20 ವರ್ಷ ಬಳಿಕ ಒಗ್ಗೂಡಿದ ಶಿವಸೇನೆ ಕುಡಿಗಳು..!

ShivSena leaders unite after 20 years

ಮುಂಬೈ: ಮರಾಠಾ ನಾಡಿನ ಬಾಳಾ ಠಾಕ್ರೆ ಕಾಲದಲ್ಲಿದ್ದ ಮೂಲ ಶಿವಸೇನೆಯ (ShivSena) ಹಳೆಯ ಯುವವ್ಯಾಘ್ರಗಳು ಈಗ ಮತ್ತೆ ಒಗ್ಗೂಡಿವೆ.

ಮರಾಠಾ ಅಸ್ಮಿತೆಯ ನೆಲದಲ್ಲಿ ಶಿವಸೇನೆಯ ಆರಂಭದ ದಿನಗಳ ನೆನಪು ಮರುಕಳಿಸಿದೆ. ಸೋದರ ಸಂಬಂಧಿಗಳಾದ ಉದ್ಧವ್ ಠಾಕ್ರೆ ಮತ್ತು ರಾಜ್ ಠಾಕ್ರೆ 20 ವರ್ಷಗಳ ನಂತರ ಮತ್ತೆ ಒಂದುಗೂಡಿದ್ದು, ಶನಿವಾರ ಒಟ್ಟಿಗೇ ವೇದಿಕೆಯೇರಿ ಒಗ್ಗಟ್ಟು ಪ್ರದರ್ಶಿಸಿದರು.

ಮಹಾರಾಷ್ಟ್ರ ಶಾಲೆಗಳಲ್ಲಿ 1ನೇ ತರಗತಿಯಿಂದ 3ನೇ ಭಾಷೆಯಾಗಿ ಹಿಂದಿ ಪರಿಚಯಿಸುವ ಯೋಜನೆಯನ್ನು ಸರಕಾರ ರದ್ದುಗೊಳಿಸಿದ ಹಿನ್ನೆಲೆ ಆಯೋಜಿಸಲಾಗಿದ್ದ ‘ಮರಾಠಿ ವಿಜಯೋತ್ಸವ ರ್ಯಾಲಿ’ಯ ವೇದಿಕೆಯಲ್ಲಿ ಇಬ್ಬರು ಸೋದರ ಸಂಬಂಧಿಗಳು ಅಕ್ಕಪಕ್ಕದ ಆಸನದಲ್ಲಿ ಆಸೀನರಾಗಿದರು.

2 ದಶಕಗಳ ಹಿಂದೆ ದೂರವಾದ ನಮ್ಮನ್ನು ಮತ್ತೆ ಜತೆಗೂಡಿಸಿದ ಕೀರ್ತಿ ಸಿಎಂ ಫಡ್ನವೀಸ್‌ಗೆ ಸಲ್ಲಬೇಕು ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನೆ(ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ವಿರುದ್ದ ವ್ಯಂಗ್ಯದ ಬಾಣ ಬಿಟ್ಟರು.

20 ವರ್ಷ ಬಳಿಕ ಉದ್ದವ್ ಮತ್ತು ರಾಜ್ ಒಟ್ಟಾಗಿದ್ದಾರೆ. ಬಾಳಾ ಸಾಹೇಬ್‌ ಠಾಕ್ರೆ ಮಾಡಲಾಗದ್ದನ್ನು ಫಡ್ನವಿಸ್ ಮಾಡಿದ್ದಾರೆ ಎಂದರು. ‘ಈಗಿನ ಮರು ಮಿಲನ ಸಾಂಕೇತಿಕವಲ್ಲ. ಅದಕ್ಕಿಂತಲೂ ಹೆಚ್ಚಿನದಾಗಿದೆ. ನಾವು ಒಟ್ಟಾಗಿಯೇ ಇರುತ್ತೇವೆ’ ಎನ್ನುವ ಮೂಲಕ ಶಿವಸೇನೆ(ಯುಬಿಟಿ) ನಾಯಕ ಉದ್ಧವ್ ಠಾಕ್ರೆ ರಾಜಕೀಯ ಮೈತ್ರಿಯ ಸುಳಿವು ನೀಡಿದರು.

