‘ಪೋಟೋ ಟುಡೇ’: ಹರಿತಲೇಖನಿ ಮುಖ್ಯ ಸಂಪಾದಕ ಸೇರಿ 11 ಮಂದಿ ಪತ್ರಕರ್ತರಿಗೆ “ಕರ್ನಾಟಕ ಛಾಯಾರತ್ನ” ಪ್ರಶಸ್ತಿ

'Photo Today': 11 journalists, including Haritalekhani editor, awarded 'Karnataka Chhaya Ratna'

ಬೆಂಗಳೂರು; ನಗರದ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿರುವ ಅಂತರರಾಷ್ಟ್ರೀಯ ‘ಪೋಟೋ ಟುಡೇ’ (Photo Today) ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಕಾರ್ಮಿಕ ಸಚಿವ ಸಂತೋಷ್ ಲಾಡ್ (Santosh Lad) ಉದ್ಘಾಟಿಸಿದರು.

ಕರ್ನಾಟಕ ವಿಡಿಯೋ ಮತ್ತು ಫೋಟೋ ಅಸೋಷಿಯೇಶನ್, ಬೈಸೇಲ್ ಇನ್‍ಟ್ರಾಕ್ಷನ್ಸ್ ಪ್ರವೈಟ್ ಲಿಮಿಟೆಡ್ ಹಾಗೂ ಕರ್ನಾಟಕ ರಾಜ್ಯ ಪತ್ರಿಕಾ ಛಾಯಾಗ್ರಹಕರು ಸಹಯೋಗದಲ್ಲಿ ‘ಪೋಟೋ ಟುಡೇ’ (Photo TODAY) ಅಂತರರಾಷ್ಟ್ರೀಯ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ಇದೇ ಜೂನ್ 27, 28 ಹಾಗೂ 29ರಂದು ಮೂರು ದಿನಗಳ ಕಾಲ ಛಾಯಾಚಿತ್ರ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜಿಸಲಾಗಿದೆ.

ದೀಪ ಬೆಳಗುವ ಮೂಲಕ ಉದ್ಘಾಟನೆ ಮಾಡಿದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಾತನಾಡಿ, ಸಾಮಾಜಿಕ ಭದ್ರತೆ ಕಾಯ್ದೆ ಅಡಿಯಲ್ಲಿ ನೊಂದಣಿ ಕಾರ್ಯವನ್ನು ಫೋಟೋ ಮತ್ತು ವಿಡಿಯೋ ಛಾಯಾಗ್ರಾಹಕರು ಮಾಡಿಕೊಳ್ಳಬೇಕಿದೆ.

'ಪೋಟೋ ಟುಡೇ': ಹರಿತಲೇಖನಿ ಮುಖ್ಯ ಸಂಪಾದಕ ಸೇರಿ 11 ಮಂದಿ ಪತ್ರಕರ್ತರಿಗೆ "ಕರ್ನಾಟಕ ಛಾಯಾರತ್ನ" ಪ್ರಶಸ್ತಿ

ಇಂತಹ ವಸ್ತು ಪ್ರದರ್ಶನಗಳು ಛಾಯಾಗ್ರಾಹಕರು ಆಧುನಿಕತೆಯ ಉತ್ಪನ್ನಗಳ ಕೊಳ್ಳುವಿಕೆಗೆ ಸಹಕಾರಿಯಾಗಿದ್ದು, ಅತಿ ಹೆಚ್ಚು ಮಂದಿ ಬಳಸಿಕೊಳ್ಳಬೇಕಿದೆ ಎಂದರು.

ಕೊಳಗೇರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಅಬ್ಬಯ್ಯ ಪ್ರಸಾದ್ ಮಾತನಾಡಿ, 25ನೇ ವರ್ಷದ ಈ ಕಾರ್ಯಕ್ರಮ ರಾಷ್ಟ್ರ ಮಟ್ಟದ ಕಾರ್ಯಕ್ರಮಕ್ಕೆ ಕಡಿಮೆ ಇಲ್ಲದಂತೆ ನಡೆಯುತ್ತಿರುವುದು ಪ್ರಶಂಸನೀಯ.

