ಬೆಂಗಳೂರಿನ ಕೇಂದ್ರೀಯ ಉತ್ಪಾದನಾ ತಂತ್ರಜ್ಞಾನ ಸಂಸ್ಥೆಗೆ (CMTI) ಹೆಚ್.ಡಿ.ಕುಮಾರಸ್ವಾಮಿ ಭೇಟಿ

H.D.Kumaraswamy visit to Central Manufacturing Technology Institute (CMTI), Bangalore

ಬೆಂಗಳೂರು: ದೇಶೀಯ ವಿಜ್ಞಾನಿಗಳು, ತಂತ್ರಜ್ಞರ ಸಾಧನೆ, ಹೆಗ್ಗಳಿಕೆ ಏನು ಎಂಬುದು ಆಪರೇಶನ್ ಸಿಂಧೂರದ ಮೂಲಕ ಜಗತ್ತಿಗೆ ಗೊತ್ತಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ಹೇಳಿದರು.

ಬೆಂಗಳೂರಿನ ತುಮಕೂರು ರಸ್ತೆಯಲ್ಲಿ ಕೇಂದ್ರೀಯ ಉತ್ಪಾದನಾ ತಂತ್ರಜ್ಞಾನ ಸಂಸ್ಥೆಯ 64ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬರುವ ಮೊದಲು ಅನೇಕ ವಿಷಯಗಳಲ್ಲಿ ನಾವು ವಿದೇಶಗಳನ್ನು ಅವಲಂಬಿಸಬೇಕಾಗಿತ್ತು. ಆ ನಂತರ ಅಂತಹ ಪರಿಸ್ಥಿತಿ ಬದಲಾಗಿದ್ದು, ಪ್ರತಿಯೊಂದು ಸ್ವದೇಶಿಯವಾಗಿಯೇ ಉತ್ಪಾದನೆ ಮಾಡಲಾಗುತ್ತಿದೆ ಎಂದರು.

ರಕ್ಷಣಾ ಪಡೆಗಳಿಗೆ ಅಗತ್ಯವಾದ ಅನೇಕ ಶಸ್ತ್ರಾಸ್ತ್ರಗಳನ್ನು ಮೇಕ್ ಇನ್ ಇಂಡಿಯಾ, ಆತ್ಮನಿರ್ಭರ್ ಭಾರತ ಕಾರ್ಯಕ್ರಮಗಳ ಮೂಲಕ ತಯಾರು ಮಾಡಲಾಗುತ್ತಿದೆ. ಭಾರತ ಇಂದು ರಕ್ಷಣಾ ವಲಯದಲ್ಲಿ ಸಶಕ್ತ, ಬಲಿಷ್ಠ ದೇಶವಾಗಿ ಹೊರಹೊಮ್ಮಿದೆ. ಅದಕ್ಕೆ ಮೋದಿ ಅವರ ದೂರದೃಷ್ಟಿ ಹಾಗೂ ನಮ್ಮ ವಿಜ್ಞಾನಿಗಳು, ತಂತ್ರಜ್ಞರು ಕಾರಣ ಎಂದು ಸಚಿವರು ಹೇಳಿದರು.

ಪ್ರತಿಭಾವಂತ ಯುವಕರು, ಯುವತಿಯರ ದುಡಿಮೆಯ ಫಲದಿಂದ ನಮ್ಮ ದೇಶದಲ್ಲಿ ತಯಾರು ಮಾಡಿರುವ ಯುದ್ಧದ ಉಪಕರಣಗಳು ಜಗತ್ತಿನ ಬೇರೆ ಯಾವ ದೇಶಕ್ಕೂ ಕಡಿಮೆ ಇಲ್ಲ. ಎಲ್ಲರಿಗೂ ಸರಿಸಾಟಿ ಆಗುವಂತಹ ಅಸ್ತ್ರಗಳು ನಮ್ಮ ಬತ್ತಳಿಕೆಯಲ್ಲಿ ಇವೆ ಎಂದರೆ ಅದಕ್ಕೆ ನಿಮ್ಮೆಲ್ಲರ ಶ್ರಮವೇ ಕಾರಣ ಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.

ನಮ್ಮ ಶಸ್ತ್ರಾಸ್ತ್ರಗಳ ಶಕ್ತಿ ಏನು ಎಂಬುದು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಇತ್ತೀಚೆಗೆ ನಡೆದ ಅಪಪರೇಶನ್ ಸಿಂಧೂರ ಜಗತ್ತಿಗೆ ತೋರಿಸಿಕೊಟ್ಟಿದೆ ಎಂದು ಸಚಿವರು ಹೇಳಿದರು.

ಸೆಮಿಕಂಡಕ್ಟರ್ ಕ್ಷೇತ್ರಕ್ಕೆ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ) ದೊಡ್ಡ ಮಟ್ಟದಲ್ಲಿ ಸಂಶೋಧನೆ ನಡೆಸುತ್ತಿದೆ. ಸೆಮಿಕಂಡಕ್ಟರ್ ಹಾಗೂ ಕೃತಕ ಬುದ್ಧಿಮತ್ತೆ ಕ್ಷೇತ್ರಗಳಿಗೆ ಬೆಂಗಳೂರು ನೆಚ್ಚಿನ ತಾಣವಾಗಿದೆ. ಸಮರ್ಪಕ ಮಾನವ ಸಂಪನ್ಮೂಲ ಹಾಗೂ ಅದಕ್ಕೆ ಬೇಕಾದ ಪೂರಕ ವ್ಯವಸ್ಥೆ ಇರುವುದರಿಂದ ಈ ಕ್ಷೇತ್ರಗಳಿಗೆ ಬೆಂಗಳೂರಿನಲ್ಲಿ ಭಾರೀ ಅವಕಾಶಗಳು ಇವೆ ಎಂದು ಇದೇ ಸಂದರ್ಭದಲ್ಲಿ ಸಚಿವರು ಹೇಳಿದರು.

