CM Siddaramaiah dedicates Bagina to KRS

ತುಂಬಿ ಹರಿದ ಕಾವೇರಿ; 4ನೇ ಬಾರಿ KRSಗೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ.. ಕಾಲ್ಗುಣ ಸರಿ ಇಲ್ಲ ಎಂದವರಿಗೆ ತಿರುಗೇಟು

ಮಂಡ್ಯ: ನಮ್ಮ ಸರ್ಕಾರ ಬಿದ್ದೋಗತ್ತೆ ಅಂತ ಸೋತ ಗಿರಾಕಿಗಳು ಹೇಳುತ್ತಿದ್ದಾರೆ. ನಮ್ಮ ಸರ್ಕಾರ ಐದು ವರ್ಷ ಬಂಡೆ ರೀತಿ ಇರತ್ತೆ. 2028 ರಲ್ಲೂ ನಾವೇ ಗೆದ್ದು ಅಧಿಕಾರಕ್ಕೆ ಬರ್ತೀವಿ ಎಂದು ಘೋಷಿಸಿದ ಮುಖ್ಯಮಂತ್ರಿಗಳು ನೀರಾವರಿಗೆ ನಮ್ಮ ಈ ಸರ್ಕಾರ 25 ಸಾವಿರ ಕೋಟಿ ಕೊಟ್ಟಿದೆ. ಬೇರೆ ಯಾವ ಸರ್ಕಾರವಾದರೂ ಈ ಮಟ್ಟದ ಅನುದಾನ ಕೊಟ್ಟಿತ್ತಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಪ್ರಶ್ನಿಸಿದರು.

ಮಂಡ್ಯ ಜಿಲ್ಲೆ ಕೆಆರೆಸ್ ಆಣೆಕಟ್ಟೆ 92 ವರ್ಷಗಳ ಇತಿಹಾಸದಲ್ಲಿ ಜೂನ್ ತಿಂಗಳಲ್ಲೇ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಅವರು ಅಣೆಕಟ್ಟೆಗೆ ಸೋಮವಾರ ಬಾಗಿನ ಸಮರ್ಪಿಸಿ, ಕಾವೇರಿ ಮಾತೆ ಪ್ರತಿಮೆಗೆ ಪೂಜೆ ಸಲ್ಲಿಸಿದರು. ನಂತರ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸೋತ ಗಿರಾಕಿಗಳು

ಸೋತ ಗಿರಾಕಿಗಳು ಸರ್ಕಾರ ಬಿದ್ದೋಗತ್ತೆ ಎಂದು ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ. ನನಗೂ , DCM ಶಿವಕುಮಾರ್ ಅವರಿಗೂ ಸರಿ ಇಲ್ಲ ಎಂದು ಬುರುಡೆ ಬಿಡುತ್ತಿದ್ದಾರೆ. ನಾನು ಮತ್ತು ಶಿವಕುಮಾರ್ ಇಬ್ಬರೂ ಒಟ್ಟಾಗಿ, ಗಟ್ಟಿಯಾಗಿದ್ದೀವಿ. ನಮ್ಮ ಸರ್ಕಾರವೂ ಐದು ವರ್ಷ ಗ್ಯಾರಂಟಿಯಾಗಿ ಗಟ್ಟಿಯಾಗಿ ಇರುತ್ತದೆ. 2028 ರಲ್ಲೂ ಗೆದ್ದು ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ಘೋಷಿಸಿದರು.

ಬುರುಡೆ ಬಿಡುತ್ತಿರುವ ಬಿಜೆಪಿ

ಅಭಿವೃದ್ಧಿಗೆ ಹಣ ಇಲ್ಲ, ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಬುರುಡೆ ಬಿಡುತ್ತಿರುವ ಬಿಜೆಪಿಯವರು ನಾಡಿನ ಜನರಿಗೆ ಉತ್ತರಿಸಬೇಕು. ದಿವಾಳಿ ಆಗಿದ್ದರೆ 25 ಸಾವಿರ ಕೋಟಿ ರೂಪಾಯಿ ಎಲ್ಲಿಂದ ಬಂತು ಎಂದು ಪ್ರಶ್ನಿಸಿದರು.

