ಈ ಬಾರಿಯ ದಸರಾ ಆಚರಣೆಯನ್ನು ಹೊಸ ಮುಖ್ಯಮಂತ್ರಿ ಮಾಡಲಿದ್ದಾರೆ; ಆರ್‌.ಅಶೋಕ

Padayatra of Rahul Gandhi who has less intelligence: R. Ashoka

ಮೈಸೂರು: ಮಾಜಿ ಪ್ರಧಾನಿ ಇಂದಿರಾಗಾಂಧಿ ಹೇರಿದ ತುರ್ತು ಪರಿಸ್ಥಿತಿಯನ್ನು ಕಾಂಗ್ರೆಸ್‌ ಪಕ್ಷ ಸಮರ್ಥನೆ ಮಾಡುತ್ತದೆಯೇ ಅಥವಾ ವಿರೋಧ ಮಾಡುತ್ತದೆಯೇ ಎಂದು ಸ್ಪಷ್ಟನೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R.Ashoka) ಆಗ್ರಹಿಸಿದರು.

ತುರ್ತು ಪರಿಸ್ಥಿತಿ ಹೇರಿಕೆಗೆ 50 ವರ್ಷ ಸಂದ ಪ್ರಯುಕ್ತ, ಮೈಸೂರಿನ ವಿಜಯನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಾಂಗ್ರೆಸ್‌ ನಾಯಕರಿಗೆ ಸಂವಿಧಾನದ ಬಗ್ಗೆ ಗೌರವ ಇದ್ದರೆ, ಜನರ ಮುಂದೆ ಕ್ಷಮೆ ಕೇಳಬೇಕು. ತುರ್ತು ಪರಿಸ್ಥಿತಿಯಲ್ಲಿ ಲಕ್ಷಾಂತರ ಜನರನ್ನು ಜೈಲಿಗಟ್ಟಿದ್ದರು. ಜೈಲಿನಲ್ಲಿ ಅನೇಕ ಹೋರಾಟಗಾರರು ಸತ್ತಿದ್ದರು. ಇವ್ಯಾವುದಕ್ಕೂ ಕಾಂಗ್ರೆಸ್‌ ಈವರೆಗೆ ಉತ್ತರ ನೀಡಿಲ್ಲ. ತುರ್ತು ಪರಿಸ್ಥಿತಿಯನ್ನು ಬೆಂಬಲಿಸುತ್ತಾರೆಯೇ ಎಂದಾದರೂ ಸ್ಪಷ್ಟನೆ ನೀಡಲಿ. ಏನೂ ಹೇಳದೆ ಕಳ್ಳಾಟ ಆಡುವುದು ಸರಿಯಲ್ಲ. ಈ ಐವತ್ತು ವರ್ಷದಲ್ಲಿ ತುರ್ತು ಪರಿಸ್ಥಿತಿ ತಪ್ಪು ಎಂದು ಯಾವುದೇ ಕಾಂಗ್ರೆಸ್‌ ನಾಯಕರು ಹೇಳಿಲ್ಲ ಎಂದರು.

ಇಂದಿರಾಗಾಂಧಿ ಚುನಾವಣೆಯಲ್ಲಿ ಮೋಸ ಮಾಡಿದ್ದಾರೆ ಎಂದು ಕೋರ್ಟ್‌ನಲ್ಲಿ ತೀರ್ಪು ಬಂದು ಸದಸ್ಯತ್ವ ರದ್ದಾಗಿತ್ತು. ಅದಾದ ನಂತರ ಇಂದಿರಾಗಾಂಧಿ ಪ್ರಧಾನಿ ಸ್ಥಾನ ಉಳಿಸಿಕೊಳ್ಳಲು ತುರ್ತು ಪರಿಸ್ಥಿತಿ ಹೇರಿದರು. ಆದರೆ ಕಾಂಗ್ರೆಸ್‌ ನಾಯಕರು, ಇಂಡಿಯಾ ಎಂದರೆ ಇಂದಿರಾ ಎನ್ನುವಂತಹ ಪರಿಸ್ಥಿತಿಯನ್ನು ತಂದಿದ್ದರು. ನಮ್ಮಲ್ಲಿ ಸಂವಿಧಾನಕ್ಕಿಂತ ಬೇರಾವುದೂ ದೊಡ್ಡದಲ್ಲ ಎಂದು ಗೊತ್ತಾದಾಗ ಇಂದಿರಾಗಾಂಧಿ ಇಂತಹ ಕೆಲಸ ಮಾಡಿದರು. ಅದಕ್ಕಾಗಿ ಸಂವಿಧಾನ ತಿದ್ದುಪಡಿಯನ್ನೂ ಮಾಡಿಬಿಟ್ಟರು ಎಂದು ದೂರಿದರು.

