Steps to preserve B. Sarojadevi's name forever: DCM D.K. Shivakumar

ಬಿ. ಸರೋಜಾದೇವಿ ಅವರ ಹೆಸರು ಶಾಶ್ವತವಾಗಿ ಉಳಿಸಲು ಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್

ಚನ್ನಪಟ್ಟಣ: “ಬಿ. ಸರೋಜಾದೇವಿ (B. Sarojadevi) ಅವರು ಖ್ಯಾತ ನಟಿ. ಅವರ ಕಲಾಸೇವೆಗಾಗಿ ಅವರ ಹೆಸರು ಶಾಶ್ವತವಾಗಿ ಉಳಿಯುವಂತೆ ಮಾಡಲು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಕಾರ್ಯಕ್ರಮ ರೂಪಿಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

ಬಿ. ಸರೋಜಾದೇವಿ ಅವರ ಅಂತಿಮ ಸಂಸ್ಕಾರದಲ್ಲಿ ಭಾಗವಹಿಸಿದ್ದ ಶಿವಕುಮಾರ್ ಅವರು ದಶಾವಾರದಲ್ಲಿ ಮಾಧ್ಯಮಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದರು.

“ನಾವೆಲ್ಲರೂ ಇಂದು ದಕ್ಷಿಣ ಭಾರತದ ಖ್ಯಾತ ನಟಿ ಬಿ. ಸರೋಜಾದೇವಿ ಅವರ ಅಂತಿಮ ಸಂಸ್ಕಾರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೇವೆ. ಇವರು ದಕ್ಷಿಣ ಭಾರತದ ಖ್ಯಾತ ನಟರ ಜತೆ ತಲಾ 20 ರಿಂದ 25ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿ ಅಪಾರವಾದ ಕೀರ್ತಿ ಸಂಪಾದಿಸಿದ್ದಾರೆ. ಇಡೀ ಕರ್ನಾಟಕ ಸರ್ಕಾರ, ದಕ್ಷಿಣ ಭಾರತದ ಕಲಾವಿದರು ಅವರಿಗೆ ಗೌರವಪೂರ್ವಕವಾಗಿ ನಮನ ಅರ್ಪಿಸುವ ಕೆಲಸ ಮಾಡಿದ್ದೇವೆ” ಎಂದು ತಿಳಿಸಿದರು.

ನನಗೂ ಸಿನಿಮಾದಲ್ಲಿ ನಟಿಸುವಂತೆ ಹೇಳಿದ್ದರು

“ಸರೋಜಾದೇವಿ ಅವರು ನನಗೆ ಸಣ್ಣ ವಯಸ್ಸಿನಿಂದಲೂ ಬಹಳ ಪರಿಚಯ. ನಾನು ಆರಂಭದಲ್ಲಿ ಸಚಿವನಾದಾಗ, ನನ್ನನ್ನು ಕರೆದು ನೀನು ಸಿನಿಮಾಗಳಲ್ಲಿ ನಟನೆ ಮಾಡಬೇಕು ಎಂದು ಹೇಳಿದ್ದರು. ಅವರು ನಮ್ಮ ಜಿಲ್ಲೆಯವರು. ಅವರ ಅಂತಿಮ ಸಂಸ್ಕಾರವನ್ನು ಇಲ್ಲಿ ಮಾಡುತ್ತಿದ್ದೇವೆ” ಎಂದು ಹೇಳಿದರು.

“ಮನುಷ್ಯನ ಹುಟ್ಟು ಆಕಸ್ಮಿಕ, ಸಾವು ಅನಿವಾರ್ಯ, ಜನನ ಉಚಿತ, ಮರಣ ಖಚಿತ. ಈ ಹುಟ್ಟು ಸಾವಿನ ನಡುವೆ ನಾವು ಏನು ಸಾಧನೆ ಮಾಡುತ್ತೇವೆ ಅದು ಶಾಶ್ವತವಾಗಿ ಉಳಿಯುತ್ತವೆ. ಬಹಳ ಚಿಕ್ಕ ವಯಸ್ಸಿಗೆ ಭಾರತ ಸರ್ಕಾರದ ಪದ್ಮ ವಿಭೂಷಣ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಆ ಕಾಲದಲ್ಲಿ ಆ ವಯಸ್ಸಿಗೆ ಯಾರೂ ಆ ಪ್ರಶಸ್ತಿ ಪಡೆದಿರಲಿಲ್ಲ. ಅವರ ಹೆಸರು ಶಾಶ್ವತವಾಗಿ ಉಳಿದುಕೊಳ್ಳಲು ರಸ್ತೆಗಳಿಗೆ ಅವರ ಹೆಸರಿಡುವ ಕಾರ್ಯಕ್ರಮವನ್ನು ರೂಪಿಸಬೇಕು ಎಂದು ನಮ್ಮ ಶಾಸಕರಾದ ಯೋಗೇಶ್ವರ್ ಅವರು ಒತ್ತಾಯ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಬಿಡಿಎ ಅಥವಾ ಪಾಲಿಕೆಯಲ್ಲಿ ಈ ವಿಚಾರ ಚರ್ಚೆ ಮಾಡಿ ಈ ಕೆಲಸ ಮಾಡುತ್ತೇವೆ” ಎಂದರು.

