತ್ತಿರ ಸ್ಥಾಪಿಸಿರುವ ನಾಡಪ್ರಭು ಕೆಂಪೇಗೌಡರ ಪ್ರಗತಿಯ ಪ್ರತಿಮೆ

ಬೆಳಗ್ಗೆ 10.30ಕ್ಕೆ ಬಿಬಿಎಂಪಿ ಕೇಂದ್ರ ಕಛೇರಿಯ ಮುಂಭಾಗದಲ್ಲಿರುವ ನಾಡಪ್ರಭು ಕೆಂಪೇಗೌಡರ ಮತ್ತು ಬಿಬಿಎಂಪಿ ಕೇಂದ್ರ ಕಛೇರಿ ಆವರಣದಲ್ಲಿರುವ ಮಹಾತ್ಯಾಗಿ ಲಕ್ಷ್ಮಿದೇವಿ ಪ್ರತಿಮೆ

ಬೆಳಗ್ಗೆ 11.11ಕ್ಕೆ ವಿಧಾನ ಸೌಧ ಮುಂಭಾಗದಲ್ಲಿರುವ ಕೆಂಪೇಗೌಡರ ಪ್ರತಿಮೆ

ಕೆಂಪೇಗೌಡ ಭವನ ನಿರ್ಮಾಣದ ಶಂಕುಸ್ಥಾಪನೆ

ಬೆಂಗಳೂರು ನಗರ ಸುಮ್ಮನಹಳ್ಳಿ ವೃತ್ತದ ಬಳಿಯ ಹೊರವರ್ತುಲ ರಸ್ತೆ (ಮಾಗಡಿ ರಸ್ತೆ) ಯಲ್ಲಿ ಕೆಂಪೇಗೌಡ ಭವನದ ನಿರ್ಮಾಣ ಸ್ಥಳಕ್ಕೆ ಬೆಳಗ್ಗೆ 12.15 ಗಂಟೆಗೆ ಶಂಕುಸ್ಥಾಪನೆ ನೆರವೇರಲಿದೆ.

ರಾಜ್ಯ ಮಟ್ಟದ ಕಾರ್ಯಕ್ರಮ

ಸುಮ್ಮನಹಳ್ಳಿ ಬಳಿಯಿರುವ ಡಾ.ಬಾಬು ಜಗಜೀವನ್ ರಾಂ ಭವನದಲ್ಲಿ ರಾಜ್ಯಮಟ್ಟದ ವೇದಿಕೆ ಕಾರ್ಯಕ್ರಮವು ಅಪರಾಹ್ನ 12.30ಕ್ಕೆ ನಡೆಯಲಿದ್ದು, ಸನ್ಮಾನ್ಯ ಮುಖ್ಯಮಂತ್ರಿಗಳು, ಮಾನ್ಯ ಉಪ ಮುಖ್ಯಮಂತ್ರಿಗಳು, ಮಠಾಧೀಶರುಗಳು, ಮಾನ್ಯ ಸಚಿವರುಗಳು ಹಾಗೂ ಇನ್ನಿತರೆ ಗಣ್ಯರುಗಳು ಕಾರ್ಯಕ್ರಮಕ್ಕೆ‌ ಚಾಲನೆ ನೀಡಲಿದ್ದಾರೆ. ಸದರಿ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ರಾಜ್ಯ ಮಟ್ಟದ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಬಿಬಿಎಂಪಿ ಮಟ್ಟದ ಕಾರ್ಯಕ್ರಮ

