If the sanctity of Chamundeshwari temple is violated, 'Chamundeshwari Chalo'; R. Ashoka

ಸಿಎಂ ಕುರ್ಚಿ ಬದಲಾವಣೆ ಖಚಿತವಾಗಿದೆ: ಮತ್ತೆ ಭವಿಷ್ಯ ನುಡಿದ ಆರ್‌.ಅಶೋಕ

ಬೆಂಗಳೂರು; ಸಿಎಂ ಸಿದ್ದರಾಮಯ್ಯ ಹಲವಾರು ಬಾರಿ ಅಧಿಕಾರಿಗಳ ವಿರುದ್ಧ ಅವಹೇಳನಕಾರಿಯಾಗಿ ಮಾತಾಡಿದ್ದಾರೆ. ಅವರ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲ? ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R.Ashoka) ಪ್ರಶ್ನಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಪರಿಷತ್‌ ಸದಸ್ಯರಾದ ಎನ್‌.ರವಿಕುಮಾರ್‌ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಕಾಂಗ್ರೆಸ್‌ ನಾಯಕರು ಆರೋಪಿಸಿದ್ದಾರೆ.

ಐಎಎಸ್‌ ಅಧಿಕಾರಿಯಾದ ಜಿಲ್ಲಾಧಿಕಾರಿ ಹಾಗೂ ಪೊಲೀಸ್‌ ಅಧಿಕಾರಿ ವಿರುದ್ಧ ಸಿಎಂ ಸಿದ್ದರಾಮಯ್ಯ ಅವಹೇಳನಕಾರಿಯಾಗಿ ಮಾತನಾಡಿದ್ದರು. ಆದರೂ ಕ್ರಮ ಕೈಗೊಳ್ಳಲಿಲ್ಲ. ರಾಜ್ಯದಲ್ಲಿ ಎಲ್ಲೂ ಅಭಿವೃದ್ಧಿ ಕಾರ್ಯ ನಡೆಯದೆ, ಶಾಸಕರು ದಂಗೆ ಏಳುತ್ತಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ಹೈಕೋರ್ಟ್‌ ಸೂಚಿಸಿದೆ. ಈ ಸಮಸ್ಯೆಗಳನ್ನು ಮರೆಮಾಚಲು ರವಿಕುಮಾರ್‌ ಹೇಳಿಕೆಯನ್ನು ವಿವಾದ ಮಾಡಲಾಗಿದೆ ಎಂದರು.

ಬಿಜೆಪಿಯವರು ಮಾಡಿದರೆ ಎಫ್‌ಐಆರ್‌ ದಾಖಲಿಸುತ್ತಾರೆ. ಕಾಂಗ್ರೆಸ್‌ನವರು ಮಾಡಿದರೆ ಯಾವುದೇ ದೂರು ದಾಖಲಾಗುವುದಿಲ್ಲ. ಸಿಎಂ ಸಿದ್ದರಾಮಯ್ಯ ಎಲ್ಲರನ್ನೂ ಏಕವಚನದಲ್ಲೇ ಕರೆಯುತ್ತಾರೆ. ರಾಷ್ಟ್ರಪತಿಗಳಿಗೆ ಗೌರವ ಕೊಡದೆ ಏಕವಚನದಲ್ಲೇ ಮಾತಾಡುತ್ತಾರೆ. ಅಂದರೆ ಕಾಂಗ್ರೆಸ್‌ಗೆ ಬೇರೆಯೇ ರೀತಿಯ ಕಾನೂನು ಇದೆ ಎಂದಾಯಿತು. ರವಿಕುಮಾರ್‌ ಯಾವ ರೀತಿಯ ಅಶ್ಲೀಲ ಹೇಳಿಕೆ ನೀಡಿದ್ದಾರೆಂದು ಕಾಂಗ್ರೆಸ್‌ ಸ್ಪಷ್ಟಪಡಿಸಲಿ ಎಂದರು.

