Agencies distributing hot meals to schools should supply eggs and bananas

ಗುಡ್ಮಾರ್ನಿಂಗ್ ನ್ಯೂಸ್: ಶಾಲೆಗಳಿಗೆ ಬಿಸಿಯೂಟ ವಿತರಿಸುತ್ತಿರುವ ಏಜನ್ಸಿಗಳೆ ಮೊಟ್ಟೆ, ಬಾಳೆಹಣ್ಣು ಪೂರೈಸಲಿ

ಧಾರವಾಡ: ಜಿಲ್ಲೆಯಲ್ಲಿ ಬಿಸಿಯೂಟ ವಿತರಿಸುತ್ತಿರುವ ಸರ್ಕಾರೇತರ ಸಂಸ್ಥೆಗಳೆ ವಿದ್ಯಾರ್ಥಿಗಳಿಗೆ ಮೊಟ್ಟೆ, ಬಾಳೆಹಣ್ಣು ಪೂರೈಸಲು ಕ್ರಮವಹಿಸಬೇಕು. ಇಲ್ಲದಿದ್ದಲ್ಲಿ ಇದಕ್ಕೆ ಪರ್ಯಾಯ ವ್ಯವಸ್ಥೆ ಮಾಡಿ, ಶಿಕ್ಷಕರಿಗೆ ಆಗುತ್ತಿರುವ ಶೈಕ್ಷಣಿಕೇತರ ಕಾರ್ಯ, ಒತ್ತಡಗಳನ್ನು ತಪ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ (Santosh Lad) ಅವರು ಹೇಳಿದರು.

ಅವರು ಧಾರವಾಡದಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ ಸಿಇಓ, ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳು ಮತ್ತು ಬಿಸಿಯೂಟ ಪೂರೈಸುವ ಸರ್ಕಾರೇತರ ಸಂಸ್ಥೆಗಳೊಂದಿಗೆ ಸಭೆ ಜರುಗಿಸಿ, ಶಿಕ್ಷಕರಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ಚರ್ಚಿಸಿದರು.

ಧಾರವಾಡ ಜಿಲ್ಲೆಯಲ್ಲಿ ಶೈಕ್ಷಣಿಕ ಗುಣಮಟ್ಟ ಸುಧಾರಣೆ ಹಾಗೂ ಶಿಕ್ಷಕರು ನಿರಂತರವಾಗಿ ಶಾಲೆಯಲ್ಲಿದ್ದು ಎಲ್ಲ ಮಕ್ಕಳಿಗೂ ವರ್ಗವಾರು ಕಲಿಕಾ ಗುಣಮಟ್ಟ ಹೆಚ್ಚಿಸಲು ಜಿಲ್ಲಾಡಳಿತದಿಂದ ಜಾರಿಯಾಗಿರುವ ಮಿಷನ್ ವಿದ್ಯಾಕಾಶಿ ಯೋಜನೆ ಯಶಸ್ವಿಗೆ ವಿವಿಧ ಪ್ರಕಾರದ ಸುಧಾರಣಾ ಕ್ರಮಕೈಗೊಳ್ಳಲಾಗುತ್ತಿದೆ.

ಧಾರವಾಡ ಜಿಲ್ಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮಕ್ಕಳಿಗೆ ಪ್ರತಿದಿನ ಬಿಸಿಯೂಟ ಸರಬರಾಜು ಮಾಡುತ್ತಿರುವ ಸರ್ಕಾರೇತರ ಸಂಸ್ಥೆಗಳು, ಮಕ್ಕಳಿಗೆ ಮೊಟ್ಟೆ ಹಾಗೂ ಬಾಳೆಹಣ್ಣು ವಿತರಿಸಬೇಕು. ಇವು ಸಹ ಪೂರಕ ಪೌಷ್ಠಿಕ ಆಹಾರಗಳಾಗಿರುವದರಿಂದ ಮಕ್ಕಳಿಗೆ ನಿಯಮಿತವಾಗಿ ತಲುಪಬೇಕು.

ಪ್ರಸ್ತುತದಲ್ಲಿ ಶಿಕ್ಷಕರೇ ಮಾರುಕಟ್ಟೆಯಿಂದ ಮೊಟ್ಟ, ಬಾಳೆಹಣ್ಣು ತಂದು, ವಿದ್ಯಾರ್ಥಿಗಳಿಗೆ ವಿತರಿಸುವ ಕಾರ್ಯದಿಂದ ಬೋಧನೆಗೆ ಸಮಯದ ಅಭಾವ, ಒತ್ತಡ ಉಂಟಾಗುತ್ತಿದೆ. ಇದರಿಂದ ಶಿಕ್ಷಣದ ಗುಣಮಟ್ಟದ ಮೇಲೆ ವ್ಯತರಿಕ್ತ ಪರಿಣಾಮ ಬೀರುತ್ತಿದೆ. ಇದನ್ನು ತಪ್ಪಿಸಲು ಕ್ರಮಕೈಗೊಳ್ಳಲಾಗುತ್ತಿದೆ.