ಬಿಬಿಎಂಪಿ ಮಟ್ಟದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮವು ಬಿಬಿಎಂಪಿ ಕೇಂದ್ರ ಕಛೇರಿ ಆವರಣದಲ್ಲಿರುವ ಡಾ.ರಾಜ್ ಕುಮಾರ್ ಗಾಜಿನ ಮನೆಯಲ್ಲಿ ನಡೆಯಲಿದ್ದು, ಸಾಂಸ್ಕೃತಿಕ ಕಾರ್ಯಕ್ರಮವು ಸಂಜೆ 4.30 ರಿಂದ 6.00 ಗಂಟೆಯವರೆಗೆ ನಡೆಯಲಿದ್ದು, ಉಪ ಮುಖ್ಯಮಂತ್ರಿಗಳು, ಮಾನ್ಯ ಸಚಿವರುಗಳು, ಶಾಸಕರುಗಳು ಹಾಗೂ ಇನ್ನಿತರೆ ಗಣ್ಯರುಗಳು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

“ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಪುರಸ್ಕೃತರ ಪಟ್ಟಿ – 2025:

ಇಂದು ನಾಡಪ್ರಭು ಕೆಂಪೇಗೌಡರ 516ನೇ ಜಯಂತ್ಯೋತ್ಸವಕ್ಕೆ ಚಾಲನೆ: ಕೆಂಪೇಗೌಡ ಪ್ರಶಸ್ತಿ ಪ್ರಕಟ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ 516ನೇ ನಾಡಪ್ರಭು ಕೆಂಪೇಗೌಡ ಜಯಂತ್ಯುತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದ್ದು, ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವಂತಹ 53 ಮಂದಿ ನಾಡಪ್ರಭು ಕೆಂಪೇಗೌಡ ಪ್ರಶಸ್ತಿಗೆ ಆಯ್ಕೆಯಾಗಿದೆ.

ಇಂದು ಸಂಜೆ 6.00 ಗಂಟೆಗೆ ಬಿಬಿಎಂಪಿ ಕೇಂದ್ರ ಕಛೇರಿಯ ಡಾ. ರಾಜ್‌ಕುಮಾರ್ ಗಾಜಿನ ಮನೆ ಸಭಾಂಗಣದಲ್ಲಿ ಮುಖ್ಯಮಂತ್ರಿಗಳು, ಉಪ ಮುಖ್ಯಮಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರು ರವರಿಂದ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

ರಾಜಕೀಯ

ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಸಾಹಸದಲ್ಲಿ ಆರ್. ಅಶೋಕ್ ಪುತ್ರ..!

ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಸಾಹಸದಲ್ಲಿ

ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹದ ಸ್ವರಾಜ್ ದ್ವೀಪದಲ್ಲಿ ಭಾರತದ ಸಾಹಸಯಾನದ ಸುವರ್ಣ ಅಧ್ಯಾಯವೊಂದು ಬರೆಯಲ್ಪಟ್ಟಿದೆ. ಸಮುದ್ರದ ಆಳದಲ್ಲಿ ಭಾರತದ ಅತಿ ದೊಡ್ಡ ತ್ರಿವರ್ಣ ಧ್ವಜವನ್ನು (Tricolor flag) ಯಶಸ್ವಿಯಾಗಿ ಅನಾವರಣಗೊಳಿಸುವ ಮೂಲಕ ‘ಗಿನ್ನೆಸ್

[ccc_my_favorite_select_button post_id="121685"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಪರಾರಿಯಾಗಿದ್ದ ವ್ಯಕ್ತಿ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಪರಾರಿಯಾಗಿದ್ದ ವ್ಯಕ್ತಿ ಆತ್ಮಹತ್ಯೆ..!

ಜಿಂಕೆಬಚ್ಚಹಳ್ಳಿಯ ಸಮೀಪ ಶನಿವಾರ ಕಾರೊಂದು (Car) ಅನುಮಾನಾಸ್ಪದ ರೀತಿಯಲ್ಲಿ ಸುಟ್ಟು ಕರಕಲಾಗಿದ್ದು ಅದರೊಳಗೆ ಮಹಿಳೆಯೊಬ್ಬರ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಪರಾರಿಯಾಗಿದ್ದಾರೆ ಎನ್ನಲಾಗಿದ್ದ ವ್ಯಕ್ತಿ, ರೈಲಿಗೆ ಸಿಲುಕಿ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

[ccc_my_favorite_select_button post_id="121661"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]