ಲಕ್ಷಾಂತರ ಜನ ಜೀವನ ರೂಪಿಸಿಕೊಳ್ಳಲು ಛಾಯಾಗ್ರಾಹಣ ಕ್ಷೇತ್ರ ಸಹಕಾರಿಯಾಗಿದೆ. ಆಧುನಿಕತೆಗೆ ತಕ್ಕಂತೆ ಛಾಯಾಗ್ರಾಹಕರು ಬದಲಾವಣೆ ಮಾಡಿಕೊಳ್ಳಬೇಕಿದೆ. ಅನೇಕ ಪ್ರತಿಭೆಗಳಿಗೆ ತಮ್ಮ ಜೀವನ ರೂಪಿಸಿಕೊಳ್ಳಲು ಈ ವೇದಿಕೆ ಸಹಕಾರಿಯಾಗಿದೆ.

ಪೋಟೋ ಗ್ರಾಫರ್‌ಗಳಂತಹ ಅಸಂಘಟಿತ ಕಾರ್ಮಿಕರನ್ನು ಗುರುತಿಸಿ ಸರ್ಕಾರದ ಯೋಜನೆ ಒದಗಿಸಲು ಮುಂದಾಗಿರುವ ಸಚಿವರಾದ ಸಂತೋಷ್ ಲಾಡ್ ಕಾರ್ಯ ಪ್ರಶಂಸನೀಯ ಎಂದರು.

'ಪೋಟೋ ಟುಡೇ': ಹರಿತಲೇಖನಿ ಮುಖ್ಯ ಸಂಪಾದಕ ಸೇರಿ 11 ಮಂದಿ ಪತ್ರಕರ್ತರಿಗೆ "ಕರ್ನಾಟಕ ಛಾಯಾರತ್ನ" ಪ್ರಶಸ್ತಿ

ಈ ವೇಳೆ ಮಾಧ್ಯಮ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಹರಿತಲೇಖನಿ (Harithalekhani) ಮುಖ್ಯ ಸಂಪಾದಕ ದೊಡ್ಡಬಳ್ಳಾಪುರ ತಾಲೂಕಿನ ಆರೂಢಿಯ ಸಂತೋಷ್ ಕೆ.ಎಂ., ಹಿಂದೂ (Hindu) ಪತ್ರಿಕೆಯ ಫೋಟೋ ಜರ್ನಲಿಸ್ಟ್ ಬಳ್ಳಾರಿಯ ಶ್ರೀಧರ್ ಕಾವಲಿ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪತ್ರಕರ್ತರಿಗೆ ಕರ್ನಾಟಕ “ಛಾಯಾರತ್ನ ಪ್ರಶಸ್ತಿ” ನೀಡಿ ಸನ್ಮಾನಿಸಲಾಯಿತು.

ಅಲ್ಲದೆ ಛಾಯಾಗ್ರಾಹಕ ಕ್ಷೇತ್ರದಲ್ಲಿ ಶ್ರಮಿಸುತ್ತಿರುವ 5 ಮಂದಿ ಮಹಿಳೆಯರು ಹಾಗೂ 38 ಮಂದಿ ಪುರುಷರನ್ನು ಸನ್ಮಾನಿಸಲಾಯಿತು.

'ಪೋಟೋ ಟುಡೇ': ಹರಿತಲೇಖನಿ ಮುಖ್ಯ ಸಂಪಾದಕ ಸೇರಿ 11 ಮಂದಿ ಪತ್ರಕರ್ತರಿಗೆ "ಕರ್ನಾಟಕ ಛಾಯಾರತ್ನ" ಪ್ರಶಸ್ತಿ