ಕೃಷಿ ಪ್ರಗತಿಗಾಗಿ ವರ್ಷಕ್ಕೆ 19000 ಸಾವಿರ ಕೋಟಿ ಪಂಪ್ ಸೆಟ್ ಸಬ್ಸಿಡಿಯನ್ನು ರೈತರಿಗೆ ಕೊಟ್ಟಿದ್ದೇವೆ. 92 ವರ್ಷಗಳ ಬಳಿಕ ಜೂನ್ ತಿಂಗಳಲ್ಲೇ ಭರ್ತಿ ಆಗಿರುವ ಕೆ ಅರ್ ಎಸ್ ನಲ್ಲಿ ಸ್ಮಾರಕ ನಿರ್ಮಿಸಿ ಎಂದು ಕಾವೇರಿ ನಿಗಮದ ಎಂಡಿ ಅವರಿಗೆ ಸಿಎಂ ಸೂಚನೆ ನೀಡಿದರು.

ಕೃಷ್ಣರಾಜಸಾಗರದ ಒಟ್ಟು 124 ಅಡಿ ಸಾಮರ್ಥ್ಯದಲ್ಲಿ 120.90 ಅಡಿ ಭರ್ತಿ ಆಗಿದೆ. ಅಣೆಕಟ್ಟೆಗೆ 49 TMC ನೀರಿನ ಸಾಮರ್ಥ್ಯವಿದೆ. 193 ವರ್ಷಗಳಲ್ಲಿ 76 ಬಾರಿ ಭರ್ತಿಯಾಗಿದೆ. 2023-24 ರಲ್ಲಿ ಬರಗಾಲವಿತ್ತು. ಈ ಕಾರಣಕ್ಕೇ “ಸಿದ್ದರಾಮಯ್ಯ ಅವರ ಕಾಲುಗುಣ ಚನ್ನಾಗಿಲ್ಲ, ಕಾಂಗ್ರೆಸ್ ಸರ್ಕಾರದ ಕಾಲುಗುಣ ಸರಿಯಿಲ್ಲ” ಎಂದು ವಿರೋಧ ಪಕ್ಷಗಳು ಟೀಕಿಸಿದ್ದವು. ಈಗ ಕಳೆದು ಎರಡು ವರ್ಷಗಳಿಂದ ರಾಜ್ಯದಲ್ಲಿ ಮಳೆ, ಬೆಳೆ ಉತ್ತಮವಾಗಿ ಆಗುತ್ತಿದೆ. ವಿರೋಧ ಪಕ್ಷಗಳು ಮೂಡಾತ್ಮರು ಈಗ ಏನು ಹೇಳ್ತಾರೆ ಎಂದು ಸಿಎಂ ಅಣಕಿಸಿದರು.

ನಾವು ಈ ಬಾರಿ ಕಾವೇರಿ ಅಭಿವೃದ್ಧಿ ನಿಗಮಕ್ಕೆ 3000 ಕೋಟಿ ಹಣ ಕೊಟ್ಟಿದ್ದೇವೆ. ಈಗ ಟೀಕಿಸುತ್ತಿರುವವರು ಅಧಿಕಾರದಲ್ಲಿದ್ದಾಗ ಕಾವೇರಿ ನಿಗಮಕ್ಕೆ ಹಣ ಕೊಡಲಿಲ್ಲ ಎಂದು ಟೀಕಿಸಿದರು.

ಸುಳ್ಳು ಹೇಳುವ ಚಾಳಿಯಲ್ಲಿರುವ ಬಿಜೆಪಿ ಗೆ ರಾಜ್ಯದ ಜನ ಪೂರ್ಣ ಅಧಿಕಾರವನ್ನೇ ಕೊಟ್ಟಿಲ್ಲ. ಆಪರೇಷನ್ ಕಮಲ ಮಾಡಿ ಎರಡು ಬಾರಿ ಅಧಿಕಾರಕ್ಕೆ ಬಂದರು. ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕಿಕೊಂಡೇ ಅಧಿಕಾರಕ್ಕೆ ಬರಬೇಕು. ಸ್ವಂತ ಶಕ್ತಿಯಿಂದ ಸಾಧ್ಯವೇ ಇಲ್ಲ ಎಂದರು.

