ದೊಡ್ಡಬಳ್ಳಾಪುರ: ತಾಲೂಕಿನ ರಾಜಘಟ್ಟ ಹಾಲು ಉತ್ಪಾದಕರ ಸಹಕಾರ ಸಂಘದ (MPCS) ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಮಲ-ದಳ ಮೈತ್ರಿ ಅಭ್ಯರ್ಥಿ ಬಿಜೆಪಿಯ ಆರ್.ಸಿ.ಆನಂದ್ (R.C.Anand) ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇಂದು ಎಂಪಿಸಿಎಸ್ ಕಚೇರಿಯಲ್ಲಿ ನಡೆದ ಚುನಾವಣೆಯಲ್ಲಿ ಪ್ರಕ್ರಿಯೆಯಲ್ಲಿ ಆರ್.ಸಿ. ಆನಂದ್ ಅವರು ಮಾತ್ರ ನಾಮಪತ್ರ ಸಲ್ಲಿಸಿದ್ದು, ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
13 ಸದಸ್ಯತ್ವ ಬಲದ ರಾಜಘಟ್ಟ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಎರಡನೇ ಅವಧಿಯ ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆದಿದೆ.
ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುಚ ಆರ್.ಸಿ.ಆನಂದ್ ಅವರನ್ನು ಬಿಜೆಪಿ ರೈತ ಮೋರ್ಚಾ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೋಡಿ ನರಸಿಂಹ ಮೂರ್ತಿ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಆರ್.ಸಿ.ಶಿವಕುಮಾರ್, ಮಾಜಿ ಅಧ್ಯಕ್ಷ ರವಿಕುಮಾರ್, ಗ್ರಾಪಂ ಅಧ್ಯಕ್ಷ ಮುನಿರಾಜು, ಸದಸ್ಯ ಶಿವಕುಮಾರ್, ಮುಖಂಡರಾದ ಆರ್.ಕೆ.ಕೆಂಪೇಗೌಡ, ಬಿ.ಎಸ್.ಹರೀಶ್, ಆನಂದ್, ವೆಂಕಟರಮಣಪ್ಪ, ಪಿಳ್ಳಪ್ಪಯ್ಯ, ವಿರೂಪಾಕ್ಷ ಮತ್ತಿತರರಿದ್ದರು.