ಡಿ.ಕೆ. ಶಿವಕುಮಾರ್‌ಗೆ ಉನ್ನತ ಸ್ಥಾನ ಸಿಗಬೇಕು, ಜಾತಿ ಮತ್ತು ಧರ್ಮಗಳ ನಡುವೆ ಒಡಕುಂಟು ಮಾಡುವ ನಾಯಕರ ಬದಲು ಇಂತಹ ನಾಯಕರ ಅಗತ್ಯ; ರಂಭಾಪುರಿ ಶ್ರೀ

D.K. Shivakumar should be given a higher position; Rambhapuri Shri

ಕನಕಪುರ: “ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಡಿ.ಕೆ. ಶಿವಕುಮಾರ್ (D.K.Shivakumar) ಅವರು ಹೆಚ್ಚಿನ ಶಕ್ತಿ ತುಂಬಿದ್ದು, ಚುನಾವಣೆ ನಂತರ ಅವರಿಗೆ ಉನ್ನತ ಸ್ಥಾನ ಸಿಗಬೇಕಾಗಿತ್ತು. ಮುಂದಿನ ದಿನಗಳಲ್ಲಿ ಆ ಸ್ಥಾನ ಸಿಗಲಿ” ಎಂದು ಬಾಳೆಹೊನ್ನೂರು ರಂಭಾಪುರಿ ಜಗದ್ಗುರು ಪ್ರಸನ್ನ ರೇಣುಕ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯರು ತಿಳಿಸಿದರು.

ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರ ತಾಲೂಕಿನ ಕೋಡಿಹಳ್ಳಿ ಹೋಬಳಿಯ ಸಿದ್ದೇಶ್ವರಸ್ವಾಮಿ ಬೆಟ್ಟದಲ್ಲಿ ಮೆಟ್ಟಿಲುಗಳ ಉದ್ಘಾಟನೆ ಹಾಗೂ ಧರ್ಮಜಾಗೃತಿ ಸಮಾರಂಭದಲ್ಲಿ ಶ್ರೀಮದ್ ರಂಬಾಪುರಿ ಶ್ರೀಗಳು ಮಾತನಾಡಿದರು.

“ಮೊನ್ನೆಯಷ್ಟೇ ಶಿವಕುಮಾರ್ ಅವರು ಚಾಮುಂಡಿ ಬೆಟ್ಟದಲ್ಲಿ ತಾಯಿ ದರ್ಶನ ಮಾಡಿ ಮಾಧ್ಯಮಗಳ ಜೊತೆ ಮಾತನಾಡುವಾಗ, ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲವಾಗುವುದಿಲ್ಲ ಎಂಬ ಮಾತನ್ನು ಹೇಳಿದರು. ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚು ಶಕ್ತಿ ತಂದುಕೊಟ್ಟವರು ಡಿ.ಕೆ. ಶಿವಕುಮಾರ್. ಅವರು ಪಕ್ಷದ ಅಧ್ಯಕ್ಷರಾದ ಬಳಿಕ ಕ್ರಿಯಾಶೀಲರಾಗಿ, ಚುರುಕಾಗಿ ಪಕ್ಷ ಸಂಘಟಿಸಿದರು. ಚುನಾವಣೆ ನಂತರ ಅವರಿಗೆ ಉನ್ನತ ಸ್ಥಾನ ಸಿಗಬೇಕಾಗಿತ್ತು. ಆದರೆ ಪಕ್ಷದ ವರಿಷ್ಠರ ಭಾವನೆಗೆ ಸ್ಪಂದಿಸಿ, ಉದಾರ ಮನೋಭಾವದಿಂದ ಉಪಮುಖ್ಯಮಂತ್ರಿ ಸ್ಥಾನ ಅಲಂಕರಿಸಿ, ಉತ್ತಮ ಕಾರ್ಯ ಮಾಡುತ್ತಿದ್ದಾರೆ” ಎಂದು ತಿಳಿಸಿದರು.