ಹಾಸನದಲ್ಲಿ ಸರಣಿ ಹೃದಯಾಘಾತ ಪ್ರಕರಣ ಕಂಡುಬಂದರೂ ಜಿಲ್ಲಾ ಉಸ್ತುವಾರಿ ಸಚಿವರು ಆಸ್ಪತ್ರೆಗಳಿಗೆ ಭೇಟಿ ನೀಡಿಲ್ಲ. ಕೋವಿಡ್‌ ಲಸಿಕೆಯಿಂದ ಹೀಗಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕೋವಿಡ್‌ ಲಸಿಕೆಯನ್ನು ಇಡೀ ದೇಶದ ಜನರಿಗೆ ನೀಡಲಾಗಿದೆ. ಈ ಬಗ್ಗೆ ಕ್ರಮ ಕೈಗೊಳ್ಳದೆ ಲಸಿಕೆ ಬಗ್ಗೆ ಆರೋಪ ಮಾಡಲಾಗುತ್ತಿದೆ ಎಂದು ದೂರಿದರು.

ಚಿಕ್ಕಮಗಳೂರು, ಕೊಡಗು, ಸಕಲೇಶಪುರದಲ್ಲಿ ಕಾಫಿ ಬೆಳೆ ಹಾನಿಯಾಗಿದ್ದರೂ, ತೋಟಗಾರಿಕೆ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು ರೈತರನ್ನು ಭೇಟಿ ಮಾಡಿಲ್ಲ. ನಾನು ಹಾಸನಕ್ಕೆ ಭೇಟಿ ನೀಡಿ, ಹೃದಯಾಘಾತ ಹಾಗೂ ಕಾಫಿ ಬೆಳೆ ನಾಶದ ಬಗ್ಗೆ ವಿಚಾರಿಸುತ್ತೇನೆ. ಸರ್ಕಾರ ಕೂಡ ಈ ಕೆಲಸವನ್ನು ಕೂಡಲೇ ಮಾಡಬೇಕು.

ಇನ್ನೂ ಯಾರು ಮುಖ್ಯಮಂತ್ರಿ ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆಯೇ ಹೊರತು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚೆ ನಡೆಯುತ್ತಿಲ್ಲ. ಎರಡೂವರೆ ವರ್ಷವಾದರೂ ಸರ್ಕಾರ ಟೇಕಾಫ್‌ ಆಗಿಲ್ಲ ಎಂದರು.

ಮೊದಲು ನಮ್ಮ ರೈತರಿಗೆ ನೀರು ನೀಡಿ, ಮತ್ತೆ ತಮಿಳುನಾಡಿಗೆ ನೀರು ನೀಡಿ ಎಂದು ರೈತರು ಒತ್ತಾಯಿಸಿದ್ದಾರೆ. ತಮಿಳುನಾಡು ಸರ್ಕಾರದ ಜೊತೆಗಿನ ಸ್ನೇಹಕ್ಕಾಗಿ ಇಲ್ಲಿನ ಕಾಂಗ್ರೆಸ್‌ ಸರ್ಕಾರ ರೈತರಿಗೆ ವಂಚಿಸುತ್ತಿದೆ. ಆರ್‌ಎಸ್‌ಎಸ್‌ಗೆ ಯಾರೂ ಏನೂ ಮಾಡಲು ಸಾಧ್ಯವಿಲ್ಲ.