ಕೇಂದ್ರೀಯ ಉತ್ಪಾದನಾ ತಂತ್ರಜ್ಞಾನ ಸಂಸ್ಥೆ ಕೇಂದ್ರದ ಸರ್ಕಾರದ ಬೃಹತ್ ಕೈಗಾರಿಕೆ ಸಚಿವಾಲಯದ ಅಧೀನದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಸಂಸ್ಥೆ ಆಗಿದೆ. ರಕ್ಷಣೆ, ಬಾಹ್ಯಾಕಾಶ ಸೇರಿದಂತೆ ವಿವಿಧ ಕೈಗಾರಿಕೆ ಅಗತ್ಯಗಳಿಗೆ ತಕ್ಕಂತೆ ಇಲ್ಲಿ ಉತ್ಪಾದನೆ ನಡೆಯುತ್ತಿದೆ. ಅನೇಕ ಯುವ ವಿಜ್ಞಾನಿಗಳು, ತಂತ್ರಜ್ಞರು ಇಲ್ಲಿ ರಾಷ್ಟ್ರ ನಿರ್ಮಾಣಕ್ಕಾಗಿ ಕೆಲಸ ಮಾಡುತ್ತಿರುವುದು ನನಗೆ ಸಂತೋಷ ಉಂಟು ಮಾಡಿದೆ ಎಂದು ಸಚಿವರು ಹೇಳಿದರು.

ಸಿಎಂಟಿಐ ಆಡಳಿತ ಮಂಡಳಿ ಅಧ್ಯಕ್ಷ ಕ್ರಿಸ್ ಗೋಪಾಲಕೃಷ್ಣನ್, ನಿರ್ದೇಶಕ ಡಾ. ನಾಗಹನುಮಯ್ಯ ಮುಂತಾದವರು ವೇದಿಕೆಯಲ್ಲಿದ್ದರು.

ಸಮಾರಂಭದ ನಂತರ ಕೇಂದ್ರ ಸಚಿವರು ‘ ಪ್ರಮಾಣೀಕೃತ ಉಲ್ಲೇಖ ಧಾತು ಸೌಲಭ್ಯ’ ಕೇಂದ್ರವನ್ನು ಉದ್ಘಾಟಿಸಿದರು. ಇದಾದ ಮೇಲೆ ಏರೋಸ್ಪೇಸ್ ಪ್ರಯೋಗಾಲಯ, ಸಂವೇದಕ ತಂತ್ರಜ್ಞಾನ ಅಭಿವೃದ್ಧಿ ಕೇಂದ್ರ ಸೇರಿ ವಿವಿಧ ವಿಭಾಗಗಳಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.

ರಾಜಕೀಯ

ದೊಡ್ಡಬಳ್ಳಾಪುರ: LPG ಬೆಲೆ ಏರಿಕೆ ಬಗ್ಗೆ ಕೇಳ್ತಿದ್ದಂತೆ ಕಾಲ್ಕಿತ್ತ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ದೊಡ್ಡಬಳ್ಳಾಪುರ: LPG ಬೆಲೆ ಏರಿಕೆ ಬಗ್ಗೆ ಕೇಳ್ತಿದ್ದಂತೆ ಕಾಲ್ಕಿತ್ತ ಕೇಂದ್ರ ಸಚಿವೆ ಶೋಭಾ

ವಿವಿಧ ರಾಜ್ಯಗಳ ಚುನಾವಣೆಗಳು ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್‌ಪಿಜಿ (LPG) ಸಿಲಿಂಡರ್‌ಗಳ ಬೆಲೆಯನ್ನು ಏಕಾಏಕಿ ರೂ.993 ಹೆಚ್ಚಳ ಮಾಡಿರುವ ಕುರಿತು ದೇಶಾದ್ಯಂತ ಆಕ್ರೋಶ ತೀವ್ರಗೊಂಡಿವೆ. ಈ ಕುರಿತು ಪ್ರತಿಕ್ರಿಯೆ ಕೇಳುತ್ತಿದ್ದಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

[ccc_my_favorite_select_button post_id="121678"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಪರಾರಿಯಾಗಿದ್ದ ವ್ಯಕ್ತಿ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಪರಾರಿಯಾಗಿದ್ದ ವ್ಯಕ್ತಿ ಆತ್ಮಹತ್ಯೆ..!

ಜಿಂಕೆಬಚ್ಚಹಳ್ಳಿಯ ಸಮೀಪ ಶನಿವಾರ ಕಾರೊಂದು (Car) ಅನುಮಾನಾಸ್ಪದ ರೀತಿಯಲ್ಲಿ ಸುಟ್ಟು ಕರಕಲಾಗಿದ್ದು ಅದರೊಳಗೆ ಮಹಿಳೆಯೊಬ್ಬರ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಪರಾರಿಯಾಗಿದ್ದಾರೆ ಎನ್ನಲಾಗಿದ್ದ ವ್ಯಕ್ತಿ, ರೈಲಿಗೆ ಸಿಲುಕಿ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

[ccc_my_favorite_select_button post_id="121661"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]