
ದೊಡ್ಡಬಳ್ಳಾಪುರ: ಹಿರಿಯ ಅಧಿಕಾರಿಗಳು, ಶಿಕ್ಷಣ ಲಾಖೆ ಹಾಗೂ ಶಿಕ್ಷಕರ ಬೇಸರಕ್ಕೆ ಗುರಿಯಾಗಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿದ್ದ ದೊಡ್ಡಬಳ್ಳಾಪುರ ಕ್ಷೇತ್ರಶಿಕ್ಷಣಾಧಿಕಾರಿ (BEO) ಸೈಯಿದಾ ಅನೀಸ್ ಅವರನ್ನು ದಿಢೀರ್ ವರ್ಗಾವಣೆ ಮಾಡಲಾಗಿದೆ.
ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಮಲ್ಲಿಕಾರ್ಜುನ ರಾಮಚಂದ್ರಪ್ಪ ಅಧಿಸೂಚನೆ ಹೊರಡಿಸಿದ್ದಾರೆ.
ಇದರನ್ವಯ ದೊಡ್ಡಬಳ್ಳಾಪುರ ಕ್ಷೇತ್ರಶಿಕ್ಷಣಾಧಿಕಾರಿಯಾಗಿದ್ದ ಸೈಯಿದಾ ಅನೀಸ್ ಅವರನ್ನು ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಬಿಇಒ ಆಗಿ ವರ್ಗಾವಣೆ ಮಾಡಲಾಗಿದೆ.
ಉಳಿದಂತೆ ಆದೇಶ ಪತ್ರದಲ್ಲಿ 21 ಮಂದಿ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದ್ದು, ಸೈಯಿದಾ ಅನೀಸ್ ವರ್ಗಾವಣೆಯಿಂದ ತೆರವಾದ ದೊಡ್ಡಬಳ್ಳಾಪುರ ಬಿಇಒ ಸ್ಥಾನಕ್ಕೆ ನೇಮಕ ಮಾಡಿಲ್ಲ.