“ರಾಜ್ಯದ ನಾಯಕರು ಹಾಗೂ ಪಕ್ಷದ ವರಿಷ್ಠರು ಮುಂದಿನ ದಿನಗಳಲ್ಲಿ ತಮ್ಮ ಒಡಂಬಡಿಕೆಯಂತೆ ಶಿವಕುಮಾರ್ ಅವರಿಗೆ ಅವಕಾಶ ಕಲ್ಪಿಸಿಕೊಡಬೇಕು. ಆಗ ಇವರ ಪರಿಶ್ರಮ ಸಾರ್ಥಕವಾಗುತ್ತದೆ. ಶಿವಕುಮಾರ್ ಅವರಿಗೆ ಮುಂದಿನ ದಿನಗಳಲ್ಲಿ ಉತ್ತಮ ಭವಿಷ್ಯ ನಿರ್ಮಾಣವಾಗಲಿ, ರಾಜ್ಯದ ಶ್ರೇಯೋಭಿವೃದ್ಧಿ, ಬಡವರು ಸೇರಿದಂತೆ ಎಲ್ಲಾ ವರ್ಗದ ಹಿತ ಕಾಯುವಂತಾಗಲಿ” ಎಂದು ಆಶೀರ್ವದಿಸಿದರು.

“ಕೆಲವು ರಾಜಕಾರಣಿಗಳು ಸಮಾಜದಲ್ಲಿ, ಜಾತಿ ಧರ್ಮಗಳ ಮಧ್ಯೆ ಸಂಘರ್ಷ ಹುಟ್ಟು ಹಾಕುತ್ತಿದ್ದಾರೆ. ಹೀಗಾಗಿ ಸಮುದಾಯಗಳ ನಡುವೆ ಸಾಮರಸ್ಯ ಮೂಡಿದರೆ ಸಮಾಜಕ್ಕೆ ಒಳ್ಳೆಯದಾಗುತ್ತದೆ. ಸಮಯ ಬಂದಾಗ ಶಿವಕುಮಾರ್ ಅವರು ದಿಟ್ಟ ನಿರ್ಧಾರ ಕೈಗೊಳ್ಳುವ ವಿಶ್ವಾಸವಿದೆ. ಅವರು ನಂಬಿರುವ ದೈವ ಕೈ ಹಿಡಿದು ನಡೆಸಿ ಉನ್ನತ ಸ್ಥಾನಕ್ಕೆ ಮುನ್ನಡೆಸಲಿ” ಎಂದು ಹರಸಿದರು.

“ಒತ್ತಡದ ಕೆಲಸದ ನಡುವೆಯು ಜನರ ಮೇಲೆ ಅವರಿಗೆ ಅಭಿಮಾನ ಇಲ್ಲಿಗೆ ಬರುವಂತೆ ಮಾಡಿದೆ. ಶಿವಕುಮಾರ್ ಅವರು ಕೇವಲ ಕ್ಣೇತ್ರದ ಜನರ ಸಮಸ್ಯೆಗಳನ್ನು ‌ಬಗೆಹರಿಸುತ್ತಿಲ್ಲ, ರಾಜ್ಯದ ಎಲ್ಲಾ ಕ್ಷೇತ್ರದ ‌ಜನರ‌‌ ಸಮಸ್ಯೆಗಳನ್ನು ಆಲಿಸಿ ಬಗೆಹರಿಸುವ ಕೆಲಸ ಮಾಡುತ್ತಿದ್ದಾರೆ. ಇಂತಹ ನಾಯಕರ ‌ಮೇಲೆ ಎಲ್ಲರ ಅಭಿಮಾನ ಅನವರತವಿರಲಿ. ಎಲ್ಲರೂ ಅವರ ಜೊತೆ ಇದ್ದರೆ ನಾಯಕರ ಸ್ಥಿರ ಭಾವನೆ ‌ಈ ಕ್ಷೇತ್ರದ‌ ಮೇಲೆ ದೃಡವಾಗಿ ಇರುತ್ತದೆ. ಈ ಭಾಗದ ಜನ‌ಸಮುದಾಯಕ್ಕೆ ಸೂಚ್ಯವಾಗಿ ಕರೆಯನ್ನು ಕೊಡುತ್ತೇನೆ” ಎಂದು ಕರೆ ನೀಡಿದರು.

ಶಿವಕುಮಾರ್ ಅವರ ಭಕ್ತಿ, ಶ್ರದ್ಧೆ ವರ್ಣಿಸಲು ಅಸಾಧ್ಯ

ಚಾರಿತ್ರಿಕ ಇತಿಹಾಸದಲ್ಲಿ ಇಂದು ಸುದಿನ. ಬಿಜ್ಜಹಳ್ಳಿಯಲ್ಲಿ ಇಂದು ಹಲವು ಧಾರ್ಮಿಕ ಕಾರ್ಯಕ್ರಮ ನಡೆಸಲಾಗುತ್ತಿದೆ. ರಂಭಾಪುರಿ ಪೀಠ ಪರಂಪರೆಯಲ್ಲಿ 119ನೇ ಪೀಠಾಧೀಶ್ವರರಾದ ವೀರ ಗಂಗಾಧರ ಶ್ರೀಗಳ ಮೇಲೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಇಟ್ಟಿರುವ ಭಕ್ತಿ, ಶ್ರದ್ಧೆ, ಅಭಿಮಾನವನ್ನು ವರ್ಣಿಸಲು ಶಬ್ಧಗಳಿಲ್ಲ.

