ಸರಣಿ ಹೃದಯಾಘಾತ; ಹಾಸನ ಜಿಲ್ಲೆಗೆ ಮಾತ್ರ ಕೋವಿಡ್ ಲಸಿಕೆ ಕೊಡಲಾಗಿದೆಯೇ?: ಬಿ.ವೈ.ವಿಜಯೇಂದ್ರ

GST Reform Historic Day: B.Y. Vijayendra

ಬೆಂಗಳೂರು: ಸಿದ್ದರಾಮಯ್ಯನವರ ರಾಜೀನಾಮೆ ತೆಗೆದುಕೊಳ್ಳಲು ಒಂದು ಭೂಮಿಕೆ ಸಿದ್ಧಪಡಿಸಲು ಕಾಂಗ್ರೆಸ್ಸಿನ ಹಿರಿಯ ನಾಯಕ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರು ಕರ್ನಾಟಕಕ್ಕೆ ಬಂದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y.Vijayendra) ತಿಳಿಸಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುರ್ಜೇವಾಲಾ ಅವರು ಕರ್ನಾಟಕದಲ್ಲಿ ಬೀಡುಬಿಟ್ಟಿದ್ದಾರೆ. ರಾಜ್ಯದ ಭ್ರಷ್ಟ ಸರಕಾರ ನೆಲಕಚ್ಚಿದ ಬಗ್ಗೆ ಅವರು ತಲೆ ಕೆಡಿಸಿಕೊಂಡಿಲ್ಲ ಎಂದು ಆರೋಪಿಸಿದರು.

ಸುರ್ಜೇವಾಲಾ ಅವರು ಶಾಸಕರ ಅಭಿಪ್ರಾಯ ಪಡೆದುಕೊಂಡಿದ್ದಾರೆ. ಮುಖ್ಯಮಂತ್ರಿ ಗಾದಿಗೆ ಪೈಪೋಟಿ ಹೆಚ್ಚಾಗಿದ್ದು, ಕುದುರೆ ವ್ಯಾಪಾರ ಜೋರಾಗಲಿದೆ ಎಂದು ವಿಶ್ಲೇಷಿಸಿದರು.

ರಾಮನಗರ ಕ್ಷೇತ್ರದ ಶಾಸಕ ಇಕ್ಬಾಲ್ ಅವರು ಡಿಕೆಶಿಯವರಿಗೆ 100 ಜನ ಶಾಸಕರ ಬೆಂಬಲ ಇದೆ; ಅವರು ಮುಖ್ಯಮಂತ್ರಿ ಆಗಬೇಕು ಎಂದಿದ್ದಾರೆ. ಕಾಂಗ್ರೆಸ್ಸಿನ ಹಿರಿಯ ಶಾಸಕರಾದ ಬಿ.ಆರ್.ಪಾಟೀಲ್, ರಾಜು ಕಾಗೆಯವರು ಸೇರಿ ಬೇರೆ ಬೇರೆ ಶಾಸಕರು ಮುಖ್ಯಮಂತ್ರಿಗಳ ವಿರುದ್ಧ ಹೇಳಿಕೆ ಕೊಡುತ್ತಿದ್ದಾರೆ. ಮುಖ್ಯಮಂತ್ರಿಗಳು ಅವರ ಪಕ್ಷದ ಶಾಸಕರ ವಿಶ್ವಾಸವನ್ನೂ ಕಳಕೊಂಡಿದ್ದಾರೆ ಎಂದರು. ಕುದುರೆ ವ್ಯಾಪಾರದ ಬಗ್ಗೆ ಮಾನ್ಯ ರಾಜ್ಯಪಾಲರೂ ಗಮನಿಸಬೇಕು ಎಂದು ವಿನಂತಿಸಿದರು.

ಹಾಸನ ಜಿಲ್ಲೆಗೆ ಮಾತ್ರ ಕೋವಿಡ್ ಲಸಿಕೆ ಕೊಡಲಾಗಿದೆಯೇ?

