We are not worried about the CM post, why should you: DCM D.K. Shivakumar

ಸಿಎಂ ಸ್ಥಾನದ ವಿಚಾರ ನಮಗೇ ಗಾಬರಿಯಿಲ್ಲ ನಿಮಗ್ಯಾಕೆ: ಖಾಸಗಿ ಸುದ್ದಿವಾಹಿನಿಗಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಟಕ್ಕರ್

ಬೆಂಗಳೂರು: “ನೀರಾವರಿ ಯೋಜನೆಗಳ ವಿಚಾರವಾಗಿ ದೆಹಲಿ ಪ್ರವಾಸ ಬಹುತೇಕ ಫಲಪ್ರದವಾಗಿದ್ದು, ಎತ್ತಿನಹೊಳೆ ಯೋಜನೆ ಸಂಬಂಧ ನಮ್ಮ ಮನವಿಯನ್ನು ಪುರಸ್ಕರಿಸುವುದಾಗಿ ಹೇಳಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು.

ದೆಹಲಿ ಪ್ರವಾಸದ ಬಗ್ಗೆ ಮಾಧ್ಯಮಗಳು ಕೇಳಿದಾಗ, “ದೆಹಲಿ ಪ್ರವಾಸದಲ್ಲಿ ಕೇಂದ್ರ ಜಲಶಕ್ತಿ ಸಚಿವರಾದ ಸಿ.ಆರ್ ಪಾಟೀಲ್ ಅವರನ್ನು ಭೇಟಿ ಮಾಡಿ ಕೃಷ್ಣಾ ನ್ಯಾಯಾಧಿಕರಣದ ತೀರ್ಪಿನ ಸಂಬಂಧ ಅಧಿಸೂಚನೆ ಹೊರಡಿಸುವುದು, ಮೆಕೆದಾಟು ಯೋಜನೆ ಅಪ್ರೈಸಲ್ ವರದಿ ಬಗ್ಗೆ ಚರ್ಚಿಸಲಾಗಿದೆ. ಅರಣ್ಯ ಸಚಿವರಾದ ಭೂಪೇಂದ್ರ ಯಾದವ್ ಅವರನ್ನು ಭೇಟಿ ಮಾಡಿ ಕಳಸಾ ಬಂಡೂರಿ ವಿಚಾರವಾಗಿ ಚರ್ಚೆ ಮಾಡಲಾಗಿದೆ. ಈ ವಿಚಾರವಾಗಿ ಪ್ರಹ್ಲಾದ್ ಜೋಷಿ ಅವರ ಜತೆಗೂ ಮಾತನಾಡಿದ್ದೇನೆ. ಎರಡು ರಾಜ್ಯಗಳ ನಡುವೆ ರಾಜಿಗೆ ಸಲಹೆ ನೀಡಿದ್ದಾರೆ. ನಾವು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಈ ವಿಚಾರದಲ್ಲಿ ಕೆಲವು ತಾಂತ್ರಿಕ ಅಂಶಗಳಿವೆ. ಗೋವಾ ದವರು ನಮಗೆ ಶೋಕಾಸ್ ನೋಟೀಸ್ ನೀಡಿರುವುದು ಸರಿಯಲ್ಲ ಎಂದು ಹೇಳಿದ್ದು, ಕಾನೂನು ತಜ್ಞರ ಜೊತೆ ಚರ್ಚೆ ಮಾಡಲಾಗಿದೆ” ಎಂದರು.

“ಜೊತೆಗೆ ಹೊಸ ಯೋಜನೆಗಳಿಗೆ ಮನವಿ ಸಲ್ಲಿಸಿದ್ದೇವೆ. ಸಂಸತ್ ಅಧಿವೇಶನ ಸಂದರ್ಭದಲ್ಲಿ ಮತ್ತೊಮ್ಮೆ ದೆಹಲಿಗೆ ಹೋಗಿ, ರಾಜ್ಯದ ಸಂಸದರ ಜೊತೆ ಚರ್ಚೆ ನಡೆಸಿ ಒಟ್ಟಾಗಿ ಒತ್ತಾಯ ಹೇರಲು ಮನವಿ ಮಾಡಲಾಗುವುದು” ಎಂದು ತಿಳಿಸಿದರು.

