ದೊಡ್ಡಬಳ್ಳಾಪುರ: ರಾಷ್ಟ್ರೀಯ ವಿದ್ಯುತ್ ಸುರಕ್ಷಾ ಸಪ್ತಾಹದ ಅಂಗವಾಗಿ ಇಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (Bescom) ದೊಡ್ಡಬಳ್ಳಾಪುರ ಇವರಿಂದ ಸುರಕ್ಷತಾ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು.
ನಗರದ ವಿವಿಧ ಭಾಗಗಳಲ್ಲಿ ವಿದ್ಯುತ್ ಪವರ್ ಮ್ಯಾನ್ಗಳು ಜಾಥವನ್ನು ನಡೆಸಿ, ಸುರಕ್ಷತೆಯ ಘೋಷಣಾ ವಾಕ್ಯಗಳನ್ನು ಕೂಗುತ್ತಾ, ಜನರಿಗೆ ವಿದ್ಯುತ್ತನ್ನು ಬಳಸುವಾಗ ಯಾವ ರೀತಿ ಎಚ್ಚರಿಕೆಗಳನ್ನು ಕೈಗೊಳ್ಳಬೇಕು ಎಂಬುದರ ಬಗ್ಗೆ ಮಾಹಿತಿ ನೀಡಿದರು.
ಈ ಜಾಥವನ್ನು ಬೆ ವಿ ಕಂ ನೆಲಮಂಗಲ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರಾದ ಕುಮಾರ ನಾಯಕ್, ದೊಡ್ಡಬಳ್ಳಾಪುರ ಗ್ರಾಮಾಂತರ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಮಂಜುನಾಥ್ ಮತ್ತು ನಗರ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರದ ವಿನಯ್ ಕುಮಾರ್ ಅವರ ನೇತೃತ್ವದಲ್ಲಿ ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ಉಪ ವಿಭಾಗಾಧಿಕಾರಿಯಾದ ದುರ್ಗಾ ಶ್ರೀ, ನಗರಸಭೆಯ ಪೌರಾಯುಕ್ತ ಕಾರ್ತಿಕೇಶ್ವರ್ ಸುರಕ್ಷತಾ ಜಾಥದಲ್ಲಿ ಪಾಲ್ಗೊಂಡಿದ್ದರು.