ದೊಡ್ಡಬಳ್ಳಾಪುರ; ತಾಲೂಕಿನ ಆರೂಢಿ ಗ್ರಾಮದಲ್ಲಿ ನಾಡಪ್ರಭು ಕೆಂಪೇಗೌಡರ (Nadaprabhu Kempegowda) 517 ನೇ ಜಯಂತಿಯನ್ನು ಭಾನುವಾರ ಸಂಭ್ರಮದಿಂದ ಆಚರಿಸಲಾಯಿತು.
ಕೆಂಪೇಗೌಡರ ಯುವಕರ ಸಂಘದವತಿಯಿಂದ ಮೂರನೇ ವರ್ಷದ ಆಚರಣೆ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸಲಾಯಿತು.
ಕಾರ್ಯಕ್ರಮದ ಅಂಗವಾಗಿ ಕೆಂಪೇಗೌಡರ ಪ್ರತಿಮೆಗೆ ಮಾಲಾರ್ಪಣೆ, ಪೂಜೆ, ಪೂರ್ಣಕುಂಬದೊಂದಿಗೆ ಗ್ರಾಮದ ಪ್ರಮುಖ ಬೀದಿಯಲ್ಲಿ ಬೆಳ್ಳಿ ರಥದಲ್ಲಿ ಮೆರವಣಿಗೆ ನಡೆಸಲಾಯಿತು.