ಚಿಕ್ಕಬಳ್ಳಾಪುರದಲ್ಲಿ ಸುಧಾಕರ್‌ನ ಸೋಲಿಸಲು ವಿಜಯೇಂದ್ರ ಚೇಲಾಗಳಿಂದ ಯತ್ನ; ಬಿಜೆಪಿ ಉಳಿಸಿ ಎಂದು ಯತ್ನಾಳ್ ಆಗ್ರಹ

Vijayendra Chelas attempt to defeat Sudhakar in Chikkaballapur; Yatnal

ವಿಜಯಪುರ: ಮತ್ತೆ ವಿಜಯೇಂದ್ರನ (B.Y.Vijayendra) ಅಧ್ಯಕ್ಷನಾಗಿ ಮಾಡಿದರೆ ಕರ್ನಾಟಕ ಬಿಜೆಪಿ ಬಾಂಬ್ ಕಟ್ಟಿಕೊಂಡು ಆತ್ಮಾಹುತಿ ಮಾಡಿಕೊಂಡಂತೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagowda Patil Yatnal) ಹೇಳಿದ್ದಾರೆ.

ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ಬಿ.ವೈ.ವಿಜಯೇಂದ್ರ ಒಳ ಒಪ್ಪಂದದಿಂದ,10 ಕ್ಷೇತ್ರಗಳಲ್ಲಿ ಹೀನಾಯವಾಗಿ ಸೋತಿದ್ದೇವೆ.

ಚಾಮರಾಜನಗರ, ತುಮಕೂರು, ಚಿಕ್ಕಬಳ್ಳಾಪುರ, ಕಲಬುರ್ಗಿ, ಬೀದರ್, ರಾಯಚೂರು, ಕೊಪ್ಪಳ, ದಾವಣಗೆರೆ ಸೇರಿದಂತೆ 10 ಜಿಲ್ಲೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಲು ವಿಜಯೇಂದ್ರನ ಸೂಚನೆ ಮೇರೆಗೆ ಚೇಲಾಗಳು ಶ್ರಮಿಸಿದ್ದಾರೆ.

ಕೊಪ್ಪಳದಲ್ಲಿ ಬಿ.ವೈ.ವಿಜಯೇಂದ್ರ ಒಬ್ಬ ಚೇಲಾ ಇದ್ದಾನೆ ಆತ ರಾಘವೇಂದ್ರ ಹಿಟ್ನಾಳ ಅಣ್ಣ ಆರಿಸಿ ಬರಲಿ ಎಂದು ವಿಜಯೇಂದ್ರ ಜೊತೆಗೆ ಡೀಲ್ ಮಾಡಿಕೊಂಡಿದ್ದಾನೆ ಎಂದು ನೇರವಾಗಿ ಆರೋಪಿಸಿದರು.

ಮೊನ್ನೆ ಕಾಂಗ್ರೆಸ್ ಚೆನ್ನಗಿರಿ ಶಾಸಕ ಶಿವಗಂಗಾ ಬಸವರಾಜ ನೇರ ಆರೋಪ ಮಾಡಿದ್ದಾರೆ. ವಿಜಯೇಂದ್ರನ ಚೇಲಾ ಕೋಟಿ ಕೋಟಿ ಹಣ ಪಡೆದು ಒಪ್ಪಂದ ಮಾಡಿಕೊಂಡು ಬಿಜೆಪಿ ಅಭ್ಯರ್ಥಿನ ಸೋಲಿಸಿದ್ದಾರೆ. ಸಾಕ್ಷಿ ಕೊಡ್ತಿನಿ, ಯಾವ ದೇವಸ್ಥಾನಕ್ಕೆ ಬೇಕಾದರೂ ಬರ್ತಿನಿ ಎಂದು ಸವಾಲ್ ಎಸೆದಿದ್ದಾರೆ.

ಇದಕ್ಕಿಂತ ಸಾಕ್ಷಿ ಬೇಕಾ..? ಮತ್ತೆ ವಿಜಯೇಂದ್ರನ ಅಧ್ಯಕ್ಷ ಮಾಡಿದರೆ ಬಿಜೆಪಿ ಬಾಂಬ್ ಕಟ್ಟಿಕೊಂಡು ತಾವೇ ಸ್ಪೋಟ ಮಾಡಿಕೊಂಡಂತೆ. ಅದೇ ಬೇಕು ಅಂದ್ರೆ ಯಡಿಯೂರಪ್ಪನ ಮಾತು ಕೇಳಿ ವಿಜಯೇಂದ್ರನ ಮುಂದುವರಿಸಲಿ.

