Shakti Yojana is a model for the country: DCM D.K. Shivakumar

ಶಕ್ತಿ ಯೋಜನೆ ದೇಶಕ್ಕೆ ಮಾದರಿ; ಗ್ಯಾರಂಟಿಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: “500 ಕೋಟಿ ಟ್ರಿಪ್ ಗಳನ್ನು ಕಂಡಿರುವ ಶಕ್ತಿ ಯೋಜನೆ ಇಡೀ ದೇಶಕ್ಕೆ ಮಾದರಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar) ಬಣ್ಣಿಸಿದರು.

“ಶಕ್ತಿ” ಯೋಜನೆಯಡಿ ಮಹಿಳೆಯರ ಉಚಿತ ಪ್ರಯಾಣ 500 ಕೋಟಿ ಟ್ರಿಪ್ ಮುಟ್ಟಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಬೆಂಗಳೂರಿನ ವಿಂಡ್ಸರ್ ವೃತ್ತದಲ್ಲಿ ಬಿಎಂಟಿಸಿ ಬಸ್ ನಲ್ಲಿ 500 ನೇ ಕೋಟಿಯ ಟಿಕೆಟ್ ಅನ್ನು ಮಹಿಳಾ ಪ್ರಯಾಣಿಕರಿಗೆ ಸೋಮವಾರ ವಿತರಿಸಿದರು. ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

“ಯಾವುದೇ ಕಾರಣಕ್ಕೂ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಎಲ್ಲಿಯವರೆಗೆ ದೇವರು ಶಕ್ತಿ ಹಾಗೂ ಜನ ಅಧಿಕಾರ ನೀಡುತ್ತಾರೋ ಅಲ್ಲಿಯತನಕ ಯೋಜನೆಗಳು ಮುಂದುವರೆಯುತ್ತವೆ” ಎಂದರು.

“ಕಾಂಗ್ರೆಸ್ ಪಕ್ಷ ಈ ದೇಶದ ಜನರಿಗೆ ಹಲವಾರು ಕಲ್ಯಾಣ ಕಾರ್ಯಕ್ರಮಗಳನ್ನು ನೀಡಿದೆ. ಹಲಾವಾರು ಪಿಂಚಣಿ ಯೋಜನೆಗಳು, ನರೇಗಾ, ಬ್ಯಾಂಕ್ ರಾಷ್ಟ್ರೀಕರಣ ಸೇರಿದಂತೆ ನಮ್ಮ ಯೋಜನೆಗಳನ್ನು ಬಿಜೆಪಿ ಸೇರಿದಂತೆ ಯಾರೂ ಸಹ ನಿಲ್ಲಿಸಲು ಸಾಧ್ಯವಿಲ್ಲ. ಇವು ಜನರ ಹೃದಯ ಹಾಗೂ ಬದುಕಿಗೆ ಬೇಕಾದಂತಹ ಕಾರ್ಯಕ್ರಮಗಳು. ಇವು ನಿರಂತರವಾಗಿರುತ್ತವೆ” ಎಂದರು.

“ಈ ಯೋಜನೆಯಿಂದ ರಾಜ್ಯದ ಉದ್ದಗಲಕ್ಕೂ ಮಹಿಳೆಯರು ಉಚಿತವಾಗಿ ಸಂಚಾರ ಮಾಡಬಹುದು. ಯಾವುದೇ ಖರ್ಚು ಮಾಡದೇ ತಮ್ಮ ಪ್ರೀತಿಪಾತ್ರರ ಮನೆಗಳಿಗೆ ಹೋಗಬಹುದು.‌ ಕೆಲಸಕ್ಕೆ ಹೋಗುವ ಅನೇಕ ಮಹಿಳೆಯರಿಗೆ ಪ್ರತಿ ತಿಂಗಳು 500 ರಿಂದ‌ 1 ಸಾವಿರಕ್ಕೂ ಹೆಚ್ಚು ಹಣ ಉಳಿತಾಯವಾಗುತ್ತಿದೆ” ಎಂದರು.