ಕರ್ನಾಟಕ ವಿಡಿಯೋ ಮತ್ತು ಫೋಟೋ ಅಸೋಷಿಯೇಶನ್ ಅಧ್ಯಕ್ಷ ಬೆಂಜಮಿನ್ ಭಾಸ್ಕರ್, ಕಾರ್ಯದರ್ಶಿ ಜಗದೀಶ್, ಉಪಾಧ್ಯಕ್ಷ ಕೃಷ್ಣಪ್ಪ, ದೊಡ್ಡಬಳ್ಳಾಪುರದ ಅಂತರಾಷ್ಟ್ರೀಯ ಛಾಯಾಗ್ರಾಹಕ ಜಿ.ರಾಜು, ದಾವಣಗೆರೆ ಅಧ್ಯಕ್ಷ ಕಿರಣ್ ಬಾಸ್ಕಿ, ವಿಜಯನಗರ ಖಾಜಾಪೀರ್, ತಮಿಳುನಾಡು ಫೋಟೋ ಗ್ರಾಫರ್ ಅಸೋಸಿಯೇಷನ್ ಅಧ್ಯಕ್ಷ ಮುತ್ತುರಾಜ್, ಸೇರಿದಂತೆ ಅನೇಕರು ಹಾಜರಿದ್ದರು.

ಜೂ.27ರ ಆರಂಭವಾಗಿರುವ ‘ಪೋಟೋ ಟುಡೇ’ (Photo TODAY) ಅಂತರರಾಷ್ಟ್ರೀಯ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ಜೂ. 29 ರ ವರೆಗೆ ನಡೆಯಲಿದೆ.

ಕ್ಯಾಮರಾ, ಅಲ್ಬಮ್ ಸಾಫ್ಟ್‌ವೇರ್, ಪ್ರಿಂಟರ್, ಪ್ರೇಮ್, ಲ್ಯಾಮಿನೆಕನ್ ಸೇರಿದಂತೆ ಛಾಯಾಗ್ರಹಣ ಕ್ಷೇತ್ರದ ಹಲವಾರು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದ 200ಕ್ಕೂ ಹೆಚ್ಚು ಕಂಪನಿಗಳು ತಮ್ಮ ವ್ಯಾಪಾರ ವೈವಾಟುಗಳನ್ನು ಮಾಡುವುದರ ಜೊತೆಗೆ 5,000ಕ್ಕೂ ಹೆಚ್ಚು ಛಾಯಾಗ್ರಹಣ ಉಪಕರಣಗಳ ಪ್ರದರ್ಶನ ಹಾಗೂ ಮಾರಾಟ ನಡೆಸಲಿದೆ.

ರಾಜಕೀಯ

ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಸಾಹಸದಲ್ಲಿ ಆರ್. ಅಶೋಕ್ ಪುತ್ರ..!

ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಸಾಹಸದಲ್ಲಿ

ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹದ ಸ್ವರಾಜ್ ದ್ವೀಪದಲ್ಲಿ ಭಾರತದ ಸಾಹಸಯಾನದ ಸುವರ್ಣ ಅಧ್ಯಾಯವೊಂದು ಬರೆಯಲ್ಪಟ್ಟಿದೆ. ಸಮುದ್ರದ ಆಳದಲ್ಲಿ ಭಾರತದ ಅತಿ ದೊಡ್ಡ ತ್ರಿವರ್ಣ ಧ್ವಜವನ್ನು (Tricolor flag) ಯಶಸ್ವಿಯಾಗಿ ಅನಾವರಣಗೊಳಿಸುವ ಮೂಲಕ ‘ಗಿನ್ನೆಸ್

[ccc_my_favorite_select_button post_id="121685"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಪರಾರಿಯಾಗಿದ್ದ ವ್ಯಕ್ತಿ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಪರಾರಿಯಾಗಿದ್ದ ವ್ಯಕ್ತಿ ಆತ್ಮಹತ್ಯೆ..!

ಜಿಂಕೆಬಚ್ಚಹಳ್ಳಿಯ ಸಮೀಪ ಶನಿವಾರ ಕಾರೊಂದು (Car) ಅನುಮಾನಾಸ್ಪದ ರೀತಿಯಲ್ಲಿ ಸುಟ್ಟು ಕರಕಲಾಗಿದ್ದು ಅದರೊಳಗೆ ಮಹಿಳೆಯೊಬ್ಬರ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಪರಾರಿಯಾಗಿದ್ದಾರೆ ಎನ್ನಲಾಗಿದ್ದ ವ್ಯಕ್ತಿ, ರೈಲಿಗೆ ಸಿಲುಕಿ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

[ccc_my_favorite_select_button post_id="121661"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]