ಎತ್ತಿನಹೊಳೆ ಯೋಜನೆ ಸಂಬಂಧ ದೊಡ್ಡಬಳ್ಳಾಪುರ ಲಕ್ಕೇನಹಳ್ಳಿಯಲ್ಲಿ ಅಣೆಕಟ್ಟು ನಿರ್ಮಾಣಕ್ಕೆ ವಿರೋಧ ವ್ಯಕ್ತವಾಗಿರುವ ಬಗ್ಗೆ ಕೇಳಿದಾಗ, “ನೀವು ರಸ್ತೆ, ಅಣೆಕಟ್ಟು ಸೇರಿದಂತೆ ಯಾವುದೇ ಯೋಜನೆ ಮಾಡಬೇಕಾದರೂ ವಿರೋಧ ವ್ಯಕ್ತವಾಗುತ್ತದೆ. ಕುಡಿಯುವ ನೀರು ಪೂರೈಸಲೇಬೇಕು. ಈ ನೀರನ್ನು ಎಲ್ಲಾದರೂ ಸಂಗ್ರಹ ಮಾಡಿಕೊಳ್ಳಬೇಕು. ದೊಡ್ಡಬಳ್ಳಾಪುರದ ಲಕ್ಕೇನಹಳ್ಳಿ ಮಾತ್ರವಷ್ಟೇ ಅಲ್ಲ, ಕೊರಟಗೆರೆ ಭಾಗದಲ್ಲಿ ಕೆಲವು ಪ್ರದೇಶ ಬಳಸಿಕೊಳ್ಳಬೇಕು ಎಂದು ಆಲೋಚಿಸಿದ್ದೆವು. ನೀರು ಹೇಗೆ ಹರಿಯುತ್ತದೆ ಹೇಳಲು ಸಾಧ್ಯವಿಲ್ಲ. ಈ ವಿಚಾರವಾಗಿ ಪರಮೇಶ್ವರ್ ಅವರ ಜತೆ ಚರ್ಚಿಸಿ, ಮುಂದಿನ ಸಚಿವ ಸಂಪುಟದಲ್ಲಿ ಚರ್ಚೆ ನಡೆಸಲಾಗುವುದು” ಎಂದು ತಿಳಿಸಿದರು.

ಹೈಕಮಾಂಡ್ ಭೇಟಿಯಾಗಿ ಯಾವೆಲ್ಲಾ ರಾಜಕೀಯ ಚರ್ಚೆ ನಡೆಯಿತು ಎಂದು ಕೇಳಿದಾಗ, “ಯಾವ ರಾಜಕೀಯ ಚರ್ಚೆಯಾಗಿದೆ? ನಮ್ಮ ಕಾರ್ಯಕರ್ತರಿಗೆ ಕೆಲವು ಸ್ಥಾನಮಾನ ನೀಡುವ ಬಗ್ಗೆ ಚರ್ಚೆ ಮಾಡಲಾಗಿದೆ. ಎಲ್ಲಾ ಶಾಸಕರು ತಮ್ಮ ಅಭಿಪ್ರಾಯ ಸಲ್ಲಿಸಿದ್ದಾರೆ. ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಪಕ್ಷ ಸಂಘಟನೆ ವಿಚಾರದಲ್ಲಿ ಶ್ರಮಿಸಿರುವವರಿಗೆ ಹಾಗೂ ಕೆಲವರಿಗೆ ನಾವು ಕೊಟ್ಟಿರುವ ಮಾತಿಗೆ ಬದ್ಧವಾಗಿ ಸ್ಥಾನಮಾನ ನೀಡಬೇಕಿದೆ. ಇದು ಅಂತಿಮ ಹಂತಕ್ಕೆ ಬಂದಿದೆ. ಇದರ ಪ್ರಸ್ತಾವನೆಯನ್ನು ಮತ್ತೊಮ್ಮೆ ದೆಹಲಿಗೆ ಕಳುಹಿಸಿ ಅನುಮತಿ ಪಡೆಯಲಾಗುವುದು” ಎಂದರು.