ಇಂದಿರಾಗಾಂಧಿ ಹಾಗೂ ರಾಜೀವ್‌ಗಾಂಧಿಗೆ, ಆರ್‌ಎಸ್‌ಎಸ್‌ಗೆ ಏನೂ ಮಾಡಲು ಸಾಧ್ಯವಾಗಿಲ್ಲ. ಅಂದಿನ ಪ್ರಧಾನಿ ನೆಹರೂ ಯೋಧರಿಗೆ ರಕ್ತ ನೀಡಲು ಆರ್‌ಎಸ್‌ಎಸ್‌ನ ಸಹಾಯ ಪಡೆದಿದ್ದರು. ಅಧಿಕಾರವಿದ್ದಾಗಲೇ ಕಾಂಗ್ರೆಸ್‌ಗೆ ಆರ್‌ಎಸ್‌ಎಸ್‌ ವಿರುದ್ಧ ಕ್ರಮ ಕೈಗೊಳ್ಳಲು ಸಾಧ್ಯವಾಗಲಿಲ್ಲ. ಇನ್ನು ಅಧಿಕಾರಕ್ಕೆ ಬರುವ ಅವಕಾಶವೂ ಇಲ್ಲ. ಕಾಂಗ್ರೆಸ್‌ ಮುಕ್ತ ಭಾರತ ನಿರ್ಮಾಣವಾಗಲಿದೆ ಎಂದರು.

ಸಿಎಂ ಕುರ್ಚಿ ಬದಲಾವಣೆ ಖಚಿತವಾಗಿದೆ. ಕಾಂಗ್ರೆಸ್‌ ಶಾಸಕರು ಕೂಡ ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆಂದು ಭವಿಷ್ಯ ನುಡಿಯುತ್ತಿದ್ದಾರೆ. ಡಿ.ಕೆ.ಶಿವಕುಮಾರ್‌ ದೇವಾಲಯಗಳಿಗೆ ಹೋಗಿ ಪೂಜೆ ಮಾಡಿಸುತ್ತಿರುವುದು ಅದರ ಲಕ್ಷಣ. ಬಿಜೆಪಿಗೆ ಮದ್ದು ಅರೆಯುವ ಮೊದಲು ಕಾಂಗ್ರೆಸ್‌ಗೆ ಕಾಂಗ್ರೆಸ್ಸೇ ಮದ್ದು ಅರೆಯಲಿ ಎಂದರು.

ರಾಜಕೀಯ

ಹನುಮ ಜಯಂತಿಯಂದೇ ಸಿಎಂ ಸಿದ್ದರಾಮಯ್ಯ ಕೋಳಿ ಸಾರು ಸೇವನೆ; ಆರ್. ಅಶೋಕ್ ಕಿಡಿ

ಹನುಮ ಜಯಂತಿಯಂದೇ ಸಿಎಂ ಸಿದ್ದರಾಮಯ್ಯ ಕೋಳಿ ಸಾರು ಸೇವನೆ; ಆರ್. ಅಶೋಕ್ ಕಿಡಿ

ಕಾಂಗ್ರೆಸ್‌ ಸರ್ಕಾರ ರೈತರ ಸಮಸ್ಯೆ ಬಗೆಹರಿಸಿಲ್ಲ. ರಸ್ತೆಗುಂಡಿಗಳನ್ನು ದುರಸ್ತಿ ಮಾಡಿಲ್ಲ. ಆದರೆ ಸಿಎಂ ಸಿದ್ದರಾಮಯ್ಯ (Cmsiddaramaiah) ಹಾಗೂ ಡಿ.ಕೆ.ಶಿವಕುಮಾರ್‌ (D.K. Shivakumar) ತಮ್ಮ ನಡುವಿನ ಸಮಸ್ಯೆ ಬಗೆಹರಿಸಲು ಉಪಾಹಾರ ಸಭೆ ಮಾಡಿದ್ದಾರೆ ಎಂದು ಪ್ರತಿಪಕ್ಷ

[ccc_my_favorite_select_button post_id="116948"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತು ಬೈಕ್‌ನಲ್ಲಿ ಪರಾರಿಯಾಗಿರುವ ಘಟನೆ ನಡೆದು ಕೆಲವೇ ಗಂಟೆಯೊಳಗೆ ಆರೋಪಿಯನ್ನು (Chain snatcher) ಬಂಧಿಸುವಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ನೇತೃತ್ವದ

[ccc_my_favorite_select_button post_id="116820"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!