ಹೃದಯಾಘಾತದಿಂದ ಹಾಸನ ಜಿಲ್ಲೆಯಲ್ಲಿ 35- 40 ಜನರು ಸತ್ತಿದ್ದು, ಕೋವಿಡ್ ಲಸಿಕೆ ಕಾರಣ ಎಂಬ ಮುಖ್ಯಮಂತ್ರಿಗಳ ಆರೋಪಕ್ಕೆ ಉತ್ತರಿಸಿದ ಅವರು, ಹಾಸನ ಜಿಲ್ಲೆಗೆ ಮಾತ್ರ ಕೋವಿಡ್ ಲಸಿಕೆ ಕೊಡಲಾಗಿದೆಯೇ? ದೇಶದ ಕೋಟ್ಯಂತರ ಜನರಿಗೆ, ಜಗತ್ತಿನ ಬೇರೆ ಬೇರೆ ರಾಷ್ಟ್ರಗಳಿಗೂ ಕೋವಿಡ್ ಲಸಿಕೆ ರಫ್ತು ಮಾಡಿದ್ದಾರೆ. ಹಾಸನದ ಸಾವುಗಳ ಸಂಬಂಧ ರಾಜ್ಯ ಸರಕಾರ ಎಚ್ಚತ್ತುಕೊಂಡು ಸಮರ್ಪಕ ತನಿಖೆ ನಡೆಸಬೇಕಿದೆ ಎಂದು ವಿಜಯೇಂದ್ರ ಅವರು ಆಗ್ರಹಿಸಿದರು.

ಇದೊಂದು ಬೇಜವಾಬ್ದಾರಿ ಹೇಳಿಕೆ ಎಂದು ಖಂಡಿಸಿದರು. ಮುಖ್ಯಮಂತ್ರಿಗಳು ತುರ್ತಾಗಿ ಸಭೆ ಕರೆದು ತಾಲ್ಲೂಕು, ಜಿಲ್ಲಾ ಮಟ್ಟದಲ್ಲಿ ಸಮರ್ಪಕ ಔಷಧಿ ಸಿದ್ಧವಾಗಿ ಇಟ್ಟುಕೊಳ್ಳುವ ಕಡೆ ಗಮನಿಸಬೇಕೆಂದು ಒತ್ತಾಯಿಸಿದರು. ಅಪಪ್ರಚಾರ ಸಲ್ಲದು ಎಂದು ತಿಳಿಸಿದರು.

ಕೇಂದ್ರದಲ್ಲಿ ಅಧಿಕಾರ, ಆರೆಸ್ಸೆಸ್ ನಿಷೇಧ- ತಿರುಕನ ಕನಸು

ಆರೆಸ್ಸೆಸ್ ನಿಷೇಧ ಕುರಿತ ಪ್ರಿಯಾಂಕ್ ಖರ್ಗೆಯವರ ಹೇಳಿಕೆಯನ್ನು ಪ್ರಸ್ತಾಪಿಸಿದ ಅವರು, ಇದು ತಿರುಕನ ಕನಸು ಎಂದು ವ್ಯಂಗ್ಯವಾಡಿದರು.

ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂಬುದನ್ನು ಸ್ವತಃ ನಿಮ್ಮ ತಂದೆ- ಮಲ್ಲಿಕಾರ್ಜುನ ಖರ್ಗೆಯವರೇ ನಂಬಲು ಸಾಧ್ಯವಿಲ್ಲ. ರಾಹುಲ್ ಗಾಂಧಿ, ಸೋನಿಯಾ ಗಾಂಧಿಯವರೇ ನಂಬಲಸಾಧ್ಯ. ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂಬ ಕನಸು ಪ್ರಿಯಾಂಕ್ ಖರ್ಗೆಯವರಿಗೆ ಯಾಕೆ ಬಿತ್ತು ಎಂದು ಪ್ರಶ್ನಿಸಿದರು.

ರಾಷ್ಟ್ರೀಯ ಸ್ವಯಂಸೇವಕ ಸಂಘ ಒಂದು ರಾಷ್ಟ್ರಭಕ್ತ ಸಂಘಟನೆ. ಭಾರತ- ಚೀನಾದ ಜೊತೆ ಯುದ್ಧದ ವೇಳೆ ಆರೆಸ್ಸೆಸ್ ಪಾತ್ರವನ್ನು ಪ್ರಧಾನಿ ಜವಾಹರಲಾಲ್ ನೆಹರೂ ಅವರು ಸ್ವಾಗತಿಸಿದ್ದರು. ಅದರ ಬಳಿಕ ರಿಪಬ್ಲಿಕ್ ಪರೇಡ್‍ನಲ್ಲಿ ಅವಕಾಶ ಕೊಡಲಾಗಿತ್ತು ಎಂದು ವಿವರಿಸಿದರು.