ಪ್ರಾಥಮಿಕ ಮತ್ತು ಪ್ರೌಢಶಾಲೆಯ ಶಿಕ್ಷಕರು ಶಾಲಾವಧಿಯಲ್ಲಿ ಶಾಲೆಗಳಲ್ಲಿದ್ದು, ಪಠ್ಯಕ್ರಮದ ಅನುಸಾರ ಪಾಠ ಮಾಡಬೇಕು. ಮಕ್ಕಳ ಕಲಿಕಾ ಗುಣಮಟ್ಟ ಹೆಚ್ಚಿಸಲು ಶಿಕ್ಷಕರನ್ನು ಸಂಪೂರ್ಣವಾಗಿ ತೊಡಗಿಸಿಕೊಳ್ಳಲಾಗುತ್ತದೆ ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಹೇಳಿದರು.

ಬಿಸಿಯೂಟದೊಂದಿಗೆ ಮೊಟ್ಟೆ ಹಾಗೂ ಬಾಳೆಹಣ್ಣು ಪೂರಕ ಪೌಷ್ಠಿಕ ಆಹಾರಗಳಾಗಿರುವದರಿಂದ ಸರಕಾರ ಕಡ್ಡಾಯವಾಗಿ ಮಕ್ಕಳಿಗೆ ವಿತರಿಸಲು ಸೂಚಿಸಿದೆ. ಮಕ್ಕಳ ಆರೋಗ್ಯ, ಪೂರ್ಣ ಬೆಳವಣಿಗೆಗಾಗಿ ಸರಕಾರ ಈ ಮಹತ್ವದ ಯೋಜನೆ ಜಾರಿಗೊಳಿಸಿದೆ. ಈಗಿರುವ ಸರ್ಕಾರೇತರ ಸಂಸ್ಥೆಗಳು ಬಿಸಿಯೂಟದೊಂದಿಗೆ ಮೊಟ್ಟೆ ಹಾಗೂ ಬಾಳೆಹಣ್ಣು ವಿತರಿಸುವ ಕುರಿತು ತುರ್ತಾಗಿ ತಮ್ಮ ಅಭಿಪ್ರಾಯ ಅಥವಾ ಒಪ್ಪಿಗೆ ಬಗ್ಗೆ ತಿಳಸಬೇಕು. ಇಲ್ಲದಿದ್ದಲ್ಲಿ ಸರಕಾರಕ್ಕೆ ವರದಿ ಸಲ್ಲಿಸಿ, ಪರ್ಯಾಯ ವ್ಯವಸ್ಥೆ ಮಾಡಲು ಕ್ರಮಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದರು.

ಶಿಕ್ಷಕರು ನಿಯಮಾನುಸಾರ ಶಾಲೆಯಲ್ಲಿದ್ದು, ಮಕ್ಕಳಿಗೆ ನಿರಂತರ ಪಾಠ ಬೋಧನೆ, ಸಮಗ್ರ ಬೆಳವಣಿಗೆಗೆ ಅಗತ್ಯ ಶೈಕ್ಷಣಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು. ಕ್ಷೇತ್ರ ಶಿಕ್ಷಣಾಧಿಕಾರಿಗಳು ನಿರಂತರವಾಗಿ ಶಾಲೆಗಳಿಗೆ ಭೇಟಿ ನೀಡಿ, ಪರಿಶೀಲಿಸಿ, ಶಾಲಾ ಅವಧಿಯಲ್ಲಿ ಶಿಕ್ಷಕರು, ಮಕ್ಕಳು ಶಾಲೆಯಲ್ಲಿ ಇರುವ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸಚಿವರು ನಿರ್ದೇಶಿಸಿದರು.

ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಿ, ಪರಿಹರಿಸಬೇಕು. ಶಾಲೆಗಳಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಬೇಕು. ಈ ಕುರಿತು ಡಿಡಿಪಿಐ ಮತ್ತು ಬಿಇಓಗಳು ಸಕ್ರಿಯವಾಗಿ ತೊಡಗಿಸಿಕೊಂಡು ಸಮಸ್ಯೆಗಳನ್ನು ಪರಿಹರಿಸಬೇಕು. ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅವರಿಗೂ ಮಾಹಿತಿ ಸಲ್ಲಿಸಬೇಕೆಂದು ಸಚಿವರು ಹೇಳಿದರು.

