ಬೆಂಗಳೂರು: ಹಾಸನ ಜಿಲ್ಲೆಯಲ್ಲಿ ಒಂದು ತಿಂಗಳ ಅವಧಿಯಲ್ಲಿ 18 ಹೃದಯಾಘಾತಗಳು (Heart attack) ಸಂಭವಿಸಿರುವುದನ್ನು ಆರೋಗ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಹೃದಯಾಘಾತಗಳು ಹೆಚ್ಚಾಗುತ್ತಿರುವು ಕುರುತಂತೆ ಜಯದೇವ ಸಂಸ್ಥೆಯ ನಿರ್ದೇಶಕ ಡಾ.ರವೀಂದ್ರನಾಥ್ ಅಧ್ಯಕ್ಷತೆಯಲ್ಲಿ ತಜ್ಞರಿಂದ ಅಧ್ಯಯನ ನಡೆಸಿ ವರದಿ ಪಡೆಯುವಂತೆ ಈಗಾಗಲೇ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ.
ಹಠಾತ್ ಹೃದಯಾಘಾತಗಳನ್ನು ತಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆಯನ್ನು ಜಾರಿಗೆ ತಂದಿದೆ. ಆದರೆ ಇತ್ತಿಚೆಗೆ ಯುವಕರು ಹೃದಯಾಘಾತಕ್ಕೆ ಒಳಗಾಗುತ್ತಿರುವುದರ ಬಗ್ಗೆ ಸಮಗ್ರ ಸಂಶೋಧನೆಯ ಅಗತ್ಯತೆ ಇದೆ.
ಬದಲಾದ ಜೀವನ ಶೈಲಿ, ಆಹಾರ, ಅಸಾಂಕ್ರಾಮಿಕ ರೋಗಗಳು ಹೃದಯಾಘಾತಗಳು ಹೆಚ್ಚಾಗಲು ಕಾರಣ ಎಂಬುದು ಮೇಲ್ನೋಟಕ್ಕೆ ಕಂಡುಬಂದರೂ, ಹಾಸನದ ಪ್ರಕರಣ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಇದಕ್ಕೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ತಜ್ಞರ ತಂಡದಿಂದ ಅಧ್ಯಯನ ನಡೆಸಿ 10 ದಿನಗಳ ಒಳಗಾಗಿ ವರದಿ ಪಡೆಯಲು ಸೂಚಿಸಲಾಗಿದೆ ಎಂದಿದ್ದಾರೆ.