ನೆಹರೂ, ಇಂದಿರಾ ಗಾಂಧಿಯವರು ಆರೆಸ್ಸೆಸ್ ನಿಷೇಧಿಸಿದ್ದರು. ಕಾಡಿ ಬೇಡಿದ್ದು ನಿಷೇಧ ರದ್ದಾಯಿತೆಂಬ ಅಪ್ರಬುದ್ಧ ಹೇಳಿಕೆ ನೀಡಿದ್ದು, ಮಾಹಿತಿ ಕೊರತೆಯಿಂದ ಕೂಡಿದೆ ಎಂದು ಆಕ್ಷೇಪಿಸಿದರು.

ಬಿಜೆಪಿ ಹೋರಾಟಕ್ಕೆ ಸಂದ ಜಯ
ವಾಲ್ಮೀಕಿ ನಿಗಮದ ಹಗರಣದ ತನಿಖೆಯನ್ನು ರಾಜ್ಯ ಹೈಕೋರ್ಟ್ ಸಿಬಿಐಗೆ ವಹಿಸಿದ್ದು ಬಿಜೆಪಿ ಹೋರಾಟಕ್ಕೆ ಸಂದ ಜಯ ಎಂದ ಅವರು, ರಾಜ್ಯ ಹೈಕೋರ್ಟ್ ನಿನ್ನೆ ಮಹತ್ವದ ತೀರ್ಪು ನೀಡಿದೆ. ವಾಲ್ಮೀಕಿ ನಿಗಮದ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಿದ್ದು ಬಿಜೆಪಿ ಹೋರಾಟಕ್ಕೆ ಸಂದ ಜಯ; ಇದರಲ್ಲಿ ಇನ್ನೂ ಕೂಡ ದೊಡ್ಡ ತಲೆಗಳು ಉರುಳಲಿವೆ. ನ್ಯಾಯಾಲಯದ ತೀರ್ಪನ್ನು ಬಿಜೆಪಿ ಸ್ವಾಗತಿಸುತ್ತದೆ ಎಂದು ತಿಳಿಸಿದರು.

ರಾಜ್ಯದ ಪರಿಶಿಷ್ಟ ಸಮುದಾಯದ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ನ್ಯಾಯಕ್ಕೆ ಬಳಕೆಗೆ ಮೀಸಲಿಟ್ಟ 187 ಕೋಟಿ ಹಣವನ್ನು ಪಕ್ಕದ ತೆಲಂಗಾಣದಲ್ಲಿ ಬಳಸಿಕೊಂಡ ವಾಲ್ಮೀಕಿ ನಿಗಮದ ಹಗರಣ ನಡೆದಿತ್ತು. ಸಾವಿರಾರು ಬ್ಯಾಂಕ್ ಖಾತೆಗಳನ್ನು ತೆರೆದು ಬಾರ್, ಜ್ಯುವೆಲ್ಲರಿ ಶಾಪ್, ಲೋಕಸಭಾ ಚುನಾವಣೆಗೆ ಈ ಹಣ ದುರ್ಬಳಕೆ ಆಗಿತ್ತು. ಚಂದ್ರಶೇಖರ್ ಎಂಬ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್ ನೋಟಿನಲ್ಲಿ ಎಲ್ಲವನ್ನೂ ಉಲ್ಲೇಖಿಸಿದ್ದರು ಎಂದು ಗಮನ ಸೆಳೆದರು.

