ದೊಡ್ಡಬಳ್ಳಾಪುರ: ಲಾರಿ ಹಾಗೂ ಕ್ಯಾಂಟರ್ ನಡುವೆ ನಡೆದ ಭೀಕರ ರಸ್ತೆ ಅಪಘಾತ (Accident) ಸಂಭವಿಸಿ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿಯ ನಾಗಸಂದ್ರ ಸಮೀಪ ಸಂಭವಿಸಿದೆ.
ಮಹಾರಾಷ್ಟ್ರ ಮೂಲದ ಕ್ಯಾಂಟರ್ ಚಾಲಕ ಸುನೀಲ್ ಹಾಗೂ ಸಹಾಯಕ ಲಾಲ್ ಮುನೇಶ್ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ದಾಬಸ್‌ಪೇಟೆ ಕಡೆಯಿಂದ ಹೊಸಕೋಟೆ ಮಾರ್ಗವಾಗಿ ತೆರಳುತ್ತಿದ್ದ ಟ್ಯಾಂಕರ್ಗೆ ಏಕಾಏಕಿ ಲಾರಿ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.