ವಿಜಯೇಂದ್ರ ಕಣ್ ಬಿಡೋಕ್ ಮುಂಚೆ ನಾವ್ ಪಕ್ಷ (ಬಿಜೆಪಿ) ಕಟ್ಟಿದ್ದೇವೆ. ಮಾತ್ ಎತ್ತುದ್ರೆ ನಮ್ ಪಕ್ಷ ಕಟ್ಯಾನ, ನಮ್ ಅಪ್ಪ ಸೈಕಲ್ ಹೊಡೆದಾನ ಅಂತಾನೆ.. ನಿಮ್ ಅಪ್ಪ ಅಷ್ಟೇ ಅಲ್ಲಪ್ಪಾ.. ನಾವು ಸೈಕಲ್ ಹೊಡೆದಿದ್ದೇವೆ, ನಮಗೇನ್ ಹೆಲಿಕಾಪ್ಟರ್ ಇತ್ತೇನು..?

ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿದವರು ಯಾರು? ಡಿ.ಕೆ‌.ಶಿವಕುಮಾ‌ರ್ ಮತ್ತು ವಿಜಯೇಂದ್ರ ಕೂಡಿ, ರಮೇಶ್ ಜಾರಕಿಹೊಳಿ ಜೀವನ ಹಾಳು ಮಾಡಿದ್ದಾರೆ. ಇಂತಹ ಹಲ್ಕಾ ಕೆಲ್ಸ ಯಾರಾದರೂ ಮಾಡುತ್ತಾರಾ?

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಬದಲಾವಣೆ ಆಗಬೇಕು. ಬದಲಾವಣೆಯ ಬಗ್ಗೆ ಚರ್ಚೆಗಳು ಬೇಡ, ಬದಲಾವಣೆ ಆಗಲಿ. ಬಿವೈ ವಿಜಯೇಂದ್ರನಿಂದ ರಾಜ್ಯದಲ್ಲಿ ಬಿಜೆಪಿ ನೆಲಕಚ್ಚಿದೆ ಎಂದರು.

ರಾಜಕೀಯ

ದೊಡ್ಡಬಳ್ಳಾಪುರ: LPG ಬೆಲೆ ಏರಿಕೆ ಬಗ್ಗೆ ಕೇಳ್ತಿದ್ದಂತೆ ಕಾಲ್ಕಿತ್ತ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ದೊಡ್ಡಬಳ್ಳಾಪುರ: LPG ಬೆಲೆ ಏರಿಕೆ ಬಗ್ಗೆ ಕೇಳ್ತಿದ್ದಂತೆ ಕಾಲ್ಕಿತ್ತ ಕೇಂದ್ರ ಸಚಿವೆ ಶೋಭಾ

ವಿವಿಧ ರಾಜ್ಯಗಳ ಚುನಾವಣೆಗಳು ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್‌ಪಿಜಿ (LPG) ಸಿಲಿಂಡರ್‌ಗಳ ಬೆಲೆಯನ್ನು ಏಕಾಏಕಿ ರೂ.993 ಹೆಚ್ಚಳ ಮಾಡಿರುವ ಕುರಿತು ದೇಶಾದ್ಯಂತ ಆಕ್ರೋಶ ತೀವ್ರಗೊಂಡಿವೆ. ಈ ಕುರಿತು ಪ್ರತಿಕ್ರಿಯೆ ಕೇಳುತ್ತಿದ್ದಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

[ccc_my_favorite_select_button post_id="121678"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಪರಾರಿಯಾಗಿದ್ದ ವ್ಯಕ್ತಿ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಪರಾರಿಯಾಗಿದ್ದ ವ್ಯಕ್ತಿ ಆತ್ಮಹತ್ಯೆ..!

ಜಿಂಕೆಬಚ್ಚಹಳ್ಳಿಯ ಸಮೀಪ ಶನಿವಾರ ಕಾರೊಂದು (Car) ಅನುಮಾನಾಸ್ಪದ ರೀತಿಯಲ್ಲಿ ಸುಟ್ಟು ಕರಕಲಾಗಿದ್ದು ಅದರೊಳಗೆ ಮಹಿಳೆಯೊಬ್ಬರ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಪರಾರಿಯಾಗಿದ್ದಾರೆ ಎನ್ನಲಾಗಿದ್ದ ವ್ಯಕ್ತಿ, ರೈಲಿಗೆ ಸಿಲುಕಿ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

[ccc_my_favorite_select_button post_id="121661"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]