
ಭುವನೇಶ್ವರ: ಒಡಿಶಾದ ಪುರಿಯಲ್ಲಿ ನಡೆಯುತ್ತಿದ್ದ ವಿಶ್ವವಿಖ್ಯಾತ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ ಸಂಭವಿಸಿದ್ದು (Puri stampede), 554ಕ್ಕೂ ಹೆಚ್ಚು ಭಕ್ತರು ಅಸ್ವಸ್ಥಗೊಂಡಿದ್ದು, 50ಕ್ಕೂ ಹೆಚ್ಚು ಭಕ್ತರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.
ಜಗನ್ನಾಥ ದೇವರು ಮತ್ತು ಅವರ ಅಣ್ಣ ಬಲಭದ್ರ ಮತ್ತು ತಂಗಿ ದೇವಿ ಸುಭದ್ರಾ ದೇವಿಯ ರಥಯಾತ್ರೆಯ ಸಂದರ್ಭದಲ್ಲಿ ಜನದಟ್ಟಣೆ ಹೆಚ್ಚಾಗಿದ್ದರಿಂದ ಕಾಲ್ತುಳಿತ ಸಂಭವಿಸಿದ್ದು, 581ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ.
ಅಸ್ವಸ್ಥ ಭಕ್ತರನ್ನು ಸ್ಥಳೀಯ ಆಸತ್ರೆಗಳಿಗೆ ದಾಖಲಿಸಿ ಚಿಕಿತ್ಸೆಗಾಗಿ ದಾಖಲಿಸ ಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಅಂಬುಲೆನ್ ಗಳು ರಥಯಾತ್ರೆ ಸ್ಥಳಕ್ಕೆ ತಲುಪಿವೆ.
ಸಂತ್ರಸ್ತರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉಳಿದವರಿಗೂ ಅಗತ್ಯ ವೈದ್ಯಕೀಯ ನೆರವು ನೀಡಲಾಗಿದೆ.
ಬಲಭದ್ರನ ತಾಳಧ್ವಜ ರಥ ಎಳೆಯುವ ವೇಳೆ ವಿಳಂಬವಾಗಿತ್ತು. ಇದರಿಂದ ರಥಯಾತ್ರೆ ಮಾರ್ಗದ ತಿರುವಿನಲ್ಲಿ ಬಹಳಷ್ಟು ಭಾರೀ ಸಂಖ್ಯೆಯಲ್ಲಿ ಜನರು ನೆರೆದಿದ್ದರು. ಈ ವೇಳೆ ರಥ ನಿಂತಿದ್ದರಿಂದ ಕಾಲ್ತುಳಿತ ಸಂಭವಿಸಿತು ಎಂದು ಹೇಳಲಾಗುತ್ತಿದೆ.
ಈ ಸಂಬಂಧ ಪ್ರತಿಕ್ರಿಯಿಸಿರುವ ಒಡಿಶಾ ಸಚಿವ ಮುಖೇಶ್ ಮಹಾಲಿಂಗ, ಕಾಲ್ತುಳಿತ ಘಟನೆ ನಿಜಕ್ಕೂ ಆಘಾತಕಾರಿಯಾಗಿದೆ. ರಕ್ಷಣಾ ತಂಡವು ಕೂಡಲೇ ನೆರವಿಗೆ ಧಾವಿಸಿ ಸಂತ್ರಸ್ತರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳದಲ್ಲಿ ಆರೋಗ್ಯ ಕೇಂದ್ರಗಳನ್ನೂ ಸ್ಥಾಪಿಸಲಾಗಿದೆ. ನೀರು ಮತ್ತು ಗ್ಲಕೋಸ್‌ಗೆ ವ್ಯವಸ್ಥೆ ಮಾಡಲಾಗಿದೆ. ಆಸ್ಪತ್ರೆಗೆ ಭೇಟಿ ನೀಡಿ ಭಕ್ತರ ಆರೋಗ್ಯ ವಿಚಾರಿಸುತ್ತೇನೆ ಎಂದು ತಿಳಿಸಿದ್ದಾರೆ.

