ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳ ಉತ್ಪಾದನೆ, ಮಾರಾಟ, ಸಂಗ್ರಹಣೆ, ವಿತರಣೆ ಹಾಗೂ ಬಳಕೆ ನಿಷೇಧ

Ban on the production, sale, storage, distribution and use of plastic items

ಬಳ್ಳಾರಿ: ಜಿಲ್ಲೆಯಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳ ಉತ್ಪಾದನೆ, ಮಾರಾಟ, ಸಂಗ್ರಹಣೆ, ವಿತರಣೆ ಹಾಗೂ ಬಳಕೆ ನಿಷೇಧಿಸಲಾಗಿದೆ (Ban) ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ (Muhammad Harris) ಸುಮೈರ್ ಅವರು ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ರಸ್ತೆಗಳಲ್ಲಿ ಮತ್ತು ಕಾಲುವೆಗಳಲ್ಲಿ ಪ್ಲಾಸ್ಟಿಕ್ ಕಸದ ರಾಶಿಗಳು, ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳು ಪರಿಸರ ಹಾಗೂ ಆರೋಗ್ಯದ ಮೇಲೆ ಬೀರುವ ದುಷ್ಪರಿಣಾಮಗಳ ಬಗ್ಗೆ ಮುಖ್ಯಮಂತ್ರಿಗಳು ತೀವ್ರ ಆತಂಕ ವ್ಯಕ್ತಪಡಿಸಿದ್ದು, ಈ ಬಗ್ಗೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚಿಸಿದ್ದಾರೆ ಎಂದು ಜಿಪಂ ಸಿಇಒ ಅವರು ತಿಳಿಸಿದ್ದಾರೆ.

ಪರಿಸರ ಸಂರಕ್ಷಣಾ ಕಾಯ್ದೆಯ ಸೆಕ್ಷನ್ 5 ರಡಿ ಹಾಗೂ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ ನಿಯಮಗಳು 2016, 2021 ರ ತಿದ್ದುಪಡಿ ಅನ್ವಯ ಕ್ಯಾರಿ ಬ್ಯಾಗ್ ಇತ್ಯಾದಿಗಳಲ್ಲಿ 120 ಮೈಕ್ರಾನ್ ಗಿಂತ ಕಡಿಮೆ ಗಾತ್ರದ ಎಲ್ಲಾ ಕೆಲವು ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳ ಉತ್ಪಾದನೆ, ಮಾರಾಟ, ಸಂಗ್ರಹಣೆ, ವಿತರಣೆ ಹಾಗೂ ಬಳಕೆ ನಿಷೇಧಿಸಲಾಗಿದೆ.

ಹಾಗಾಗಿ ಸ್ಥಳೀಯ ಸಂಸ್ಥೆಗಳ ತಾಲ್ಲೂಕು, ಗ್ರಾಮ ಪಂಚಾಯತಿಗಳ ಮೂಲಕ ರಸ್ತೆ ಮತ್ತು ಕಾಲುವೆಗಳಲ್ಲಿ ಪ್ಲಾಸ್ಟಿಕ್ ಕಸ ವಿಲೇವಾರಿ ತಡೆಗಟ್ಟುವುದು ಹಾಗೂ ಉಲ್ಲಂಘಿಸುವವರಿಗೆ ದಂಡ ವಿಧಿಸುವ ಕಾರ್ಯಾಚರಣೆ ತ್ವರಿತವಾಗಿ ಸಂಬಂಧಿಸಿದ ಅಧಿಕಾರಿಗಳು ನಡೆಸಬೇಕು.

ಆಯಾ ಗ್ರಾಮ ಪಂಚಾಯತಿಯ ಪಂಚಾಯತಿ ಅಭಿವೃದ್ದಿ ಅಧಿಕಾರಿಗಳು, ಏಕ ಬಳಕೆಯ ಪ್ಲಾಸ್ಟಿಕ್ ತಯಾರಕರು ಹಾಗೂ ಮಾರಾಟಗಾರರ ಮೇಲ್ವಿಚಾರಣೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ.

ತಾಲ್ಲೂಕು ಪಂಚಾಯತಿ, ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ಕಚೇರಿಗಳು ಮತ್ತು ಘಟಕಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆಯನ್ನು ತಕ್ಷಣದಿಂದಲೇ ನಿಷೇಧಿಸಲಾಗಿದೆ ಎಂದು ಜಿಪಂ ಸಿಇಒ ಮಹಮ್ಮದ್ ಹ್ಯಾರೀಸ್ ಸುಮೈರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ದೊಡ್ಡಬಳ್ಳಾಪುರ: LPG ಬೆಲೆ ಏರಿಕೆ ಬಗ್ಗೆ ಕೇಳ್ತಿದ್ದಂತೆ ಕಾಲ್ಕಿತ್ತ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ದೊಡ್ಡಬಳ್ಳಾಪುರ: LPG ಬೆಲೆ ಏರಿಕೆ ಬಗ್ಗೆ ಕೇಳ್ತಿದ್ದಂತೆ ಕಾಲ್ಕಿತ್ತ ಕೇಂದ್ರ ಸಚಿವೆ ಶೋಭಾ

ವಿವಿಧ ರಾಜ್ಯಗಳ ಚುನಾವಣೆಗಳು ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್‌ಪಿಜಿ (LPG) ಸಿಲಿಂಡರ್‌ಗಳ ಬೆಲೆಯನ್ನು ಏಕಾಏಕಿ ರೂ.993 ಹೆಚ್ಚಳ ಮಾಡಿರುವ ಕುರಿತು ದೇಶಾದ್ಯಂತ ಆಕ್ರೋಶ ತೀವ್ರಗೊಂಡಿವೆ. ಈ ಕುರಿತು ಪ್ರತಿಕ್ರಿಯೆ ಕೇಳುತ್ತಿದ್ದಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

[ccc_my_favorite_select_button post_id="121678"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಪರಾರಿಯಾಗಿದ್ದ ವ್ಯಕ್ತಿ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಪರಾರಿಯಾಗಿದ್ದ ವ್ಯಕ್ತಿ ಆತ್ಮಹತ್ಯೆ..!

ಜಿಂಕೆಬಚ್ಚಹಳ್ಳಿಯ ಸಮೀಪ ಶನಿವಾರ ಕಾರೊಂದು (Car) ಅನುಮಾನಾಸ್ಪದ ರೀತಿಯಲ್ಲಿ ಸುಟ್ಟು ಕರಕಲಾಗಿದ್ದು ಅದರೊಳಗೆ ಮಹಿಳೆಯೊಬ್ಬರ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಪರಾರಿಯಾಗಿದ್ದಾರೆ ಎನ್ನಲಾಗಿದ್ದ ವ್ಯಕ್ತಿ, ರೈಲಿಗೆ ಸಿಲುಕಿ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

[ccc_my_favorite_select_button post_id="121661"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]