ನಾನು ಸುಳ್ಳು ಹೇಳಿದ್ರೆ ಜನರಿಗೆ ಗೊತ್ತಾಗಲ್ವಾ ? ಅದಕ್ಕೇ ಬಿಜೆಪಿ, ಜೆಡಿಎಸ್ ನವರು ಜನರನ್ನು ದಡ್ಡರೆಂದು ಭಾವಿಸಬಾರದು. ಜನರಿಗೆ ಸುಳ್ಳು ಹೇಳಿ ಹೋಗಬಾರದು ಎಂದರು.

ತಾಯಿ ಕಾವೇರಿಗೆ ಪೂಜೆ ಮಾಡಿ ನಾಡಿನ ಮಳೆ, ಬೆಳೆ ಹೀಗೇ ಚನ್ನಾಗಿ ಆಗಲಿ ಎಂದು ಪ್ರಾರ್ಥಿಸಿದ್ದೇನೆ ಎಂದರು.

ನಾವು ಅಧಿಕಾರದಲ್ಲಿದ್ದಾಗ ಯಾವಾಗಲಾದರೂ ರೈತರಿಗೆ ಬೀಜ, ಗೊಬ್ಬರಕ್ಕೆ ತೊಂದರೆ ಮಾಡಿದ್ದೇವಾ? ಬೀಜ ಕೇಳಿದವರಿಗೆ ಗೋಲಿಬಾರ್ ಮಾಡಿದ್ದೇವಾ ಎಂದು ಪ್ರಶ್ನಿಸಿದರು.

ಕಾವೇರಿ ತಾಯಿ, ಚಾಮುಂಡೇಶ್ವರಿ ಕೃಪಾಕಟಾಕ್ಷದಿಂದ ರಾಜ್ಯ ಸುಭಿಕ್ಷವಾಗಿದೆ. ಎಲ್ಲಾ ಜಲಾಶಯಗಳೂ ತುಂಬಿವೆ. ಎಲ್ಲಾ ನಾಲೆಗಳಿಗೂ ತಕ್ಷಣದಿಂದ ನೀರು ಹರಿಸಲು ವೇದಿಕೆಯಿಂದಲೇ ಆದೇಶ ನೀಡಿದರು.

ಸಚಿವರಾದ ಚಲುವರಾಯಸ್ವಾಮಿ, ಎಚ್ ಸಿ ಮಹದೇವಪ್ಪ, ವೆಂಕಟೇಶ್, ಬೋಸರಾಜ್, ಶಾಸಕರಾದ ರಮೇಶ್ ಬಂಡಿಸಿದ್ದೇಗೌಡ, ರವಿ ಗಣಿಗ, ಉದಯ್, ಹರೀಶ್ ಗೌಡ, ರವಿಶಂಕರ್, ಎ ಆರ್ ಕೃಷ್ಣಮೂರ್ತಿ, ಪುಟ್ಟರಂಗಶೆಟ್ಟಿ, ಎಂಎಲ್ಸಿಗಳಾದ ಮಧು ಮಾದೇಗೌಡ, ದಿನೇಶ್ ಗೂಳಿಗೌಡ, ತಮ್ಮಯ್ಯ ಮತ್ತಿತರರು ಭಾಗವಹಿಸಿದ್ದರು.

ರಾಜಕೀಯ

ನನಗೆ ಜನರ ಸೇವೆ ಮಾಡುವ ಚಪಲ, ಕೆಲವರಿಗೆ ಜನರ ದುಡ್ಡು ಲೂಟಿ ಹೊಡೆಯೋ ಚಪಲ; ಹೆಚ್.ಡಿ. ಕುಮಾರಸ್ವಾಮಿ

ನನಗೆ ಜನರ ಸೇವೆ ಮಾಡುವ ಚಪಲ, ಕೆಲವರಿಗೆ ಜನರ ದುಡ್ಡು ಲೂಟಿ ಹೊಡೆಯೋ

ಕೆಲವರಿಗೆ ಜನರನ್ನು ಲೂಟಿ ಮಾಡಿ ದುಡ್ಡು ಮಾಡುವ ಚಪಲ. ನನಗೆ ಜನರ ಜತೆ ನಿಂತು ಅವರ ಸಹಾಯಕ್ಕೆ ನಿಲ್ಲುವ ಚಪಲ. ಒಬ್ಬೊಬ್ಬರಿಗೆ ಒಂದೊಂದು ಚಪಲ ಇರುತ್ತದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="118524"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ (Maanja thread) ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ.

[ccc_my_favorite_select_button post_id="118471"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!