ಗಂಗಾಧರ ಶ್ರೀಗಳ ಆಶೀರ್ವಾದದಿಂದ ತಮ್ಮ ಜೀವನದಲ್ಲಿ ಬಂದ ಕಷ್ಟಗಳು ಮಂಜಿನಂತೆ ಕರಗಿ ಮಾಯವಾಗಿವೆ ಎಂದು ಶಿವಕುಮಾರ್ ಅವರು ಬಹಳಷ್ಟು ಬಾರಿ ವ್ಯಕ್ತಪಡಿಸಿದ್ದಾರೆ. ಶಿವಕುಮಾರ್ ಅವರು ಈ ಕ್ಷೇತ್ರದ ಜನರ ಕಲ್ಯಾಣಕ್ಕೆ ಅಮೂಲ್ಯ ಸೇವೆ ಸಲ್ಲಿಸಿದ್ದಾರೆ.

ಶಿವಕುಮಾರ್ ಅವರು ದೇವರಲ್ಲಿ ಹಾಗೂ ಧರ್ಮದಲ್ಲಿ ಅಪಾರ ನಂಬಿಕೆ ಹೊಂದಿದ್ದಾರೆ. ಅವರ ಮಾತಿನಲ್ಲಿ ಆಧ್ಯಾತ್ಮದ ಒಳತಿರುಳನ್ನು ಅರಿಯಬಹುದು. ಇಂತಹ ಮಾತುಗಳು ರಾಜಕಾರಣಿಗಳ ಬಾಯಲ್ಲಿ ಬರುವುದು ಕಷ್ಟ. ಅವರ ತಂದೆ ತಾಯಿ ಕೊಟ್ಟಿರುವ ಸಂಸ್ಕಾರದ ಪರಿಣಾಮ ಹಾಗೂ ಗಂಗಾಧರ ಶ್ರೀಗಳ ಮೇಲೆ ಇಟ್ಟಿರುವ ಅಪಾರ ಭಕ್ತಿಯಿಂದ ಅವರ ಬಾಯಲ್ಲಿ ಇಂತಹ ಮಾತುಗಳು ಬರುವಂತೆ ಮಾಡಿದೆ.

ಮಾನವ ಕಲ್ಯಾಣವೇ ಎಲ್ಲಾ ಧರ್ಮಗಳ ಉದ್ದೇಶ

“ಧರ್ಮ ಯಾವುದೇ ಆದರೂ ಅದೆಲ್ಲದರ ಮೂಲ ಉದ್ದೇಶ ಮಾನವ ಕಲ್ಯಾಣ. ಮನುಷ್ಯ ಮನುಷ್ಯನಾಗಿ ಬಾಳಿ ಬದುಕಬೇಕು ಎಂದು ಎಲ್ಲಾ ಧರ್ಮಗಳು ಸಾರುತ್ತವೆ. ಪರಶಿವನ ಪಂಚಮುಖಗಳಿಂದ ಆವಿರ್ಭವಿಸಿದ ಜಗದ್ಗುರು ರೇಣುಕಾಚಾರ್ಯರು ವೀರಶೈವ ಧರ್ಮವನ್ನು ಸಂಸ್ಥಾಪಿಸಿದರು. 12ನೇ ಶತಮಾನದಲ್ಲಿ ಭಕ್ತಿ ಭಂಡಾರಿ ಬಸವಣ್ಣನವರು ಈ ಧರ್ಮ ಸ್ವೀಕಾರ ಮಾಡಿ, ಧರ್ಮವನ್ನು ಮತ್ತಷ್ಟು ಬೆಳೆಸಿದರು” ಎಂದು ತಿಳಿಸಿದರು.