“ಮಹಿಳೆಯೊಬ್ಬರು ಸಂತೋಷದಿಂದ ನನಗೆ ರೊಟ್ಟಿ, ಶೇಂಗಾ ಹೋಳಿಗೆ ನೀಡಿದರು. ನಮ್ಮ ಯೋಜನೆ ಬಗ್ಗೆ ಯಾರು ಎಷ್ಟೇ ಟೀಕೆ ಮಾಡಿದರೂ ಅವುಗಳು ಕಾಲಕ್ರಮೇಣ ಸತ್ತು ಹೋಗುತ್ತವೆ. ನಮ್ಮ ಕೆಲಸಗಳು ಶಾಶ್ವತವಾಗಿ ಉಳಿಯುತ್ತವೆ.‌ ನಾವು ಕೊಟ್ಟ ಮಾತನ್ನು ಉಳಿಸಿಕೊಂಡಿರುವ ಕಾರಣಕ್ಕೆ ನಮಗೆ ಹೆಚ್ಚು ಸಂತೋಷವಾಗಿದೆ. ಇದೆಲ್ಲವನ್ನು ಜಾರಿ ಮಾಡಲು ಜನ ನೀಡುರುವ ಶಕ್ತಿಯಿಂದ ನಮಗೆ ಬಲಬಂದಿದೆ” ಎಂದರು.

ಮುಖ್ಯಮಂತ್ರಿಯವರಿಗೆ ಮುಂಚಿತವಾಗಿ ತಿಳಿಸಬೇಕಾಗಿತ್ತು

ಇದಕ್ಕೂ ಮುನ್ನ ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಪ್ರತಿಕ್ರಿಯಿಸಿದರು. ಸಿಗಂದೂರು ನೂತನ ತೂಗುಸೇತುವೆ ಉದ್ಘಾಟನೆ ಸಂಬಂಧ ಮುಖ್ಯಮಂತ್ರಿಗಳ ಆಹ್ವಾನ ವಿವಾದದ ಬಗ್ಗೆ ಕೇಳಿದಾಗ, “ರಾಜ್ಯದ ಮುಖ್ಯಮಂತ್ರಿಗಳಿಗೆ ಮುಂಚಿತವಾಗಿ ತಿಳಿಸಬೇಕಾಗಿತ್ತು.

ಇಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಾಗಿತ್ತು. ಈ ಬಗ್ಗೆ ಮುಖ್ಯಮಂತ್ರಿ ಅವರು ಪತ್ರ ಬರೆದು ತಿಳಿಸಿದ್ದಾರೆ. ಇಂದು ಇಂಡಿ ತಾಲ್ಲೂಕಿನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೂ ಅತ್ಯಂತ ಪ್ರಮುಖವಾದುದು. 2 ಸಾವಿರ ಕೋಟಿಗೂ ಹೆಚ್ಚಿನ ಹಣವನ್ನು ನೀರಾವರಿ ಇಲಾಖೆಯಿಂದ ನೀಡಲಾಗುತ್ತಿದೆ” ಎಂದರು.

ಉದ್ದೇಶಪೂರ್ವಕವಾಗಿ ಹೀಗೆ ಮಾಡಲಾಗಿದೆಯೇ ಎಂದು ಕೇಳಿದಾಗ, “ಈ ರಾಜಕಾರಣವನ್ನು ಆನಂತರ ಮಾತನಾಡೋಣ” ಎಂದರು.

ರಾಜಕೀಯ

ನನಗೆ ಜನರ ಸೇವೆ ಮಾಡುವ ಚಪಲ, ಕೆಲವರಿಗೆ ಜನರ ದುಡ್ಡು ಲೂಟಿ ಹೊಡೆಯೋ ಚಪಲ; ಹೆಚ್.ಡಿ. ಕುಮಾರಸ್ವಾಮಿ

ನನಗೆ ಜನರ ಸೇವೆ ಮಾಡುವ ಚಪಲ, ಕೆಲವರಿಗೆ ಜನರ ದುಡ್ಡು ಲೂಟಿ ಹೊಡೆಯೋ

ಕೆಲವರಿಗೆ ಜನರನ್ನು ಲೂಟಿ ಮಾಡಿ ದುಡ್ಡು ಮಾಡುವ ಚಪಲ. ನನಗೆ ಜನರ ಜತೆ ನಿಂತು ಅವರ ಸಹಾಯಕ್ಕೆ ನಿಲ್ಲುವ ಚಪಲ. ಒಬ್ಬೊಬ್ಬರಿಗೆ ಒಂದೊಂದು ಚಪಲ ಇರುತ್ತದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="118524"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ (Maanja thread) ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ.

[ccc_my_favorite_select_button post_id="118471"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!