ಆ ಸಮಯದಲ್ಲಿ ಅಟಲ್‌ ಬಿಹಾರಿ ವಾಜಪೇಯಿ, ಎಲ್‌.ಕೆ.ಅಡ್ವಾಣಿ ಮೊದಲಾದ ನಾಯಕರನ್ನು ಜೈಲಿಗೆ ಹಾಕಲಾಗಿತ್ತು. ನಾನು ಕೂಡ ಬೆಂಗಳೂರಿನ ಜೈಲಿನಲ್ಲಿ ಒಂದು ತಿಂಗಳು ಇದ್ದೆ. ಆಗ ಇಂದಿರಾ ಎಂದು ಹೇಳಿದರೆ ಪೊಲೀಸರು ಬಂಧಿಸುತ್ತಿದ್ದರು. ನನ್ನನ್ನು ಹಾಗೂ ತಮ್ಮನನ್ನು ಹಾಗೂ ಶಾಸಕ ಸುರೇಶ್‌ಕುಮಾರ್‌ ಅವರನ್ನು ಪೊಲೀಸರು ಬಂಧಿಸಿ ಹೊಡೆದಿದ್ದರು. ನಾನು ಆಗ ಕಾಲೇಜು ವಿದ್ಯಾರ್ಥಿಯಾಗಿದ್ದೆ ಎಂದು ನೆನಪಿಸಿಕೊಂಡರು.

ದೇಶಪ್ರೇಮಿ ಎಂದು ಹೇಳಿಕೊಳ್ಳುವ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಮಾತನಾಡಬೇಕು. ಆಗ ಪ್ರಗತಿಪರರು ಏನು ಮಾಡುತ್ತಿದ್ದರು ಎಂದು ಉತ್ತರಿಸಬೇಕು. ನಾವು ಸ್ವಾತಂತ್ರ್ಯ ಹೋರಾಟ ಮಾಡಿದ್ದೇವೆಂದು ಹೇಳಿಕೊಳ್ಳುವ ಇವರು ಯಾರೂ ಹೋರಾಟ ಮಾಡಿಲ್ಲ. ಆಗಿನ ಕಾಂಗ್ರೆಸ್ಸೇ ಬೇರೆ, ಈಗಿನ ಕಾಂಗ್ರೆಸ್ಸೇ ಬೇರೆ. ಈಗಿನದ್ದು ನಕಲಿ ಕಾಂಗ್ರೆಸ್‌. ಇವರೆಲ್ಲರೂ ಒಂದು ಕುಟುಂಬಕ್ಕೆ ನಿಷ್ಠರಾಗಿದ್ದಾರೆ. ಆ ವಂಶಕ್ಕೆ ಸಲಾಂ ಹೊಡೆಯುವುದು ಈಗಿನ ನಾಯಕರಿಗೆ ರೂಢಿಯಾಗಿದೆ ಎಂದರು.

ಪ್ರಧಾನಿ ಮೋದಿ ಬಗ್ಗೆ ಟೀಕೆ

ಕಾಂಗ್ರೆಸ್‌ ಅಧಿಕಾರದಲ್ಲಿದ್ದರೆ ಅಪಾಯಕಾರಿ, ಆದರೆ ಅಧಿಕಾರದಲ್ಲಿ ಇಲ್ಲವಾದರೆ ಇನ್ನಷ್ಟು ಅಪಾಯಕಾರಿ ಎಂದು ಅಟಲ್‌ ಬಿಹಾರಿ ವಾಜಪೇಯಿ ಹೇಳಿದ್ದರು. ಪ್ರಧಾನಿ ನರೇಂದ್ರ ಮೋದಿ ಸರ್ವಾಧಿಕಾರಿ ಎಂದು ಹೇಳುತ್ತಾರೆ. ಆದರೆ ಇದೇ ಕಾಂಗ್ರೆಸ್‌ನವರು ತುರ್ತು ಪರಿಸ್ಥಿತಿ ಹೇರಿದ್ದರು. ಆಗಿನಂತೆ ಈಗ ಯಾವ ಪತ್ರಿಕೆ ಮುಚ್ಚಿದ್ದಾರೆ, ನ್ಯಾಯಾಂಗದ ಮೇಲೆ ಎಲ್ಲಿ ಒತ್ತಡ ಹೇರಿದ್ದಾರೆ, ಯಾವಾಗ ಚುನಾವಣೆ ಮುಂದೂಡಿದ್ದಾರೆ ಎಂದು ತಿಳಿಸಲಿ ಎಂದರು.

ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ ಎಂದು ಸಿಎಂ ಸಿದ್ದರಾಮಯ್ಯ ಹೇಳುತ್ತಾರೆ. ಇವರು ಮಕ್ಕಳು ಚುನಾವಣೆಯಲ್ಲಿ ನಿಲ್ಲುವುದನ್ನು ಯಾರೂ ತಡೆದಿಲ್ಲ. ವಿದೇಶಕ್ಕೆ ಹೋಗಿ ದೇಶದ ಬಗ್ಗೆ ಕೆಟ್ಟದಾಗಿ ಮಾತಾಡುವುದನ್ನೂ ಯಾರೂ ತಡೆದಿಲ್ಲ. ಪತ್ರಿಕೆಯಲ್ಲಿ ಏನು ಬರೆಯಬೇಕೆಂದು ಆಗ ಪೊಲೀಸರು ತೀರ್ಮಾನ ಮಾಡುತ್ತಿದ್ದರು. ಈಗ ಅಂತಹ ಯಾವುದೇ ಪರಿಸ್ಥಿತಿ ಇಲ್ಲ ಎಂದರು.

