ಹುಲಿ ಕುಟುಂಬ ಹತ್ಯೆ ಪ್ರಕರಣ: 3 ಅಧಿಕಾರಿಗಳಿಗೆ ಕಡ್ಡಾಯ ರಜೆ..!

Tiger family murder case: 3 officers on compulsory leave..!

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದ ಹೂಗ್ಯಂ ವನ್ಯಜೀವಿಧಾಮದಲ್ಲಿ 5 ಹುಲಿಗಳು (Tiger) ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧನ ಮಾಡಲಾಗಿದೆ.

ಮುಂದುವರಿದು ಈಗ ಅದಕ್ಕೆ ಸಂಬಂಧಿಸಿದಂತೆ ಅರಣ್ಯ ಅಧಿಕಾರಿಗಳಿಗೆ (Forest Officers) ಕಡ್ಡಾಯ ರಜೆ ನೀಡಲಾಗಿದೆ.

ಕರ್ತವ್ಯ ನಿರ್ಲಕ್ಷ್ಯದ ಆರೋಪದ ಮೇಲೆ ವನ್ಯಜೀವಿ ವಿಭಾಗದ ಡಿಸಿಎಫ್ ವೈ ಚಕ್ರಪಾಣಿ ಹಾಗೂ ಹನೂರು ವನ್ಯಜೀವಿ ಉಪ ವಿಭಾಗದ ಎಸಿಎಫ್ ಗಜಾನನ ಹೆಗಡೆ ಮತ್ತು ಉಪ ವಲಯದ ಅರಣ್ಯಾಧಿಕಾರಿ ಮಾದೇಶ್ ಕಡ್ಡಾಯ ರಜೆ ನೀಡಲಾಗಿದೆ.

ಹುಲಿ ಹಾಗೂ ಅದರ 4 ಮರಿಗಳು ರಸ್ತೆಯಿಂದ ಕೇವಲ 100 ಮೀಟರ್ ಅಂತರದಲ್ಲಿ ಸತ್ತು ಬಿದ್ದಿದ್ದರೂ ಸಹ ಅಧಿಕಾರಿಗಳ ಗಮನಕ್ಕೆ ಬರದಿರುವುದು ಹಾಗೂ ಕೇವಲ 800 ಮೀಟರ್ ದೂರದಲ್ಲಿ ಕಳ್ಳಬೇಟೆ ಶಿಬಿರ ಇದ್ದರೂ ಸಹ ಹುಲಿಗಳ ರಕ್ಷಣೆ ಮಾಡಲಾಗಿಲ್ಲ ಎನ್ನುವ ಆರೋಪ ಕೇಳಿ ಬಂದಿದೆ.

ಇನ್ನೂ ಈ ಪ್ರಕರಣದ ಬಗ್ಗೆ ಇನ್ನೂ ಹೆಚ್ಚಿನ ತನಿಖೆ ಆಗಬೇಕಿದ್ದು ಸದ್ಯಕ್ಕೆ ಸಿಬ್ಬಂದಿಗಳು ನಿರ್ಲಕ್ಷ್ಯದ ಆರೋಪಕ್ಕೆ ಗುರಿಯಾಗಿದ್ದಾರೆ.

ಹುಲಿ ಹಸುವನ್ನ ಕೊಂದು ಹಾಕಿರುವ ಕಾರಣದಿಂದ ಕೋನಪ್ಪ ಎನ್ನುವ ವ್ಯಕ್ತಿಗೆ ಕೋಪ ಬಂದಿದ್ದು, ಆತನ ಮಾತನ್ನ ಕೇಳಿಕೊಂಡು ಮಾದುರಾಜು, ನಾಗರಾಜು ಎಂಬುವರು ಕೀಟನಾಶಕವನ್ನು ಹಸುವಿನ ದೇಹಕ್ಕೆ ಸಿಂಪಡಿಸಿ, ಹುಲಿ ಹಾಗೂ ಮರಿಗಳನ್ನ ಕೊಲೆ ಮಾಡಿದ್ದಾರೆ.

ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ಸೆಕ್ಷನ್ 9.27ರ ಮತ್ತು ಕರ್ನಾಟಕ ಅರಣ್ಯ ಕಾಯ್ದೆ 1963ರ ಸೆಕ್ಷನ್ 24ರ ಉಲ್ಲಂಘನೆಯಡಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮಾಡಲಾಗುತ್ತಿದೆ.

ರಾಜಕೀಯ

ದೊಡ್ಡಬಳ್ಳಾಪುರ: LPG ಬೆಲೆ ಏರಿಕೆ ಬಗ್ಗೆ ಕೇಳ್ತಿದ್ದಂತೆ ಕಾಲ್ಕಿತ್ತ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ದೊಡ್ಡಬಳ್ಳಾಪುರ: LPG ಬೆಲೆ ಏರಿಕೆ ಬಗ್ಗೆ ಕೇಳ್ತಿದ್ದಂತೆ ಕಾಲ್ಕಿತ್ತ ಕೇಂದ್ರ ಸಚಿವೆ ಶೋಭಾ

ವಿವಿಧ ರಾಜ್ಯಗಳ ಚುನಾವಣೆಗಳು ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್‌ಪಿಜಿ (LPG) ಸಿಲಿಂಡರ್‌ಗಳ ಬೆಲೆಯನ್ನು ಏಕಾಏಕಿ ರೂ.993 ಹೆಚ್ಚಳ ಮಾಡಿರುವ ಕುರಿತು ದೇಶಾದ್ಯಂತ ಆಕ್ರೋಶ ತೀವ್ರಗೊಂಡಿವೆ. ಈ ಕುರಿತು ಪ್ರತಿಕ್ರಿಯೆ ಕೇಳುತ್ತಿದ್ದಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

[ccc_my_favorite_select_button post_id="121678"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಪರಾರಿಯಾಗಿದ್ದ ವ್ಯಕ್ತಿ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಪರಾರಿಯಾಗಿದ್ದ ವ್ಯಕ್ತಿ ಆತ್ಮಹತ್ಯೆ..!

ಜಿಂಕೆಬಚ್ಚಹಳ್ಳಿಯ ಸಮೀಪ ಶನಿವಾರ ಕಾರೊಂದು (Car) ಅನುಮಾನಾಸ್ಪದ ರೀತಿಯಲ್ಲಿ ಸುಟ್ಟು ಕರಕಲಾಗಿದ್ದು ಅದರೊಳಗೆ ಮಹಿಳೆಯೊಬ್ಬರ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಪರಾರಿಯಾಗಿದ್ದಾರೆ ಎನ್ನಲಾಗಿದ್ದ ವ್ಯಕ್ತಿ, ರೈಲಿಗೆ ಸಿಲುಕಿ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

[ccc_my_favorite_select_button post_id="121661"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]