88th Kannada Sahitya Sammelan will create history: Minister Zameer Ahmed Khan

88ನೇ ಕನ್ನಡ ಸಾಹಿತ್ಯ ಸಮ್ಮೇಳನ ಚರಿತ್ರೆ ಸೃಷ್ಟಿಸಲಿದೆ: ಸಚಿವ ಜಮೀರ್ ಅಹ್ಮದ್ ಖಾನ್

ಬೆಂಗಳೂರು: ಬಳ್ಳಾರಿಯಲ್ಲಿ ನಡೆಯಲಿರುವ 88 ನೇಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹೊಣೆಗಾರಿಕೆ ನಮಗೆ ದೊರೆತಿರುವುದು ಅದೃಷ್ಟವಾಗಿದ್ದು, ಇದನ್ನು ಚಾರಿತ್ರಿಕವಾಗಿಸಲು ಕನ್ನಡ ಸಾಹಿತ್ಯ ಪರಿಷತ್ತಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಉಸ್ತುವಾರಿ ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ (Zameer Ahmed Khan) ಹೇಳಿದರು.

ಇಂದು ಬೆಂಗಳೂರಿನ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಕಚೇರಿಯಲ್ಲಿ ಏರ್ಪಡಿಸಿದ್ದ 88ನೇಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕನ್ನಡಿಗರ ಹೆಮ್ಮೆಯ ಉತ್ಸವವನ್ನು ಚಾರಿತ್ರಿಕವಾಗಿ ನಡೆಸಲು ಎಲ್ಲಾ ರೀತಿಯ ಸಹಕಾರ ನೀಡಲಾಗುವುದು. ಇದಕ್ಕೆ ಜಿಲ್ಲಾಡಳಿತವು ಸಂಪೂರ್ಣ ಸಜ್ಜುಗೊಳಿಸಿ ಸರ್ಕಾರದಿಂದ ಬೇಕಾದ ಎಲ್ಲಾ ಸೌಲಭ್ಯ, ನೆರವು ದೊರಕಿಸಿ ಕೊಡಲಾಗುವುದು. ಮುಂದಿನ ದಿನಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸರ್ಕಾರ ಇನ್ನಷ್ಟು ನಿಕಟವಾಗಿ ಕೆಲಸ ಮಾಡಲಿದೆ ಎಂದರು.

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿ ಅವರು ಮಾತನಾಡಿ, ಇಲ್ಲಿಯವರೆಗೆ ಅವಿಭಜಿತ ಬಳ್ಳಾರಿ ಜಿಲ್ಲೆಯಲ್ಲಿ ಐದು ಸಮ್ಮೇಳನಗಳು ನಡೆದಿದ್ದು, ಇದು ಆರನೆಯದು ಮತ್ತು ಸ್ವಾತಂತ್ರ್ಯ ನಂತರ ಎರಡನೆಯದಾಗಿದೆ. 68 ವರ್ಷಗಳ ನಂತರ ಬಳ್ಳಾರಿಯಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದೆ ಎಂದು ವಿವರಿಸಿದರು.

ಈಗಾಗಲೇ ಬಳ್ಳಾರಿಯಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ 88 ನೇಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬೂಕರ್ ಪುರಸ್ಕಾರದ ಮೂಲಕ ಜಾಗತಿಕ ಮನ್ನಣೆ ಪಡೆದಿರುವ ಬಾನು ಮುಷ್ತಾಕ್ ಅವರನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಸಭೆಗೆ ತಿಳಿಸಿದರು.

ಇದಕ್ಕೆ ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ ಅವರು ಪ್ರತಿಕ್ರಿಯಿಸಿ, ಈ ಆಯ್ಕೆಯನ್ನು ಮುಕ್ತ ಕಂಠದಿಂದ ಶ್ಲಾಘಿಸಿ, ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಲಿರುವ ಐದನೇಯ ಮಹಿಳೆ ಮತ್ತು ಮೊದಲ ಅಲ್ಪಸಂಖ್ಯಾತ ಮಹಿಳೆ ಆಗಲಿದ್ದಾರೆ ಎಂಬ ಸಂಗತಿ ಸಂತೋಷ ತರುವಂತಹದ್ದಾಗಿದೆ. ಹೆಚ್ಚಿನದಾಗಿ ಬಳ್ಳಾರಿಯಲ್ಲಿ ಸಮ್ಮೇಳನ ನಡೆಸುವ ಅವಕಾಶ ಸಿಕ್ಕಿರುವುದು ನನ್ನ ಅದೃಷ್ಟ ಎಂದು ಬಣ್ಣಿಸಿದರು.