‘ಶಿವಸೇನೆಯನ್ನು ಬಿಜೆಪಿ ಬಳಸಿಕೊಂಡು ಬಹಳ ಪ್ರಯೋಜನ ಪಡೆದುಕೊಂಡಿದೆ. ಬಾಳಾ ಸಾಹೇಬ್ ಬೆಂಬಲ ನಿಮಗಿಲ್ಲದಿದ್ದರೆ ಮಹಾರಾಷ್ಟ್ರದಲ್ಲಿ ಬಿಜೆಪಿ ಗೆಲ್ಲಲು ಸಾಧ್ಯವಿತ್ತೆ? ರಾಜ್ಯದಲ್ಲಿ ನಿಮ್ಮ ಬಗ್ಗೆ ಯಾರಿಗೆ ತಿಳಿದಿತ್ತು. ನಮಗೆ ಹಿಂದುತ್ವದ ಪಾಠ ಹೇಳಲು ಬಿಜೆಪಿಗೆಲ್ಲಿದೆ ಅಧಿಕಾರ? ಎಂದು ಉದ್ದವ್ ವಾಗ್ದಾಳಿ ನಡೆಸಿದರು.

ಶಿವಸೇನೆ (ಯುಬಿಟಿ) ಮತ್ತು ಎಂಎನ್ಎಎಸ್ ಬೆಂಬಲಿಗರು ಕ್ಯಾಲಿಗೆ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ್ದರು. ಎರಡೂ ಪಕ್ಷಗಳ ಬೆಂಬಲಿಗರು ಮುಖ್ಯದ್ವಾರ ಮುರಿದು ಸಭಾಂಗಣದತ್ತ ಒಮ್ಮೆಲೇ ನುಗ್ಗಿದಾಗ ಗೊಂದಲ ಉಂಟಾಗಿತ್ತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ

ರಾಜಕೀಯ

ಕಾಂಗ್ರೆಸ್ ಕುಟುಂಬ ಆಧಾರಿತ ಪಕ್ಷ: ಬಸವರಾಜ ಬೊಮ್ಮಾಯಿ

ಕಾಂಗ್ರೆಸ್ ಕುಟುಂಬ ಆಧಾರಿತ ಪಕ್ಷ: ಬಸವರಾಜ ಬೊಮ್ಮಾಯಿ

ಕಾಂಗ್ರೆಸ್ ನಲ್ಲಿ (Congress) ಸೋನಿಯಾ ಗಾಂಧಿ (Soniya Gandhi), ರಾಹುಲ್ ಗಾಂಧಿ, ಪ್ರಿಯಾಕಾಂ ಗಾಂಧಿ (Rahul Gandhi) ಮನಸ್ಸು ಯಾರು ಗೆಲ್ಲುತ್ತಾರೆ ಅವರು ಸಿಎಂ ಆಗುತ್ತಾರೆ. ಇದು ಪ್ರಜಾಪಭುತ್ವದ ವ್ಯವಸ್ಥೆಗೆ ನಾಚಿಗೇಡಿನ ಸಂಗತಿ ಎಂದು

[ccc_my_favorite_select_button post_id="121658"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಪರಾರಿಯಾಗಿದ್ದ ವ್ಯಕ್ತಿ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಪರಾರಿಯಾಗಿದ್ದ ವ್ಯಕ್ತಿ ಆತ್ಮಹತ್ಯೆ..!

ಜಿಂಕೆಬಚ್ಚಹಳ್ಳಿಯ ಸಮೀಪ ಶನಿವಾರ ಕಾರೊಂದು (Car) ಅನುಮಾನಾಸ್ಪದ ರೀತಿಯಲ್ಲಿ ಸುಟ್ಟು ಕರಕಲಾಗಿದ್ದು ಅದರೊಳಗೆ ಮಹಿಳೆಯೊಬ್ಬರ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಪರಾರಿಯಾಗಿದ್ದಾರೆ ಎನ್ನಲಾಗಿದ್ದ ವ್ಯಕ್ತಿ, ರೈಲಿಗೆ ಸಿಲುಕಿ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

[ccc_my_favorite_select_button post_id="121661"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]