ನಿಮ್ಮ ಪ್ರಶ್ನೆಗಳಿಗೆ ಮುಖ್ಯಮಂತ್ರಿಗಳೇ ಉತ್ತರ ನೀಡಿದ್ದಾರೆ

ಡಿ.ಕೆ. ಶಿವಕುಮಾರ್ ಅವರಿಗೆ ಕೆಲವು ಶಾಸಕರ ಬೆಂಬಲ ಮಾತ್ರವಿದೆ ಎಂಬ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ನಾನು ಪಕ್ಷದ ರಾಜ್ಯ ಅಧ್ಯಕ್ಷ. ಪಕ್ಷ ಏನು ಹೇಳುತ್ತದೆಯೋ ಅದನ್ನು ಮಾಡುತ್ತೇನೆ. ನಾನು ನಿನ್ನೆ ಬ್ಯುಸಿ ಇದ್ದೆ. ಅದರ ಮಧ್ಯೆ ಮುಖ್ಯಮಂತ್ರಿಗಳ ಹೇಳಿಕೆ ನೋಡಿದೆ. ನಿಮ್ಮ ಪ್ರಶ್ನೆಗಳಿಗೆ ಅವರೇ ಉತ್ತರ ನೀಡಿದ್ದಾರೆ. ಅವರು ಉತ್ತರ ನೀಡಿದ ಮೇಲೆ ನಾವು ಮತ್ತೆ ಆ ವಿಚಾರ ಚರ್ಚೆ ಮಾಡುವುದು ಸೂಕ್ತವಲ್ಲ. ನೀವುಗಳು ಸಹ ಮತ್ತೆ ಆ ವಿಚಾರವಾಗಿ ಪ್ರಶ್ನೆ ಮಾಡುವುದು ಸೂಕ್ತವಲ್ಲ” ಎಂದು ಹೇಳಿದರು.

ಈ ಹಿಂದೆ ನನ್ನ ಬಳಿ ಆಯ್ಕೆ ಇಲ್ಲ ಎಂದು ಹೇಳಿದ್ದಿರಿ, ಈಗಲೂ ನೀವು ಅದೇ ಸ್ಥಿತಿಯಲ್ಲಿದ್ದೀರಾ ಎಂದು ಕೇಳಿದಾಗ, “ನಿಮಗೆ ನಮ್ಮ ವಿಚಾರದಲ್ಲಿ ಯಾಕೆ ಗಾಬರಿ? ಈ ವಿಚಾರದಲ್ಲಿ ನಮಗೆ ಗಾಬರಿಯಿಲ್ಲ” ಎಂದರು.

ಡಿ.ಕೆ. ಶಿವಕುಮಾರ್ ಅವರು ಸಿಎಂ ಆಗಬೇಕು ಎಂಬ ಆಸೆ ಅನೇಕರಿಗೆ ಇರುತ್ತದೆ ಎಂದು ಕೇಳಿದಾಗ, “ನಿಮ್ಮಲ್ಲೂ ಅನೇಕರಿಗೆ ಅನೇಕ ಆಸೆ ಇರುತ್ತವೆ. ನಾನು ಈ ವಿಚಾರವಾಗಿ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಅದರ ಅವಶ್ಯಕತೆ ಇಲ್ಲ. ಯಾರು ಏನೇನು ಮಾತನಾಡಿದ್ದಾರೆ, ಅವರೇ ಪ್ರಶ್ನೆ ಉತ್ತರ ಎಲ್ಲವನ್ನು ನೀಡಿದ್ದಾರೆ. ಸಧ್ಯಕ್ಕೆ ನಾನು ಯಾವುದೇ ಉತ್ತರ ನೀಡುವುದಿಲ್ಲ” ಎಂದು ತಿಳಿಸಿದರು.

ರಾಜಕೀಯ

ನನಗೆ ಜನರ ಸೇವೆ ಮಾಡುವ ಚಪಲ, ಕೆಲವರಿಗೆ ಜನರ ದುಡ್ಡು ಲೂಟಿ ಹೊಡೆಯೋ ಚಪಲ; ಹೆಚ್.ಡಿ. ಕುಮಾರಸ್ವಾಮಿ

ನನಗೆ ಜನರ ಸೇವೆ ಮಾಡುವ ಚಪಲ, ಕೆಲವರಿಗೆ ಜನರ ದುಡ್ಡು ಲೂಟಿ ಹೊಡೆಯೋ

ಕೆಲವರಿಗೆ ಜನರನ್ನು ಲೂಟಿ ಮಾಡಿ ದುಡ್ಡು ಮಾಡುವ ಚಪಲ. ನನಗೆ ಜನರ ಜತೆ ನಿಂತು ಅವರ ಸಹಾಯಕ್ಕೆ ನಿಲ್ಲುವ ಚಪಲ. ಒಬ್ಬೊಬ್ಬರಿಗೆ ಒಂದೊಂದು ಚಪಲ ಇರುತ್ತದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="118524"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ (Maanja thread) ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ.

[ccc_my_favorite_select_button post_id="118471"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!