ಬಳಿಕ ಕನ್ನಡ ಸಾಹಿತ್ಯ ಪರಿಷತ್ತಿನ ಇತಿಹಾಸ, ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಗಳ ಇತಿಹಾಸ ವಿವರಿಸಿದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿ ಅವರು, ಸಮ್ಮೇಳನಗಳಿರುವ ಚಾರಿತ್ರಿಕ ಪರಂಪರೆಗೆ ಒತ್ತು ನೀಡಬೇಕಿದೆ ಎಂದರು.

ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಮಾತನಾಡಿ, 88 ನೇಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಬಳ್ಳಾರಿಯಲ್ಲಿ ನಡೆಯುತ್ತಿರುವುದು ಹೆಮ್ಮೆಯ ಸಂಗತಿಯಾಗಿದ್ದು, ಇದಕ್ಕೆ ಜಿಲ್ಲಾಡಳಿತ ಸಂಪೂರ್ಣ ಸಹಕಾರ ನೀಡಿ ಯಶಸ್ವಿಗೊಳಿಸಲಾಗುವುದು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ 2012ರಲ್ಲಿಯೇ ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರಾಗಿದ್ದ ಸಚಿವ ಬಿ.ಝೆಡ್.ಜಮೀರ್ ಅಹ್ಮದ್ ಖಾನ್ ಅವರಿಗೆ ಸಾಂಕೇತಿಕವಾಗಿ ವಿಶೇಷ ಗುರುತಿನ ಚೀಟಿ ನೀಡಲಾಯಿತು.

ಬಳಿಕ ಸಚಿವರು ಮತ್ತು ಬಳ್ಳಾರಿ ಜಿಲ್ಲಾಡಳಿತದ ಅಧಿಕಾರಿಗಳು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಹೊರ ಮತ್ತು ಒಳ ಆವರಣ ವೀಕ್ಷಿಸಿ ಪರಂಪರೆ ಮತ್ತು ಆಧುನಿಕತೆ ಬೆಸೆದಿರುವ ಬಗ್ಗೆ ತಮ್ಮ ಮೆಚ್ಚುಗೆ ವ್ಯಕ್ತಪಡಿಸಿದರು.

ಸಭೆಯಲ್ಲಿ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಬಿ.ಎಂ. ಪಟೇಲ್ ಪಾಂಡು, ಮಾಧ್ಯಮ ಸಂಚಾಲಕರಾದ ಎನ್.ಎಸ್.ಶ್ರೀಧರಮೂರ್ತಿ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮಹಮ್ಮದ್ ಹ್ಯಾರಿಸ್ ಸುಮೈರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ., ಸಚಿವರ ಆಪ್ತ ಕಾರ್ಯದರ್ಶಿ ಹಾಗೂ ಸಿಬ್ಬಂದಿ ಇದ್ದರು.

ರಾಜಕೀಯ

2 ಕೋಟಿ ಬಾಂಗ್ಲಾ ಪ್ರಜೆಗಳು ಭಾರತಕ್ಕೆ ಬಂದಿದ್ದಾರೆ: ಆರ್‌.ಅಶೋಕ

2 ಕೋಟಿ ಬಾಂಗ್ಲಾ ಪ್ರಜೆಗಳು ಭಾರತಕ್ಕೆ ಬಂದಿದ್ದಾರೆ: ಆರ್‌.ಅಶೋಕ

2 ಕೋಟಿ ಬಾಂಗ್ಲಾ ಪ್ರಜೆಗಳು ಭಾರತಕ್ಕೆ ಬಂದಿದ್ದು, ಅಪರಾಧಿ ಚಟುವಟಿಕೆಗಳಲ್ಲಿ ತೊಡಗುತ್ತಿದ್ದಾರೆ; ಆರ್. ಅಶೋಕ (R.AShoka)

[ccc_my_favorite_select_button post_id="118528"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ (Maanja thread) ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ.

[ccc_my_favorite_select_button post_id="118471"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!