ಶಾಸಕ ಎನ್.ಎಚ್.ಕೋನರಡ್ಡಿ ಅವರು ಮಾತನಾಡಿ, ಮಕ್ಕಳ ದೈಹಿಕ ಮತ್ತು ಮಾನಸಿಕದ ಬೆಳವಣಿಗೆಗೆ ಮೊಟ್ಟೆ, ಬಾಳೆಹಣ್ಣು, ಪೂರಕ ಪೌಷ್ಠಿಕ ಆಹಾರಗಳು ಅಗತ್ಯವಾಗಿವೆ. ಇದು ರಾಜ್ಯ ಸರಕಾರದ ಮಹತ್ವದ ಯೋಜನೆ ಆಗಿದ್ದು, ನಿಯಮಾನುಸಾರ ಅನುಷ್ಠಾನವಾಗಬೇಕು.

ಈಗಾಗಲೇ ಸರಕಾರೇತರ ಸಂಸ್ಥೆಗಳವರು ಜಿಲ್ಲೆಯ ಎಲ್ಲ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ಬಿಸಿಯೂಟ ನೀಡುತ್ತಿರುವದರಿಂದ ಮೊಟ್ಟೆ, ಬಾಳೆಹಣ್ಣುಗಳನ್ನು ವಿದ್ಯಾರ್ಥಿಗಳಿಗೆ ಅವರೇ ವಿತರಿಸದರೆ ಹೆಚ್ಚು ಸೂಕ್ತವಾಗುತ್ತದೆ. ಶಿಕ್ಷಕರಿಗೆ ಇದರಿಂದ ಆಗುತ್ತಿರುವ ಒತ್ತಡ ಕಡೆಮೆ ಆಗುತ್ತದೆ ಎಂದು ಹೇಳಿದರು.

ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಮಾತನಾಡಿ, ಮೊಟ್ಟೆ ಹಾಗೂ ಬಾಳೆಹಣ್ಣುಗಳನ್ನು ಪ್ರತ್ಯೇಕ ವ್ಯವಸ್ಥೆಯ ಮೂಲಕ ಶಾಲೆಗಳಲ್ಲಿ ವಿತರಣೆ ಮಾಡುತ್ತಿರುವದರಿಂದ ಬಹಳಷ್ಟು ಶಿಕ್ಷಕರಿಗೆ ಮತ್ತು ಮುಖ್ಯ ಶಿಕ್ಷಕರಿಗೆ ಕಾರ್ಯ ಒತ್ತಡ ಹೆಚ್ಚಾಗಿ ಪರಿಣಾಮಕಾರಿ ಬೋಧನೆಗೆ ಅನಾನುಕೂಲವಾಗುತ್ತಿದೆ. ಮೊಟ್ಟೆ ಹಾಗೂ ಬಾಳೆಹಣ್ಣುಗಳನ್ನು ವಿತರಣೆ ಹಾಗೂ ವಿತರಿಸಿದ ಬಗ್ಗೆ ದತ್ತಾಂಶ ದಾಖಲೀಕರಣದ ಕಾರಣದಿಂದಾಗಿ ಬಹಳಷ್ಟು ಸಮಯ ವ್ಯಯವಾಗುತ್ತಿದೆ.

ಯೋಜನೆ ಅನುಷ್ಠಾನದಲ್ಲಿ ಆಕಸ್ಮಿಕ ವಿಳಂಬ, ಸಣ್ಣಪುಟ್ಟ ತೊಂದರೆಗಳಾದರೂ ಶಿಕ್ಷಕರನ್ನೇ ಹೊಣೆ ಮಾಡುತ್ತಿರುವುದರಿಂದ ಶಿಕ್ಷಕರು ಅನಗತ್ಯ ಒತ್ತಡಗಳಿಗೆ ಒಳಗಾಗುತ್ತಿದ್ದಾರೆ. ಈ ಕುರಿತು ಮನವಿ ಸಲ್ಲಿಕೆಯಾಗಿದ್ದು, ಇದು ಮಕ್ಕಳ ಕಲಿಕೆಯ ಗುಣಮಟ್ಟದ ಮೇಲೆ ಪರಿಣಾಮವಾಗುತ್ತಿದೆ.

ಪಠ್ಯೇತರ ಇಂತಹ ಕಾರ್ಯಗಳಿಂದ ಶಿಕ್ಷಕರಿಗೆ ಬಿಡುಗಡೆಗೊಳಿಸಿ, ಶೈಕ್ಷಣಿಕ ಕಾರ್ಯ ಚಟುವಟಿಕೆಗಳಿಗೆ ಒತ್ತು ನೀಡುವಂತೆ ಆಗಬೇಕೆಂದು ಅವರು ಹೇಳಿದರು.