ಬಿಜೆಪಿ ತೀವ್ರ ಹೋರಾಟದ ಪರಿಣಾಮವಾಗಿ ಮುಖ್ಯಮಂತ್ರಿಗಳು ಅನಿವಾರ್ಯವಾಗಿ ಸಚಿವ ನಾಗೇಂದ್ರರನ್ನು ಸಂಪುಟದಿಂದ ಕೈಬಿಡಬೇಕಾಗಿ ಬಂತು. ಈಗ ಹೇಗಾದರೂ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಲು ಮುಖ್ಯಮಂತ್ರಿಗಳು ಪರದಾಡುತ್ತಿದ್ದರು. ಈ ಹಗರಣದಲ್ಲಿ ಸ್ವತಃ ಮುಖ್ಯಮಂತ್ರಿಗಳು ಭಾಗಿಯಾದುದು ಮಾಧ್ಯಮದವರಿಗೂ ತಿಳಿದಿದೆ ಎಂದು ವಿವರಿಸಿದರು. ಹಣಕಾಸಿನ ಇಲಾಖೆ ಅನುಮತಿ ಇಲ್ಲದೆ ಹಣ ಹೊರರಾಜ್ಯಕ್ಕೆ ಹೋಗಲು ಸಾಧ್ಯವಿರಲಿಲ್ಲ ಎಂದು ನುಡಿದರು.

ಮುಖ್ಯಮಂತ್ರಿ ಕುರ್ಚಿಗಾಗಿ ಪೈಪೋಟಿ ದಿನೇದಿನೇ ಹೆಚ್ಚಳ

ರಾಜ್ಯದಲ್ಲಿ ಪರಿಸ್ಥಿತಿ ದಿನೇದಿನೇ ಕೈಮೀರಿ ಹೋಗುತ್ತಿದೆ. ಆಡಳಿತ ಯಂತ್ರವು ಸಂಪೂರ್ಣವಾಗಿ ಕುಸಿದುಬಿದ್ದಿದೆ. ಆಡಳಿತ ಪಕ್ಷದಲ್ಲಿ ಶಾಸಕರ ನಡುವೆ ಪೈಪೋಟಿ ಆರಂಭವಾಗಿದೆ. ಮುಖ್ಯಮಂತ್ರಿ ಕುರ್ಚಿಗಾಗಿ ಪೈಪೋಟಿ ದಿನೇದಿನೇ ಹೆಚ್ಚಾಗಿದೆ ಎಂದು ವಿಶ್ಲೇಷಿಸಿದರು. ಇದರ ಪರಿಣಾಮವಾಗಿ ಅಭಿವೃದ್ಧಿ ಕೆಲಸಕಾರ್ಯಗಳು ಏನೂ ನಡೆಯುತ್ತಿಲ್ಲ. ರಾಜ್ಯ ಸರಕಾರ ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ಟೀಕಿಸಿದರು.

ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಕಾಂಗ್ರೆಸ್ ಸರಕಾರವು ದಿನಬಳಕೆ ವಸ್ತುಗಳ ಮೇಲೆ ಸತತ ಬೆಲೆ ಏರಿಸಿದ್ದರಿಂದ ಜನಸಾಮಾನ್ಯರು ತತ್ತರಿಸಿ ಹೋಗಿದ್ದಾರೆ. ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದುಬಿದ್ದಿದ್ದು, ಅಧಿಕಾರಿಗಳು ನಿಷ್ಕ್ರಿಯರಾಗಿದ್ದಾರೆ ಎಂದು ಆರೋಪಿಸಿದರು.

ರೈತರ ಆತ್ಮಹತ್ಯೆಗಳು, ಅಧಿಕಾರಿಗಳ ಆತ್ಮಹತ್ಯೆಗಳು, ಜೊತೆಗೇ ಗುತ್ತಿಗೆದಾರರೂ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇದು ರಾಜ್ಯದಲ್ಲಿ ನಿರಂತರವಾಗಿ ನಡೆದಿದೆ. ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರ ಸಂಪೂರ್ಣವಾಗಿ ನಿಷ್ಕ್ರಿಯವಾಗಿದೆ. ಆಡಳಿತ ಪಕ್ಷದ ಶಾಸಕರೇ ಇದನ್ನು ಒಪ್ಪಿಕೊಂಡಿದ್ದಾರೆ ಎಂದರು.