“ಬಸವಣ್ಣನವರು ತಮ್ಮ ವಚನದಲ್ಲಿ ಶಿವ ಪಥವನರಿವಡೆ ಗುರು ಪಥವೇ ಮೊದಲು ಎಂಬ ಮಾತನ್ನು ವ್ಯಕ್ತಪಡಿಸಿದ್ದಾರೆ. ಭಗವಂತ ಒಬ್ಬನೇ, ಆತನಿಗೆ ಇರುವ ಹೆಸರುಗಳು ಅನಂತವಾಗಿವೆ. ಈ ಪರಮ ಸತ್ಯ ತಿಳಿದಾಗ ಸಮಾಜದಲ್ಲಿ ಯಾವುದೇ ರೀತಿಯ ಸಂಘರ್ಷ, ಸಮಸ್ಯೆಗಳು ಉದ್ಭವಿಸಿವುದಿಲ್ಲ. ಕಲಿಗಾಲದಲ್ಲಿ ಧರ್ಮ, ಜಾತಿ ಹೆಸರಿನಲ್ಲಿ ನಡೆಯಬಾರದ ಘಟನೆ ನಡೆಯುತ್ತಿರುವುದನ್ನು ನೋಡಿದರೆ ಆಧ್ಯಾತ್ಮಿಕ ಗುರುಗಳ ಮನಸ್ಸಿಗೆ ಬಹಳಷ್ಟು ನೋವಾಗುತ್ತದೆ” ಎಂದು ಹೇಳಿದರು.

“ಸಾಹಿತಿ ಸಿದ್ಧಯ್ಯ ಪುರಾಣಿಕರು ಓದಿ ಬ್ರಾಹ್ಮಣನಾಗು, ಕಾದಿ ಕ್ಷತ್ರಿಯನಾಗು, ಶೂದ್ರ ವೈಶ್ಯನೆ ಆಗು, ದುಡಿದು ಗಳಿಸಿ ಏನಾದರೂ ಆಗು, ನಿನ್ನೊಲವಿನಂತಾಗು, ಏನಾದರೂ ಸರಿಯೆ – ಮೊದಲು ಮಾನವನಾಗು ಎಂದು ಹೇಳಿದ್ದಾರೆ” ಎಂದರು.

ಇದನ್ನೂ ಓದಿ: ನಾನು ನಿಮ್ಮ ಸೇವಕ, ಸದಾ ನಿಮ್ಮ ಸೇವೆ ಮಾಡುತ್ತೇನೆ: ಡಿಸಿಎಂ ಡಿ.ಕೆ. ಶಿವಕುಮಾರ್

ರಾಜಕೀಯ

ಕಾಂಗ್ರೆಸ್ ಕುಟುಂಬ ಆಧಾರಿತ ಪಕ್ಷ: ಬಸವರಾಜ ಬೊಮ್ಮಾಯಿ

ಕಾಂಗ್ರೆಸ್ ಕುಟುಂಬ ಆಧಾರಿತ ಪಕ್ಷ: ಬಸವರಾಜ ಬೊಮ್ಮಾಯಿ

ಕಾಂಗ್ರೆಸ್ ನಲ್ಲಿ (Congress) ಸೋನಿಯಾ ಗಾಂಧಿ (Soniya Gandhi), ರಾಹುಲ್ ಗಾಂಧಿ, ಪ್ರಿಯಾಕಾಂ ಗಾಂಧಿ (Rahul Gandhi) ಮನಸ್ಸು ಯಾರು ಗೆಲ್ಲುತ್ತಾರೆ ಅವರು ಸಿಎಂ ಆಗುತ್ತಾರೆ. ಇದು ಪ್ರಜಾಪಭುತ್ವದ ವ್ಯವಸ್ಥೆಗೆ ನಾಚಿಗೇಡಿನ ಸಂಗತಿ ಎಂದು

[ccc_my_favorite_select_button post_id="121658"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ಪರಿಚಯದವರ, ಸಂಬಂಧಿಕರ ಮಾತನ್ನು ನಂಬಿ, ವಾಹನಗಳನ್ನು ನೀಡುವುದು ಎಷ್ಟು ಸಮಸ್ಯೆ ತಂದೊಡ್ಡುತ್ತದೆ ಎಂಬುದಕ್ಕೆ ಇಂದು ದೊಡ್ಡಬಳ್ಳಾಪುರದ ಹೊರವಲಯದಲ್ಲಿರುವ ಜಿಂಕೆಬಚ್ಚಹಳ್ಳಿ ನಿರ್ಜನ ಪ್ರದೇಶದಲ್ಲಿ (Desolate area) ನಡೆದಿರುವ ಘಟನೆ ಸಾಕ್ಷಿಯಾಗಿ ನಿಂತಿದೆ.

[ccc_my_favorite_select_button post_id="121633"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]