“ಗ್ರಾಮೀಣ ಪ್ರದೇಶದಲ್ಲಿ ಜನಿಸಿ, ಅವರು ಮಾಡಿರುವ ಅಪಾರವಾದ ಕಲಾ ಸೇವೆ ಅಪ್ರತಿಮವಾದುದ್ದು. ಅವರು ಎಂದಿಗೂ ಒಂದೇ ಒಂದು ವಿವಾದಕ್ಕೆ ಸಿಲುಕಲಿಲ್ಲ. ಎಲ್ಲಾ ವರ್ಗದ ಜನ ಅವರನ್ನು ಬಹಳ ಪ್ರೀತಿ, ಗೌರವದಿಂದ ಕಂಡಿದ್ದಾರೆ. ರಾಜ್ಯಕ್ಕೆ ಸಮಸ್ಯೆ ಎದುರಾದಾಗ ಅವರು ನಮ್ಮ ಜೊತೆ ನಿಂತು ರಾಜ್ಯದ ಹಿತ ಕಾಪಾಡಿದ್ದಾರೆ. ಕಲೆಗೆ ಹೆಚ್ಚಿಗೆ ಪ್ರೋತ್ಸಾಹ ನೀಡಿರುವುದನ್ನು ನಾವು ಸ್ಮರಿಸಬೇಕು. ಸರ್ಕಾರದ ಪರವಾಗಿ, ಈ ಜಿಲ್ಲೆಯವನಾಗಿ ಅವರಿಗೆ ಸಕಲ ಸರ್ಕಾರಿ ಗೌರವ ಸಲ್ಲಿಸಲಾಗುತ್ತಿದೆ” ಎಂದು ಹೇಳಿದರು.

ಅವರ ಪ್ರತಿಮೆ ನಿರ್ಮಾಣ ಮಾಡಲಾಗುವುದೇ ಎಂದು ಕೇಳಿದಾಗ, “ಪ್ರತಿಮೆ ಮುಖ್ಯವಲ್ಲ. ಅವರ ವಿಚಾರದಲ್ಲಿ ಏನು ಮಾಡಬೇಕು ಎಂಬುದುನ್ನು ನಾವು ಚರ್ಚೆ ಮಾಡಿ ತಿಳಿಸುತ್ತೇವೆ. ಅವರ ಹೆಸರು ಉಳಿದುಕೊಳ್ಳುವಂತೆ ಏನುಬೇಕೋ ಅದನ್ನು ಮಾಡುತ್ತೇವೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ” ಎಂದು ತಿಳಿಸಿದರು.

ರಾಜಕೀಯ

ರಾಜ್ಯ ಸರ್ಕಾರವನ್ನು ಕಡೆಗಣಿಸಿ ಸಿಗಂದೂರು ಸೇತುವೆ ಉದ್ಘಾಟನೆ.!?: ಪ್ರಧಾನಿಗೆ ಸಿಎಂ ಪತ್ರ

ರಾಜ್ಯ ಸರ್ಕಾರವನ್ನು ಕಡೆಗಣಿಸಿ ಸಿಗಂದೂರು ಸೇತುವೆ ಉದ್ಘಾಟನೆ.!?: ಪ್ರಧಾನಿಗೆ ಸಿಎಂ ಪತ್ರ

ರಾಜಕೀಯ ಕೆಸರೆರಚಾಟ, ಎಡಬಿಡದೆ ಸುರಿಯುತ್ತಿದ್ದ ಮಳೆಯ ನಡುವೆಯೂ ಸೋಮವಾರ ಮಧ್ಯಾಹ್ನ ಸಾಗರ ತಾಲೂಕಿನ ಸಿಗಂದೂರು ನೂತನ ತೂಗು ಸೇತುವೆಯನ್ನು (SigandooruBridge)

[ccc_my_favorite_select_button post_id="111123"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿಯಲ್ಲಿ (Drinks party) ಜತೆಗೂಡಿದ ಸ್ನೇಹಿತರು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹೊಡೆದು ಗಂಭೀರವಾಗಿ ಹಲ್ಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.

[ccc_my_favorite_select_button post_id="111121"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!