ಹಿಂದೂಗಳ ಮೇಲೆ ದೌರ್ಜನ್ಯ

ಸಿಂಧನೂರಿನಲ್ಲಿ ಹಿಂದೂ ಕಾರ್ಯಕರ್ತರನ್ನು ಬೆದರಿಸಿದ್ದಾರೆ. ಸಂಕೇಶ್ವರದಲ್ಲೂ ಶ್ರೀರಾಮಸೇನೆ ಕಾರ್ಯಕರ್ತರನ್ನು ಥಳಿಸಿದ್ದಾರೆ. ಪದೇ ಪದೇ ರಾಜ್ಯದಲ್ಲಿ ಗೋವುಗಳ ಕೆಚ್ಚಲನ್ನು ಕತ್ತರಿಸಲಾಗುತ್ತಿದೆ. ಇದರ ಬಗ್ಗೆ ರಾಜ್ಯ ಸರಕಾರ ಚಕಾರ ಎತ್ತುತ್ತಿಲ್ಲ ಎಂದು ಟೀಕಿಸಿದರು.

ಸರಕಾರದ ಪಾಪದ ಕೊಡ ತುಂಬಿದೆ, ಜನರು ನಿಮಗೆ ಶಾಪ ಹಾಕುತ್ತಿದ್ದಾರೆ. ಹಸುವಿನ ಕೆಚ್ಚಲು ಕೊಯ್ಯುವ ಘಟನಾವಳಿ ಪದೇಪದೇ ನಡೆದಿದೆ. ಭಗವಂತನೂ ಸಿದ್ದರಾಮ್ಯನವರ ಸರಕಾರಕ್ಕೆ ಒಳ್ಳೆಯದು ಮಾಡಲು ಸಾಧ್ಯವಿಲ್ಲ ಎಂದು ನುಡಿದರು. ಗೃಹ ಸಚಿವರು ಕಠಿಣ ಕ್ರಮ ಕೈಗೊಂಡಿಲ್ಲ ಎಂದು ದೂರಿದರು. ಇದರ ಕಡೆ ಗಮನಿಸಿ ಎಂದು ಒತ್ತಾಯಿಸಿದರು.

ರಾಜಕೀಯ

ದೊಡ್ಡಬಳ್ಳಾಪುರ: LPG ಬೆಲೆ ಏರಿಕೆ ಬಗ್ಗೆ ಕೇಳ್ತಿದ್ದಂತೆ ಕಾಲ್ಕಿತ್ತ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ದೊಡ್ಡಬಳ್ಳಾಪುರ: LPG ಬೆಲೆ ಏರಿಕೆ ಬಗ್ಗೆ ಕೇಳ್ತಿದ್ದಂತೆ ಕಾಲ್ಕಿತ್ತ ಕೇಂದ್ರ ಸಚಿವೆ ಶೋಭಾ

ವಿವಿಧ ರಾಜ್ಯಗಳ ಚುನಾವಣೆಗಳು ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್‌ಪಿಜಿ (LPG) ಸಿಲಿಂಡರ್‌ಗಳ ಬೆಲೆಯನ್ನು ಏಕಾಏಕಿ ರೂ.993 ಹೆಚ್ಚಳ ಮಾಡಿರುವ ಕುರಿತು ದೇಶಾದ್ಯಂತ ಆಕ್ರೋಶ ತೀವ್ರಗೊಂಡಿವೆ. ಈ ಕುರಿತು ಪ್ರತಿಕ್ರಿಯೆ ಕೇಳುತ್ತಿದ್ದಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

[ccc_my_favorite_select_button post_id="121678"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಪರಾರಿಯಾಗಿದ್ದ ವ್ಯಕ್ತಿ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಪರಾರಿಯಾಗಿದ್ದ ವ್ಯಕ್ತಿ ಆತ್ಮಹತ್ಯೆ..!

ಜಿಂಕೆಬಚ್ಚಹಳ್ಳಿಯ ಸಮೀಪ ಶನಿವಾರ ಕಾರೊಂದು (Car) ಅನುಮಾನಾಸ್ಪದ ರೀತಿಯಲ್ಲಿ ಸುಟ್ಟು ಕರಕಲಾಗಿದ್ದು ಅದರೊಳಗೆ ಮಹಿಳೆಯೊಬ್ಬರ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಪರಾರಿಯಾಗಿದ್ದಾರೆ ಎನ್ನಲಾಗಿದ್ದ ವ್ಯಕ್ತಿ, ರೈಲಿಗೆ ಸಿಲುಕಿ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

[ccc_my_favorite_select_button post_id="121661"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]