ಬಿಸಿಯೂಟ ಸರಬರಾಜು ಮಾಡುವ ಏಜನ್ಸಿಗಳೇ ಮೊಟ್ಟೆ, ಬಾಳೆಹಣ್ಣು ವಿತರಿಸುವದರಿಂದ ಮಕ್ಕಳಿಗೆ, ಶಿಕ್ಷಕರಿಗೆ ಅನುಕೂಲವಾಗುತ್ತದೆ. ಇದರಲ್ಲಿ ಆಗುವ ಸಣ್ಣಪುಟ್ಟ ತಪ್ಪುಗಳಿಗೆ ಶಿಕ್ಷಕರು ಹೊಣೆ ಆಗುವದನ್ನು ತಪ್ಪಿಸಬೇಕು. ಈ ನಿಟ್ಟಿನಲ್ಲಿ ತುರ್ತು ಕ್ರಮದ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.

ಜಿಲ್ಲೆಯಲ್ಲಿ ಪ್ರಸ್ತುತವಾಗಿ ಶಾಲೆಗಳಿಗೆ ಬಿಸಿಯೂಟ ಸರಬರಾಜು ಮಾಡುತ್ತಿರುವ ಇಸ್ಕಾನ್ ಮತ್ತು ಅದಮ್ಯಚೇತನ ಸಂಸ್ಥೆಯ ಪ್ರತಿನಿಧಿಗಳು ತಮ್ಮ ಟ್ರಸ್ಟ್ ಮುಖ್ಯಸ್ಥರೊಂದಿಗೆ ಚರ್ಚಿಸಿ, ಶೀಘ್ರವಾಗಿ ಸಚಿವರ ನಿರ್ದೇಶನದ ಕುರಿತು ತಮ್ಮ ತೀರ್ಮಾನವನ್ನು ಸಲ್ಲಿಸುವದಾಗಿ ಸಭೆಯಲ್ಲಿ ಸಚಿವರಿಗೆ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಎಸ್.ಕೆಳದಿಮಠ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ರಾಮಕೃಷ್ಣ ಸದಲಗಿ, ಉಮೇಶ ಬೊಮ್ಮಕ್ಕನವರ, ಶಿವಾನಂದ ಮಲ್ಲಾಡದ, ಅಶೋಕ ಸಿಂದಗಿ, ಮಹಾದೇವಿ ಮಾಡಲಗೇರಿ, ಉಮಾದೇವಿ ಬಸಾಪುರ, ಡಿವಾಯ್‍ಪಿಸಿಗಳಾದ ಎಸ್.ಎಂ.ಹುಡೇದಮನಿ, ವಿಜಯಲಕ್ಷ್ಮಿ ಹಂಚನಾಳ, ಸಹಾಯಕ ಯೋಜನಾ ಸಮನ್ವಯಾಧಿಕಾರಿಗಳಾದ ಡಾ. ರೇಣುಕಾ ಅಮಲಝೆರಿ, ಪ್ರಕಾಶ ಬೂತಾಳೆ, ಅಕ್ಷರದಾಸೋಹ ಜಿಲ್ಲಾ ಶಿಕ್ಷಣ ಅಧಿಕಾರಿ ರೂಪಾ ಪುರಂಕರ ಮಾತನಾಡಿದರು.

ಸಭೆಯಲ್ಲಿ ಬಿಸಿಯೂಟ ವಿಭಾಗದ ತಾಲೂಕು ಸಹಾಯಕ ನಿರ್ದೇಶಕರು ಹಾಗೂ ಕುಂದಗೋಳದ ತಿರುಮಲ ಏಜನ್ಸಿ ಪ್ರತಿನಿಧಿಗಳು ಭಾಗವಹಿಸಿದ್ದರು.

ರಾಜಕೀಯ

ಒಳ ಮೀಸಲಾತಿ ಜಾರಿ ವೇಳೆ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸಿದಂತಿಲ್ಲ: ಬಿ.ವೈ. ವಿಜಯೇಂದ್ರ

ಒಳ ಮೀಸಲಾತಿ ಜಾರಿ ವೇಳೆ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸಿದಂತಿಲ್ಲ: ಬಿ.ವೈ. ವಿಜಯೇಂದ್ರ

ಒಳ ಮೀಸಲಾತಿ ಜಾರಿ ವಿಚಾರದಲ್ಲಿ ಮುಖ್ಯಮಂತ್ರಿಗಳು ಮಾನ್ಯ ಸುಪ್ರೀಂ ಕೋರ್ಟಿನ ಆದೇಶವನ್ನೂ ಸರಿಯಾಗಿ ಪಾಲನೆ ಮಾಡಿದಂತೆ ಕಾಣುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra)

[ccc_my_favorite_select_button post_id="112894"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!