ಬಿಜೆಪಿಯಿಂದ ಸಂವಿಧಾನ ಬದಲಾಗುತ್ತದೆ ಎಂದು ಟೀಕಿಸುತ್ತಾರೆ. ಆದರೆ ತುರ್ತು ಪರಿಸ್ಥಿತಿಗಾಗಿ ಕಾಂಗ್ರೆಸ್‌ನವರೇ ಸಂವಿಧಾನ ತಿದ್ದುಪಡಿ ಮಾಡಿದ್ದರು. ಡಾ.ಬಿ.ಆರ್‌.ಅಂಬೇಡ್ಕರ್‌ ಕಾಂಗ್ರೆಸ್‌ನವರ ಮನೆ ಆಸ್ತಿ ಎಂದುಕೊಂಡಿದ್ದಾರೆ. ಅಂಬೇಡ್ಕರ್‌ ಸತ್ತಾಗ ಅವರ ಸಮಾಧಿಗೆ ಜಾಗ ನೀಡಲಿಲ್ಲ. ಇಂದಿರಾಗಾಂಧಿ ಕುಟುಂಬದವರು ಸತ್ತಾಗ ಮಾತ್ರ ಸಮಾಧಿಗೆ ಜಾಗ ನೀಡಿದ್ದರು. ಮೊದಲ ಬಾರಿಗೆ ಬಿಜೆಪಿ ಅಧಿಕಾರಕ್ಕೆ ಬಂದಾಗ ಅಂಬೇಡ್ಕರ್‌ಗೆ ಭಾರತರತ್ನ ನೀಡಲಾಯಿತು. ಈ ಎಲ್ಲ ವಿಷಯಗಳನ್ನು ಜನರಿಗೆ ತಿಳಿಸಬೇಕು ಎಂದರು.

ಸೆಪ್ಟೆಂಬರ್‌ನಲ್ಲಿ ಸಿಎಂ ಕುರ್ಚಿ ಬದಲಾಗಲಿದೆ. ಕ್ರಾಂತಿ ನಡೆಯಲಿದೆ ಎಂದು ಸಚಿವರೇ ಹೇಳುತ್ತಿದ್ದು, ಇಡೀ ಕಾಂಗ್ರೆಸ್‌ ಒಡೆದ ಮನೆಯಾಗಿದೆ. ಈ ಬಾರಿಯ ದಸರಾ ಆಚರಣೆಯನ್ನು ಹೊಸ ಮುಖ್ಯಮಂತ್ರಿ ಮಾಡಲಿದ್ದಾರೆ ಎಂದರು.

ರಾಜಕೀಯ

ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಸಾಹಸದಲ್ಲಿ ಆರ್. ಅಶೋಕ್ ಪುತ್ರ..!

ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಸಾಹಸದಲ್ಲಿ

ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹದ ಸ್ವರಾಜ್ ದ್ವೀಪದಲ್ಲಿ ಭಾರತದ ಸಾಹಸಯಾನದ ಸುವರ್ಣ ಅಧ್ಯಾಯವೊಂದು ಬರೆಯಲ್ಪಟ್ಟಿದೆ. ಸಮುದ್ರದ ಆಳದಲ್ಲಿ ಭಾರತದ ಅತಿ ದೊಡ್ಡ ತ್ರಿವರ್ಣ ಧ್ವಜವನ್ನು (Tricolor flag) ಯಶಸ್ವಿಯಾಗಿ ಅನಾವರಣಗೊಳಿಸುವ ಮೂಲಕ ‘ಗಿನ್ನೆಸ್

[ccc_my_favorite_select_button post_id="121685"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಪರಾರಿಯಾಗಿದ್ದ ವ್ಯಕ್ತಿ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಪರಾರಿಯಾಗಿದ್ದ ವ್ಯಕ್ತಿ ಆತ್ಮಹತ್ಯೆ..!

ಜಿಂಕೆಬಚ್ಚಹಳ್ಳಿಯ ಸಮೀಪ ಶನಿವಾರ ಕಾರೊಂದು (Car) ಅನುಮಾನಾಸ್ಪದ ರೀತಿಯಲ್ಲಿ ಸುಟ್ಟು ಕರಕಲಾಗಿದ್ದು ಅದರೊಳಗೆ ಮಹಿಳೆಯೊಬ್ಬರ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಪರಾರಿಯಾಗಿದ್ದಾರೆ ಎನ್ನಲಾಗಿದ್ದ ವ್ಯಕ್ತಿ, ರೈಲಿಗೆ ಸಿಲುಕಿ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

[ccc_my_favorite_select_button post_id="121661"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]